- 1 ಓ ಆಕಾಶಗಳೇ ಕಿವಿಗೊಡಿರಿ, ನಾನು ಮಾತನಾಡುತ್ತೇನೆ; ಓ ಭೂಮಿಯೇ, ನನ್ನ ಬಾಯಿಯ ಮಾತುಗಳನ್ನು ಕೇಳು.
- 2 ನನ್ನ ಬೋಧನೆಯು ಮಳೆಯಂತೆ ಸುರಿಯುವದು; ನನ್ನ ಮಾತು ಮಂಜಿನಂತೆಯೂ ಹುಲ್ಲಿನ ಮೇಲೆ ಬೀಳುವ ತುಂತುರಿನ ಹಾಗೆಯೂ ಪಲ್ಯದ ಮೇಲೆ ಬೀಳುವ ವೃಷ್ಟಿಗಳ ಹಾಗೆಯೂ ಬೀಳುವದು.
- 3 ಕರ್ತನ ಹೆಸರನ್ನು ನಾನು ಸಾರುತ್ತೇನೆ. ನಮ್ಮ ದೇವರಿಗೆ ಮಹತ್ವವನ್ನು ಕೊಡಿರಿ.
- 4 ಆತನೇ ಬಂಡೆ. ಆತನ ಕಾರ್ಯವು ಸಂಪೂರ್ಣ ವಾದದ್ದು. ಆತನ ಮಾರ್ಗಗಳೆಲ್ಲಾ ನ್ಯಾಯವಾಗಿವೆ; ಆತನು ಸತ್ಯದ ಮತ್ತು ದೋಷರಹಿತನಾದ ದೇವರು, ಆತನು ನೀತಿವಂತನೂ ಯಥಾರ್ಥನೂ ಆಗಿದ್ದಾನೆ.
- 5 ಅವರು ತಮ್ಮನ್ನು ತಾವೇ ಕೆಡಿಸಿಕೊಂಡರು. ಅವರ ಗುರುತು ಆತನ ಮಕ್ಕಳಲ್ಲದವರ ಗುರುತು. ಅವರು ಮೂರ್ಖರಾದ ವಕ್ರಸಂತತಿಯೇ.
- 6 ಓ ಮೂರ್ಖರಾದ ಬುದ್ಧಿಹೀನ ಜನರೇ, ಕರ್ತನಿಗೆ ಹೀಗೆ ಪ್ರತಿಯಾಗಿ ಕೊಡುತ್ತೀರೋ? ಆತನು ನಿನ್ನನ್ನು ಕೊಂಡುಕೊಂಡ ತಂದೆಯಲ್ಲವೋ? ಆತನು ನಿನ್ನನ್ನು ಸೃಷ್ಟಿಮಾಡಿ ಸ್ಥಿರಪಡಿಸಿದ್ದಾನೆ.
- 7 ಪೂರ್ವದ ದಿವಸಗಳನ್ನು ಜ್ಞಾಪಕಮಾಡಿಕೊ; ತಲ ತಲಾಂತರಗಳ ವರುಷಗಳನ್ನು ಗ್ರಹಿಸಿಕೊ; ನಿನ್ನ ತಂದೆ ಯನ್ನು ಕೇಳು, ಅವನು ನಿನಗೆ ತಿಳಿಸುವನು. ನಿನ್ನ ಹಿರಿಯರನ್ನು ಕೇಳು, ಅವರು ನಿನಗೆ ಹೇಳುವರು.
- 8 ಮಹೋನ್ನತನು ಜನಾಂಗಗಳಿಗೆ ಸ್ವಾಸ್ತ್ಯ ಹಂಚಿ ಆತನು ಆದಾಮನ ಮಕ್ಕಳನ್ನು ವಿಂಗಡಿಸಿದಾಗ ಇಸ್ರಾ ಯೇಲ್ ಮಕ್ಕಳ ಲೆಕ್ಕದ ಪ್ರಕಾರ ಜನಗಳ ಮೇರೆಗಳನ್ನು ಇಟ್ಟನು.
- 9 ಕರ್ತನ ಪಾಲು ಆತನ ಜನವೇ; ಯಾಕೋಬು ಆತನ ಸ್ವಾಸ್ತ್ಯದ ಪಾಲು.
- 10 ಆತನು ಅರಣ್ಯದ ಭೂಮಿಯಲ್ಲಿಯೂ ಕಿರುಚುವ ಅಡವಿಯ ಕಾಡಿನಲ್ಲಿಯೂ ಅವನನ್ನು ಕಂಡುಕೊಂಡನು; ಆತನು ಅವನನ್ನು ನಡಿಸಿ, ಉಪದೇಶಿಸಿದನು. ತನ್ನ ಕಣ್ಣುಗುಡ್ಡೆಯಂತೆ ಕಾಪಾಡಿದನು.
- 11 ಹದ್ದು ತನ್ನ ಗೂಡಿನಿಂದ ಮರಿಗಳನ್ನು ಹೊರಡಿಸಿ ಅವುಗಳ ಮೇಲೆ ರೆಕ್ಕೆಯನ್ನಾಡಿಸಿ ತನ್ನ ರೆಕ್ಕೆಗಳನ್ನು ಚಾಚಿ, ತಕ್ಕೊಂಡು ರೆಕ್ಕೆಯ ಮೇಲೆ ಎತ್ತಿಕೊಳ್ಳುವಂತೆ
- 12 ಕರ್ತನು ಒಬ್ಬನೇ ಅವನನ್ನು ನಡಿಸಿದನು. ಅನ್ಯ ದೇವರು ಒಬ್ಬನೂ ಅವನ ಸಂಗಡ ಇದ್ದಿಲ್ಲ.
- 13 ಅವನು ಹೊಲದ ಆದಾಯವನ್ನು ತಿನ್ನುವ ಹಾಗೆ ಭೂಮಿಯ ಎತ್ತರವಾದ ಸ್ಥಳಗಳಲ್ಲಿ ಅವನನ್ನು ಹೋಗ ಮಾಡಿ ಬಂಡೆಯೊಳಗಿಂದ ಜೇನನ್ನೂ ಬಿಳೀ ಕಲ್ಲಿನ ಬಂಡೆಯೊಳಗಿಂದ ಎಣ್ಣೆಯನ್ನೂ ಅವನಿಗೆ ಕುಡಿಯಲು ಕೊಟ್ಟನು.
- 14 ಹಸುಗಳ ಬೆಣ್ಣೆಯನ್ನೂ ಕುರಿಗಳ ಹಾಲನ್ನೂ ಕುರಿಮರಿಗಳ ಕೊಬ್ಬಿನೊಂದಿಗೆ ಬಾಷಾನಿನ ಟಗರು ಗಳನ್ನೂ ಹೋತಗಳನ್ನೂ ಉತ್ತಮ ಗೋಧಿಯ ಸಂಗಡ ಕೊಟ್ಟನು. ನೀನು ಶುದ್ಧ ದ್ರಾಕ್ಷಾರಸವನ್ನು ಕುಡಿದಿ.
- 15 ಆದರೆ ಯೆಶುರೂನು ಕೊಬ್ಬಿ ಒದ್ದನು, ನೀನು ಕೊಬ್ಬಿದವನಾಗಿ ಉಬ್ಬಿದಿ, ನೀನು ಕೊಬ್ಬಿನಿಂದ ಮುಚ್ಚ ಲ್ಪಟ್ಟಿ. ಅವನು ತನ್ನನ್ನು ಉಂಟುಮಾಡಿದ ದೇವರನ್ನು ತೊರೆದು ತನ್ನ ರಕ್ಷಣೆಯ ಬಂಡೆಯನ್ನು ಅಲಕ್ಷ್ಯ ಮಾಡಿದನು.
- 16 ಅನ್ಯದೇವತೆಗಳಿಂದ ಆತನಿಗೆ ಅವರು ರೋಷ ಹುಟ್ಟಿಸಿದರು. ಅಸಹ್ಯವಾದವುಗಳಿಂದ ಆತನಿಗೆ ಕೋಪ ವನ್ನು ಎಬ್ಬಿಸಿದರು.
- 17 ದೇವರಿಗೆ ಅಲ್ಲ, ದೆವ್ವಗಳಿಗೆ, ಅವರು ಅರಿಯದ ದೇವರುಗಳಿಗೆ, ಇತ್ತಲಾಗಿ ಬಂದ ಹೊಸ ದೇವರು ಗಳಿಗೆ ನಿಮ್ಮ ಪಿತೃಗಳು ಭಯಪಡದವುಗಳಿಗೆ ಬಲಿ ಅರ್ಪಿಸಿದರು.
- 18 ನಿನ್ನನ್ನು ಹುಟ್ಟಿಸಿದ ಬಂಡೆಯನ್ನು ನೆನಸದೆ ನಿನ್ನನ್ನು ರೂಪಿಸಿದ ದೇವರನ್ನು ಮರೆತುಬಿಟ್ಟಿದ್ದಿ.
- 19 ಕರ್ತನು ಅದನ್ನು ನೋಡಿ ಕೋಪದಿಂದ ತನ್ನ ಕುಮಾರ ಕುಮಾರ್ತೆಯರನ್ನು ಅಸಹ್ಯಿಸಿಕೊಂಡನು.
- 20 ಆತನು--ನನ್ನ ಮುಖವನ್ನು ಅವರಿಗೆ ಮರೆ ಮಾಡುವೆನು; ಅವರ ಅಂತ್ಯವು ಏನೆಂದು ನೋಡು ವೆನು; ಅವರು ಮೂರ್ಖ ಸಂತತಿಯೇ, ನಂಬಿಕೆಯಿಲ್ಲದ ಮಕ್ಕಳೇ.
- 21 ದೇವರಲ್ಲದ್ದರಿಂದ ಅವರು ನನಗೆ ರೋಷ ಹುಟ್ಟಿಸಿ ದರು; ತಮ್ಮ ವ್ಯರ್ಥವಾದವುಗಳಿಂದ ನನಗೆ ಕೋಪ ವನ್ನು ಎಬ್ಬಿಸಿದರು. ಜನವಲ್ಲದ್ದರಿಂದ ನಾನು ಅವರಿಗೆ ರೋಷ ಹುಟ್ಟಿಸುವೆನು; ಮೂಢ ಜನಾಂಗದಿಂದ ಅವರಿಗೆ ಕೋಪವನ್ನೆಬ್ಬಿಸುವೆನು.
- 22 ನನ್ನ ಕೋಪದಲ್ಲಿ ಬೆಂಕಿಹತ್ತಿತು; ಅದು ಕೆಳಗಿನ ಪಾತಾಳದ ಮಟ್ಟಿಗೂ ಉರಿದು ಭೂಮಿಯನ್ನೂ ಅದರ ಫಲವನ್ನೂ ತಿಂದುಬಿಟ್ಟು ಬೆಟ್ಟಗಳ ಅಸ್ತಿವಾರವನ್ನು ದಹಿಸುವದು.
- 23 ನಾನು ಕೇಡುಗಳನ್ನು ಅವರ ಮೇಲೆ ಕೂಡಿಸಿ ಡುವೆನು; ನನ್ನ ಬಾಣಗಳನ್ನು ಅವರ ಮೇಲೆ ಎಸೆದು ತೀರಿಸುವೆನು.
- 24 ಅವರು ಹಸಿವೆಯಿಂದ ಬಳಲಿಹೋಗುವರು, ಜ್ವಾಲೆಯಿಂದಲೂ ಕಠಿಣವಾಗಿ ಸಂಹರಿಸಲ್ಪಡುವರು. ಕಾಡುಮೃಗಗಳ ಹಲ್ಲನ್ನು, ಧೂಳಿನಲ್ಲಿರುವ ಹಾವು ಗಳ ವಿಷದ ಸಂಗಡ ಅವರಿಗೆ ವಿರೋಧವಾಗಿ ಕಳುಹಿಸುವೆನು.
- 25 ಹೊರಗೆ ಕತ್ತಿಯೂ ಒಳಗೆ ಭಯವೂ ಪ್ರಾಯ ಸ್ಥನನ್ನೂ ಕನ್ನಿಕೆಯನ್ನೂ ನರೇಕೂದಲಿನವನ ಸಂಗಡ ಮೊಲೆ ಕೂಸನ್ನೂ ಸಂಹರಿಸುವವು.
- 26 ನಾನು--ಅವರನ್ನು ಚದುರಿಸಿಬಿಡುವೆನೆಂದು ಹೇಳಿಕೊಂಡೆನು; ಅವರ ಜ್ಞಾಪಕವನ್ನು ಮನುಷ್ಯರಲ್ಲಿ ಇರದ ಹಾಗೆ ಮಾಡುವೆನು.
- 27 ಅವರ ಶತ್ರುಗಳು--ನಮ್ಮ ಕೈಗಳು ಉನ್ನತವಾಗಿವೆ ಎಂದೂ ಕರ್ತನು ಇವುಗಳನ್ನೆಲ್ಲಾ ಮಾಡಲಿಲ್ಲವೆಂದೂ ಅಂದುಕೊಂಡು ಗರ್ವದಿಂದ ನಡೆಯುವ ಶತ್ರುವಿನ ಕೋಪಕ್ಕೆ ಹೆದರದೆ ಹೋದೆನು.
- 28 ಅವರು ಆಲೋಚನೆಯಿಲ್ಲದ ಜನಾಂಗವೇ; ಅವರಲ್ಲಿ ಗ್ರಹಿಕೆ ಇಲ್ಲ.
- 29 ಅವರು ಜ್ಞಾನವಂತರಾಗಿ ಇದರ ವಿಷಯ ಬುದ್ಧಿ ತಂದುಕೊಂಡು ತಮ್ಮ ಕಡೇಕಾಲಕ್ಕಾಗಿ ಗ್ರಹಿಕೆಯುಳ್ಳ ವರಾದರೆ ಎಷ್ಟೋ ಒಳ್ಳೇದು!
- 30 ಅವರ ಬಂಡೆ ಅವರನ್ನು ಮಾರಿ ಕರ್ತನು ಅವರನ್ನು ಅಟ್ಟಿಬಿಟ್ಟರೆ ಒಬ್ಬನು ಹೇಗೆ ಸಾವಿರ ಮಂದಿ ಯನ್ನು ಹಿಂದಟ್ಟುವನು? ಇಬ್ಬರು ಹೇಗೆ ಹತ್ತು ಸಾವಿರ ಮಂದಿಯನ್ನು ಓಡಿಸುವರು?
- 31 ನಮ್ಮ ಬಂಡೆಯ ಹಾಗೆ ಅವರ ಬಂಡೆ ಅಲ್ಲ. ಇದಕ್ಕೆ ನಮ್ಮ ಶತ್ರುಗಳೇ ಸಾಕ್ಷಿ.
- 32 ಅವರ ದ್ರಾಕ್ಷೇಗಿಡ ಸೊದೋಮಿನ ದ್ರಾಕ್ಷೇಗಿಡ ದಿಂದಲೂ ಗೊಮೋರದ ಹೊಲಗಳೊಳಗಿಂದಲೂ ಅವೆ; ಅವರ ಹಣ್ಣುಗಳು ವಿಷದ ಹಣ್ಣುಗಳು; ಅವರ ಗೊಂಚಲುಗಳು ಕಹಿಯಾಗಿವೆ.
- 33 ಅವರ ದ್ರಾಕ್ಷಾರಸವು ಘಟಸರ್ಪಗಳ ವಿಷವೂ ಹಾವುಗಳ ಕ್ರೂರ ವಿಷವೂ ಆಗಿದೆ.
- 34 ಅದು ನನ್ನ ಸಂಗಡ ಬಚ್ಚಿಡಲ್ಪಟ್ಟದ್ದಾಗಿದ್ದು ನನ್ನ ಉಗ್ರಾಣಗಳಲ್ಲಿ ಮುದ್ರೆ ಹಾಕಲ್ಪಟ್ಟದ್ದಲ್ಲವೋ?
- 35 ಮುಯ್ಯಿಗೆ ಮುಯ್ಯಿ ಕೊಡುವದೂ ಪ್ರತಿಫಲ ಕೊಡುವದೂ ನನ್ನದೇ; ತಕ್ಕ ಕಾಲದಲ್ಲಿ ಅವರ ಕಾಲು ಜಾರುವದು; ಅವರ ಕಳವಳದ ದಿವಸವು ಸವಿಾಪ ವಾಗಿದೆ. ಅವರ ಮೇಲೆ ಬರುವವುಗಳು ಬೇಗ ಬರುತ್ತವೆ.
- 36 ಕರ್ತನು ತನ್ನ ಜನರಿಗೆ ನ್ಯಾಯತೀರಿಸುವನು; ಅವರ ಬಲಹೋಯಿತೆಂದೂ ಬಚ್ಚಿಡಲ್ಪಟ್ಟವರೂ ಉಳಿ ದವರೂ ಇಲ್ಲವೆಂದೂ ನೋಡಿದಾಗ ತನ್ನ ದಾಸರಿಗೋಸ್ಕರ ಪಶ್ಚಾತ್ತಾಪಪಡುವನು.
- 37 ಆಗ ಅವನು ಹೇಳುವದೇನಂದರೆ--ಅವರ ದೇವರುಗಳು ಎಲ್ಲಿ? ಅವರು ನಂಬಿಕೊಂಡಂಥ,
- 38 ಅವರ ಬಲಿಗಳ ಕೊಬ್ಬನ್ನು ತಿಂದಂಥ, ಅವರ ಪಾನದ ಅರ್ಪಣೆಗಳ ದ್ರಾಕ್ಷಾರಸ ಕುಡಿದಂಥ ಅವರ ಬಂಡೆಯು ಎಲ್ಲಿ? ಅವರು ಎದ್ದು ನಿಮಗೆ ಸಹಾಯ ಮಾಡಲಿ; ನಿಮಗೋಸ್ಕರ ಕಾವಲಾಗಲಿ.
- 39 ನಾನು ಆತನೇ ಎಂದೂ ನನ್ನ ಹಾಗೆ ಬೇರೆ ದೇವರಿಲ್ಲವೆಂದೂ ಈಗ ನೋಡಿರಿ; ನಾನೇ ಸಾಯಿಸು ತ್ತೇನೆ, ಬದುಕಿಸುತ್ತೇನೆ; ಗಾಯ ಮಾಡುತ್ತೇನೆ, ನಾನೇ ಸ್ವಸ್ಥ ಮಾಡುತ್ತೇನೆ. ನನ್ನ ಕೈಯಿಂದ ತಪ್ಪಿಸುವವನು ಯಾರೂ ಇಲ್ಲ.
- 40 ನಾನು ಆಕಾಶಕ್ಕೆ ನನ್ನ ಕೈಯನ್ನು ಎತ್ತಿ--ನಾನು ನಿತ್ಯವಾಗಿ ಬದುಕುತ್ತೇನೆಂದು ಹೇಳುತ್ತೇನೆ.
- 41 ನಾನು ಮಿಂಚುವ ಕತ್ತಿಯನ್ನು ಹದಮಾಡುವಾಗ, ನನ್ನ ಕೈ ನ್ಯಾಯವನ್ನು ಹಿಡುಕೊಳ್ಳುವಾಗ, ನನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸಿ ನನ್ನನ್ನು ಹಗೆಮಾಡುವವರಿಗೆ ಮುಯ್ಯಿ ತೀರಿಸುವೆನು.
- 42 ಸತ್ತವರ ಮತ್ತು ಸೆರೆಯವರ ರಕ್ತದಿಂದಲೂ ಆರಂಭದ ಶತ್ರುವಿನ ಪ್ರತೀಕಾರದಿಂದಲೂ ನನ್ನ ಬಾಣಗಳನ್ನು ರಕ್ತದಿಂದ ಅಮಲೇರುವಂತೆ ಮಾಡು ವೆನು. ನನ್ನ ಕತ್ತಿ ಮಾಂಸವನ್ನು ತಿನ್ನುವದು.
- 43 ಓ ಎಲ್ಲಾ ಜನಾಂಗಗಳೇ, ಆತನ ಜನರ ಸಂಗಡ ಹರ್ಷಿಸಿರಿ; ಆತನು ತನ್ನ ದಾಸರ ರಕ್ತಕ್ಕೋಸ್ಕರ ಮುಯ್ಯಿ ತೀರಿಸುತ್ತಾನೆ; ತನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುತ್ತಾನೆ; ತನ್ನ ದೇಶಕ್ಕೋಸ್ಕರವೂ ತನ್ನ ಜನರಿಗೋಸ್ಕರವೂ ಕರುಣೆಯುಳ್ಳವನಾಗಿರುವನು ಎಂಬದೇ.
- 44 ಆಗ ಮೋಶೆಯು ನೂನನ ಮಗನಾದ ಯೆಹೋಶುವನ ಸಂಗಡ ಬಂದು ಈ ಹಾಡಿನ ಮಾತುಗಳನ್ನೆಲ್ಲಾ ಜನರು ಕೇಳುವ ಹಾಗೆ ಹೇಳಿದನು.
- 45 ಮೋಶೆಯು ಈ ಮಾತುಗಳನ್ನೆಲ್ಲಾ ಸಮಸ್ತ ಇಸ್ರಾಯೇಲಿಗೆ ಹೇಳಿ ತೀರಿಸಿದಾಗ ಅವರಿಗೆ--
- 46 ನಾನು ಈ ಹೊತ್ತು ನಿಮಗೆ ಸಾಕ್ಷಿಯಾಗಿ ಹೇಳುವ ಮಾತುಗಳನ್ನೆಲ್ಲಾ ನಿಮ್ಮ ಹೃದಯಗಳಲ್ಲಿ ಇಡಿರಿ; ಈ ನ್ಯಾಯಪ್ರಮಾಣದ ಮಾತುಗಳನ್ನೆಲ್ಲಾ ಕೈಕೊಳ್ಳುವದಕ್ಕೆ ನಿಮ್ಮ ಮಕ್ಕಳಿಗೆ ಆಜ್ಞಾಪಿಸಬೇಕು.
- 47 ಇದು ನಿಮಗೆ ವ್ಯರ್ಥವಾದದ್ದಲ್ಲ, ಇದು ನಿಮ್ಮ ಜೀವವೇ. ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಯೊರ್ದನನ್ನು ದಾಟುವ ಭೂಮಿಯಲ್ಲಿ ಇದರಿಂದಲೇ ನಿಮ್ಮ ದಿವಸಗಳನ್ನು ಹೆಚ್ಚಿಸಿಕೊಳ್ಳುವಿರಿ ಎಂದು ಹೇಳಿದನು.
- 48 ಅದೇ ದಿವಸದಲ್ಲಿ ಕರ್ತನು ಮೋಶೆಗೆ--
- 49 ಈ ಅಬಾರೀಮ್ ಪರ್ವತದ ಮೇಲೆ ಮೋವಾಬ್ ದೇಶದ ಲ್ಲಿಯೂ ಯೆರಿಕೋವಿಗೆ ಎದುರಾಗಿಯೂ ಇರುವ ನೆಬೋ ಬೆಟ್ಟದ ಮೇಲೆ ಏರಿಹೋಗು; ನಾನು ಇಸ್ರಾ ಯೇಲ್ ಮಕ್ಕಳಿಗೆ ಸ್ವಾಸ್ತ್ಯವಾಗಿ ಕೊಡುವ ಕಾನಾನ್ ದೇಶವನ್ನು ನೋಡು,
- 50 ನಿನ್ನ ಸಹೋದರನಾದ ಆರೋನನು ಹೋರ್ ಬೆಟ್ಟದಲ್ಲಿ ಸತ್ತು ತನ್ನ ಜನರ ಬಳಿಗೆ ಕೂಡಿಸಲ್ಪಟ್ಟ ಹಾಗೆ ನೀನು ಏರಿಹೋಗುವ ಬೆಟ್ಟದಲ್ಲಿ ಸತ್ತು ನಿನ್ನ ಜನರ ಬಳಿಗೆ ಕೂಡಿಸಲ್ಪಡಬೇಕು.
- 51 ಕಾರಣವೇನಂದರೆ, ನೀವು ಜಿನ್ ಅರಣ್ಯದಲ್ಲಿ ಕಾದೇಶಿನ ಮೆರೀಬಾದ ನೀರಿನ ಬಳಿಯಲ್ಲಿ ನನ್ನನ್ನು ಇಸ್ರಾಯೇಲ್ ಮಕ್ಕಳಲ್ಲಿ ಪರಿಶುದ್ಧ ಮಾಡದೆ ನನಗೆ ವಿರೋಧವಾಗಿ ಆಜ್ಞೆ ವಿಾರಿದಿರಿ.
- 52 ನೀನು ಆ ದೇಶವನ್ನು ಕಣ್ಣಾರೆ ನೋಡುವಿ; ಆದರೆ ನಾನು ಇಸ್ರಾಯೇಲ್ ಮಕ್ಕಳಿಗೆ ಕೊಡುವ ದೇಶದಲ್ಲಿ ನೀನು ಪ್ರವೇಶಿಸುವದಿಲ್ಲ ಎಂದು ಹೇಳಿದನು.
Deuteronomy 32
- Details
- Parent Category: Old Testament
- Category: Deuteronomy
ಧರ್ಮೋಪದೇಶಕಾಂಡ ಅಧ್ಯಾಯ 32