- 1 ಆಗ ಲೇವಿಯ ಮನೆಯವನಾದ ಒಬ್ಬ ಮನುಷ್ಯನು ಲೇವಿಯ ಮಗಳನ್ನು ಹೆಂಡತಿ ಯಾಗಿ ತಕ್ಕೊಂಡನು.
- 2 ಆ ಸ್ತ್ರೀಯು ಗರ್ಭಧರಿಸಿ ಮಗನನ್ನು ಹೆತ್ತು ಅವನು ಸುಂದರನಾಗಿದ್ದದರಿಂದ ಮೂರು ತಿಂಗಳು ಬಚ್ಚಿಟ್ಟಳು.
- 3 ಅವನನ್ನು ಇನ್ನು ಬಚ್ಚಿಡುವದಕ್ಕಾಗದೆ ಇದ್ದಾಗ ಅವನಿಗಾಗಿ ಆಪಿನ ಪೆಟ್ಟಿಗೆ ಯನ್ನು ತಕ್ಕೊಂಡು ಜೇಡಿಮಣ್ಣನ್ನೂ ರಾಳವನ್ನೂ ಹಚ್ಚಿ ಕೂಸನ್ನು ಅದರಲ್ಲಿ ಇಟ್ಟು ನದಿಯ ಅಂಚಿನಲ್ಲಿ ಇದ್ದ ಹುಲ್ಲಿನಲ್ಲಿ ಇಟ್ಟರು.
- 4 ಕೂಸಿಗೆ ಏನಾಗುವದೋ ಎಂದು ತಿಳಿದುಕೊಳ್ಳುವದಕ್ಕೆ ದೂರದಲ್ಲಿ ಅದರ ಅಕ್ಕ ನಿಂತುಕೊಂಡಳು.
- 5 ಆಗ ಫರೋಹನ ಮಗಳು ನದಿಯಲ್ಲಿ ಸ್ನಾನ ಮಾಡುವದಕ್ಕೆ ಇಳಿದು ಬಂದಳು; ಆಕೆಯ ದಾಸಿಯರು ನದಿಯ ಅಂಚಿನಲ್ಲಿ ತಿರುಗಾಡುತ್ತಿದ್ದರು. ಫರೋಹನ ಮಗಳು ಹುಲ್ಲಿನಲ್ಲಿದ್ದ ಪೆಟ್ಟಿಗೆಯನ್ನು ನೋಡಿ ತನ್ನ ದಾಸಿಯನ್ನು ಕಳುಹಿಸಿ ಅದನ್ನು ತರಿಸಿದಳು.
- 6 ಆ ಪೆಟ್ಟಿಗೆಯನ್ನು ತೆರೆದು ಕೂಸನ್ನು ನೋಡಿದಳು; ಇಗೋ, ಕೂಸು ಅಳುತ್ತಿತ್ತು. ಆಗ ಆಕೆಯು ಅದರ ಮೇಲೆ ಅಂತಃಕರುಣೆಪಟ್ಟು--ಇದು ಇಬ್ರಿಯರ ಮಕ್ಕಳಲ್ಲಿ ಒಂದಾಗಿದೆ ಅಂದಳು.
- 7 ಆಗ ಅದರ ಅಕ್ಕ ಫರೋಹನ ಮಗಳಿಗೆ--ನಾನು ಹೋಗಿ ಈ ಕೂಸಿಗೆ ಮೊಲೆ ಕೊಡುವ ಹಾಗೆ ಇಬ್ರಿಯ ಸ್ತ್ರೀಯರಿಂದ ಒಬ್ಬ ದಾದಿ ಯನ್ನು ನಿನಗೋಸ್ಕರ ಕರಕೊಂಡು ಬರಲೋ ಅಂದಳು.
- 8 ಫರೋಹನ ಮಗಳು ಅವಳಿಗೆ-ಹೋಗು ಅಂದಳು. ಆಗ ಆ ಹುಡುಗಿಯು ಹೋಗಿ ಕೂಸಿನ ತಾಯಿಯನ್ನು ಕರೆದಳು.
- 9 ಫರೋಹನ ಮಗಳು ಆಕೆಗೆ--ಈ ಮಗು ವನ್ನು ತೆಗೆದುಕೊಂಡುಹೋಗಿ ನನಗೋಸ್ಕರ ಸಾಕು. ನಾನು ನಿನಗೆ ಸಂಬಳವನ್ನು ಕೊಡುವೆನು ಅಂದಳು. ಆಗ ಆ ಸ್ತ್ರೀಯು ಕೂಸನ್ನು ತಕ್ಕೊಂಡು ಹೋಗಿ ಸಾಕಿದಳು.
- 10 ಈ ಮಗುವು ಬೆಳೆದಾಗ ಅವನನ್ನು ಫರೋಹನ ಮಗಳ ಬಳಿಗೆ ತಕ್ಕೊಂಡುಹೋದಳು. ಅವನು ಆಕೆಗೆ ಮಗನಾದನು. ಆಕೆಯು--ಇವನನ್ನು ನೀರಿನೊಳಗಿಂದ ಎಳೆದೆನೆಂದು ಹೇಳಿ ಅವನಿಗೆ ಮೋಶೆ ಎಂದು ಹೆಸರಿಟ್ಟಳು.
- 11 ಆ ದಿನಗಳಲ್ಲಿ ಮೋಶೆಯು ದೊಡ್ಡವನಾದ ಮೇಲೆ ತನ್ನ ಸಹೋದರರ ಬಳಿಗೆ ಹೋಗಿ ಅವರ ಬಿಟ್ಟೀ ಕೆಲಸಗಳನ್ನು ನೋಡುತ್ತಿದ್ದನು. ಆಗ ತನ್ನ ಸಹೋದರರಲ್ಲಿ ಒಬ್ಬನಾದ ಇಬ್ರಿಯನನ್ನು ಒಬ್ಬ ಐಗುಪ್ತ್ಯನು ಹೊಡೆಯುವದನ್ನು ಕಂಡನು.
- 12 ಅವನು ಅತ್ತಿತ್ತ ನೋಡಿ ಯಾರೂ ಇಲ್ಲವೆಂದು ತಿಳಿದು ಐಗುಪ್ತ್ಯ ನನ್ನು ಕೊಂದು ಮರಳಿನಲ್ಲಿ ಮುಚ್ಚಿಟ್ಟನು.
- 13 ಎರಡನೇ ದಿನ ಅವನು ಮತ್ತೆ ಹೊರಗೆ ಹೋದಾಗ ಇಗೋ, ಇಬ್ರಿಯರಾದ ಇಬ್ಬರು ಮನುಷ್ಯರು ಜಗಳವಾಡು ತ್ತಿದ್ದರು. ತಪ್ಪು ಮಾಡಿದವನಿಗೆ ಅವನು--ಯಾಕೆ ನಿನ್ನ ಜೊತೆಯವನನ್ನು ಹೊಡೆಯುತ್ತೀ ಅಂದನು.
- 14 ಅದಕ್ಕ ವನು--ಯಾರು ನಿನ್ನನ್ನು ನಮ್ಮ ಮೇಲೆ ಪ್ರಭುವ ನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ನೇಮಿಸಿ ದ್ದಾರೆ? ಆ ಐಗುಪ್ತ್ಯನನ್ನು ಕೊಂದುಹಾಕಿದಂತೆ ನನ್ನನ್ನೂ ಕೊಂದುಹಾಕಬೇಕೆಂದಿದ್ದೀಯೋ ಅಂದನು. ಆಗ ಮೋಶೆಯು ಭಯಪಟ್ಟು--ನಿಶ್ಚಯವಾಗಿ ಈ ಕಾರ್ಯವು ತಿಳಿದುಬಂತು ಎಂದು ಅಂದುಕೊಂಡನು.
- 15 ಫರೋಹನು ಈ ಮಾತುಗಳನ್ನು ಕೇಳಿ ಮೋಶೆ ಯನ್ನು ಕೊಲ್ಲಲು ಹುಡುಕಿದನು. ಆದರೆ ಮೋಶೆಯು ಫರೋಹನ ಎದುರಿನಿಂದ ಓಡಿಹೋಗಿ ಮಿದ್ಯಾನ್ ದೇಶದಲ್ಲಿದ್ದು ಒಂದು ಬಾವಿಯ ಬಳಿಯಲ್ಲಿ ಕೂತು ಕೊಂಡನು.
- 16 ಮಿದ್ಯಾನಿನ ವೈದಿಕನಿಗೆ ಏಳು ಮಂದಿ ಕುಮಾರ್ತೆಯರಿದ್ದರು. ಇವರು ಬಂದು ತಮ್ಮ ತಂದೆಯ ಮಂದೆಗಳಿಗೆ ನೀರು ಸೇದಿ ದೋಣಿಗಳನ್ನು ತುಂಬಿಸು ತ್ತಿದ್ದರು.
- 17 ಕುರುಬರು ಬಂದು ಅವರನ್ನು ಓಡಿಸುತ್ತಿ ದ್ದಾಗ ಮೋಶೆಯು ಎದ್ದು ಅವರಿಗೆ ಸಹಾಯ ಮಾಡಿ ಅವರ ಕುರಿಗಳಿಗೆ ನೀರು ಕುಡಿಸಿದನು.
- 18 ಅವರು ತಮ್ಮ ತಂದೆಯಾದ ರೆಗೂವೇಲನ ಬಳಿಗೆ ಬಂದಾಗ ಅವನು ಅವರಿಗೆ--ಯಾಕೆ ಈ ಹೊತ್ತು ಬೇಗ ಬಂದಿರಿ ಅಂದನು.
- 19 ಅದಕ್ಕೆ ಅವರು--ಐಗುಪ್ತ್ಯನಾದ ಒಬ್ಬ ಮನುಷ್ಯನು ಕುರುಬರ ಕೈಗೆ ನಮ್ಮನ್ನು ತಪ್ಪಿಸಿ ನಮಗೋಸ್ಕರ ಸಾಕಾಗುವಷ್ಟು ನೀರು ಸೇದಿ ಮಂದೆಗೆ ಕುಡಿಸಿದನು ಅಂದರು.
- 20 ಆಗ ಅವನು ತನ್ನ ಕುಮಾರ್ತೆಯರಿಗೆ--ಅವನು ಎಲ್ಲಿದ್ದಾನೆ? ಆ ಮನುಷ್ಯ ನನ್ನು ಯಾಕೆ ಬಿಟ್ಟು ಬಂದಿರಿ? ಅವನನ್ನು ಕರೆಯಿರಿ, ಅವನು ಊಟ ಮಾಡಲಿ ಅಂದನು.
- 21 ಮೋಶೆಯು ಆ ಮನುಷ್ಯನ ಸಂಗಡ ವಾಸಮಾಡುವದಕ್ಕೆ ಸಮ್ಮತಿ ಸಿದನು. ಅವನು ಮೋಶೆಗೆ ತನ್ನ ಮಗಳಾದ ಚಿಪ್ಪೋರ ಳನ್ನು ಕೊಟ್ಟನು.
- 22 ಆಕೆಯು ಮಗನನ್ನು ಹೆತ್ತಾಗ ಮೋಶೆಯು ಅವನಿಗೆ ಗೇರ್ಷೋಮ್ ಎಂದು ಹೆಸರಿ ಟ್ಟನು. ಯಾಕಂದರೆ ಅವನು--ನಾನು ಪರದೇಶದಲ್ಲಿ ಅನ್ಯನಾಗಿದ್ದೇನೆ ಅಂದನು.
- 23 ಹೀಗಿರಲಾಗಿ ಬಹಳ ದಿನಗಳಾದ ಮೇಲೆ ಐಗುಪ್ತದ ಅರಸನು ಸತ್ತನು. ಇಸ್ರಾಯೇಲ್ ಮಕ್ಕಳು ದಾಸತ್ವದ ಕಾರಣದಿಂದ ನಿಟ್ಟುಸುರುಬಿಟ್ಟು ಕೂಗು ತ್ತಿದ್ದರು. ದಾಸತ್ವದ ನಿಮಿತ್ತವಾಗಿ ಅವರ ಕೂಗು ದೇವರ ಬಳಿಗೆ ಬಂತು.
- 24 ದೇವರು ಅವರ ನರಳಾಟವನ್ನು ಕೇಳಿ ಅಬ್ರಹಾಮ ಇಸಾಕ ಯಾಕೋಬ ಇವರ ಸಂಗಡ ತಾನು ಮಾಡಿದ ಒಡಂಬಡಿಕೆಯನ್ನು ಜ್ಞಾಪಕಮಾಡಿ ಕೊಂಡನು.
- 25 ಆಗ ದೇವರು ಇಸ್ರಾಯೇಲ್ ಮಕ್ಕಳನ್ನು ನೋಡಿ ಅವರಲ್ಲಿ ಲಕ್ಷ್ಯವಿಟ್ಟನು.
Exodus 02
- Details
- Parent Category: Old Testament
- Category: Exodus
ವಿಮೋಚನಕಾಂಡ ಅಧ್ಯಾಯ 2