- 1 ಆತನು ಮೋಶೆಗೆ--ನೀನೂ ಆರೋನನೂ ನಾದಾಬನೂ ಅಬೀಹೂ ಇಸ್ರಾಯೇಲಿನ ಹಿರಿಯರಲ್ಲಿ ಎಪ್ಪತ್ತು ಮಂದಿಯೂ ಕರ್ತನ ಬಳಿಗೆ ಬಂದು ದೂರದಲ್ಲಿ ಆರಾಧಿಸಿರಿ.
- 2 ಮೋಶೆ ಒಬ್ಬನೇ ಕರ್ತನ ಸವಿಾಪಕ್ಕೆ ಬರಲಿ; ಆದರೆ ಅವರು ಸವಿಾಪಕ್ಕೆ ಬರಬಾರದು. ಇಲ್ಲವೆ ಜನರು ಅವನ ಸಂಗಡ ಬರಬಾರದು ಎಂದು ಹೇಳಿದನು.
- 3 ಮೋಶೆಯು ಬಂದು ಕರ್ತನ ಎಲ್ಲಾ ಮಾತುಗಳನ್ನೂ ಎಲ್ಲಾ ನ್ಯಾಯವಿಧಿಗಳನ್ನೂ ಜನರಿಗೆ ತಿಳಿಯಪಡಿ ಸಿದನು; ಆಗ ಜನರೆಲ್ಲಾ ಒಂದೇ ಸ್ವರದಿಂದ--ಕರ್ತನು ಹೇಳಿದ ಎಲ್ಲಾ ಮಾತುಗಳ ಪ್ರಕಾರ ಮಾಡುತ್ತೇವೆ ಎಂದು ಉತ್ತರಕೊಟ್ಟರು.
- 4 ಮೋಶೆಯು ಕರ್ತನ ಮಾತುಗಳನ್ನೆಲ್ಲಾ ಬರೆದು ಬೆಳಿಗ್ಗೆ ಎದ್ದು ಬೆಟ್ಟದ ಕೆಳಗೆ ಯಜ್ಞವೇದಿಯನ್ನು ಕಟ್ಟಿಸಿ ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ಅನುಸಾರವಾಗಿ ಹನ್ನೆರಡು ಸ್ತಂಭಗಳನ್ನು ನಿಲ್ಲಿಸಿದನು.
- 5 ಅವನು ಕರ್ತನಿಗೆ ದಹನಬಲಿಗಳನ್ನೂ ಸಮಾಧಾನದ ಬಲಿಗಾಗಿ ಎತ್ತು ಗಳನ್ನೂ ಅರ್ಪಿಸುವದಕ್ಕಾಗಿ ಇಸ್ರಾಯೇಲ್ ಮಕ್ಕಳ ಯೌವನಸ್ಥರನ್ನು ಕಳುಹಿಸಿದನು.
- 6 ಮೋಶೆಯು ರಕ್ತದಲ್ಲಿ ಅರ್ಧವನ್ನು ತೆಗೆದುಕೊಂಡು ಬೋಗುಣಿಗಳಲ್ಲಿ ಹಾಕಿ ದನು ಮತ್ತು ರಕ್ತದಲ್ಲಿ ಅರ್ಧವನ್ನು ಯಜ್ಞವೇದಿಯ ಮೇಲೆ ಚಿಮುಕಿಸಿದನು.
- 7 ಇದಲ್ಲದೆ ಒಡಂಬಡಿಕೆಯ ಪ್ರುಸ್ತಕವನ್ನು ತೆಗೆದುಕೊಂಡು ಜನರ ಮುಂದೆ ಓದಿದನು. ಆಗ ಅವರು--ಕರ್ತನು ಹೇಳುವದನ್ನೆಲ್ಲಾ ನಾವು ಮಾಡಿ ವಿಧೇಯರಾಗುವೆವು ಅಂದರು.
- 8 ತರು ವಾಯ ಮೋಶೆಯು ರಕ್ತವನ್ನು ತೆಗೆದುಕೊಂಡು ಜನರ ಮೇಲೆ ಚಿಮುಕಿಸಿ--ಇಗೋ, ಈ ಎಲ್ಲಾ ಮಾತುಗಳ ವಿಷಯದಲ್ಲಿ ಕರ್ತನು ನಿಮ್ಮೊಂದಿಗೆ ಮಾಡಿದ ಒಡಂಬಡಿಕೆಯ ರಕ್ತವು ಇದೇ ಅಂದನು.
- 9 ಆಗ ಮೋಶೆಯೂ ಅರೋನನೂ ನಾದಾಬನೂ ಅಬೀಹುವೂ ಇಸ್ರಾಯೇಲಿನ ಹಿರಿಯರಲ್ಲಿ ಎಪ್ಪತ್ತು ಜನರೂ ಏರಿಹೋದರು.
- 10 ಅವರು ಇಸ್ರಾಯೇಲಿನ ದೇವರನ್ನು ನೋಡಿದರು. ಆತನ ಪಾದಗಳ ಕೆಳಗೆ ನೀಲವರ್ಣದ ಕಲ್ಲಿನ ಕೆಲಸಕ್ಕೆ ಸಮಾನವಾದದ್ದೂ ಆಕಾಶದ ಹಾಗೆ ನಿರ್ಮಲವಾದದ್ದೂ ಇತ್ತು.
- 11 ಆದರೆ ಇಸ್ರಾಯೇಲ್ ಮಕ್ಕಳ ಶ್ರೇಷ್ಠರ ಮೇಲೆ ಆತನು ಕೈ ಹಾಕಲಿಲ್ಲ. ಅವರು ಸಹ ದೇವರ ದರ್ಶನದ ನಂತರ ತಿಂದು ಕುಡಿದರು.
- 12 ಕರ್ತನು ಮೋಶೆಗೆ--ಬೆಟ್ಟವನ್ನೇರಿ ನನ್ನ ಬಳಿಗೆ ಬಂದು ಅಲ್ಲೇ ಇರು. ನಾನು ನಿನಗೆ ಕಲ್ಲಿನ ಹಲಗೆಗಳನ್ನು ಅವರಿಗೆ ಕಲಿಸುವದಕ್ಕೋಸ್ಕರ ನಾನು ಬರೆದ ನ್ಯಾಯ ಪ್ರಮಾಣವನ್ನು ಆಜ್ಞೆಗೆಳನ್ನು ಕೊಡುವೆನು ಎಂದು ಹೇಳಿದನು.
- 13 ಆಗ ಮೋಶೆಯೂ ಅವನ ಸೇವಕನಾದ ಯೆಹೋಶುವನೂ ಎದ್ದು ನಿಂತರು. ಮೋಶೆಯಾ ದರೋ ದೇವರ ಬೆಟ್ಟವನ್ನು ಏರಿದನು.
- 14 ಹಿರಿಯರಿಗೆ ಅವನು--ನಾವು ನಿಮ್ಮ ಬಳಿಗೆ ತಿರಿಗಿ ಬರುವ ವರೆಗೆ ಇಲ್ಲಿ ನಮಗಾಗಿ ಕಾದುಕೊಂಡಿರ್ರಿ; ಇಗೋ, ಆರೋ ನನೂ ಹೂರನೂ ನಿಮ್ಮ ಸಂಗಡ ಇರುತ್ತಾರೆ. ಯಾರಿ ಗಾದರೂ ವ್ಯಾಜ್ಯವಿದ್ದರೆ ಅವನು ಅವರ ಬಳಿಗೆ ಬರಲಿ ಅಂದನು.
- 15 ಹೀಗೆ ಮೋಶೆಯು ಬೆಟ್ಟವನ್ನೇರಿ ಹೋದನು. ಆಗ ಮೇಘವು ಬೆಟ್ಟವನ್ನು ಮುಚ್ಚಿಕೊಂಡಿತು.
- 16 ಇದ ಲ್ಲದೆ ಕರ್ತನ ಮಹಿಮೆಯು ಸೀನಾಯಿಬೆಟ್ಟದ ಮೇಲೆ ನೆಲೆಯಾಗಿದದ್ದರಿಂದ ಮೇಘವು ಅದನ್ನು ಆರು ದಿನಗಳ ವರೆಗೆ ಮುಚ್ಚಿಕೊಂಡಿತು; ಏಳನೆಯ ದಿನದಲ್ಲಿ ಆತನು ಮೇಘದೊಳಗಿಂದ ಮೋಶೆಯನ್ನು ಕರೆದನು.
- 17 ಇದಲ್ಲದೆ ಇಸ್ರಾಯೇಲ್ ಮಕ್ಕಳ ಕಣ್ಣುಗಳ ಮುಂದೆ ಬೆಟ್ಟದ ತುದಿಯಲ್ಲಿ ಕರ್ತನ ಮಹಿಮೆಯ ದೃಶ್ಯವು ದಹಿಸುವ ಅಗ್ನಿಯಂತೆ ಇತ್ತು.
- 18 ಆಗ ಮೋಶೆಯು ಮೇಘದ ಮಧ್ಯಕ್ಕೆ ಹೋಗಿ ಬೆಟ್ಟವನ್ನೇರಿದನು. ಅವನು ನಾಲ್ವತ್ತು ಹಗಲೂ ನಾಲ್ವತ್ತು ರಾತ್ರಿಯೂ ಪರ್ವತದಲ್ಲಿದ್ದನು.
Exodus 24
- Details
- Parent Category: Old Testament
- Category: Exodus
ವಿಮೋಚನಕಾಂಡ ಅಧ್ಯಾಯ 24