- 1 ಆಬೀಬ್ ತಿಂಗಳನ್ನು ಆಚರಿಸು. ಅದರಲ್ಲಿ ನಿನ್ನ ದೇವರಾದ ಕರ್ತನಿಗೆ ಪಸ್ಕವನ್ನು ಆಚರಿಸಬೇಕು; ಯಾಕಂದರೆ ಆಬೀಬ್ ತಿಂಗಳಿನಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ರಾತ್ರಿಯಲ್ಲಿ ಐಗುಪ್ತ ದೊಳಗಿಂದ ಹೊರಗೆ ಬರಮಾಡಿದನು;
- 2 ಹೀಗಿರುವ ದರಿಂದ ಕರ್ತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲಿ ನಿನ್ನ ದೇವರಾದ ಕರ್ತನಿಗೆ ಕುರಿಪಶುಗಳ ಪಸ್ಕವನ್ನು ಅರ್ಪಿಸಬೇಕು.
- 3 ಅದರಲ್ಲಿ ಹುಳಿ ರೊಟ್ಟಿಯನ್ನು ತಿನ್ನಬಾರದು. ಏಳು ದಿವಸ ಹುಳಿ ಇಲ್ಲದ ಶ್ರಮೆಯ ರೊಟ್ಟಿಗಳನ್ನು ಅದರಲ್ಲಿ ತಿನ್ನಬೇಕು; ತ್ವರೆಯಾಗಿ ಐಗುಪ್ತದೇಶದೊಳಗಿಂದ ನೀನು ಹೊರಗೆ ಬಂದಿ; ಆದಕಾರಣ ನೀನು ಐಗುಪ್ತದೇಶದೊಳಗಿಂದ ಹೊರಗೆ ಬಂದ ದಿವಸವನ್ನು ನೀನು ಜೀವಿಸುವ ದಿವಸ ಗಳಲ್ಲೆಲ್ಲಾ ಜ್ಞಾಪಕಮಾಡಬೇಕು.
- 4 ಏಳು ದಿವಸ ಹುಳಿ ಕಲಸಿದ ರೊಟ್ಟಿ ನಿನ್ನ ಮೇರೆಗಳಲ್ಲೆಲ್ಲೂ ಕಾಣಬಾರದು. ಮೊದಲನೇ ದಿನದ ಸಾಯಂಕಾಲದಲ್ಲಿ ನೀನು ಕೊಯ್ದ ಮಾಂಸದಲ್ಲಿ ಏನಾದರೂ ಮರು ದಿವಸದ ವರೆಗೆ ಉಳಿಸಬಾರದು.
- 5 ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದ್ವಾರಗಳ ಯಾವದೊಂದರಲ್ಲಾದರೂ ನೀನು ಪಸ್ಕವನ್ನು ಅರ್ಪಿಸ ಬಾರದು.
- 6 ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲೇ ನೀನು ಪಸ್ಕವನ್ನು ಸಾಯಂಕಾಲದಲ್ಲಿ ಸೂರ್ಯನು ಅಸ್ತಮಿಸುವಾಗ ನೀನು ಐಗುಪ್ತವನ್ನು ಬಿಟ್ಟುಹೋದ ಸಮಯದಲ್ಲಿ ಅರ್ಪಿಸಬೇಕು.
- 7 ನಿನ್ನ ದೇವರಾದ ಕರ್ತನು ಆದು ಕೊಳ್ಳುವ ಸ್ಥಳದಲ್ಲಿ ಅದನ್ನು ಬೇಯಿಸಿ ತಿನ್ನಬೇಕು; ಮರುದಿವಸದಲ್ಲಿ ತಿರುಗಿಕೊಂಡು ನಿನ್ನ ಗುಡಾರಗಳಿಗೆ ಹೋಗಬೇಕು;
- 8 ಆರು ದಿವಸ ಹುಳಿ ಇಲ್ಲದ ರೊಟ್ಟಿ ಗಳನ್ನು ತಿನ್ನಬೇಕು; ಏಳನೇ ದಿನದಲ್ಲಿ ನಿನ್ನ ದೇವರಾದ ಕರ್ತನಿಗೆ ವಿಶೇಷ ಸಭೆ ಸೇರಬೇಕು; ಅದರಲ್ಲಿ ಕೆಲಸ ಮಾಡಬಾರದು.
- 9 ಏಳು ವಾರಗಳನ್ನು ನಿನಗಾಗಿ ಎಣಿಸಿಕೊಳ್ಳಬೇಕು; ಪೈರಿನಲ್ಲಿ ಕುಡುಗೋಲು ಮೊದಲು ಹಾಕಿದಂದಿನಿಂದ ಏಳು ವಾರಗಳನ್ನು ಎಣಿಸಿಕೊಳ್ಳುವದಕ್ಕೆ ಪ್ರಾರಂಭಿಸ ಬೇಕು.
- 10 ಆಗ ನಿನ್ನ ದೇವರಾದ ಕರ್ತನು ನಿನ್ನನ್ನು ಆಶೀರ್ವದಿಸಿದ ಪ್ರಕಾರ ನಿನ್ನ ಕೈಕೊಡುವ ಉಚಿತವಾದ ಕಾಣಿಕೆಯ ಮೇರೆಗೆ ನಿನ್ನ ದೇವರಾದ ಕರ್ತನಿಗೆ ವಾರಗಳ ಹಬ್ಬಮಾಡಬೇಕು.
- 11 ಆಗ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ಬಾಗಲು ಗಳಲ್ಲಿರುವ ಲೇವಿಯನೂ ನಿನ್ನ ಮಧ್ಯದಲ್ಲಿರುವ ಅನ್ಯನೂ ದಿಕ್ಕಿಲ್ಲದವನೂ ವಿಧವೆಯೂ ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲಿ ನಿನ್ನ ದೇವರಾದ ಕರ್ತನ ಮುಂದೆ ಸಂತೋಷ ಪಡಬೇಕು.
- 12 ನೀನು ಐಗುಪ್ತದಲ್ಲಿ ದಾಸನಾಗಿದ್ದಿ ಎಂದು ಜ್ಞಾಪಕಮಾಡಿಕೊಂಡು ಈ ನಿಯಮಗಳನ್ನು ಕೈಕೊಂಡು ನಡೆಯಬೇಕು.
- 13 ನಿನ್ನ ಧಾನ್ಯವನ್ನೂ ನಿನ್ನ ದ್ರಾಕ್ಷೆಯನ್ನೂ ಕೂಡಿಸಿದ ಮೇಲೆ ಏಳು ದಿವಸ ಗುಡಾರಗಳ ಹಬ್ಬಮಾಡಬೇಕು.
- 14 ಆ ಹಬ್ಬದಲ್ಲಿ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ನಿನ್ನ ಬಾಗಲುಗಳಲ್ಲಿರುವ ಲೇವಿಯನೂ ಅನ್ಯನೂ ದಿಕ್ಕಿಲ್ಲದವನೂ ವಿಧವೆಯೂ ಸಂತೋಷಪಡಬೇಕು.
- 15 ನಿನ್ನ ದೇವರಾದ ಕರ್ತನಿಗೆ ಏಳು ದಿವಸ ಕರ್ತನು ಆದುಕೊಳ್ಳುವ ಸ್ಥಳದಲ್ಲಿ ಹಬ್ಬ ಮಾಡಬೇಕು; ನಿನ್ನ ದೇವರಾದ ಕರ್ತನು ನಿನ್ನನ್ನು ಎಲ್ಲಾ ಆದಾಯದಲ್ಲಿಯೂ ಎಲ್ಲಾ ಕೈಕೆಲಸದಲ್ಲಿಯೂ ಆಶೀರ್ವದಿಸುವದರಿಂದ ನೀನು ನಿಜವಾಗಿಯೂ ಸಂತೋಷದಿಂದ ಇರಬೇಕು.
- 16 ವರುಷಕ್ಕೆ ಮೂರು ಸಾರಿ ನಿನ್ನ ಗಂಡಸರೆಲ್ಲರು ನಿನ್ನ ದೇವರಾದ ಕರ್ತನ ಮುಂದೆ ಆತನು ಆದುಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳಬೇಕು, ಅಂದರೆ ಹುಳಿಯಿಲ್ಲದ ರೊಟ್ಟಿಯ ಹಬ್ಬದಲ್ಲಿ, ವಾರಗಳ ಹಬ್ಬದಲ್ಲಿ, ಗುಡಾರ ಗಳ ಹಬ್ಬದಲ್ಲಿ ಕಾಣಿಸಿಕೊಳ್ಳಬೇಕು. ಇದಲ್ಲದೆ ಅವರು ಕರ್ತನ ಸಮ್ಮುಖಕ್ಕೆ ಬರಿ ಕೈಯಾಗಿ ಬರಬಾರದು.
- 17 ನಿನ್ನ ದೇವರಾದ ಕರ್ತನು ನಿನಗೆ ಕೊಡುವ ಆಶೀರ್ವಾದದ ಪ್ರಕಾರ ಒಬ್ಬೊಬ್ಬನು ತನ್ನ ಕೈಯಿಂದ ಆಗುವಷ್ಟು ಕೊಡಬೇಕು.
- 18 ಕರ್ತನು ನಿನಗೆ ನಿನ್ನ ಗೋತ್ರಗಳ ಪ್ರಕಾರ ಕೊಡುವ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ನ್ಯಾಯಾ ಧಿಪತಿಗಳನ್ನೂ ಅಧಿಕಾರಿಗಳನ್ನೂ ಇಟ್ಟುಕೊಳ್ಳಬೇಕು; ಅವರು ಜನಕ್ಕೆ ನೀತಿಯಿಂದ ನ್ಯಾಯತೀರಿಸಬೇಕು.
- 19 ನೀನು ನ್ಯಾಯವನ್ನು ಓರೆಮಾಡಬಾರದು,ನೀನು ಮುಖದಾಕ್ಷಿಣ್ಯ ಮಾಡಬಾರದು; ಇಲ್ಲವೆ ಲಂಚ ತೆಗೆದುಕೊಳ್ಳಬಾರದು; ಲಂಚವು ಜ್ಞಾನಿಗಳ ಕಣ್ಣುಗಳನ್ನು ಕುರುಡುಮಾಡಿ ನೀತಿವಂತರ ಮಾತು ಗಳನ್ನು ಡೊಂಕುಮಾಡುತ್ತದೆ.
- 20 ನೀನು ಬದುಕಿ ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದೇಶವನ್ನು ಸ್ವಾಧೀನಪಡಿಸಿಕೊಳ್ಳುವ ಹಾಗೆ ನೀತಿಯನ್ನೇ ಅನುಸರಿಸಬೇಕು.
- 21 ನೀನು ನಿನಗೆ ಮಾಡಿಕೊಳ್ಳುವ ನಿನ್ನ ದೇವರಾದ ಕರ್ತನ ಯಜ್ಞವೇದಿಯ ಸವಿಾಪದಲ್ಲಿ ಯಾವ ಮರಗಳ ತೋಪನ್ನಾದರೂ ನೆಡಬಾರದು.
- 22 ಯಾವ ವಿಗ್ರಹ ವನ್ನೂ ನಿಲ್ಲಿಸಬಾರದು; ಇದನ್ನು ನಿನ್ನ ದೇವರಾದ ಕರ್ತನು ಹಗೆಮಾಡುತ್ತಾನೆ.
Deuteronomy 16
- Details
- Parent Category: Old Testament
- Category: Deuteronomy
ಧರ್ಮೋಪದೇಶಕಾಂಡ ಅಧ್ಯಾಯ 16