- 1 ತರುವಾಯ ಮೋಶೆಯೂ ಆರೋನನೂ ಹೋಗಿ ಫರೋಹನಿಗೆ--ಇಸ್ರಾಯೇಲಿನ ದೇವರಾದ ಕರ್ತನು--ಅರಣ್ಯದಲ್ಲಿ ನನ್ನ ಜನರು ನನಗೆ ಹಬ್ಬವನ್ನಾಚರಿಸುವದಕ್ಕೆ ಅವರನ್ನು ಹೋಗಗೊಡಿಸು ಎಂದು ಹೇಳುತ್ತಾನೆ ಅಂದರು.
- 2 ಫರೋಹನು--ನಾನು ಆತನ ಸ್ವರಕ್ಕೆ ವಿಧೇಯನಾಗಿ ಇಸ್ರಾಯೇಲ್ಯರನ್ನು ಕಳುಹಿಸಿ ಬಿಡುವಂತೆ ಆ ಕರ್ತನು ಯಾರು? ಆ ಕರ್ತನನ್ನು ನಾನರಿಯೆನು ಮತ್ತು ಇಸ್ರಾಯೇಲ್ಯರನ್ನು ಕಳುಹಿಸುವದಿಲ್ಲ ಅಂದನು.
- 3 ಆಗ ಅವರು ಫರೋಹ ನಿಗೆ--ಇಬ್ರಿಯರ ದೇವರು ನಮ್ಮನ್ನು ಎದುರುಗೊಂಡಿ ದ್ದಾನೆ; ಆದದರಿಂದ ನಾವು ಅರಣ್ಯದಲ್ಲಿ ಮೂರು ದಿನ ಪ್ರಯಾಣಮಾಡಿ ನಮ್ಮ ದೇವರಾದ ಕರ್ತನಿಗೆ ಬಲಿ ಅರ್ಪಿಸುವದಕ್ಕಾಗಿ ನಾವು ಹೋಗಬೇಕು; ಇಲ್ಲ ವಾದರೆ ಆತನು ವ್ಯಾಧಿಯಿಂದಲಾದರೂ ಕತ್ತಿಯಿಂದ ಲಾದರೂ ನಮ್ಮನ್ನು ಸಂಹಾರ ಮಾಡಾನು ಎಂದು ಅಂದರು.
- 4 ಐಗುಪ್ತದ ಅರಸನು ಅವರಿಗೆ--ಮೋಶೆಯೇ, ಆರೋನನೇ, ಜನರು ತಮ್ಮ ಕೆಲಸ ಗಳನ್ನು ಮಾಡದಂತೆ ಯಾಕೆ ಮಾಡುತ್ತೀರಿ? ನಿಮ್ಮ ಬಿಟ್ಟೀಕೆಲಸಗಳಿಗೆ ಹೋಗಿರಿ ಅಂದನು.
- 5 ಫರೋ ಹನು--ಇಗೋ, ಈಗ ದೇಶದ ಜನರು ಹೆಚ್ಚಿದ್ದಾರೆ; ನೀವು ಅವರನ್ನು ಅವರ ಬಿಟ್ಟೀಕೆಲಸಗಳಿಂದ ನಿಲ್ಲಿಸಿ ಬಿಡುತ್ತೀರಿ ಅಂದನು.
- 6 ಅದೇ ದಿನದಲ್ಲಿ ಫರೋಹನು ಬಿಟ್ಟೀಕೆಲಸ ಮಾಡಿಸುವವರಿಗೂ ಅವರ ಅಧಿಕಾರಿ ಗಳಿಗೂ--
- 7 ನೀವು ಇನ್ನು ಇಟ್ಟಿಗೆಗಳನ್ನು ಮಾಡುವದಕ್ಕೆ ಮೊದಲಿನ ಹಾಗೆ ಜನರಿಗೆ ಹುಲ್ಲನ್ನು ಕೊಡಬೇಡಿರಿ. ಅವರೇ ಹೋಗಿ ಹುಲ್ಲನ್ನು ಕೂಡಿಸಿಕೊಳ್ಳಲಿ.
- 8 ಅವರು ಈ ವರೆಗೆ ಮಾಡಿದ ಇಟ್ಟಿಗೆಗಳ ಲೆಕ್ಕದಲ್ಲಿ ಏನೂ ಕಡಿಮೆ ಮಾಡಬಾರದೆಂದು ಅವರಿಗೆ ಹೇಳಬೇಕು. ಅವರು ಮೈಗಳ್ಳರೇ; ಆದದರಿಂದ ಅವರು--ನಾವು ಹೋಗಿ ನಮ್ಮ ದೇವರಿಗೆ ಬಲಿ ಅರ್ಪಿಸೋಣ ಎಂದು ಕೂಗುತ್ತಾರೆ.
- 9 ಈ ಜನರು ವ್ಯರ್ಥವಾದ ಮಾತುಗಳಿಗೆ ಲಕ್ಷ್ಯಕೊಡದಂತೆ ಅವರ ಮೇಲೆ ಹೆಚ್ಚು ಕೆಲಸಗಳನ್ನು ಹೊರಿಸಿರಿ, ಅವರು ದುಡಿಯಲಿ ಎಂದು ಆಜ್ಞಾಪಿಸಿದನು.
- 10 ಆಗ ಬಿಟ್ಟೀಕೆಲಸವನ್ನು ಮಾಡಿಸುವವರೂ ಅಧಿ ಕಾರಿಗಳೂ ಹೊರಗೆಹೋಗಿ ಜನರಿಗೆ--ಫರೋಹನು ಹೀಗೆ ಹೇಳುತ್ತಾನೆ--ನಾನು ನಿಮಗೆ ಹುಲ್ಲು ಕೊಡು ವದಿಲ್ಲ.
- 11 ನಿಮಗೆ ಹುಲ್ಲು ಎಲ್ಲಿ ದೊರಕುವದೋ ಅಲ್ಲಿಗೆ ನೀವೇ ಹೋಗಿ ತಕ್ಕೊಳ್ಳಿರಿ; ಆದಾಗ್ಯೂ ನಿಮ್ಮ ಕೆಲಸವು ಏನೂ ಕಡಿಮೆಯಾಗಬಾರದು ಎಂದು ಹೇಳಿ ದ್ದಾನೆ ಅಂದನು.
- 12 ಆಗ ಜನರು ಹುಲ್ಲಿಗೆ ಬದಲಾಗಿ ಕೂಳೆ ಕೂಡಿಸಿಕೊಳ್ಳುವದಕ್ಕೆ ಐಗುಪ್ತದೇಶದಲ್ಲೆಲ್ಲಾ ಚದರಿಹೋದರು.
- 13 ಇದಲ್ಲದೆ ಬಿಟ್ಟೀಕೆಲಸ ಮಾಡಿಸು ವವರು--ಹುಲ್ಲು ಇದ್ದಾಗ ನಿಮ್ಮ ಕೆಲಸಗಳನ್ನು ಮಾಡಿ ದಂತೆಯೇ ಪ್ರತಿಯೊಂದು ದಿನದಲ್ಲಿ ಆ ದಿನದ ಕೆಲಸ ವನ್ನು ತೀರಿಸಿಬಿಡಬೇಕು ಎಂದು ಹೇಳಿ ಅವರನ್ನು ತ್ವರೆಪಡಿಸಿದರು.
- 14 ಇಸ್ರಾಯೇಲ್ಯರು ಬಿಟ್ಟೀಕೆಲಸ ಮಾಡಿಸುವಂತೆ ಫರೋಹನ ಅಧಿಕಾರಿಗಳು ನೇಮಿಸಿ ದವರಿಗೆ--ನೀವು ಮೊದಲು ಇಟ್ಟಿಗೆಗಳ ಲೆಕ್ಕವನ್ನು ಒಪ್ಪಿಸಿದಂತೆ ನಿನ್ನೆ ಈ ಹೊತ್ತು ಯಾಕೆ ಒಪ್ಪಿಸಲಿಲ್ಲ ಎಂದು ಹೇಳಿ ಅವರನ್ನು ಹೊಡಿಸಿದರು.
- 15 ಇಸ್ರಾಯೇಲ್ ಮಕ್ಕಳ ಅಧಿಕಾರಿಗಳು ಫರೋ ಹನ ಬಳಿಗೆ ಹೋಗಿ--ಯಾಕೆ ನಿನ್ನ ದಾಸರಿಗೆ ಹೀಗೆ ಮಾಡುತ್ತೀ?
- 16 ನಿನ್ನ ದಾಸರಿಗೆ ಅವರು ಹುಲ್ಲು ಕೊಡದೆ--ಇಟ್ಟಿಗೆಗಳನ್ನು ಮಾಡಿರಿ ಎಂದು ನಮಗೆ ಹೇಳುತ್ತಾರೆ. ಇಗೋ, ನಿನ್ನ ದಾಸರನ್ನು ಹೊಡೆಯುತ್ತಾರೆ. ಆದರೆ ನಿನ್ನ ಸ್ವಂತ ಜನರಲ್ಲಿಯೇ ತಪ್ಪು ಇದೆ ಅಂದರು.
- 17 ಅದಕ್ಕೆ ಅವನು--ನೀವು ಮೈಗಳ್ಳರು, ನೀವು ಮೈಗಳ್ಳರಾದ ಕಾರಣ--ನಾವು ಹೋಗಿ ಕರ್ತನಿಗೆ ಬಲಿಯರ್ಪಿಸುತ್ತೇವೆ ಎಂದು ಅನ್ನುತ್ತೀರಿ.
- 18 ಆದದ ರಿಂದ ಈಗ ಹೋಗಿ ಕೆಲಸಮಾಡಿರಿ, ಹುಲ್ಲನ್ನು ನಿಮಗೆ ಕೊಡುವದಕ್ಕಾಗುವದಿಲ್ಲ. ಆದಾಗ್ಯೂ ನೇಮಿಸಿದ್ದ ಇಟ್ಟಿಗೆಗಳನ್ನು ನೀವು ಕೊಡಬೇಕು ಅಂದನು.
- 19 ದಿನದಿನವೂ ಒಪ್ಪಿಸಬೇಕಾದ ಇಟ್ಟಿಗೆಗಳ ಲೆಕ್ಕ ಕಡಿಮೆಯಾಗಬಾರದೆಂದು ಅಪ್ಪಣೆಯಾದದ್ದರಿಂದ ಇಸ್ರಾಯೇಲ್ ಅಧಿಕಾರಿಗಳು ತಾವು ದುರವಸ್ಥೆಯಲ್ಲಿ ದ್ದೇವೆಂದು ತಿಳುಕೊಂಡರು.
- 20 ಅವರು ಫರೋಹ ನಿಂದ ಹೊರಗೆ ಬಂದಾಗ ದಾರಿಯಲ್ಲಿ ನಿಂತಿದ್ದ ಮೋಶೆಯನ್ನೂ ಆರೋನನನ್ನೂ ಸಂಧಿಸಿ
- 21 ಅವ ರಿಗೆ--ಕರ್ತನು ನಿಮ್ಮನ್ನು ನೋಡಿ ನ್ಯಾಯತೀರಿಸಲಿ; ನೀವೇ ಫರೋಹನ ಮುಂದೆಯೂ ಅವನ ದಾಸರ ಮುಂದೆಯೂ ನಮ್ಮನ್ನು ಅವರು ಹೇಸಿಕೊಳ್ಳುವಂತೆ ಮಾಡಿದಿರಿ, ನಮ್ಮನ್ನು ಸಂಹರಿಸುವದಕ್ಕೆ ನೀವು ಅವರ ಕೈಗೆ ಕತ್ತಿಯನ್ನು ಕೊಟ್ಟಿರಿ ಅಂದರು.
- 22 ಆಗ ಮೋಶೆಯು ಕರ್ತನ ಬಳಿಗೆ ಬಂದು--ಕರ್ತನೇ, ಈ ಜನರಿಗೆ ಯಾಕೆ ಕೇಡನ್ನು ಮಾಡಿದಿ? ಯಾಕೆ ನನ್ನನ್ನು ಕಳುಹಿಸಿದಿ?
- 23 ನಾನು ಫರೋಹನ ಬಳಿಗೆ ಬಂದು ನಿನ್ನ ಹೆಸರಿನಲ್ಲಿ ಮಾತನಾಡಿದಂದಿನಿಂದ ಈ ಜನರಿಗೆ ಅವನು ಕೇಡನ್ನೇ ಮಾಡುತ್ತಾನೆ. ನೀನು ನಿನ್ನ ಜನರನ್ನು ತಪ್ಪಿಸಲಿಲ್ಲವಲ್ಲಾ ಅಂದನು.
Exodus 05
- Details
- Parent Category: Old Testament
- Category: Exodus
ವಿಮೋಚನಕಾಂಡ ಅಧ್ಯಾಯ 5