- 1 ದೇವರ ಮನುಷ್ಯನಾದ ಮೋಶೆ ಸಾಯುವದಕ್ಕಿಂತ ಮುಂಚೆ ಇಸ್ರಾಯೇಲ್ ಮಕ್ಕಳಿಗೆ ಕೊಟ್ಟ ಆಶೀರ್ವಾದವು ಯಾವದಂದರೆ--
- 2 ಕರ್ತನು ಸೀನಾಯಿ ಬೆಟ್ಟದಿಂದ ಬಂದನು, ಸೇಯಾರಿನಿಂದ ಅವರಿಗೆ ಉದಯಿಸಿದನು. ಪಾರಾನ್ ಬೆಟ್ಟದಿಂದ ಪ್ರಕಾಶಿಸಿದನು, ಹತ್ತು ಸಾವಿರ ಪರಿಶುದ್ಧರ ಸಂಗಡ ಬಂದನು. ಆತನ ಬಲಪಾರ್ಶ್ವದಿಂದ ಅವರಿಗೆ ಬೆಂಕಿಯ ನ್ಯಾಯಪ್ರಮಾಣವು ಹೊರಟಿತು.
- 3 ಹೌದು, ಆತನು ಜನಗಳನ್ನು ಪ್ರೀತಿಮಾಡಿದನು. ಆತನ ಪರಿಶುದ್ಧರೆಲ್ಲರು ನಿನ್ನ ಕೈಯಲ್ಲಿ ಇದ್ದಾರೆ. ಅವರು ನಿನ್ನ ಪಾದದ ಬಳಿಯಲ್ಲಿ ಕೂತುಕೊಂಡು ನಿನ್ನ ವಾಕ್ಯಗಳನ್ನು ಹೊಂದುತ್ತಾರೆ.
- 4 ಮೋಶೆ ನಮಗೆ ನ್ಯಾಯಪ್ರಮಾಣವನ್ನು ಆಜ್ಞಾಪಿ ಸಿದ್ದಾನೆ. ಅದೇ ಯಾಕೋಬನ ಸಭೆಯ ಬಾಧ್ಯತೆಯು.
- 5 ಜನರ ಮುಖ್ಯಸ್ಥರೂ ಇಸ್ರಾಯೇಲಿನ ಗೋತ್ರ ಗಳೂ ಕೂಡಿಕೊಂಡಿದ್ದಾಗ ಆತನು ಯೆಶುರೂನಿನಲ್ಲಿ ಅರಸನಾಗಿದ್ದನು.
- 6 ರೂಬೇನನು ಸಾಯದೆ ಬದುಕಲಿ; ಅವನ ಜನ ಸ್ವಲ್ಪವಾಗದಿರಲಿ.
- 7 ಯೂದನ ಆಶೀರ್ವಾದವು ಇದೇ; ಕರ್ತನೇ, ಯೂದನ ಶಬ್ದವನ್ನು ಕೇಳು; ಅವನನ್ನು ತನ್ನ ಜನರ ಬಳಿಗೆ ಸೇರಿಸು; ತನ್ನ ಕೈಗಳು ಅವನಿಗೆ ಸಾಕಾಗಿವೆ. ಅವನ ವೈರಿಗಳ ವಿಷಯದಲ್ಲಿ ಅವನಿಗೆ ಸಹಾಯ ವಾಗಿರು ಎಂದು ಹೇಳಿದನು.
- 8 ಲೇವಿಯ ವಿಷಯವಾಗಿ--ನಿನ್ನ ತುವಿಾ್ಮೇಮ್ ನಿನ್ನ ಊರೀಮ್ ಮಸ್ಸದಲ್ಲಿ ನೀನು ಶೋಧಿಸಿದಂಥ ಮೆರೀ ಬಾದ ನೀರಿನ ಬಳಿಯಲ್ಲಿ ನೀನು ವಿವಾದ ಮಾಡಿದಂಥ ನಿನ್ನ ಪರಿಶುದ್ಧನ ಬಳಿಯಲ್ಲಿ ಇರುವವು;
- 9 ಅವನು ತನ್ನ ತಂದೆ ತಾಯಿಗಳಿಗೆ--ನಾನು ಅವ ನನ್ನು ನೋಡಲಿಲ್ಲ ಅಂದನು. ತನ್ನ ಸಹೋದರರ ಗುರುತನ್ನು ತಿಳುಕೊಳ್ಳಲಿಲ್ಲ. ತನ್ನ ಸ್ವಂತ ಮಕ್ಕಳನ್ನು ಅರಿಯಲಿಲ್ಲ. ಯಾಕಂದರೆ ಅವರು (ಲೇವಿಯರು) ನಿನ್ನ ವಾಕ್ಯವನ್ನು ಕೈಕೊಂಡು ನಿನ್ನ ಒಡಂಬಡಿಕೆಯನ್ನು ಕಾಪಾಡಿದ್ದಾರೆ.
- 10 ಅವರು ಯಾಕೋಬನಿಗೆ ನಿನ್ನ ನ್ಯಾಯಗಳನ್ನೂ ಇಸ್ರಾಯೇಲಿಗೆ ನಿನ್ನ ನ್ಯಾಯಪ್ರಮಾಣವನ್ನೂ ಬೋಧಿಸುವರು; ನಿನ್ನ ಮುಂದೆ ಧೂಪವನ್ನೂ ನಿನ್ನ ಬಲಿಪೀಠದ ಮೇಲೆ ಸರ್ವಾಂಗ ದಹನಬಲಿಯನ್ನೂ ಇಡುವರು.
- 11 ಕರ್ತನೇ, ಅವನ ಆಸ್ತಿಯನ್ನು ಆಶೀರ್ವದಿಸು; ಅವನ ಕೈಕೆಲಸವನ್ನು ಅಂಗೀಕರಿಸು. ಅವನಿಗೆ ವಿರೋಧ ವಾಗಿ ಏಳುವವರ ಮತ್ತು ಅವನನ್ನು ಹಗೆಮಾಡುವವರ ಸೊಂಟಗಳನ್ನು ಅವರು ತಿರಿಗಿ ಏಳದ ಹಾಗೆ ಹೊಡೆ ಅಂದನು.
- 12 ಅವನು ಬೆನ್ಯಾವಿಾನನ ವಿಷಯವಾಗಿ--ಕರ್ತ ನಿಗೆ ಪ್ರಿಯನು ಸುರಕ್ಷಿತವಾಗಿ ಆತನ ಬಳಿಯಲ್ಲಿ ವಾಸ ಮಾಡುವನು; ಆತನು ಅವನಿಗೆ ದಿನವೆಲ್ಲಾ ಮರೆಯಾಗಿ ರುವನು; ಅವನು ಆತನ ಹೆಗಲುಗಳ ನಡುವೆ ವಾಸ ಮಾಡುವನು ಅಂದನು.
- 13 ಯೋಸೇಫನ ವಿಷಯವಾಗಿ--ಅವನ ದೇಶವು ಆಕಾಶದ ಅಮೂಲ್ಯವಾದವುಗಳಿಂದಲೂ ಮಂಜಿ ನಿಂದಲೂ ಕೆಳಗೆ ಮಲಗಿರುವ ಅಗಾಧದಿಂದಲೂ
- 14 ಸೂರ್ಯನ ಆದಾಯದ ಅಮೂಲ್ಯವಾದ ಫಲಗಳಿಂದಲೂ ಚಂದ್ರನ ಆದಾಯದ ಅಮೂಲ್ಯವಾದ ವುಗಳಿಂದಲೂ
- 15 ಪೂರ್ವಕಾಲದ ಪರ್ವತಗಳ ಮುಖ್ಯವಾದವುಗ ಳಿಂದಲೂ ನಿತ್ಯವಾದ ಬೆಟ್ಟಗಳ ಅಮೂಲ್ಯವಾದ ವುಗಳಿಂದಲೂ
- 16 ಭೂಮಿಯ ಅಮೂಲ್ಯವಾದವುಗಳಿಂದಲೂ ಅದರ ಸಂಪೂರ್ಣತೆಯಿಂದಲೂ ಕರ್ತನ ಕಡೆಯಿಂದ ಆಶೀರ್ವಾದ ಹೊಂದಲಿ; ಪೊದೆಯಲ್ಲಿ ವಾಸವಾಗಿ ದ್ದಾತನ ದಯೆಯು ಯೋಸೇಫನ ತಲೆಯ ಮೇಲೆಯೂ ತನ್ನ ಸಹೋದರರಿಂದ ಪ್ರತ್ಯೇಕವಾದವನ ತಲೆಯ ಮೇಲೆಯೂ ಬರಲಿ.
- 17 ಅವನ ಚೊಚ್ಚಲ ಹೋರಿಯಂತೆ ಅವನಿಗೆ ಪ್ರಭೆ ಇರುವದು; ಅವನ ಕೊಂಬುಗಳು ಕಾಡುಕೋಣಗಳ ಕೊಂಬುಗಳಂತೆ ಇವೆ. ಅವುಗಳಿಂದ ಜನಗಳನ್ನು ಒಟ್ಟಿಗೆ ಭೂಮಿಯ ಅಂತ್ಯಗಳ ವರೆಗೆ ನೂಕುತ್ತಾನೆ. ಇವು ಎಫ್ರಾಯಾಮನ ಹತ್ತು ಸಾವಿರಗಳೂ ಇವು ಮನಸ್ಸೆಯ ಸಹಸ್ರವೂ ಆಗಿವೆ ಎಂದು ಹೇಳಿದನು.
- 18 ಅವನು ಜೆಬುಲೂನನ ವಿಷಯವಾಗಿ--ಜೆಬು ಲೂನನೇ, ನೀನು ಹೊರಡುವದರಲ್ಲಿ ಸಂತೋಷ ಪಡು. ಇಸ್ಸಾಕಾರನೇ ನಿನ್ನ ಗುಡಾರಗಳಲ್ಲಿ ಸಂತೋಷ ಪಡು.
- 19 ಅವರು ಜನಗಳನ್ನು ಬೆಟ್ಟಕ್ಕೆ ಕರೆಯುವರು. ಅಲ್ಲಿ ನೀತಿಯ ಬಲಿಗಳನ್ನು ಅರ್ಪಿಸುವರು. ಯಾಕಂದರೆ ಸಮುದ್ರಗಳ ಉಗ್ರಾಣವನ್ನೂ ಮರಳಿನ ಗುಪ್ತವಾದ ದ್ರವ್ಯವನ್ನೂ ಹೀರಿಕೊಳ್ಳುವರು ಎಂದು ಹೇಳಿದನು.
- 20 ಗಾದನ ವಿಷಯವಾಗಿ--ಗಾದನನ್ನು ವಿಸ್ತರಿಸ ಮಾಡಿದಾತನು ಸ್ತುತಿಹೊಂದಲಿ; ಅವನು ಸಿಂಹದಂತೆ ಮಲಗಿಕೊಂಡು ತೋಳನ್ನೂ ನೆತ್ತಿಯನ್ನೂ ಕೀಳುತ್ತಾನೆ.
- 21 ಅವನು ಮೊದಲನೇ ಪಾಲನ್ನು ತನಗೆ ಒದಗಿಸಿ ಕೊಂಡನು; ಯಾಕಂದರೆ ಅಲ್ಲಿ ನ್ಯಾಯಾಧಿಪತಿಯ ಭಾಗ ನೇಮಿಸಲ್ಪಟ್ಟದೆ; ಜನರ ಮುಖ್ಯಸ್ಥರ ಸಂಗಡ ಬಂದು ಕರ್ತನ ನೀತಿಯನ್ನೂ ಇಸ್ರಾಯೇಲಿನ ಸಂಗಡ ಆತನ ನ್ಯಾಯಗಳನ್ನೂ ತೀರಿಸಿದನು ಎಂದು ಹೇಳಿದನು.
- 22 ಅವನು ದಾನನ ವಿಷಯವಾಗಿ--ದಾನನು ಸಿಂಹದ ಮರಿಯೇ, ಬಾಶಾನಿನಿಂದ ಹಾರಿ ಬರುವನು ಎಂದು ಹೇಳಿದನು.
- 23 ಅವನು ನಫ್ತಾಲಿಯ ವಿಷಯವಾಗಿ--ಓ ನಫ್ತಾಲಿಯೇ, ಅನುಗ್ರಹದಿಂದ ತೃಪ್ತನೇ, ಕರ್ತನ ಆಶೀರ್ವಾದದಿಂದ ತುಂಬಿದವನೇ, ಪಶ್ಚಿಮವನ್ನೂ ದಕ್ಷಿಣವನ್ನೂ ಸ್ವಾಧೀನಮಾಡಿಕೋ ಎಂದು ಹೇಳಿದನು.
- 24 ಅವನು ಆಶೇರನ ವಿಷಯವಾಗಿ--ಆಶೇರನು ಮಕ್ಕಳ ಆಶೀರ್ವಾದವನ್ನು ಹೊಂದಲಿ. ತನ್ನ ಸಹೋದ ರರ ಅಂಗೀಕಾರವನ್ನು ಹೊಂದಲಿ. ಅವನ ಕಾಲು ಎಣ್ಣೆಯಲ್ಲಿ ಅದ್ದಿರಲಿ.
- 25 ಕಬ್ಬಿಣವೂ ತಾಮ್ರವೂ ನಿನ್ನ ಪಾದರಕ್ಷೆಯಾಗಿರಲಿ. ನಿನ್ನ ದಿವಸಗಳ ಪ್ರಕಾರ ನಿನ್ನ ಬಲವು ಇರಲಿ ಎಂದು ಹೇಳಿದನು.
- 26 ಯೆಶುರೂನನ ದೇವರ ಹಾಗೆ ಯಾರೂ ಇಲ್ಲ. ಆತನು ನಿನ್ನ ಸಹಾಯಕ್ಕೆ ಪರಲೋಕದಲ್ಲಿಯೂ ತನ್ನ ಘನತೆಯಲ್ಲಿಯೂ ಆಕಾಶದ ಮೇಲೆಯೂ ಬರುತ್ತಾನೆ.
- 27 ನಿತ್ಯನಾದ ದೇವರು ನಿನ್ನ ಆಶ್ರಯವು; ಆತನ ನಿತ್ಯವಾದ ತೋಳುಗಳು ಕೆಳಗಿವೆ, ಶತ್ರುವನ್ನು ನಿನ್ನ ಮುಂದೆ ಹೊರಡಿಸಿ--ಅವರನ್ನು ನಾಶಮಾಡು ಎಂದು ಹೇಳುವನು.
- 28 ಇಸ್ರಾಯೇಲು ಒಂಟಿಯಾಗಿ ಭರವಸದಿಂದ ಸುರಕ್ಷಿತವಾಗಿ ವಾಸಿಸುವದು. ಧಾನ್ಯ ದ್ರಾಕ್ಷಾರಸಗಳ ದೇಶದಲ್ಲಿ ಯಾಕೋಬನ ಬುಗ್ಗೆ ಇರುವದು. ಅವನ ಆಕಾಶಗಳು ಸಹ ಮಂಜನ್ನು ಸುರಿಸುವವು.
- 29 ಇಸ್ರಾಯೇಲೇ, ನೀನು ಸಂತೋಷವುಳ್ಳವನೂ ನಿನ್ನ ಸಹಾಯದ ಗುರಾಣಿಯೂ ನಿನ್ನ ಘನತೆಯ ಕತ್ತಿಯೂ ಆಗಿರುವ ಕರ್ತನಿಂದ ರಕ್ಷಿಸಲ್ಪಟ್ಟ ಓ ಜನವೇ, ನಿನ್ನ ಹಾಗೆ ಯಾರಿದ್ದಾರೆ? ನಿನ್ನ ಶತ್ರುಗಳು ನಿನಗೆ ಸುಳ್ಳುಗಾರರಾಗಿ ಕಂಡುಬರುವರು. ನೀನು ಅವರ ಉನ್ನತವಾದ ಸ್ಥಳಗಳ ಮೇಲೆ ನಡೆದು ಹೋಗುವಿ.
Deuteronomy 33
- Details
- Parent Category: Old Testament
- Category: Deuteronomy
ಧರ್ಮೋಪದೇಶಕಾಂಡ ಅಧ್ಯಾಯ 33