wheel

AJC Publications and Media Portal

 

But the Comforter, which is the Holy Ghost, whom the Father will send in my name, he shall teach you all things,
and bring all things to your remembrance, whatsoever I have said unto you. John 14:26


ವಿಮೋಚನಕಾಂಡಅಧ್ಯಾಯ 31
  • 1 ಕರ್ತನು ಮೋಶೆಯ ಸಂಗಡ ಮಾತನಾಡಿಅವನಿಗೆ--
  • 2 ನೋಡು, ನಾನು ಯೆಹೂದ ಕುಲದವನಾದ ಹೂರನ ಮೊಮ್ಮಗನೂ ಊರಿಯನ ಮಗನೂ ಆಗಿರುವ ಬೆಚಲೇಲನನ್ನು ಹೆಸರು ಹೇಳಿ ಕರೆದಿದ್ದೇನೆ.
  • 3 ನಾನು ಅವನನ್ನು ದೇವರ ಆತ್ಮನಿಂದಲೂ ಜ್ಞಾನದಿಂದಲೂ ತಿಳುವಳಿಕೆಯಿಂದಲೂ ವಿವೇಕ ದಿಂದಲೂ ಎಲ್ಲಾ ತರವಾದ ಕೆಲಸದ ಕಲೆಯಿಂದಲೂ ತುಂಬಿಸಿದ್ದೇನೆ.
  • 4 ಅವನು ಚಿನ್ನ ಬೆಳ್ಳಿ ಹಿತ್ತಾಳೆಯ ಕೌಶಲ್ಯದ ಕೆಲಸವನ್ನು ಕಲ್ಪಿಸುವದಕ್ಕೂ
  • 5 ಶಿಲ್ಪಿಯ ಕೆಲಸವನ್ನೂ ಮರ ಕೆತ್ತನೆಯನ್ನೂ ಸಕಲ ವಿಧವಾದ ಕೆಲಸಗಳನ್ನೂ ಬಲ್ಲವನಾಗಿರುವನು.
  • 6 ನಾನು ಇಗೋ, ನಾನೇ ಅವನೊಂದಿಗೆ ದಾನ್‌ ಕುಲದವನೂ ಅಹೀಸಾ ಮಾಕನ ಮಗನೂ ಆದ ಒಹೊಲೀಯಾಬನನ್ನು ಕೊಟ್ಟಿ ದ್ದೇನೆ. ನಾನು ನಿನಗೆ ಆಜ್ಞಾಪಿಸಿದ್ದೆಲ್ಲವನ್ನು ಮಾಡುವ ದಕ್ಕೆ ಜಾಣನಾದವರೆಲ್ಲರ ಹೃದಯಗಳಲ್ಲಿ ಜ್ಞಾನವನ್ನು ಇಟ್ಟಿದ್ದೇನೆ.
  • 7 ಸಭೆಯ ಗುಡಾರವನ್ನೂ ಸಾಕ್ಷಿಯ ಹಲಗೆ ಗಳ ಮಂಜೂಷವನ್ನೂ ಅದರ ಮೇಲಿರುವ ಕರುಣಾಸ ನವನ್ನೂ ಗುಡಾರದ ಎಲ್ಲಾ ಉಪಕರಣಗಳನ್ನೂ
  • 8 ಮೇಜನ್ನೂ ಅದರ ಉಪಕರಣಗಳನ್ನೂ ಶುದ್ಧವಾದ ದೀಪಸ್ತಂಭವನ್ನೂ ಅದರ ಎಲ್ಲಾ ಉಪಕರಣಗಳನ್ನೂ ಧೂಪವೇದಿಯನ್ನೂ
  • 9 ದಹನಬಲಿಯ ವೇದಿಯನ್ನೂ ಅದರ ಎಲ್ಲಾ ಉಪಕರಣಗಳನ್ನೂ ಗಂಗಾಳವನ್ನೂ ಅದರ ಪೀಠವನ್ನೂ
  • 10 ಯಾಜಕನಾದ ಆರೋನನ ಸೇವಾ ವಸ್ತ್ರಗಳನ್ನೂ ಪರಿಶುದ್ಧ ವಸ್ತ್ರ ಗಳನ್ನೂ ಯಾಜಕನ ಕೆಲಸಮಾಡುವದಕ್ಕೆ ಅವನ ಮಕ್ಕಳ ವಸ್ತ್ರಗಳನ್ನೂ
  • 11 ಅಭಿಷೇಕಿಸುವ ತೈಲವನ್ನೂ ಪರಿಶುದ್ಧ ಸ್ಥಳಕ್ಕೋಸ್ಕರ ವಿರುವ ಪರಿಮಳ ಧೂಪವನ್ನೂ ನಾನು ನಿನಗೆ ಆಜ್ಞಾಪಿಸಿ ದವುಗಳೆಲ್ಲವನ್ನೂ ಅವರು ಮಾಡುವರು ಅಂದನು.
  • 12 ಕರ್ತನು ಮೋಶೆಯೊಂದಿಗೆ ಮಾತನಾಡಿ--
  • 13 ನೀನು ಇಸ್ರಾಯೇಲ್‌ ಮಕ್ಕಳೊಂದಿಗೆ ಸಹ ಮಾತ ನಾಡಿ--ನಿಶ್ಚಯವಾಗಿ ನೀವು ನನ್ನ ಸಬ್ಬತ್ತುಗಳನ್ನು ಕೈಕೊಳ್ಳಬೇಕು. ನಿಮ್ಮನ್ನು ಪರಿಶುದ್ಧ ಮಾಡುವ ಕರ್ತನು ನಾನೇ ಎಂದು ನೀವು ತಿಳಿಯುವಂತೆ ಇದೇ ನನಗೂ ನಿಮಗೂ ನಿಮ್ಮ ಸಂತತಿಯವರಿಗೂ ಗುರುತಾಗಿದೆ.
  • 14 ಹೀಗಿರುವದರಿಂದ ನೀವು ಸಬ್ಬತ್ತನ್ನು ಕೈಕೊಳ್ಳ ಬೇಕು, ಅದು ನಿಮಗೆ ಪರಿಶುದ್ಧವಾದದ್ದು. ಅದನ್ನು ಅಪವಿತ್ರಮಾಡುವ ಪ್ರತಿಯೊಬ್ಬನು ಖಂಡಿತವಾಗಿ ಸಾಯಬೇಕು. ಆ ದಿನದಲ್ಲಿ ಯಾರಾದರೂ ಕೆಲಸ ಮಾಡಿದರೆ ಅವರನ್ನು ತನ್ನ ಜನರೊಳಗಿಂದ ತೆಗೆದು ಹಾಕಬೇಕು.
  • 15 ಆರು ದಿವಸ ಕೆಲಸಮಾಡಬೇಕು; ಆದರೆ ಏಳನೆಯ ದಿನವು ಕರ್ತನಿಗೆ ಪರಿಶುದ್ಧವಾದ ವಿಶ್ರಾಂತಿಯ ಸಬ್ಬತ್ತು. ಸಬ್ಬತ್‌ ದಿನದಲ್ಲಿ ಕೆಲಸ ಮಾಡು ವವರೆಲ್ಲಾ ಖಂಡಿತವಾಗಿ ಸಾಯಬೇಕು.
  • 16 ಹೀಗಿರ ಲಾಗಿ ಇಸ್ರಾಯೇಲ್‌ ಮಕ್ಕಳು ತಮ್ಮ ತಲತಲಾಂತರ ಗಳಲ್ಲಿ ನಿತ್ಯ ಒಡಂಬಡಿಕೆಯಾಗಿ ಆಚರಿಸುವಂತೆ ಸಬ್ಬತ್ತ ನ್ನು ಕೈಕೊಳ್ಳಬೇಕು.
  • 17 ನನಗೂ ಇಸ್ರಾಯೇಲ್‌ ಮಕ್ಕ ಳಿಗೂ ಇದೇ ಶಾಶ್ವತವಾದ ಗುರುತು. ಯಾಕಂದರೆ ಆರು ದಿವಸಗಳಲ್ಲಿ ಕರ್ತನು ಆಕಾಶವನ್ನೂ ಭೂಮಿ ಯನ್ನೂ ಉಂಟುಮಾಡಿ ಏಳನೆಯ ದಿನದಲ್ಲಿ ವಿಶ್ರಮಿಸಿ ಕೊಂಡು ಉಲ್ಲಾಸಗೊಂಡನು ಎಂದು ಹೇಳು ಅಂದನು.
  • 18 ಆತನು ಮೋಶೆಯ ಸಂಗಡ ಸೀನಾಯಿ ಬೆಟ್ಟದಲ್ಲಿ ಮಾತನಾಡಿ ಮುಗಿಸಿದ ಮೇಲೆ ಅವನಿಗೆ ಆ ಎರಡು ಸಾಕ್ಷಿ ಹಲಗೆಗಳನ್ನೂ ಕೊಟ್ಟನು. ಅವು ದೇವರ ಕೈಯಿಂದ ಕೆತ್ತಲ್ಪಟ್ಟ ಕಲ್ಲಿನ ಹಲಗೆಗಳಾಗಿದ್ದವು.