- 1 ಜ್ಞಾನಿಯ ಹಾಗೆ ಇರುವವನು ಯಾರು? ಈ ಸಂಗತಿಯ ಅರ್ಥವನ್ನು ಬಲ್ಲವನು ಯಾರು? ಒಬ್ಬ ಮನುಷ್ಯನ ಜ್ಞಾನವು ಅವನ ಮುಖ ವನ್ನು ಬೆಳಗಿಸುತ್ತದೆ, ಅವನ ಧೈರ್ಯದ ಮುಖವು ಬದಲಾಗುವದು.
- 2 ನಾನು ನಿಮಗೆ--ದೇವರ ಮೇಲೆ ಆಣೆಯಿಟ್ಟು ಅರಸನ ಆಜ್ಞೆಯನ್ನು ಕೈಕೊಳ್ಳಿರಿ ಎಂದು ಆಲೋಚನೆ ಹೇಳಿಕೊಡುತ್ತೇನೆ.
- 3 ಅವನ ದೃಷ್ಟಿಯಿಂದ ಹೊರಗೆ ಹೋಗುವದಕ್ಕೆ ಆತುರಪಡಬೇಡಿರಿ; ಕೆಟ್ಟ ಕಾರ್ಯದಲ್ಲಿ ನಿಲ್ಲಬೇಡಿರಿ; ಅವನು ತನಗೆ ಇಷ್ಟ ಬಂದದ್ದನ್ನೆಲ್ಲಾ ಮಾಡುತ್ತಾನೆ.
- 4 ಅರಸನ ಮಾತು ಎಲ್ಲಿ ದೆಯೋ ಅಲ್ಲಿ ಶಕ್ತಿ ಇದೆ; ನೀನು ಏನು ಮಾಡು ತ್ತಿರುವೆ ಎಂದು ಅವನಿಗೆ ಹೇಳುವವನಾರು?
- 5 ಆಜ್ಞೆ ಯನ್ನು ಕೈಕೊಳ್ಳುವವನು ಯಾವನೂ ಕೆಟ್ಟದ್ದನ್ನು ಅನು ಭವಿಸನು: ಜ್ಞಾನಿಯ ಹೃದಯವು ಕಾಲ ನ್ಯಾಯ ಎರಡನ್ನೂ ತಿಳಿದುಕೊಳ್ಳುತ್ತದೆ.
- 6 ಪ್ರತಿಯೊಂದು ಕಾರ್ಯಕ್ಕೂ ಕಾಲ ಮತ್ತು ನ್ಯಾಯಗಳಿವೆ, ಆದದರಿಂದ ಮನುಷ್ಯನ ಕಷ್ಟವು ಅವನ ಮೇಲೆ ದೊಡ್ಡದಾಗಿ ಘೋರವಾಗಿದೆ.
- 7 ಮುಂದೆ ಆಗುವದೇನೆಂದು ಅವ ನಿಗೆ ತಿಳಿಯದು; ಅದು ಯಾವಾಗ ಆಗುವದೆಂದು ಯಾರು ಅವನಿಗೆ ಹೇಳುವರು?
- 8 ಆತ್ಮವನ್ನು ಹಿಡಿ ಯುವ ಶಕ್ತಿ ಯಾವ ಮನುಷ್ಯನಿಗೂ ಇಲ್ಲ; ಹಾಗೆಯೇ ಮರಣ ದಿನವನ್ನು ತಡೆಯುವ ಶಕ್ತಿಯು ಯಾರಿಗೂ ಇರುವದಿಲ್ಲ. ಯುದ್ಧದಿಂದ ಬಿಡುಗಡೆಯೂ ಹೇಗೆ ಇಲ್ಲವೋ ಹಾಗೆಯೇ ದುಷ್ಟನಿಗೆ ಅದರಿಂದ ಬಿಡು ಗಡೆಯೇ ಇಲ್ಲ.
- 9 ನಾನು ಇದನ್ನೆಲ್ಲಾ ನೋಡಿ ಸೂರ್ಯನ ಕೆಳಗೆ ಮಾಡುವ ಪ್ರತಿಯೊಂದು ಕೆಲ ಸಕ್ಕೂ ನನ್ನ ಹೃದಯವನ್ನು ಪ್ರಯೋಗಿಸಿದ್ದೇನೆ; ಒಬ್ಬ ಮನುಷ್ಯನು ಇನ್ನೊಬ್ಬನ ಮೇಲೆ ತನ್ನ ಹಾನಿಗಾಗಿ ಅಧಿಕಾರ ನಡಿಸುವಂತ ಕಾಲವೂ ಇದೆ.
- 10 ಪರಿಶುದ್ಧ ಸ್ಥಳದಿಂದ ತೊಲಗಿದ ದುಷ್ಟರು ಹೂಣ ಲ್ಪಡುವದನ್ನೂ ನಾನು ನೋಡಿದ್ದೇನೆ; ಅವರು ಹೀಗೆ ಮಾಡಿದ ಪಟ್ಟಣವನ್ನೇ ಮರೆತರು; ಇದೂ ಸಹ ನಿರರ್ಥಕವಾದದ್ದು;
- 11 ದುಷ್ಟ ಕೆಲಸಕ್ಕೆ ದಂಡನೆಯು ಕೂಡಲೇ ಆಗದಿರುವದರಿಂದ ಮನುಷ್ಯಪುತ್ರರ ಹೃದ ಯವು ಅವರನ್ನು ಕೆಟ್ಟದ್ದನ್ನು ಮಾಡುವದರಲ್ಲಿಯೇ ತುಂಬಿಸುವದು.
- 12 ಪಾಪಿಯು ನೂರು ಸಾರಿ ಕೆಟ್ಟದ್ದನ್ನು ಮಾಡಿ ದಿವಸಗಳನ್ನು ಹೆಚ್ಚಿಸಿದರೂ ದೇವರಿಗೆ ಭಯ ಪಟ್ಟು ಆತನಲ್ಲಿ ಭಯಪಡುವವರಿಗೆ ಒಳ್ಳೇದಾಗುವ ದೆಂದು ನಾನು ನಿಶ್ಚಯವಾಗಿಯೂ ಬಲ್ಲೆನು.
- 13 ಆದರೆ ದುಷ್ಟನಿಗೆ ಒಳ್ಳೆಯದಾಗುವದಿಲ್ಲ. ತನ್ನ ನೆರಳಿನ ಹಾಗಿ ರುವ ಅವನ ದಿವಸಗಳನ್ನು ಹೆಚ್ಚಿಸುವದಿಲ್ಲ; ಅವನು ದೇವರ ಮುಂದೆ ಭಯಪಡುವದಿಲ್ಲ.
- 14 ಭೂಮಿಯ ಮೇಲೆ ಮಾಡುವ ಒಂದು ವ್ಯರ್ಥವಾದದ್ದಿದೆ; ದುಷ್ಟರ ಕೆಲಸದ ಪ್ರಕಾರ ಅನುಭವಿಸುವ ನೀತಿವಂತರಿದ್ದಾರೆ; ನೀತಿವಂತರ ಕೆಲಸದ ಪ್ರಕಾರ ಅನುಭವಿಸುವ ದುಷ್ಟರಿ ದ್ದಾರೆ. ಇದೂ ಸಹ ವ್ಯರ್ಥವೆಂದು ನಾನು ಹೇಳಿದೆನು.
- 15 ಆಗ ನಾನು ಸಂತೋಷವನ್ನು ಹೊಗಳಿದೆನು. ಮನು ಷ್ಯನಿಗೆ ಸೂರ್ಯನ ಕೆಳಗೆ ಕುಡಿಯುವದೂ ತಿನ್ನುವದೂ ಸಂತೋಷಪಡುವದೇ ಹೊರತು ಬೇರೇನೂ ಒಳ್ಳೆ ಯದು ಇಲ್ಲ; ಸೂರ್ಯನ ಕೆಳಗೆ ದೇವರು ಅವನಿಗೆ ಕೊಡುವ ಜೀವನದ ದಿವಸಗಳಲ್ಲಿ ಅವನು ಪಡುವ ಕಷ್ಟದಿಂದ ಅದು ಅವನಿಗೆ ಸೇರುತ್ತದೆ.
- 16 ಜ್ಞಾನವನ್ನು ತಿಳಿದುಕೊಳ್ಳುವದಕ್ಕೂ ಮತ್ತು ಭೂಮಿಯ ಮೇಲೆ ಮಾಡುವ ಕಾರ್ಯವನ್ನು ನೋಡುವದಕ್ಕೂ ನಾನು ನನ್ನ ಹೃದಯವನ್ನು ಪ್ರಯೋಗಿಸಿದೆನು; (ಯಾಕಂದರೆ ರಾತ್ರಿಹಗಲು ತಮ್ಮ ಕಣ್ಣುಗಳಿಗೆ ನಿದ್ರೆ ನೋಡದ ವರೂ ಇದ್ದಾರೆ).
- 17 ತರುವಾಯ ದೇವರ ಎಲ್ಲಾ ಕೆಲಸಗಳನ್ನು ನಾನು ನೋಡಿದೆನು; ಅದೇನಂದರೆ, ಸೂರ್ಯನ ಕೆಳಗೆ ಮಾಡುವ ಕೆಲಸಗಳನ್ನು ಮನು ಷ್ಯನು ಕಾಣಲಾರನು; ಮನುಷ್ಯನು ಅದನ್ನು ಹುಡು ಕುವದಕ್ಕೆ ಎಷ್ಟು ಕಷ್ಟಪಟ್ಟರೂ ಅದನ್ನು ಕಂಡು ಕೊಳ್ಳಲಾರನು; ಹೌದು, ಜ್ಞಾನಿಯು ಅದನ್ನು ತಿಳಿದುಕೊಳ್ಳಲು ಯೋಚಿಸಿದರೂ ಅವನು ಅದನ್ನು ಕಂಡುಕೊಳ್ಳಲಾರನು.
Ecclesiastes 08
- Details
- Parent Category: Old Testament
- Category: Ecclesiastes
ಪ್ರಸಂಗಿ ಅಧ್ಯಾಯ 8