- 1 ಬೀಜದಲ್ಲಿ ಗಾಯವುಳ್ಳವನೂ ರಹಸ್ಯಾಂಗ ಕೊಯ್ಯಲ್ಪಟ್ಟವನೂ ಕರ್ತನ ಸಭೆಗೆ ಸೇರ ಬಾರದು.
- 2 ಜಾರಳ ಮಗನು ಕರ್ತನ ಸಭೆಗೆ ಸೇರ ಬಾರದು; ಅವನ ಹತ್ತನೇ ತಲಾಂತರದವರೆಗೂ ಕರ್ತನ ಸಭೆಗೆ ಸೇರಬಾರದು.
- 3 ಅಮ್ಮೋನ್ಯನು ಇಲ್ಲವೆ ಮೋವಾಬ್ಯನು ಕರ್ತನ ಸಭೆಗೆ ಸೇರಬಾರದು. ಹತ್ತನೇ ತಲಾಂತರವಾದರೂ ಅವರು ಎಂದಿಗೂ ಕರ್ತನ ಸಭೆಯಲ್ಲಿ ಸೇರಬಾರದು.
- 4 ನೀವು ಐಗುಪ್ತವನ್ನು ಬಿಟ್ಟು ಬರುವಾಗ ಅವರು ನಿಮಗೆ ರೊಟ್ಟಿಯನ್ನೂ ನೀರನ್ನೂ ಕೊಡುವದಕ್ಕೆ ಎದು ರಾಗಿ ಬರಲಿಲ್ಲ; ನಿಮ್ಮನ್ನು ಶಪಿಸುವದಕ್ಕೆ ಮೆಸೊಪೊ ತಾಮ್ಯದಲ್ಲಿರುವ ಪೆತೋರಿನಿಂದ ಬೆಯೋರನ ಮಗ ನಾದ ಬಿಳಾಮನನ್ನು ಕೂಲಿ ಕೊಟ್ಟು ನಿಮಗೆ ವಿರೋಧ ವಾಗಿ ತರಿಸಿದರು.
- 5 ಆದರೆ ನಿನ್ನ ದೇವರಾದ ಕರ್ತನು ಬಿಳಾಮನನ್ನು ಕೇಳಲೊಲ್ಲದೆ ಇದ್ದನು; ನಿನ್ನ ದೇವರಾದ ಕರ್ತನು ಆ ಶಾಪವನ್ನು ನಿನಗೆ ಆಶೀರ್ವಾದಕ್ಕೆ ತಿರುಗಿ ಸಿದನು; ಯಾಕಂದರೆ ನಿನ್ನ ದೇವರಾದ ಕರ್ತನು ನಿನ್ನನ್ನು ಪ್ರೀತಿಮಾಡಿದನು.
- 6 ನೀನು ಇರುವ ವರೆಗೆ ಎಂದಿಗೂ ಅವರ ಸಮಾಧಾನವನ್ನೂ ಅವರ ಮೇಲನ್ನೂ ಹುಡುಕ ಬಾರದು.
- 7 ಎದೋಮ್ಯನನ್ನು ಅಸಹ್ಯಿಸಬೇಡ; ಅವನು ನಿನ್ನ ಸಹೋದರನು; ಐಗುಪ್ತ್ಯನನ್ನು ಅಸಹ್ಯಿಸಬೇಡ; ಅವನ ದೇಶದಲ್ಲಿ ನೀನು ಪರವಾಸಿಯಾಗಿದ್ದಿ.
- 8 ಅವರಿಗೆ ಹುಟ್ಟುವ ಮಕ್ಕಳು ಮೂರನೇ ತಲಾಂತರದಲ್ಲಿ ಕರ್ತನ ಸಭೆಯಲ್ಲಿ ಸೇರಬಹುದು.
- 9 ನೀನು ನಿನ್ನ ಶತ್ರುಗಳಿಗೆ ವಿರೋಧವಾಗಿ ಸೈನ್ಯ ದೊಡನೆ ಹೊರಟರೆ ದುಷ್ಟ ಕಾರ್ಯಗಳಿಗೆಲ್ಲಾ ದೂರ ವಾಗಿರುವಂತೆ ನಿನ್ನನ್ನು ಕಾಪಾಡಿಕೋ.
- 10 ರಾತ್ರಿಯಲ್ಲಿ ಸಂಭವಿಸಿದ ಕಾರ್ಯದ ದೆಸೆಯಿಂದ ಶುದ್ಧವಲ್ಲದ ಮನುಷ್ಯನು ನಿಮ್ಮಲ್ಲಿದ್ದರೆ ಅವನು ಪಾಳೆಯದ ಹೊರಗೆ ಹೋಗಬೇಕು; ಪಾಳೆಯದ ಒಳಗೆ ಬರಬಾರದು.
- 11 ಸಂಜೆ ಆಗುತ್ತಿರುವಾಗ ಅವನು ನೀರಿನಲ್ಲಿ ತೊಳ ಕೊಳ್ಳಲಿ; ಸೂರ್ಯನು ಮುಣುಗಿದಾಗ ಪಾಳೆಯದ ಒಳಗೆ ತಿರಿಗಿ ಬರಲಿ.
- 12 ಇದಲ್ಲದೆ ನೀನು ಹೊರಗಡೆ ಹೋಗುವದಕ್ಕೆ ನಿನಗೆ ಪಾಳೆಯದ ಹೊರಗೆ ಸ್ಥಳವಿರಬೇಕು.
- 13 ನಿನ್ನ ಆಯುಧದೊಂದಿಗೆ ಮೊಳೆ ಇರಬೇಕು; ನೀನು ಹೊರಗೆ ಕೂತುಕೊಂಡಾಗ ಅದರಿಂದ ಅಗಿದು ನಿನ್ನಿಂದ ಹೊರಡು ವದನ್ನು ಮುಚ್ಚಬೇಕು.
- 14 ನಿನ್ನ ದೇವರಾದ ಕರ್ತನು ನಿನ್ನನ್ನು ರಕ್ಷಿಸುವದಕ್ಕೂ ನಿನ್ನ ಶತ್ರುಗಳನ್ನು ನಿನ್ನ ಮುಂದೆ ಒಪ್ಪಿಸಿಬಿಡುವದಕ್ಕೂ ಪಾಳೆಯದ ಮಧ್ಯದಲ್ಲಿ ಸಂಚಾರ ಮಾಡುತ್ತಾನೆ. ಆತನು ನಿನ್ನಲ್ಲಿ ಅಶುದ್ಧವಾದ ಕಾರ್ಯ ವನ್ನು ನೋಡಿ ನಿನ್ನನ್ನು ಬಿಟ್ಟು ತಿರುಗದ ಹಾಗೆ ನಿನ್ನ ಪಾಳೆಯವು ಪರಿಶುದ್ಧವಾಗಿರಬೇಕು.
- 15 ತನ್ನ ಯಜಮಾನನನ್ನು ಬಿಟ್ಟು ನಿನ್ನ ಬಳಿಗೆ ತಪ್ಪಿಸಿ ಕೊಂಡು ಬಂದ ದಾಸನನ್ನು ತನ್ನ ಯಜಮಾನನಿಗೆ ಒಪ್ಪಿಸಬಾರದು.
- 16 ಅವನು ನಿನ್ನ ಸಂಗಡ ನಿನ್ನ ಮಧ್ಯ ದಲ್ಲಿ ಅವನು ಆದುಕೊಂಡಲ್ಲಿ ನಿನ್ನ ಬಾಗಲುಗಳ ಒಂದರಲ್ಲಿ ಅವನಿಗೆ ಒಳ್ಳೇದೆಂದು ತೋಚಿದಲ್ಲಿ ವಾಸ ವಾಗಿರಬೇಕು; ಅವನನ್ನು ಉಪದ್ರಪಡಿಸಬಾರದು.
- 17 ಇಸ್ರಾಯೇಲಿನ ಕುಮಾರ್ತೆಯರಲ್ಲಿ ಸೂಳೆ ಇರ ಬಾರದು; ಇಸ್ರಾಯೇಲಿನ ಕುಮಾರರಲ್ಲಿ ಪುರುಷ ಸಂಗದವನು ಇರಬಾರದು.
- 18 ಸೂಳೆಯ ಕೂಲಿಯನ್ನು ಇಲ್ಲವೆ ನಾಯಿಯ ಕ್ರಯವನ್ನು ಯಾವದೊಂದು ಪ್ರಮಾಣವಾಗಿ ನಿನ್ನ ದೇವರಾದ ಕರ್ತನ ಮನೆಗೆ ತರಬಾರದು. ಅವೆರಡು ನಿನ್ನ ದೇವರಾದ ಕರ್ತನಿಗೆ ಅಸಹ್ಯ.
- 19 ನಿನ್ನ ಸಹೋದರನಿಗೆ ಹಣವನ್ನಾಗಲಿ, ಊಟವ ನ್ನಾಗಲಿ, ಬಡ್ಡಿಗೆ ಕೊಡುವ ಯಾವದನ್ನಾಗಲಿ ಬಡ್ಡಿಗೆ ಕೊಡಬಾರದು.
- 20 ಪರನಿಗೆ ಬಡ್ಡಿಗೋಸ್ಕರ ಕೊಡ ಬಹುದು; ಆದರೆ ನಿನ್ನ ಸಹೋದರನಿಗೆ ನೀನು ಸ್ವಾಧೀನ ಮಾಡಿಕೊಳ್ಳಲು ಹೋಗುವ ದೇಶದಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ನಿನ್ನ ಎಲ್ಲಾ ಕೈ ಕೆಲಸದಲ್ಲಿ ಆಶೀರ್ವ ದಿಸುವ ಹಾಗೆ ಬಡ್ಡಿಗೆ ಕೊಡಬಾರದು.
- 21 ನೀನು ನಿನ್ನ ದೇವರಾದ ಕರ್ತನಿಗೆ ಪ್ರಮಾಣ ಮಾಡಿದ ಮೇಲೆ ಅದನ್ನು ಸಲ್ಲಿಸುವದಕ್ಕೆ ತಡಮಾಡ ಬೇಡ; ನಿನ್ನ ದೇವರಾದ ಕರ್ತನು ಅದನ್ನು ನಿಶ್ಚಯ ವಾಗಿಯೂ ನಿನ್ನ ಬಳಿಯಲ್ಲಿ ವಿಚಾರಿಸುವನು; ಅದು ನಿನ್ನಲ್ಲಿ ಪಾಪವಾಗಿರುವದು.
- 22 ಆದರೆ ನೀನು ಪ್ರಮಾಣ ಮಾಡಿರದಿದ್ದರೆ ನಿನ್ನ ಮೇಲೆ ಪಾಪವಿರು ವದಿಲ್ಲ.
- 23 ನಿನ್ನ ತುಟಿಗಳಿಂದ ಹೊರಟದ್ದನ್ನು ಕಾಪಾಡಿ ನೀನು ಉಚಿತವಾಗಿ ನಿನ್ನ ದೇವರಾದ ಕರ್ತನಿಗೆ ಪ್ರಮಾಣಮಾಡಿದಂತೆ ನಿನ್ನ ಬಾಯಿಂದ ಪ್ರಮಾಣ ಮಾಡಬೇಕು.
- 24 ನಿನ್ನ ನೆರೆಯವನ ದ್ರಾಕ್ಷೇತೋಟಕ್ಕೆ ಬಂದರೆ ನಿನಗೆ ಮನಸ್ಸು ಬಂದ ಹಾಗೆ ತೃಪ್ತಿಯಾಗುವ ವರೆಗೆ ಹಣ್ಣುಗಳನ್ನು ತಿನ್ನಬಹುದು;
- 25 ಆದರೆ ನಿನ್ನ ಚೀಲದಲ್ಲಿ ಹಾಕಬಾರದು. ನಿನ್ನ ನೆರೆಯವನ ಪೈರಿಗೆ ಬಂದರೆಕೈಯಿಂದ ತೆನೆಗಳನ್ನು ಕೀಳಬಹುದು. ಆದರೆ ನಿನ್ನ ನೆರೆಯವನ ಪೈರಿನಲ್ಲಿ ಕುಡುಗೋಲಾಡಿಸಬೇಡ.
Deuteronomy 23
- Details
- Parent Category: Old Testament
- Category: Deuteronomy
ಧರ್ಮೋಪದೇಶಕಾಂಡ ಅಧ್ಯಾಯ 23