- 1 ಹೋರೇಬಿನಲ್ಲಿ ಅವರ ಸಂಗಡ ಮಾಡಿದ ಒಡಂಬಡಿಕೆಯ ಹೊರತಾಗಿ ಇಸ್ರಾ ಯೇಲ್ ಮಕ್ಕಳ ಸಂಗಡ ಮಾಡಬೇಕೆಂದು ಕರ್ತನು ಮೋಶೆಗೆ ಮೋವಾಬಿನ ದೇಶದಲ್ಲಿ ಆಜ್ಞಾಪಿಸಿದ ಒಡಂಬಡಿಕೆಯ ಮಾತುಗಳು ಇವೇ;
- 2 ಮೋಶೆಯು ಇಸ್ರಾಯೇಲ್ಯರನ್ನೆಲ್ಲಾ ಕರೆದು ಅವ ರಿಗೆ--ಕರ್ತನು ಐಗುಪ್ತದೇಶದಲ್ಲಿ ನಿಮ್ಮ ಕಣ್ಣುಗಳ ಮುಂದೆ ಫರೋಹನಿಗೂ ಅವನ ಎಲ್ಲಾ ಸೇವಕ ರಿಗೂ ಅವನ ಎಲ್ಲಾ ದೇಶಕ್ಕೂ ಮಾಡಿದವುಗಳನ್ನೆಲ್ಲಾ ನೋಡಿದ್ದೀರಿ.
- 3 ಆ ದೊಡ್ಡ ಪರಿಶೋಧನೆಗಳನ್ನೂ ಆ ದೊಡ್ಡ ಗುರುತುಗಳನ್ನೂ ಅದ್ಭುತಗಳನ್ನೂ ನಿನ್ನ ಕಣ್ಣುಗಳು ನೋಡಿದವಲ್ಲಾ?
- 4 ಆದಾಗ್ಯೂ ಕರ್ತನು ನಿಮಗೆ ಇಂದಿನ ವರೆಗೂ ತಿಳುಕೊಳ್ಳುವ ಹೃದಯ ವನ್ನೂ ನೋಡುವ ಕಣ್ಣುಗಳನ್ನೂ ಕೇಳುವ ಕಿವಿಗಳನ್ನೂ ಕೊಡಲಿಲ್ಲ.
- 5 ನಾನು ನಾಲ್ವತ್ತು ವರುಷ ನಿಮ್ಮನ್ನು ಅರಣ್ಯದಲ್ಲಿ ನಡಿಸಿದೆನು; ನಿಮ್ಮ ಮೇಲಿರುವ ವಸ್ತ್ರ ಗಳು ಹಳೇವಾಗಲಿಲ್ಲ; ನಿಮ್ಮ ಪಾದಗಳಲ್ಲಿರುವ ಕೆರಗಳು ಹಳೇವಾಗಲಿಲ್ಲ.
- 6 ನಾನೇ ನಿಮ್ಮ ದೇವರಾದ ಕರ್ತನೆಂದು ನೀವು ತಿಳಿದುಕೊಳ್ಳುವ ಹಾಗೆ ನೀವು ರೊಟ್ಟಿ ತಿನ್ನಲಿಲ್ಲ; ದ್ರಾಕ್ಷಾರಸ ಇಲ್ಲವೆ ಮದ್ಯಗಳನ್ನು ಕುಡಿಯಲಿಲ್ಲ.
- 7 ನೀವು ಈ ಸ್ಥಳಕ್ಕೆ ಬಂದಾಗ ಹೆಷ್ಬೋನಿನ ಅರಸನಾದ ಸೀಹೋನನೂ ಬಾಷಾನಿನ ಅರಸನಾದ ಓಗನೂ ನಮ್ಮೆದುರಿಗೆ ಯುದ್ಧಕ್ಕೆ ಬರಲಾಗಿ ನಾವು ಅವರನ್ನು ಹೊಡೆದು
- 8 ಅವರ ದೇಶವನ್ನು ತಕ್ಕೊಂಡು ರೂಬೇನ್ಯರಿಗೂ ಗಾದನವರಿಗೂ ಮನಸ್ಸೆಯ ಅರ್ಧ ಗೋತ್ರಕ್ಕೂ ಸ್ವಾಸ್ತ್ಯವಾಗಿ ಕೊಟ್ಟೆವು.
- 9 ಹೀಗಿರುವ ದರಿಂದ ನೀವು ಮಾಡುವದೆಲ್ಲಾದರಲ್ಲಿ ಸಫಲವಾಗುವ ಹಾಗೆ ಈ ಒಡಂಬಡಿಕೆಯ ಮಾತುಗಳನ್ನು ಕೇಳಿ ನಡೆಯಬೇಕು.
- 10 ನೀವೆಲ್ಲರು ಈಹೊತ್ತು ನಿಮ್ಮ ದೇವರಾದ ಕರ್ತನ ಮುಂದೆ ನಿಂತಿದ್ದೀರಿ;
- 11 ನಿನ್ನ ದೇವರಾದ ಕರ್ತನು ಈಹೊತ್ತು ನಿನ್ನ ಸಂಗಡ ಮಾಡುವ ಒಡಂಬಡಿಕೆಯ ಲ್ಲಿಯೂ ಆಣೆಯಲ್ಲಿಯೂ ಸೇರುವದಕ್ಕೆ ನಿಮ್ಮ ಗೋತ್ರ ಗಳ ಮುಖ್ಯಸ್ಥರೂ ಹಿರಿಯರೂ ಅಧಿಕಾರಿಗಳೂ ಇಸ್ರಾಯೇಲಿನ ಮನುಷ್ಯರೆಲ್ಲರೂ
- 12 ನಿಮ್ಮ ಚಿಕ್ಕವರೂ ಪತ್ನಿಯರೂ ನಿನ್ನ ಪಾಳೆಯದಲ್ಲಿರುವ ಪರವಾಸಿಯರೂ ನಿನಗಾಗಿ ಕಟ್ಟಿಗೆ ಕಡಿಯುವವರೂ ನೀರು ಸೇದುವ ವರೂ ಇದ್ದೀರಿ.
- 13 ಆ ಒಡಂಬಡಿಕೆ ಯಾವದಂದರೆ, ಆತನು ನಿನಗೆ ಹೇಳಿದಂತೆಯೂ ನಿನ್ನ ಪಿತೃಗಳಾದ ಅಬ್ರಹಾಮನಿಗೂ ಇಸಾಕನಿಗೂ ಯಾಕೋಬನಿಗೂ ಪ್ರಮಾಣಮಾಡಿದಂತೆಯೂ ಈಹೊತ್ತು ನಿನ್ನನ್ನು ತನಗೆ ಜನಾಂಗವಾಗಿ ಸ್ಥಾಪಿಸಿ ನಿನಗೆ ದೇವರಾಗ ಬೇಕೆಂಬದೇ.
- 14 ಇದಲ್ಲದೆ ನಿಮ್ಮ ಸಂಗಡ ಮಾತ್ರ ಈ ಒಡಂಬಡಿಕೆ ಯನ್ನೂ ಈ ಆಣೆಯನ್ನೂ ನಾನು ಮಾಡುವದಿಲ್ಲ;
- 15 ಈಹೊತ್ತು ಇಲ್ಲಿ ನಮ್ಮ ಸಂಗಡ ನಮ್ಮ ದೇವರಾದ ಕರ್ತನ ಮುಂದೆ ನಿಂತವನ ಸಂಗಡವೂ ಈಹೊತ್ತು ಇಲ್ಲಿ ನಮ್ಮ ಸಂಗಡ ಇರದವನ ಸಂಗಡವೂ ಮಾಡು ತ್ತೇನೆ.
- 16 ಯಾಕಂದರೆ ನಾವು ಐಗುಪ್ತದೇಶದಲ್ಲಿ ಹೇಗೆ ವಾಸವಾಗಿದ್ದೇವೆಂದೂ ನೀವು ದಾಟಿಬಂದ ಜನಾಂಗಗಳನ್ನು ನಾವು ಹೇಗೆ ದಾಟಿಬಂದೆವೆಂದೂ ನಿಮಗೆ ತಿಳಿಯಿತಲ್ಲಾ?
- 17 ಅವರ ಬಳಿಯಲ್ಲಿರುವ ಮರ, ಕಲ್ಲು, ಬೆಳ್ಳಿ, ಬಂಗಾರಗಳ ಅಸಹ್ಯವಾದವು ಗಳನ್ನೂ ಬೊಂಬೆಗಳನ್ನೂ ನೀವು ನೋಡಿದಿರಲ್ಲಾ?
- 18 ಈಹೊತ್ತು ನಮ್ಮ ದೇವರಾದ ಕರ್ತನನ್ನು ಬಿಟ್ಟು ಆ ಜನಾಂಗಗಳ ದೇವರುಗಳಿಗೆ ಸೇವೆಮಾಡುವದಕ್ಕೆ ತಿರುಗಿಕೊಳ್ಳುವ ಹೃದಯವುಳ್ಳ ಪುರುಷನಾದರೂ ಸ್ತ್ರೀಯಾದರೂ ಕುಟುಂಬವಾದರೂ ಗೋತ್ರವಾದರೂ ಇರಬಾರದು. ವಿಷವನ್ನೂ ಮಾಚಿಪತ್ರೆಯನ್ನೂ ಬೆಳೆ ಸುವ ಬೇರು ನಿಮ್ಮಲ್ಲಿ ಇರಬಾರದು.
- 19 ಈ ಶಾಪದ ಮಾತುಗಳನ್ನು ಕೇಳಿ ಅವನು--ನನ್ನ ಹೃದಯದ ಕಲ್ಪನೆ ಯಲ್ಲಿ ನಡೆದುಕೊಂಡು ದಾಹಕ್ಕೆ ಅಮಲನ್ನು ಕುಡಿಸಿ ದರೂ ನನಗೆ ಸಮಾಧಾನವಿರುವದೆಂದು ಹೇಳಿಕೊಂಡು ತನ್ನ ಹೃದಯದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳುವವ ನಾದರೆ
- 20 ಅಂಥವನನ್ನು ಕರ್ತನು ಉಳಿಸುವದಿಲ್ಲ; ಆಗಲೇ ಕರ್ತನ ಕೋಪವೂ ರೋಷವೂ ಆ ಮನುಷ್ಯನ ಮೇಲೆ ಹೊಗೆ ಹಾಯುವವು. ಈ ಪುಸ್ತಕದಲ್ಲಿ ಬರೆದಿ ರುವ ಶಾಪವೆಲ್ಲಾ ಅವನ ಮೇಲೆ ನೆಲೆಯಾಗುವದು; ಕರ್ತನು ಅವನ ಹೆಸರನ್ನು ಆಕಾಶದ ಕೆಳಗಿನಿಂದ ಅಳಿಸಿಬಿಡುವನು.
- 21 ಈ ನ್ಯಾಯಪ್ರಮಾಣದ ಪುಸ್ತಕ ದಲ್ಲಿ ಬರೆದಿರುವ ಒಡಂಬಡಿಕೆಯ ಎಲ್ಲಾ ಶಾಪಗಳ ಪ್ರಕಾರ ಕರ್ತನು ಅವನನ್ನು ಇಸ್ರಾಯೇಲಿನ ಎಲ್ಲಾ ಗೋತ್ರಗಳೊಳಗಿಂದ ಕೇಡಿಗೆ ಪ್ರತ್ಯೇಕಿಸುವನು.
- 22 ಹೀಗೆ ನಿಮ್ಮ ತರುವಾಯ ಹುಟ್ಟುವ ನಿಮ್ಮ ಮಕ್ಕಳ ಮುಂದಿನ ಸಂತತಿಯೂ ದೂರ ದೇಶದಿಂದ ಬರುವ ಅನ್ಯನೂ ಆ ದೇಶದ ಬಾಧೆಗಳನ್ನೂ ಕರ್ತನು ಅದರಲ್ಲಿ ಬರಮಾಡಿದ ರೋಗಗಳನ್ನೂ ನೋಡಿ
- 23 ಕರ್ತನು ತನ್ನ ಕೋಪದಲ್ಲಿಯೂ ರೌದ್ರದಲ್ಲಿಯೂ ಕೆಡವಿ ಹಾಕಿದ ಸೊದೋಮ್ ಗೊಮೋರ ಅದ್ಮಾಚೆಬೋ ಯಾಮ್ ಇವುಗಳ ಹಾಗೆ ಆ ದೇಶವೆಲ್ಲಾ ಗಂಧಕವೂ ಉಪ್ಪೂ ಉರಿಯುತ್ತಾ ಬಿತ್ತಲ್ಪಡದೆ ಮೊಳೆಯದೆ ಯಾವ ಹುಲ್ಲನ್ನಾದರೂ ಬೆಳೆಸದೆ ಇರುವದನ್ನು ನೋಡಿ--
- 24 ಯಾಕೆ ಕರ್ತನು ಈ ದೇಶಕ್ಕೆ ಹೀಗೆ ಮಾಡಿದ್ದಾನೆ. ಈ ದೊಡ್ಡ ಕೊಪಾಗ್ನಿ ಏನು ಎಂದು ಜನಾಂಗಗಳೆಲ್ಲಾ ಕೇಳುವರು.
- 25 ಆಗ ಜನರು--ಅವರು ತಮ್ಮನ್ನು ಐಗುಪ್ತ ದೇಶದೊಳಗಿಂದ ಹೊರಗೆ ತರುವಾಗ ತಮ್ಮ ಪಿತೃಗಳ ದೇವರಾದ ಕರ್ತನು ತಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಮರೆತುಬಿಟ್ಟು,
- 26 ಹೋಗಿ ಬೇರೆ ದೇವರುಗಳನ್ನೂ ತಮಗೆ ತಿಳಿಯದಂಥ, ಆತನು ತಮಗೆ ನೇಮಿಸದಂಥ ದೇವರುಗಳನ್ನೂ ಸೇವಿಸಿ ಅಡ್ಡಬಿದ್ದ ದರಿಂದ
- 27 ಕರ್ತನ ಕೋಪವು ಈ ದೇಶದ ಮೇಲೆ ಈ ಪುಸ್ತಕದಲ್ಲಿ ಬರೆದಿರುವ ಶಾಪವನ್ನೆಲ್ಲಾ ಅವರ ಮೇಲೆ ತರುವ ಹಾಗೆ ಉರಿಯಿತು.
- 28 ಕರ್ತನು ಅವ ರನ್ನು ಕೋಪದಲ್ಲಿಯೂ ಸಿಟ್ಟಿನಲ್ಲಿಯೂ ಮಹಾರೌದ್ರ ದಲ್ಲಿಯೂ ದೇಶದಲ್ಲಿಂದ ಕಿತ್ತುಹಾಕಿ ಇಂದು ಇರುವ ಪ್ರಕಾರ ಬೇರೆ ದೇಶಕ್ಕೆ ಕಳುಹಿಸಿದ್ದಾನೆ.
- 29 ರಹಸ್ಯಗಳು ನಮ್ಮ ದೇವರಾದ ಕರ್ತನಿಗೆ ಸೇರಿದ್ದು; ಆದರೆ ಪ್ರಕಟವಾದ ಈ ನ್ಯಾಯಪ್ರಮಾಣದ ಮಾತು ಗಳನ್ನೆಲ್ಲಾ ನಾವು ಮಾಡುವಹಾಗೆ ನಮಗೂ ನಮ್ಮ ಮಕ್ಕಳಿಗೂ ನಿತ್ಯವಾಗಿ ಇರುತ್ತವೆ.
Deuteronomy 29
- Details
- Parent Category: Old Testament
- Category: Deuteronomy
ಧರ್ಮೋಪದೇಶಕಾಂಡ ಅಧ್ಯಾಯ 29