- 1 ಕರ್ತನು ಮೋಶೆಗೆ ಆಜ್ಞಾಪಿಸಿದ ಮೇರೆಗೆನೀಲಿ ಧೂಮ್ರ ರಕ್ತವರ್ಣದ ನೂಲಿನಿಂದ ಪವಿತ್ರ ಆಲಯದ ಸೇವೆಮಾಡುವದಕ್ಕೆ ಸೇವಾ ವಸ್ತ್ರಗಳನ್ನೂ ಆರೋನನಿಗೆ ಪರಿಶುದ್ಧ ವಸ್ತ್ರಗಳನ್ನು ಮಾಡಿದರು.
- 2 ಅವನು ಎಫೋದನ್ನು ಚಿನ್ನದಿಂದಲೂ ನೀಲಿ ಧೂಮ್ರ ಮತ್ತು ರಕ್ತವರ್ಣ ನಯವಾಗಿ ಹೊಸೆದ ನೂಲು ಇವುಗಳಿಂದ ಮಾಡಿದನು.
- 3 ಅವರು ಚಿನ್ನವನ್ನು ಹೊಡೆದು ತೆಳುವಾದ ತಗಡುಗಳನ್ನಾಗಿಮಾಡಿ ಅದನ್ನು ಕತ್ತರಿಸಿ ತೆಳುವಾದ ಎಳೆಗಳನ್ನಾಗಿಮಾಡಿ ಆ ಎಳೆಗಳನ್ನೂ ನೀಲಿ ಧೂಮ್ರ ರಕ್ತವರ್ಣ ನಯವಾಗಿ ಹೊಸೆದ ನೂಲುಗಳೊಂದಿಗೆ ಸೇರಿಸಿ ಕಸೂತಿ ಕೆಲಸ ಮಾಡು ವದಕ್ಕೆ ಉಪಯೋಗಿಸುತ್ತಿದ್ದರು.
- 4 (ಎಫೋದಕ್ಕೆ) ಜೋಡಿಸಲು ಹೆಗಲ ಪಟ್ಟಿಯನ್ನು ತಯಾರಿಸಿದರು; ಅದರ ಎರಡೂ ಅಂಚುಗಳು ಜೋಡಿಸಲ್ಪಟ್ಟಿದ್ದವು.
- 5 ಅದರ ಮೇಲಿರುವ ವಿಚಿತ್ರವಾದ ಎಫೋದಿನ ನಡು ಕಟ್ಟು ಅದೇ ಕೆಲಸಕ್ಕನುಸಾರವಾಗಿ ಚಿನ್ನ ನೀಲಿ ಧೂಮ್ರ ರಕ್ತವರ್ಣ ಹೊಸೆದ ನಯವಾದ ನಾರುಗಳುಳ್ಳದ್ದಾಗಿದ್ದು ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಇತ್ತು.
- 6 ಗೋಮೇಧಕ ಕಲ್ಲುಗಳನ್ನು ಮುದ್ರೆಯನ್ನು ಕೆತ್ತು ವಂತೆ ಬಂಗಾರದಲ್ಲಿ ಕೆತ್ತಲ್ಪಟ್ಟವುಗಳಾಗಿ ಇಸ್ರಾಯೇಲಿನ ಮಕ್ಕಳ ಹೆಸರುಗಳ ಪ್ರಕಾರ ಮಾಡಿದರು.
- 7 ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಅವನು ಅವುಗಳನ್ನು ಎಫೋದಿನ ಹೆಗಲಿನ ಭಾಗಗಳ ಮೇಲೆ ಇಸ್ರಾ ಯೇಲ್ಯರ ಮಕ್ಕಳ ಜ್ಞಾಪಕಾರ್ಥವಾದ ಕಲ್ಲುಗಳಿರ ತಕ್ಕದ್ದೆಂದು ಅವುಗಳನ್ನು ಇಟ್ಟನು.
- 8 ಎದೆಪದಕವನ್ನು ಕೌಶಲ್ಯ ಕೆಲಸದಿಂದ ಎಫೋದಿನ ಕೆಲಸದ ಹಾಗೆಯೇ ಬಂಗಾರ ನೀಲಿ ಧೂಮ್ರ ರಕ್ತವರ್ಣ ಹೊಸೆದ ನಯವಾದ ನಾರುಗಳಿಂದ ಮಾಡಿದರು.
- 9 ಅದು ಚಚ್ಚೌಕವಾಗಿತ್ತು; ಎದೆಪದಕವನ್ನು ಇಮ್ಮಡಿ ಸಿದ್ದಾಗಿ ಮಾಡಿದರು. ಅದು ಗೇಣುದ್ದವಾಗಿಯೂ ಗೇಣಗಲವಾಗಿಯೂ ಇಮ್ಮಡಿಸಿದ್ದಾಗಿತ್ತು.
- 10 ಅದರಲ್ಲಿ ಕಲ್ಲುಗಳನ್ನು ನಾಲ್ಕು ಸಾಲುಗಳಾಗಿ ಕೂಡ್ರಿಸಿದರು; ಮಾಣಿಕ್ಯ ಪುಷ್ಯರಾಗ ಸ್ಪಟಿಕ ಇವು ಮೊದಲನೆಯ ಸಾಲಿನಲ್ಲಿ ಇದ್ದವು.
- 11 ಕೆಂಪರಳು ನೀಲ ವಜ್ರ ಇವು ಎರಡನೆಯ ಸಾಲಿನಲ್ಲಿ ಇದ್ದವು.
- 12 ಪದ್ಮರಾಗ, ವೈದೂರ್ಯ, ಸುಗಂಧ ಇವು ಮೂರನೆಯ ಸಾಲಿ ನಲ್ಲಿದ್ದವು.
- 13 ಬೆರುಲ್ಲ ಗೋಮೇಧಕ ವೈದೂರ್ಯ ಇವು ನಾಲ್ಕನೆಯ ಸಾಲಿನಲ್ಲಿ ಇದ್ದವು. ಇವು ಕೆತ್ತಲ್ಪಟ್ಟ ಚಿನ್ನದಲ್ಲಿ ಕೂಡ್ರಿಸಿದವುಗಳಾಗಿದ್ದವು.
- 14 ಆ ಕಲ್ಲುಗಳು ಇಸ್ರಾಯೇಲ್ಯರ ಮಕ್ಕಳ ಹೆಸರುಗಳ ಪ್ರಕಾರ ಹನ್ನೆರಡಾಗಿ ಅವರ ಹೆಸರುಗಳಿಗನುಸಾರವಾಗಿ ಇದ್ದವು. ಒಂದೊಂದಕ್ಕೆ ಒಂದೊಂದು ಹೆಸರಾಗಿ ಹನ್ನೆರಡು ಕಲ್ಲುಗಳಿಗೋಸ್ಕರ ಮುದ್ರೆಗಳ ಹಾಗೆ ಕೆತ್ತಿದವುಗಳಾ ಗಿದ್ದವು.
- 15 ಎದೆಪದಕದ ಮೇಲಿರುವ ಕೊನೆಗಳಲ್ಲಿ ಶುದ್ಧ ಬಂಗಾರದಿಂದ ನೂಲಿನ ಹಾಗೆ ಹೆಣೆದಿರುವ ಸರಪಣಿಯನ್ನು ಮಾಡಿದರು.
- 16 ಬಂಗಾರದ ಆ ಎರಡು ಜಡೆಗಳನ್ನು ಮಾಡಿ ಆ ಎರಡು ಉಂಗುರಗಳನ್ನು ಎದೆಪದಕದ ಎರಡು ಕೊನೆಗಳಲ್ಲಿ ಸೇರಿಸಿದನು.
- 17 ಆ ಎರಡು ಹೆಣೆದ ಬಂಗಾರದ ಸರಪಣಿಗಳನ್ನು ಪದಕದ ಕೊನೆಗಳಲ್ಲಿರುವ ಎರಡು ಉಂಗುರಗಳಲ್ಲಿ ಸೇರಿಸಿದನು.
- 18 ಆ ಎರಡು ಹೆಣೆದ ಸರಪಣಿಗಳ ಎರಡು ಕೊನೆಗಳನ್ನು ಆ ಎರಡು ಜವೆಗಳಲ್ಲಿ ಸಿಕ್ಕಿಸಿ ಎಫೋದಿನ ಹೆಗಲು ಭಾಗಗಳ ಮುಂದುಗಡೆ ಇರಿಸಿ ದರು.
- 19 ಬಂಗಾರದ ಎರಡು ಉಂಗುರಗಳನ್ನು ಮಾಡಿ ಎದೆಪದಕದ ಎರಡು ಕೊನೆಗಳಲ್ಲಿ ಎಫೋದಿನ ಕಡೆಗೆ ಒಳಗಡೆಯಲ್ಲಿ ಹಾಕಿದರು.
- 20 ಚಿನ್ನದ ಬೇರೆ ಎರಡು ಉಂಗುರಗಳನ್ನು ಮಾಡಿ ಎಫೋದಿನ ಮುಂಬದಿಯ ಕೆಳಗಿನ ಎರಡು ಭಾಗಗಳಲ್ಲಿ ಎಫೋದಿನ ವಿಚಿತ್ರವಾದ ನಡುಕಟ್ಟಿನ ಮೇಲೆ ಅದನ್ನು ಜೋಡಿಸುವ ಸ್ಥಳಕ್ಕೆ ಎದುರಾಗಿ ಇರಿಸಿದರು.
- 21 ಕರ್ತನು ಮೋಶೆಗೆ ಆಜ್ಞಾಪಿ ಸಿದ ಹಾಗೆಯೇ ಆ ಎದೆಪದಕವನ್ನು ಎಫೋದಿನ ವಿಚಿತ್ರವಾದ ನಡುಕಟ್ಟಿನ ಮೇಲೆ ಇರುವ ಹಾಗೆಯೂ ಎದೆಪದಕವು ಎಫೋದನ್ನು ಬಿಟ್ಟು ಅಲ್ಲಾಡದ ಹಾಗೆ ಯೂ ಅದರ ಉಂಗುರಗಳ ಮೂಲಕವಾಗಿ ನೀಲಿ ನೂಲಿನಿಂದ ಎಫೋದಿನ ಉಂಗುರಗಳಿಗೆ ಕಟ್ಟಿದರು.
- 22 ಎಫೋದಿನ ನಿಲುವಂಗಿಗಳನ್ನೆಲ್ಲಾ ನೇತ ಕೆಲಸ ಕ್ಕನುಸಾರ ನೀಲಿಯಿಂದ ಮಾಡಿದರು.
- 23 ನಿಲುವಂಗಿಯ ರಂಧ್ರ ಕವಚ ರಂಧ್ರದ ಹಾಗೆ ಅದರ ಮಧ್ಯದಲ್ಲಿ ಇತ್ತು. ಅದು ಹರಿಯದ ಹಾಗೆ ಆ ರಂಧ್ರದ ಸುತ್ತಲೂ ಗೋಟು ಇತ್ತು.
- 24 ನಿಲುವಂಗಿಯ ಅಂಚಿನ ಮೇಲೆ ಹೊಸೆದ ನೀಲಿ ಧೂಮ್ರ ರಕ್ತವರ್ಣದ ದಾಳಿಂಬರ ಗಳನ್ನು ಮಾಡಿದನು.
- 25 ಶುದ್ಧ ಬಂಗಾರದ ಗಂಟೆಗಳನ್ನು ಮಾಡಿ ಆ ಗಂಟೆಗಳನ್ನು ದಾಳಿಂಬರಗಳ ನಡುವೆ ಇಟ್ಟು ನಿಲುವಂಗಿಗಳ ಅಂಚಿನ ಮೇಲೆ ಸುತ್ತಲೂ ದಾಳಿಂಬರಗಳ ನಡುವೆಯೇ ಇರಿಸಿದನು.
- 26 ಸೇವೆ ಗೋಸ್ಕರ ಮಾಡಿದ ನಿಲುವಂಗಿಯ ಅಂಚಿನ ಮೇಲೆ ಸುತ್ತಲೂ ಒಂದು ಗಂಟೆ ಒಂದು ದಾಳಿಂಬರದ ಮೇರೆಗೆ ಇಟ್ಟರು, ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಅದು ಇತ್ತು.
- 27 ಆರೋನನಿಗೂ ಅವನ ಮಕ್ಕಳಿಗೂ ನಾರು ನೂಲಿನಿಂದ ಮಾಡಿದ ನೇಯ್ಗೆ ಕೆಲಸದ ಅಂಗಿಗಳನ್ನೂ
- 28 ನಾರಿನ ಮುಂಡಾಸವನ್ನೂ ಸೌಂದರ್ಯವುಳ್ಳ ನಾರಿನ ಕುಲಾವಿಗಳನ್ನೂ ನಾರು ಗಳಿಂದ ಮಾಡಿದ ಇಜಾರುಗಳನ್ನೂ
- 29 ಹೊಸೆದ ನಯ ವಾದ ನಾರು ನೀಲಿ ಧೂಮ್ರ ರಕ್ತವರ್ಣದ ಹೆಣಿಗೆಯ ಕೆಲಸದ ಪ್ರಕಾರ ನಡುಕಟ್ಟನ್ನೂ ಮಾಡಿದರು. ಇವು ಗಳನ್ನು ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಮಾಡಿದರು.
- 30 ಪರಿಶುದ್ಧ ಕಿರೀಟವಾಗಿರುವ ತಗಡನ್ನು ಶುದ್ಧ ಬಂಗಾರದಿಂದ ಮಾಡಿ ಕರ್ತನಿಗೆ ಪರಿಶುದ್ಧ ಎಂದು ಮುದ್ರೆ ಕೆತ್ತುವವರ ಬರಹದಿಂದ ಅದರ ಮೇಲೆ ಬರೆದು
- 31 ಅದನ್ನು ಮುಂಡಾಸದ ಮೇಲೆ ಬಿಗಿಸುವದ ಕ್ಕೋಸ್ಕರ ನೀಲಿ ನೂಲಿನಿಂದ ಕಟ್ಟಿದರು. ಇದನ್ನು ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಮಾಡಿದರು.
- 32 ಈ ಪ್ರಕಾರ ಸಭೆ ಡೇರೆಯ ಗುಡಾರದ ಕೆಲಸವೆಲ್ಲಾ ಮುಗಿಯಿತು. ಕರ್ತನು ಮೋಶೆಗೆ ಆಜ್ಞಾಪಿಸಿದ್ದನ್ನೆಲ್ಲಾ ಇಸ್ರಾಯೇಲ್ ಮಕ್ಕಳು ಅದರಂತೆಯೇ ಮಾಡಿದರು.
- 33 ಆಗ ಅವರು ಗುಡಾರವನ್ನು ಮೋಶೆಯ ಬಳಿಗೆ ತಂದರು. ಅದರ ಎಲ್ಲಾ ಸಾಮಾನುಗಳನ್ನು ಹಲಗೆಗಳನ್ನು ಅಗುಳಿಗಳನ್ನು ಸ್ತಂಭಗಳನ್ನು ಕುಣಿಕೆಗಳನ್ನು;
- 34 ಕೆಂಪು ಬಣ್ಣದಲ್ಲಿ ಅದ್ದಿದ ಟಗರುಗಳ ಹೊದಿಕೆಯನ್ನು, ಕಡಲು ಹಂದಿಗಳ ಚರ್ಮಗಳ ಹೊದಿಕೆಗಳನ್ನು ಮರೆಯ ತೆರೆಯನ್ನು;
- 35 ಮಂಜೂಷದ ಸಾಕ್ಷಿಯ ಪೆಟ್ಟಿಗೆ ಯನ್ನು, ಅದರ ಕೋಲುಗಳನ್ನು, ಕರುಣಾಸನವನ್ನು;
- 36 ಮೇಜನ್ನು ಅದರ ಎಲ್ಲಾ ಸಾಮಾನುಗಳನ್ನು, ಸಮ್ಮು ಖದ ರೊಟ್ಟಿಯನ್ನು;
- 37 ಶುದ್ಧವಾದ ದೀಪ ಸ್ತಂಭವನ್ನು, ಅದರ ದೀಪಗಳನ್ನು ಕ್ರಮವಾಗಿಡುವ ದೀಪಗಳನ್ನು ಅದರ ಎಲ್ಲಾ ಸಾಮಾನುಗಳನ್ನು, ದೀಪಸ್ತಂಭಕ್ಕಾಗಿ ಎಣ್ಣೆಯನ್ನು;
- 38 ಚಿನ್ನದ ಬಲಿಪೀಠವನ್ನು, ಅಭಿಷೇಕಿಸುವ ತೈಲವನ್ನು, ಪರಿಮಳ ಧೂಪವನ್ನು, ಗುಡಾರದ ಬಾಗಿಲಿನ ತೆರೆಯನ್ನು;
- 39 ಹಿತ್ತಾಳೆಯ ಬಲಿಪೀಠವನ್ನು, ಅದಕ್ಕಿರುವ ಹಿತ್ತಾಳೆಯ ಜಲ್ಲಡಿಯನ್ನು, ಕೋಲುಗಳನ್ನು, ಎಲ್ಲಾ ಸಾಮಾನುಗಳನ್ನು, ಕುಣಿಕೆಗಳನ್ನು,
- 40 ಅಂಗಳದ ತೆರೆಗಳನ್ನು, ಸ್ತಂಭಗಳನ್ನು, ಕುಣಿಕೆಗಳನ್ನು, ಅಂಗಳದ ಬಾಗಿಲಿನ ತೆರೆಯನ್ನು, ಹಗ್ಗಗಳನ್ನು, ಗೂಟಗಳನ್ನು, ಸಭೆಯ ಗುಡಾರಕ್ಕೆ ಬೇಕಾದ ಎಲ್ಲಾ ಸಾಮಾನುಗಳನ್ನು;
- 41 ಪರಿಶುದ್ಧ ಸ್ಥಳದ ಸೇವೆಗೋಸ್ಕರ ಸೇವಾ ವಸ್ತ್ರಗಳನ್ನು, ಯಾಜಕನಾದ ಆರೋನನ ಪರಿಶುದ್ಧ ವಸ್ತ್ರಗಳನ್ನು, ಅವನ ಕುಮಾರರಿಗೆ ಯಾಜಕ ಸೇವೆಗೋಸ್ಕರ ಬೇಕಾದ ವಸ್ತ್ರಗಳನ್ನು ತಂದರು.
- 42 ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಇಸ್ರಾಯೇಲ್ ಮಕ್ಕಳು ಈ ಕೆಲಸಗಳನ್ನೆಲ್ಲಾ ಮಾಡಿ ದರು.
- 43 ಮೋಶೆಯು ಆ ಕೆಲಸವನ್ನೆಲ್ಲಾ ನೋಡಿದಾಗ ಇಗೋ, ಕರ್ತನು ಆಜ್ಞಾಪಿಸಿದ ಪ್ರಕಾರವೇ ಅವರು ಅದನ್ನು ಮಾಡಿದ್ದರು. ಆಗ ಮೋಶೆಯು ಅವರನ್ನು ಆಶೀರ್ವದಿಸಿದನು.
Exodus 39
- Details
- Parent Category: Old Testament
- Category: Exodus
ವಿಮೋಚನಕಾಂಡ ಅಧ್ಯಾಯ 39