- 1 ಆಗ ಮೋಶೆ ಹೋಗಿ ಇಸ್ರಾಯೇಲ್ಯರಿಗೆಲ್ಲಾ ಈ ಮಾತುಗಳನ್ನು ಹೇಳಿದನು.
- 2 ಅವನು ಅವರಿಗೆ--ನಾನು ಈಹೊತ್ತು ನೂರ ಇಪ್ಪತ್ತು ವರುಷದವನಾಗಿದ್ದೇನೆ; ನಾನು ಇನ್ನು ಹೊರಗೆ ಹೋಗುವದಕ್ಕೂ ಬರುವದಕ್ಕೂ ಶಕ್ತನಲ್ಲ; ಇದಲ್ಲದೆ ಕರ್ತನು ನನಗೆ--ನೀನು ಈ ಯೊರ್ದನನ್ನು ದಾಟುವದಿ ಲ್ಲವೆಂದು ಹೇಳಿದ್ದಾನೆ.
- 3 ನಿನ್ನ ದೇವರಾದ ಕರ್ತನು ತಾನೇ ನಿನ್ನ ಮುಂದೆ ಹೋಗುವನು. ಆತನು ಆ ಜನಾಂಗಗಳನ್ನು ನಿನ್ನ ಮುಂದೆ ನಾಶಮಾಡುವನು; ನೀನು ಅವುಗಳನ್ನು ಸ್ವಾಧೀನಪಡಿಸಿಕೊಳ್ಳುವಿ; ಕರ್ತನು ಹೇಳಿದ ಪ್ರಕಾರ ಯೆಹೋಶುವನು ನಿನ್ನ ಮುಂದೆ ಹೋಗುವನು.
- 4 ಕರ್ತನು ಅಮೋರಿಯರ ಅರಸನಾದ ಸೀಹೋನನಿಗೂ ಓಗನಿಗೂ ಆತನು ನಾಶಮಾಡಿದ ಅವರ ದೇಶಕ್ಕೂ ಮಾಡಿದಂತೆ ಆ ಜನಾಂಗಗಳಿಗೆ ಮಾಡುವನು.
- 5 ನಾನು ನಿಮಗೆ ಆಜ್ಞಾಪಿಸಿದ ಸಮಸ್ತ ಆಜ್ಞೆಯ ಪ್ರಕಾರ ನೀವು ಅವರಿಗೆ ಮಾಡುವಹಾಗೆ ಕರ್ತನು ಅವರನ್ನು ನಿಮ್ಮ ಮುಂದೆ ಒಪ್ಪಿಸಿಬಿಡುವನು.
- 6 ಬಲವಾಗಿರ್ರಿ; ಧೈರ್ಯವಾಗಿರ್ರಿ; ಭಯಪಡಬೇಡಿರಿ; ಅವರಿಗೆ ಹೆದರಬೇಡಿರಿ; ನಿನ್ನ ದೇವರಾದ ಕರ್ತನು ತಾನೇ ನಿನ್ನ ಸಂಗಡ ಹೋಗುತ್ತಾನೆ; ಆತನು ನಿನ್ನನ್ನು ಬಿಡುವದಿಲ್ಲ, ವಿಸರ್ಜಿಸುವದೂ ಇಲ್ಲ ಎಂದು ಹೇಳಿದನು.
- 7 ಆಗ ಮೋಶೆಯು ಯೆಹೋಶುವನನ್ನು ಕರೆದು ಸಮಸ್ತ ಇಸ್ರಾಯೇಲಿನ ಮುಂದೆ ಅವನಿಗೆ--ಬಲ ವಾಗಿರು; ಧೈರ್ಯವಾಗಿರು; ಯಾಕಂದರೆ ನೀನು ಈ ಜನರ ಸಂಗಡ ಹೋಗಿ ಕರ್ತನು ಅವರ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣಮಾಡಿದ ದೇಶದಲ್ಲಿ ಸೇರ ಬೇಕು; ನೀನು ಅದನ್ನು ಅವರಿಗೆ ಸ್ವಾಸ್ತ್ಯವಾಗಿ ಕೊಡ ಬೇಕು.
- 8 ಇದಲ್ಲದೆ ಕರ್ತನು ತಾನೇ ನಿನ್ನ ಮುಂದೆ ಹೋಗುತ್ತಾನೆ; ಆತನೇ ನಿನ್ನ ಸಂಗಡ ಇರುವನು; ನಿನ್ನನ್ನು ತೊರೆಯುವದಿಲ್ಲ, ವಿಸರ್ಜಿಸುವದಿಲ್ಲ; ನೀನು ಭಯಪಡಬೇಡ; ಅಂಜಿಕೊಳ್ಳಬೇಡ ಎಂದು ಹೇಳಿದನು.
- 9 ಇದಲ್ಲದೆ ಮೋಶೆಯು ಈ ನ್ಯಾಯಪ್ರಮಾಣವನ್ನು ಬರೆದು ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವಂಥ ಲೇವಿಯ ಕುಮಾರರಾದ ಯಾಜಕರಿಗೂ ಇಸ್ರಾಯೇಲಿನ ಎಲ್ಲಾ ಹಿರಿಯರಿಗೂ ಒಪ್ಪಿಸಿದನು.
- 10 ಮೋಶೆಯು ಅವರಿಗೆ--ಪ್ರತಿ ಏಳು ವರುಷಗಳ ಕೊನೆಯಲ್ಲಿರುವ ಬಿಡುಗಡೆಯ ಪರಿಶುದ್ಧವಾದ ವರುಷದಲ್ಲಿ, ಅಂದರೆ ಗುಡಾರಗಳ ಹಬ್ಬದಲ್ಲಿ
- 11 ನಿನ್ನ ದೇವರಾದ ಕರ್ತನ ಸನ್ನಿಧಿಯಲ್ಲಿ, ಆತನು ಆದು ಕೊಳ್ಳುವ ಸ್ಥಳದಲ್ಲಿ ಇಸ್ರಾಯೇಲಿನವರೆಲ್ಲರು ಕಾಣಿಸಿ ಕೊಳ್ಳುವದಕ್ಕೆ ಬಂದಾಗ ನೀನು ಈ ನ್ಯಾಯಪ್ರಮಾಣ ವನ್ನು ಇಸ್ರಾಯೇಲಿನವರೆಲ್ಲರ ಮುಂದೆ ಅವರು ಕೇಳುವಹಾಗೆ ಓದಬೇಕು.
- 12 ಜನರನ್ನೂ ಅಂದರೆ ಗಂಡಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ನಿನ್ನ ಬಾಗಲುಗಳಲ್ಲಿರುವ ಪರವಾಸಿಗಳನ್ನೂ ಅವರು ಕೇಳಿ ಕಲಿತು ನಿಮ್ಮ ದೇವರಾದ ಕರ್ತನಿಗೆ ಭಯಪಟ್ಟು ಈ ನ್ಯಾಯಪ್ರಮಾಣದ ವಾಕ್ಯಗಳನ್ನೆಲ್ಲಾ ಕಾಪಾಡಿ ಮಾಡುವ ಹಾಗೆ ಕೂಡಿಸು.
- 13 ತಿಳಿಯದಿರುವ ಅವರ ಮಕ್ಕಳು ಸಹ ಕೇಳಿ ನೀವು ಸ್ವಾಧೀನಮಾಡಿಕೊಳ್ಳುವ ದಕ್ಕೆ ಯೊರ್ದನನ್ನು ದಾಟುವ ಭೂಮಿಯಲ್ಲಿ ನೀವು ಬದುಕುವ ದಿವಸಗಳೆಲ್ಲಾ ನಿಮ್ಮ ದೇವರಾದ ಕರ್ತನಿಗೆ ಭಯಪಡುವದಕ್ಕೆ ಕಲಿತುಕೊಳ್ಳಲಿ ಎಂದು ಆಜ್ಞಾಪಿಸಿ ಹೇಳಬೇಕು.
- 14 ಇದಲ್ಲದೆ ಕರ್ತನು ಮೋಶೆಗೆ--ಇಗೋ, ನೀನು ಸಾಯುವ ದಿನಗಳು ಸವಿಾಪವಾದವು. ಯೆಹೋಶುವ ನನ್ನು ಕರೆದು ನೀವು ಸಭೆಯ ಗುಡಾರದಲ್ಲಿ ನಿಂತು ಕೊಳ್ಳಿರಿ; ಆಗ ಅವನಿಗೆ ಆಜ್ಞೆ ಕೊಡುವೆನು ಅಂದನು. ಈ ಪ್ರಕಾರ ಮೋಶೆಯೂ ಯೆಹೋಶುವನೂ ಹೋಗಿ ಸಭೆಯ ಗುಡಾರದಲ್ಲಿ ನಿಂತುಕೊಂಡರು.
- 15 ಆಗ ಕರ್ತನು ಗುಡಾರದೊಳಗೆ ಮೇಘಸ್ತಂಭದಲ್ಲಿ ಕಾಣಿಸಿ ಕೊಂಡನು; ಆ ಮೇಘಸ್ತಂಭವು ಗುಡಾರದ ಬಾಗಲಿನ ಮೇಲೆ ನಿಂತಿತು.
- 16 ಆಗ ಕರ್ತನು ಮೋಶೆಗೆ--ನೀನು ನಿನ್ನ ಪಿತೃಗಳ ಸಂಗಡ ಮಲಗುವಿ; ಈ ಜನರು ಎದ್ದು ತಾವು ಪ್ರವೇಶಿಸುವ ದೇಶದ ಅನ್ಯದೇವರುಗಳನ್ನು ಅನುಸರಿಸಿ ಜಾರತ್ವಮಾಡಿ ನನ್ನನ್ನು ಬಿಟ್ಟು ನಾನು ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ವಿಾರುವರು.
- 17 ಆ ದಿವಸದಲ್ಲಿ ನನ್ನ ಕೋಪವು ಅವರ ಮೇಲೆ ಉರಿಯು ವದು. ನಾನು ಅವರನ್ನು ಬಿಟ್ಟುಬಿಟ್ಟು ನನ್ನ ಮುಖವನ್ನು ಅವರಿಗೆ ಮರೆಮಾಡುವೆನು; (ವಿರೋಧಿಗಳು) ಅವ ರನ್ನು ನುಂಗಿ ಬಿಡುವರು; ಬಹಳ ಕೇಡುಗಳೂ ಇಕ್ಕಟ್ಟು ಗಳೂ ಅವರಿಗೆ ಸಂಭವಿಸುವವು; ಆ ದಿವಸದಲ್ಲಿ ಅವರು--ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದ ಕಾರಣ ಈ ಕೇಡುಗಳು ನಮ್ಮನ್ನು ಹಿಡಿದವಲ್ಲಾ ಎಂದು ಹೇಳುವರು.
- 18 ಅವರು ಮಾಡಿದ ಎಲ್ಲಾ ಕೆಟ್ಟತನದ ನಿಮಿತ್ತವೂ ಅನ್ಯದೇವರುಗಳ ಕಡೆಗೆ ತಿರುಗಿದ್ದರಿಂದಲೂ ನಾನು ಆ ದಿವಸದಲ್ಲಿ ನನ್ನ ಮುಖವನ್ನು ಖಂಡಿತವಾಗಿ ಮರೆಮಾಡುವೆನು.
- 19 ಹೀಗಿರುವದರಿಂದ ಈಗ ಈ ಹಾಡನ್ನು ಬರೆದು ಕೊಳ್ಳಿರಿ; ಇಸ್ರಾಯೇಲ್ ಮಕ್ಕಳಿಗೆ ಅದನ್ನು ಕಲಿಸು; ಇಸ್ರಾಯೇಲ್ ಮಕ್ಕಳಲ್ಲಿ ಈ ಹಾಡು ನನಗೆ ಸಾಕ್ಷಿಯಾ ಗಿರುವ ಹಾಗೆ ಅದನ್ನು ಅವರ ಬಾಯಿಗಳಲ್ಲಿ ಇಡು.
- 20 ನಾನು ಅವರ ಪಿತೃಗಳಿಗೆ ಪ್ರಮಾಣಮಾಡಿದಂಥ ಹಾಲೂ ಜೇನೂ ಹರಿಯುವಂಥ ದೇಶಕ್ಕೆ ಅವರನ್ನು ತರಲಾಗಿ ಅವರು ತಿಂದು ತೃಪ್ತಿಯಾಗಿ ಕೊಬ್ಬಿದವ ರಾದಾಗ ಅವರು ಅನ್ಯದೇವರುಗಳ ಕಡೆಗೆ ತಿರುಗಿ ಕೊಂಡು ಅವುಗಳನ್ನು ಸೇವಿಸಿ ನನಗೆ ಕೋಪವನ್ನೆಬ್ಬಿಸಿ ನನ್ನ ಒಡಂಬಡಿಕೆಯನ್ನು ವಿಾರುವರು.
- 21 ಅನಂತರ ಬಹಳ ಕೇಡುಗಳೂ ಇಕ್ಕಟ್ಟುಗಳೂ ಅವರಿಗೆ ಸಂಭವಿಸು ವಾಗ ಈ ಹಾಡು ಅವರಿಗೆ ವಿರೋಧವಾಗಿ ಸಾಕ್ಷಿಯಾಗಿ ಉತ್ತರ ಕೊಡುವದು; ಯಾಕಂದರೆ ಅದು ಅವರ ಸಂತತಿಯ ಬಾಯಿಯಲ್ಲಿಂದ ಮರೆತುಹೋಗುವದಿಲ್ಲ; ನಾನು ಪ್ರಮಾಣಮಾಡಿದ ದೇಶದಲ್ಲಿ ಅವರನ್ನು ತರುವದಕ್ಕಿಂತ ಮುಂಚೆ ಅವರು ಈಹೊತ್ತು ಮಾಡುವ ಕಲ್ಪನೆಗಳನ್ನು ನಾನು ಬಲ್ಲೆನು.
- 22 ಆದದರಿಂದ ಮೋಶೆ ಅದೇ ದಿವಸದಲ್ಲಿ ಈ ಹಾಡನ್ನು ಬರೆದು ಇಸ್ರಾಯೇಲ್ ಮಕ್ಕಳಿಗೆ ಕಲಿಸಿದನು.
- 23 ಆತನು ನೂನನ ಮಗನಾದ ಯೆಹೋಶುವನಿಗೆ ಆಜ್ಞೆಕೊಟ್ಟು--ಬಲವಾಗಿರು; ಧೈರ್ಯವಾಗಿರು; ನಾನು ಇಸ್ರಾಯೇಲ್ ಮಕ್ಕಳಿಗೆ ಪ್ರಮಾಣಮಾಡಿದ ದೇಶಕ್ಕೆ ನೀನು ತರುವಿ; ನಾನು ನಿನ್ನ ಸಂಗಡ ಇರುವೆನು ಅಂದನು.
- 24 ಇದಲ್ಲದೆ ಮೋಶೆ ಈ ನ್ಯಾಯಪ್ರಮಾಣದ ವಾಕ್ಯಗಳನ್ನು ಪುಸ್ತಕದಲ್ಲಿ ಬರೆದು ಮುಗಿಸಿದಾಗ
- 25 ಮೋಶೆ ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವ ಲೇವಿಯರಿಗೆ ಆಜ್ಞಾಪಿಸಿ--
- 26 ನ್ಯಾಯ ಪ್ರಮಾಣದ ಈ ಪುಸ್ತಕವನ್ನು ತಕ್ಕೊಂಡು ನಿಮ್ಮ ದೇವ ರಾದ ಕರ್ತನ ಒಡಂಬಡಿಕೆಯ ಮಂಜೂಷದ ಒಂದು ಪಾರ್ಶ್ವದಲ್ಲಿ ಇಡಿರಿ; ಅದು ನಿಮಗೆ ವಿರೋಧವಾದ ಸಾಕ್ಷಿಗೆ ಅಲ್ಲಿ ಇರಲಿ.
- 27 ನಿನ್ನ ದ್ರೋಹವನ್ನೂ ನಿನ್ನ ಬಗ್ಗದ ಕುತ್ತಿಗೆಯನ್ನೂ ನಾನು ಬಲ್ಲೆನು; ಇಗೋ, ಈಹೊತ್ತು ನಾನು ಇನ್ನೂ ನಿಮ್ಮ ಸಂಗಡ ಬದುಕಿರು ವಾಗಲೇ ಕರ್ತನಿಗೆ ದ್ರೋಹಮಾಡಿದವರಾದಿರಿ; ನಾನು ಸತ್ತ ಮೇಲೆ ಇನ್ನೇನ್ನಾಗುವದು?
- 28 ನಿಮ್ಮ ಗೋತ್ರಗಳ ಎಲ್ಲಾ ಹಿರಿಯರನ್ನೂ ನಿಮ್ಮ ಅಧಿಕಾರಿ ಗಳನ್ನೂ ನನ್ನ ಬಳಿಗೆ ಕೂಡಿಸಿರಿ; ಆಗ ಈ ಮಾತುಗಳನ್ನು ಅವರು ಕೇಳುವಹಾಗೆ ಆಡುವೆನು; ಆಕಾಶವನ್ನೂ ಭೂಮಿಯನ್ನೂ ಸಾಕ್ಷಿಗೆ ಕರೆಯುವೆನು.
- 29 ನಾನು ಸತ್ತ ಮೇಲೆ ನೀವು ಪೂರ್ಣವಾಗಿ ನಿಮ್ಮನ್ನು ನೀವು ಕೆಡಿಸಿ ಕೊಂಡು ನಾನು ನಿಮಗೆ ಆಜ್ಞಾಪಿಸಿದ ಮಾರ್ಗದಿಂದ ತೊಲಗಿ ಹೋಗುವಿರೆಂದು ನಾನು ಬಲ್ಲೆನು; ನೀವು ಕರ್ತನ ಮುಂದೆ ಕೆಟ್ಟದ್ದನ್ನು ಮಾಡಿ ನಿಮ್ಮ ಕ್ರಿಯೆಗಳಿಂದ ಆತನಿಗೆ ಕೋಪವನ್ನೆಬ್ಬಿಸುವ ಕಾರಣ ಕಡೇ ದಿವಸಗಳಲ್ಲಿ ನಿಮಗೆ ಕೇಡುಸಂಭವಿಸುವದು ಎಂದು ಹೇಳಿದನು.
- 30 ಆಗ ಮೋಶೆ ಇಸ್ರಾಯೇಲ್ ಸಭೆಗೆ ಕೇಳುವ ಹಾಗೆ ಈ ಹಾಡಿನ ಮಾತುಗಳನ್ನು ಹೇಳಿ ಮುಗಿಸಿದನು.
Deuteronomy 31
- Details
- Parent Category: Old Testament
- Category: Deuteronomy
ಧರ್ಮೋಪದೇಶಕಾಂಡ ಅಧ್ಯಾಯ 31