- 1 ಆಗ ಕರ್ತನು ಮಾತನಾಡಿ ಮೋಶೆಗೆ--
- 2 ನನಗೆ ಕಾಣಿಕೆಗಳನ್ನು ತಕ್ಕೊಂಡು ಬರು ವಂತೆ ಇಸ್ರಾಯೇಲ್ ಮಕ್ಕಳ ಸಂಗಡ ಮಾತನಾಡು; ಮನಃಪೂರ್ವಕವಾಗಿಯೂ ಹೃದಯಪೂರ್ವಕವಾ ಗಿಯೂ ಕೊಡುವ ನನ್ನ ಕಾಣಿಕೆಯನ್ನು ನೀವು ತೆಗೆದು ಕೊಳ್ಳಬೇಕು.
- 3 ನೀವು ಅವರಿಂದ ತೆಗೆದುಕೊಳ್ಳಬೇಕಾದ ಕಾಣಿಕೆಗಳು: ಚಿನ್ನ ಬೆಳ್ಳಿ ತಾಮ್ರ
- 4 ನೀಲಿ ರಕ್ತವರ್ಣ ಲಾಕಿಬಣ್ಣ ನಾರು ಮೇಕೆಯ ಕೂದಲು
- 5 ಕೆಂಪು ಬಣ್ಣದಲ್ಲಿ ಅದ್ದಿದ ಟಗರುಗಳ ಚರ್ಮಗಳು ಕಡಲು ಹಂದಿಯ ಚರ್ಮಗಳು ಜಾಲಿ ಮರಗಳು.
- 6 ದೀಪಕ್ಕಾಗಿ ಎಣ್ಣೆ ಮತ್ತು ಅಭಿಷೇಕಿಸುವ ಎಣ್ಣೆಗೋಸ್ಕರವೂ ಪರಿಮಳ ಧೂಪಕ್ಕೋಸ್ಕರ ಸುಗಂಧ ದ್ರವ್ಯಗಳೂ
- 7 ಎಫೋದಿ ಗಾಗಿ ಮತ್ತು ಪದಕಕ್ಕಾಗಿ ಗೋಮೇಧಿಕಗಳೂ ಕೆತ್ತಿದ ರತ್ನಗಳೂ ಇವೇ.
- 8 ನಾನು ಅವರ ಮಧ್ಯದಲ್ಲಿ ವಾಸಿಸುವ ಹಾಗೆ ಅವರು ನನಗೆ ಒಂದು ಪರಿಶುದ್ಧ ಆಲಯವನ್ನು ಕಟ್ಟಬೇಕು.
- 9 ಗುಡಾರದ ಮಾದರಿಯನ್ನೂ ಅದರ ಎಲ್ಲಾ ಸಾಮಾನುಗಳ ಮಾದರಿಯನ್ನೂ ನಾನು ನಿನಗೆ ತೋರಿಸುವಂತೆಯೇ ನೀನು ಮಾಡಬೇಕು.
- 10 ಎರಡುವರೆ ಮೊಳ ಉದ್ದವೂ ಒಂದುವರೆ ಮೊಳ ಅಗಲವೂ ಒಂದುವರೆ ಮೊಳ ಎತ್ತರವೂ ಇರುವ ಮಂಜೂಷವನ್ನು ಜಾಲೀ ಮರದಿಂದ ಮಾಡಬೇಕು.
- 11 ಅದನ್ನು ಶುದ್ಧ ಬಂಗಾರದಿಂದ ಹೊರಗೂ ಒಳಗೂ ಹೊದಿಸಬೇಕು. ಅದರ ಸುತ್ತಲೂ ಬಂಗಾರದ ಗೋಟು ಮಾಡಬೇಕು.
- 12 ಅದಕ್ಕೆ ಬಂಗಾರದ ನಾಲ್ಕು ಬಳೆಗಳನ್ನು ಎರಕಹೊಯ್ದು ಅದರ ನಾಲ್ಕು ಮೂಲೆಗಳಲ್ಲಿ ಅಂದರೆ ಒಂದು ಕಡೆಯಲ್ಲಿ ಎರಡು ಬಳೆಗಳನ್ನು ಮತ್ತೊಂದು ಕಡೆಯಲ್ಲಿ ಎರಡು ಬಳೆಗಳನ್ನು ಇಡಬೇಕು.
- 13 ಜಾಲೀ ಮರದ ಕೋಲುಗಳನ್ನು ಬಂಗಾರದಿಂದ ಹೊದಿಸ ಬೇಕು,
- 14 ಮಂಜೂಷವನ್ನು ಹೊತ್ತುಕೊಂಡು ಹೋಗು ವದಕ್ಕಾಗಿ ಕೋಲುಗಳನ್ನು ಮಂಜೂಷದ ಉಭಯ ಪಾರ್ಶ್ವಗಳಲ್ಲಿರುವ ಬಳೆಗಳಲ್ಲಿ ಸೇರಿಸಬೇಕು.
- 15 ಮಂಜೂಷದ ಬಳೆಗಳಲ್ಲಿಯೇ ಕೋಲುಗಳನ್ನು ಇಡ ಬೇಕು. ಅವುಗಳೊಳಗಿಂದ ಕೋಲುಗಳನ್ನು ತೆಗೆಯ ಬಾರದು.
- 16 ನಾನು ನಿನಗೆ ಕೊಡುವ ಸಾಕ್ಷಿಯ ಹಲಗೆ ಗಳನ್ನು ಮಂಜೂಷದಲ್ಲಿ ಇಡಬೇಕು.
- 17 ಎರಡುವರೆ ಮೊಳ ಉದ್ದವೂ ಒಂದುವರೆ ಮೊಳ ಅಗಲವೂ ಆಗಿರುವ ಕರುಣಾಸನವನ್ನು ಶುದ್ಧ ಬಂಗಾರದಿಂದ ಮಾಡಬೇಕು.
- 18 ಬಂಗಾರದಿಂದ ಎರಡು ಕೆರೂಬಿಗಳನ್ನು ನಕ್ಷೆಯ ಕೆಲಸದಿಂದ ಕರುಣಾ ಸನದ ಎರಡು ಬದಿಗಳಲ್ಲಿ ಮಾಡಿಸಬೇಕು.
- 19 ಈ ಬದಿಯಲ್ಲಿ ಒಂದು ಕೆರೂಬಿಯನ್ನೂ ಆ ಬದಿಯಲ್ಲಿ ಮತ್ತೊಂದು ಕೆರೂಬಿಯನ್ನೂ ಹೀಗೆ ಕರುಣಾಸನದ ಮೇಲೆಯೇ ಎರಡೂ ಬದಿಗಳಲ್ಲಿ ಮಾಡಬೇಕು.
- 20 ಆ ಕೆರೂಬಿಗಳು ತಮ್ಮ ರೆಕ್ಕೆಗಳನ್ನು ಮೇಲಕ್ಕೆ ಚಾಚಿದವುಗ ಳಾಗಿಯೂ ರೆಕ್ಕೆಗಳಿಂದ ಕರುಣಾಸನವನ್ನು ಮುಚ್ಚುವವು ಗಳಾಗಿಯೂ ಒಂದರ ಮುಖವನ್ನು ಒಂದು ನೋಡು ವವುಗಳಾಗಿಯೂ ಇರಬೇಕು. ಕೆರೂಬಿಗಳ ಮುಖಗಳು ಕರುಣಾಸನದ ಕಡೆಗೆ ತಿರುಗಿರಬೇಕು.
- 21 ಕರುಣಾಸನ ವನ್ನು ಮಂಜೂಷದ ಮೇಲೆ ಇಡಬೇಕು ಮತ್ತು ನೀನು ಮಂಜೂಷದಲ್ಲಿ ನಾನು ನಿನಗೆ ಕೊಡುವ ಸಾಕ್ಷಿ ಹಲಗೆಗಳನ್ನು ಇಡಬೇಕು.
- 22 ನಾನು ಅಲ್ಲಿ ನಿನ್ನನ್ನು ಸಂಧಿಸಿ ಕರುಣಾಸನದ ಮೇಲಿನಿಂದ ಮಂಜೂಷದ ಮೇಲಿರುವ ಎರಡು ಕೆರೂಬಿಗಳ ಮಧ್ಯದಿಂದ ಇಸ್ರಾಯೇಲ್ ಮಕ್ಕಳ ವಿಷಯದಲ್ಲಿ ಆಜ್ಞಾಪಿಸುವವು ಗಳನ್ನೆಲ್ಲಾ ನಿನಗೆ ತಿಳಿಸುವೆನು.
- 23 ಇದಲ್ಲದೆ ಎರಡು ಮೊಳ ಉದ್ದವೂ ಒಂದು ಮೊಳ ಅಗಲವೂ ಒಂದುವರೆ ಮೊಳ ಎತ್ತರವೂ ಇರುವ ಮೇಜನ್ನು ಜಾಲೀ ಮರದಿಂದ ಮಾಡಬೇಕು.
- 24 ಶುದ್ಧ ಬಂಗಾರದಿಂದ ಅದನ್ನು ಹೊದಿಸಿ ಅದರ ಸುತ್ತಲೂ ಬಂಗಾರದ ಗೋಟನ್ನು ಮಾಡಬೇಕು.
- 25 ಅದರ ಸುತ್ತಲೂ ಗೇಣುದ್ದ ಅಂಚನ್ನು ಮಾಡಿ ಅಂಚಿನ ಸುತ್ತಲೂ ಬಂಗಾರದ ಗೋಟನ್ನು ಮಾಡ ಬೇಕು.
- 26 ಇದಲ್ಲದೆ ಅದಕ್ಕೆ ಬಂಗಾರದ ನಾಲ್ಕು ಬಳೆಗಳನ್ನು ಮಾಡಿ, ಬಳೆಗಳನ್ನು ಅದರ ನಾಲ್ಕು ಕಾಲು ಗಳಲ್ಲಿರುವ ನಾಲ್ಕು ಮೂಲೆಗಳಲ್ಲಿಡಬೇಕು.
- 27 ಅಂಚಿಗೆ ಸವಿಾಪವಾಗಿ ಮೇಜನ್ನು ಹೊರುವದಕ್ಕೋಸ್ಕರ ಇರುವ ಕೋಲುಗಳಿಗೆ ಬಳೆಗಳು ಇರಬೇಕು.
- 28 ಮೇಜನ್ನು ಹೊರುವದಕ್ಕಾಗಿ ಕೋಲುಗಳನ್ನು ಜಾಲೀ ಮರದಿಂದ ಮಾಡಿ ಬಂಗಾರದಿಂದ ಹೊದಿಸಬೇಕು.
- 29 ಇದಲ್ಲದೆ ನೀನು ಪಾತ್ರೆಗಳನ್ನೂ ಸೌಟುಗಳನ್ನೂ ಮುಚ್ಚಳಗಳನ್ನೂ ಬಟ್ಟಲುಗಳನ್ನೂ ಒಯ್ಯುವದಕ್ಕೋಸ್ಕರ ಶುದ್ಧ ಬಂಗಾರ ದಿಂದ ಮಾಡಬೇಕು.
- 30 ಮೇಜಿನ ಮೇಲೆ ಸಮ್ಮುಖದ ರೊಟ್ಟಿಯನ್ನು ಯಾವಾಗಲೂ ನನ್ನ ಮುಂದೆ ಇಡಬೇಕು.
- 31 ಇದಲ್ಲದೆ ಶುದ್ಧ ಬಂಗಾರದಿಂದ ದೀಪಸ್ತಂಭವನ್ನು ಮಾಡಬೇಕು. ಆ ದೀಪಸ್ತಂಭವನ್ನು ನಕ್ಷೆಯ ಕೆಲಸದಿಂದ ಮಾಡಬೇಕು. ಅದರ ಕಂಬವೂ ಕೊಂಬೆಗಳೂ ಹಣತೆ ಗಳೂ ಗುಂಡುಗಳೂ ಪುಷ್ಪಗಳೂ ಅದರಂತೆಯೇ ಇರ ಬೇಕು.
- 32 ದೀಪಸ್ತಂಭದ ಉಭಯ ಪಾರ್ಶ್ವಗಳಿಂದ ಆರು ಕೊಂಬೆಗಳು, ಒಂದು ಭಾಗದಿಂದ ಮೂರು ಕೊಂಬೆಗಳೂ ಮತ್ತೊಂದು ಭಾಗದಿಂದ ಮೂರು ಕೊಂಬೆಗಳೂ ಹೊರಗೆ ಬರಬೇಕು.
- 33 ಒಂದು ಕೊಂಬೆ ಯಲ್ಲಿ ಬಾದಾಮಿಯ ಪುಷ್ಪವಿದ್ದ ಮೂರು ಹಣತೆಗಳೂ ಗುಂಡು ಪುಷ್ಪವೂ ಮತ್ತೊಂದು ಕೊಂಬೆಯಲ್ಲಿ ಬಾದಾಮಿ ಪುಷ್ಪವಿದ್ದ ಮೂರು ಹಣತೆಗಳೂ ಗುಂಡು ಪುಷ್ಪವೂ ಬಾದಾಮಿ ಪುಷ್ಪವಿದ್ದ ಮೂರು ಹಣತೆಗಳೂ ಗುಂಡು ಪುಷ್ಪವೂ ಈ ಪ್ರಕಾರ ದೀಪಸ್ತಂಭದಿಂದ ಹೊರಗೆ ಬರುವ ಆರು ಕೊಂಬೆಗಳಲ್ಲಿ ಇರಬೇಕು.
- 34 ದೀಪಸ್ತಂಭದಲ್ಲಿಯೇ ಗುಂಡುಗಳೂ ಪುಷ್ಪಗಳೂ ಸೇರಿದಂತೆ ಬಾದಾಮಿ ಪುಷ್ಪವಿರುವ ನಾಲ್ಕು ಹಣತೆಗಳು ಇರಬೇಕು.
- 35 ಇದಲ್ಲದೆ ದೀಪಸ್ತಂಭದಿಂದ ಹೊರಗೆ ಬರುವ ಆರು ಕೊಂಬೆಗಳ ಪ್ರಕಾರ ಅದರಿಂದ ಬರುವ ಎರಡೆರಡು ಕೊಂಬೆಗಳ ಕೆಳಗೆ ಒಂದೊಂದು ಗುಂಡು ಇರಬೇಕು.
- 36 ಅದರ ಗುಂಡುಗಳೂ ಕೊಂಬೆಗಳೂ ಅದರಿಂದಲೇ ಬಂದಿರಬೇಕು. ಅದೆಲ್ಲಾ ಶುದ್ಧ ಬಂಗಾ ರದ ಒಂದೇ ನಕ್ಷೆಯ ಕೆಲಸವಾಗಿರಬೇಕು.
- 37 ಅದರ ಏಳು ದೀಪಗಳನ್ನು ಮಾಡಿ ಅವು ಮುಂದುಗಡೆಯಲ್ಲಿ ಪ್ರಕಾಶ ಕೊಡುವಂತೆ ಅವುಗಳನ್ನು ಹೊತ್ತಿಸಬೇಕು.
- 38 ಇದಲ್ಲದೆ ಅದರ ಚಿಮಟಿಗೆಗಳನ್ನೂ ಬೂದಿಯ ಪಾತ್ರೆಗಳನ್ನೂ ಶುದ್ಧ ಬಂಗಾರದಿಂದಲೇ ಮಾಡಬೇಕು.
- 39 ಒಂದು ತಲಾಂತು ಶುದ್ಧ ಬಂಗಾರದಿಂದ ದೀಪ ಸ್ತಂಭವನ್ನೂ ಅದರ ಎಲ್ಲಾ ಸಾಮಾನುಗಳನ್ನೂ ಮಾಡ ಬೇಕು.
- 40 ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಅವುಗಳನ್ನು ಮಾಡುವಂತೆ ನೋಡಿಕೋ.
Exodus 25
- Details
- Parent Category: Old Testament
- Category: Exodus
ವಿಮೋಚನಕಾಂಡ ಅಧ್ಯಾಯ 25