- 1 ಒಬ್ಬನು ಎತ್ತನ್ನಾಗಲಿ ಕುರಿಯನ್ನಾಗಲಿ ಕದ್ದು ಕೊಯ್ದರೆ ಇಲ್ಲವೆ ಅದನ್ನು ಮಾರಿದರೆ ಅವನು ಒಂದು ಎತ್ತಿಗೆ ಬದಲಾಗಿ ಐದು ಎತ್ತುಗಳನ್ನೂ ಒಂದು ಕುರಿಗೆ ನಾಲ್ಕು ಕುರಿಗಳನ್ನೂ ಕೊಡಬೇಕು.
- 2 ಒಬ್ಬ ಕಳ್ಳನು ಕನ್ನ ಕೊರೆಯುವಾಗ ಸಿಕ್ಕಿದರೆ ಅವನನ್ನು ಹೊಡೆದು ಸಾಯಿಸುವವನ ರಕ್ತಸುರಿಸಬಾರದು.
- 3 ಅವನು ಕಳ್ಳತನ ಮಾಡುವಾಗ ಸೂರ್ಯೋದಯ ವಾದರೆ ಹೊಡೆದವನ ರಕ್ತ ಸುರಿಸಬೇಕು; ಕಳ್ಳನು ಸಿಕ್ಕಿದರೆ ಪೂರ್ಣವಾಗಿ ಬದಲು ಕೊಡಬೇಕು. ಅವನಲ್ಲಿ ಏನೂ ಇಲ್ಲದ ಪಕ್ಷಕ್ಕೆ ಅವನ ಕಳ್ಳತನಕ್ಕಾಗಿ ಅವನು ಮಾರಲ್ಪಡಬೇಕು.
- 4 ಕಳ್ಳತನ ಮಾಡಿದ ಎತ್ತಾಗಲಿ ಕತ್ತೆಯಾಗಲಿ ಕುರಿಯಾಗಲಿ ಕದ್ದವನ ಬಳಿಯಲ್ಲಿ ಜೀವವುಳ್ಳದ್ದಾಗಿ ನಿಜವಾಗಿ ಸಿಕ್ಕಿದರೆ ಅವನು ಎರಡರಷ್ಟು ತಿರಿಗಿ ಕೊಡಬೇಕು.
- 5 ಒಬ್ಬನು ಇನ್ನೊಬ್ಬನ ಹೊಲದಲ್ಲಿ ತನ್ನ ಪಶುಗಳನ್ನು ಬಿಟ್ಟು ಬೆಳೆಯನ್ನೂ ದ್ರಾಕ್ಷೇತೋಟವನ್ನೂ ಮೇಯಿಸಿ ದರೆ ಅವನು ತನ್ನ ಸ್ವಂತ ಹೊಲದ ಉತ್ತಮ ಭಾಗವನ್ನೂ ದ್ರಾಕ್ಷೇತೋಟದಲ್ಲಿ ಉತ್ತಮವಾದದ್ದನ್ನೂ ಬದಲು ಕೊಡಬೇಕು.
- 6 ಬೆಂಕಿ ಹತ್ತಿ ಅದು ಮುಳ್ಳಿನ ಬೇಲಿಗೆ ತಗುಲಿ ಸಿವುಡುಗಳ ಬಣವಿಗಳನ್ನಾಗಲಿ ನಿಂತ ಬೆಳೆಯನ್ನಾಗಲಿ ಹೊಲವನ್ನಾಗಲಿ ಸುಟ್ಟುಬಿಟ್ಟರೆ ಆ ಬೆಂಕಿಯನ್ನು ಹಚ್ಚಿದ ವನು ಖಂಡಿತವಾಗಿ ಬದಲು ಕೊಡಬೇಕು.
- 7 ಒಬ್ಬನು ತನ್ನ ನೆರೆಯವನಿಗೆ ತನ್ನ ಹಣವನ್ನಾಗಲಿ ಸಾಮಾನುಗಳನ್ನಾಗಲಿ ಇಟ್ಟುಕೊಳ್ಳುವದಕ್ಕೆ ಕೊಟ್ಟಾಗ ಅದು ಅವನ ಮನೆಯಿಂದ ಕಳ್ಳತನವಾಗಿ ಆ ಕಳ್ಳನು ಸಿಕ್ಕಿದರೆ ಅವನು ಎರಡರಷ್ಟು ಕೊಡಬೇಕು.
- 8 ಕಳ್ಳನು ಸಿಕ್ಕದೆ ಹೋದರೆ ಮನೆಯ ಯಜಮಾನನು ತನ್ನ ನೆರೆಯವನ ಸಾಮಾನುಗಳನ್ನು ಅವನು ಮುಟ್ಟಲಿಲ್ಲ ವೆಂದು ವಿಚಾರಿಸುವದಕ್ಕೆ ನ್ಯಾಯಾಧಿಪತಿಗಳ ಬಳಿಗೆ ಅವನನ್ನು ಬರಮಾಡಬೇಕು.
- 9 ಎತ್ತು ಕತ್ತೆ ಕುರೀ ವಸ್ತ್ರಗಳ ವಿಷಯವಾದ ಎಲ್ಲಾ ಅಪರಾಧಗಳಿಗೋಸ್ಕರ ಇಲ್ಲವೆ ಕಳೆದು ಹೋದ ಯಾವದೇ ತರದ ವಸ್ತುಗಳ ವಿಷಯ ದಲ್ಲಿ ಒಬ್ಬನು ಇನ್ನೊಬ್ಬನ ಬಳಿಯಲ್ಲಿ ಅದನ್ನು ಕಂಡು ಇದು ತನ್ನದೆಂದು ಹೇಳಿದ ಪಕ್ಷಕ್ಕೆ ಆ ಇಬ್ಬರ ವ್ಯಾಜ್ಯವು ನ್ಯಾಯಾಧಿಪತಿಗಳ ಮುಂದೆ ಬರಬೇಕು. ನ್ಯಾಯಾಧಿ ಪತಿಗಳು ಯಾರನ್ನು ಅಪರಾಧಿಯೆಂದು ನಿರ್ಣಯಿಸು ವರೋ ಅವನು ಎರಡರಷ್ಟು ತನ್ನ ನೆರೆಯವನಿಗೆ ಕೊಡಬೇಕು.
- 10 ಒಬ್ಬನು ತನ್ನ ನೆರೆಯವನಿಗೆ ಕತ್ತೆಯನ್ನಾದರೂ ಎತ್ತನ್ನಾದರೂ ಕುರಿಯನ್ನಾದರೂ ಬೇರೆ ಯಾವ ಪಶು ವನ್ನಾದರೂ ಕಾಯುವದಕ್ಕೆ ಕೊಟ್ಟಾಗ ಅದು ಸತ್ತರೆ ಇಲ್ಲವೆ ಊನವಾದರೆ ಇಲ್ಲವೆ ಯಾರೂ ನೋಡದೆ ಇದ್ದಾಗ ಓಡಿಸಿಕೊಂಡು ಹೋದರೆ
- 11 ತಾನು ತನ್ನ ನೆರೆಯವನ ವಸ್ತುವನ್ನು ತೆಗೆದುಕೊಳ್ಳಲಿಲ್ಲವೆಂದು ಅವರಿಬ್ಬರ ಮಧ್ಯದಲ್ಲಿ ಕರ್ತನ ಮೇಲೆ ಪ್ರಮಾಣ ಮಾಡಬೇಕು. ಅದನ್ನು (ಪಶುವಿನ) ಯಜಮಾನನು ಒಪ್ಪಿದರೆ ಅವನು ಬದಲುಕೊಡಬಾರದು.
- 12 ಆದರೆ ಅದು ಕಳ್ಳತನವಾಗಿ ಅವನಿಂದ ಒಯ್ಯಲ್ಪಟ್ಟಿದ್ದರೆ ಯಜ ಮಾನನಿಗೆ ಬದಲುಕೊಡಬೇಕು.
- 13 ಅದು (ಕಾಡು ಮೃಗದಿಂದ) ಕೊಲ್ಲಲ್ಪಟ್ಟಿದ್ದರೆ ಅದನ್ನು ಸಾಕ್ಷಿಗಾಗಿ ತರಲಿ, ಕೊಲ್ಲಲ್ಪಟ್ಟದ್ದಕ್ಕೆ ಬದಲು ಕೊಡಬಾರದು.
- 14 ಒಬ್ಬನು ತನ್ನ ನೆರೆಯವನಿಂದ ಪಶುವನ್ನು ಎರವಾಗಿತಕ್ಕೊಂಡಿರಲಾಗಿ ಒಡೆಯನು ಅದರ ಹತ್ತಿರ ಇಲ್ಲದಿ ರುವಾಗ ಆ ಪಶುವು ಊನವಾದರೆ ಇಲ್ಲವೆ ಅದು ಸತ್ತರೆ ಅದಕ್ಕೆ ಅವನು ಖಂಡಿತವಾಗಿ ಬದಲು ಕೊಡ ಬೇಕು.
- 15 ಆದರೆ ಯಜಮಾನನು ಅದರ ಸಂಗಡ ಇದ್ದರೆ ಬದಲು ಕೊಡದೆ ಇರಲಿ. ಅದು ಬಾಡಿಗೆಗೆ ತಂದಿದ್ದರೆ ಅದರ ಬಾಡಿಗೆಯಲ್ಲಿಯೇ ಬಂದಿರುವದು.
- 16 ಇದಲ್ಲದೆ ಒಬ್ಬನು ನಿಶ್ಚಯಮಾಡದ ಕನ್ನಿಕೆಯನ್ನು ಮೋಸಗೊಳಿಸಿ ಅವಳ ಸಂಗಡ ಮಲಗಿದರೆ ಅವಳು ತನ್ನ ಹೆಂಡತಿಯಾಗುವಂತೆ ಅವಳಿಗೆ ಖಂಡಿತವಾಗಿ ತೆರವು ಕೊಡಬೇಕು.
- 17 ಅವಳ ತಂದೆಗೆ ಆಕೆಯನ್ನು ಕೊಡುವದಕ್ಕೆ ಮನಸ್ಸಿಲ್ಲದಿದ್ದರೆ ಕನ್ನಿಕೆಯ ತೆರವಿನ ಪ್ರಕಾರ ಹಣ ಸಲ್ಲಿಸಬೇಕು.
- 18 ಮಾಟಗಾರ್ತಿಯನ್ನು ಬದುಕ ಗೊಡಿಸಬಾರದು.
- 19 ಮೃಗದ ಸಂಗಡ ಮಲಗುವ ಯಾರಾದರೂ ಸರಿಯೇ ಅವರು ಖಂಡಿತವಾಗಿ ಕೊಲ್ಲಲ್ಪಡಬೇಕು.
- 20 ಕರ್ತನಿಗೆ ಹೊರತಾಗಿ ಮತ್ತೊಬ್ಬ ದೇವರಿಗೆ ಯಜ್ಞ ಮಾಡುವವನು ಸಂಪೂರ್ಣವಾಗಿ ನಾಶವಾಗಬೇಕು.
- 21 ಪರದೇಶಸ್ಥನನ್ನು ಉಪದ್ರವಪಡಿಸಬೇಡ, ಬಾಧೆ ಪಡಿಸಲೂಬೇಡ; ಯಾಕಂದರೆ ನೀವು ಐಗುಪ್ತದೇಶ ದಲ್ಲಿ ಪರದೇಶಿಗಳಾಗಿದ್ದಿರಿ.
- 22 ಯಾವ ವಿಧವೆಯನ್ನೂ ದಿಕ್ಕಿಲ್ಲದ ಮಗುವನ್ನೂ ಬಾಧಿಸಬಾರದು.
- 23 ಯಾವದೆ ರೀತಿಯಲ್ಲಿ ಅವರನ್ನು ಬಾಧಿಸಿದರೂ ಅವರು ನನಗೆ ಮೊರೆಯಿಟ್ಟರೆ ನಾನು ನಿಶ್ಚಯವಾಗಿ ಅವರ ಮೊರೆಯನ್ನು ಕೇಳುವೆನು.
- 24 ಆಗ ನನ್ನ ಕೋಪವು ಉರಿಯುವದು. ಕತ್ತಿಯಿಂದ ನಿಮ್ಮನ್ನು ಕೊಲ್ಲುವೆನು. ನಿಮ್ಮ ಹೆಂಡತಿಯರು ವಿಧವೆಯರಾಗಿ ನಿಮ್ಮ ಮಕ್ಕಳು ದಿಕ್ಕಿಲ್ಲದವರಾಗುವರು.
- 25 ನಿನ್ನ ಬಳಿಯಲ್ಲಿ ಬಡವರಾಗಿರುವ ನನ್ನ ಜನರಿಗೆ ಹಣವನ್ನು ಸಾಲವಾಗಿ ಕೊಟ್ಟರೆ ಅವರಿಂದ ಬಡ್ಡಿ ತಕ್ಕೊಳ್ಳಬಾರದು. ಇಲ್ಲವೆ ಅವರ ಮೇಲೆ ಬಡ್ಡಿ ಹೊರಿಸ ಬೇಡ.
- 26 ನಿನ್ನ ನೆರೆಯವನ ಉಡುಪನ್ನು ಅಡವಾಗಿ ತಂದರೆ ಸೂರ್ಯನು ಮುಳುಗುವದರೊಳಗಾಗಿ ಅವ ನಿಗೆ ಹಿಂದಕ್ಕೆ ಕೊಡಬೇಕು.
- 27 ಅದು ಅವನಿಗೆ ಒಂದೇ ಹೊದಿಕೆಯಾಗಿದೆ. ಅದೇ ಅವನ ಮೈಗೆ ಉಡುಪು. ಅವನು ಯಾವದನ್ನು ಹೊದ್ದುಕೊಂಡು ಮಲಗಿ ಯಾನು? ಅವನು ನನಗೆ ಮೊರೆಯಿಟ್ಟರೆ ನಾನು ಕೇಳುವೆನು. ನಾನು ಕೃಪಾಳುವು.
- 28 ದೇವರನ್ನು ನಿಂದಿಸಬೇಡ; ಇಲ್ಲವೆ ನಿನ್ನ ಜನರ ಅಧಿಕಾರಿಗಳನ್ನು ಶಪಿಸಬೇಡ.
- 29 ನಿನ್ನ ಪ್ರಥಮ ಫಲಗಳನ್ನೂ ಪಾನಗಳನ್ನೂ ನನಗೆ ಅರ್ಪಿಸಲು ತಡ ಮಾಡಬೇಡ. ನಿನ್ನ ಮಕ್ಕಳಲ್ಲಿ ಚೊಚ್ಚಲಾದವರನ್ನು ನನಗೆ ಕೊಡಬೇಕು.
- 30 ಅದರಂತೆಯೇ ನಿನ್ನ ಎತ್ತುಗಳ ಲ್ಲಿಯೂ ಕುರಿಗಳಲ್ಲಿಯೂ ಮಾಡಬೇಕು. ಅದು ಏಳು ದಿನ ತಾಯಿಯ ಬಳಿಯಲ್ಲಿರಲಿ, ಎಂಟನೆಯ ದಿನ ಅದನ್ನು ನನಗೆ ಕೊಡಬೇಕು.
- 31 ನೀವು ನನಗೆ ಪರಿಶುದ್ಧ ಜನರಾಗಿರಬೇಕು. ಹೊಲದಲ್ಲಿ (ಮೃಗದಿಂದ) ಕೊಲ್ಲಲ್ಪಟ್ಟದ್ದನ್ನು ನೀವು ತಿನ್ನದೆ ಅದನ್ನು ನಾಯಿಗಳಿಗೆ ಹಾಕಬೇಕು.
Exodus 22
- Details
- Parent Category: Old Testament
- Category: Exodus
ವಿಮೋಚನಕಾಂಡ ಅಧ್ಯಾಯ 22