- 1 ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ--
- 2 ತಂದೆಗಳು ಹುಳಿ ದ್ರಾಕ್ಷೆಗಳನ್ನು ತಿಂದರು ಮಕ್ಕಳ ಹಲ್ಲು ಉಳಿತು ಹೋಯಿತು ಎಂಬ ಗಾದೆಯನ್ನು ಇಸ್ರಾಯೇಲ್ ದೇಶದ ವಿಷಯವಾಗಿ ನೀವು ಉಪಯೋಗಿಸುವ ಇದರ ಅರ್ಥವೇನು?
- 3 ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ನನ್ನ ಜೀವದಾಣೆ, ನೀವು ಈ ಗಾದೆಯನ್ನು ಇಸ್ರಾಯೇಲಿನಲ್ಲಿ ಇನ್ನು ಹೇಳುವ ಸಂದರ್ಭವು ಇರುವದಿಲ್ಲ.
- 4 ಇಗೋ, ಎಲ್ಲಾ ಪ್ರಾಣಗಳು ನನ್ನವೇ; ತಂದೆಯ ಪ್ರಾಣವು ಹೇಗೋ ಹಾಗೆಯೇ ಮಗನ ಪ್ರಾಣವು ನನ್ನದೇ; ಪಾಪ ಮಾಡುವವನೇ ತಾನಾ ಗಿಯೇ ಸಾಯುವನು.
- 5 ಒಬ್ಬ ಮನುಷ್ಯನು ನೀತಿವಂತ ನಾಗಿದ್ದು, ನೀತಿಯನ್ನೂ ನ್ಯಾಯವನ್ನೂ ನಡಿಸಿ,
- 6 ಪರ್ವತಗಳ ಮೇಲೆ ತಿನ್ನದೆ, ಇಸ್ರಾಯೇಲಿನ ಮನೆ ತನದವರ ವಿಗ್ರಹಗಳ ಕಡೆಗೆ ತನ್ನ ಕಣ್ಣುಗಳನ್ನು ಎತ್ತದೆ, ತನ್ನ ನೆರೆಯವನ ಹೆಂಡತಿಯನ್ನು ಕೆಡಿಸದೆ, ಮುಟ್ಟಾ ಗಿರುವ ಸ್ತ್ರೀ ಹತ್ತಿರ ಸವಿಾಪಿಸದೆ;
- 7 ಯಾರನ್ನೂ ಉಪದ್ರಪಡಿಸದೆ, ಸಾಲ ಮಾಡಿದವನ ಒತ್ತೆಯನ್ನು ಹಿಂದಕ್ಕೆ ಕೊಟ್ಟು, ಹಿಂಸಿಸಿ, ಸುಲಿಗೆ ಮಾಡದೆ, ಹಸಿದವನಿಗೆ ತನ್ನ ರೊಟ್ಟಿಯನ್ನು ಕೊಟ್ಟು ಮತ್ತು ಬೆತ್ತಲೆ ಯಿರುವವನಿಗೆ ಬಟ್ಟೆಯನ್ನು ಹೊದಿಸಿ,
- 8 ಬಡ್ಡಿಗೆ ಸಾಲ ಕೊಡದೆ, ಲಾಭವನ್ನು ತೆಗೆದುಕೊಳ್ಳದೆ, ಅನ್ಯಾಯ ದಿಂದ ತನ್ನ ಕೈಯನ್ನು ಹಿಂತೆಗೆದು ಒಬ್ಬರಿಗೊಬ್ಬರು ಸತ್ಯದ ನ್ಯಾಯವನ್ನು ನಡಿಸಿ,
- 9 ಸತ್ಯವನ್ನು ಮಾಡುವದ ಕ್ಕಾಗಿ ನನ್ನ ನಿಯಮಗಳಲ್ಲಿ ನಡೆದು, ನನ್ನ ನ್ಯಾಯಗಳನ್ನು ಕೈಕೊಂಡು ಸತ್ಯಪರನಾಗಿ ನಡೆದರೆ ಅವನು ನೀತಿ ವಂತನು ಮತ್ತು ನಿಶ್ಚಯವಾಗಿ ಬದುಕುವವನು ಎಂದು ದೇವರಾದ ಕರ್ತನು ಹೇಳಿದ್ದಾನೆ.
- 10 ಆದರೆ ಇಂತಹ ವನು ಪಡೆದ ಮಗನು ದರೋಡೆಕೋರನಾಗಿ ರಕ್ತವನ್ನು ಚೆಲ್ಲುವವನಾದರೆ ಇಂತಹ ಕೆಲಸಗಳನ್ನು ಮಾಡುತ್ತಾನೆ.
- 11 ಅಂತಹ ಕೆಲಸಗಳನ್ನು ಮಾಡಿದರೂ ಪರ್ವತಗಳ ಮೇಲೆ ತಿಂದು ತನ್ನ ನೆರೆಯವನ ಹೆಂಡತಿಯನ್ನು ಕೆಡಿಸಿ,
- 12 ಬಡವರನ್ನೂ ದರಿದ್ರರನ್ನೂ ಉಪದ್ರಗೊಳಿಸಿ, ಹಿಂಸಿಸಿ, ಸುಲಿಗೆ ಮಾಡಿ ಒತ್ತೆಗಳನ್ನು ಹಿಂದಕ್ಕೆ ಕೊಡದೆ, ವಿಗ್ರಹಗಳ ಕಡೆಗೆ ತನ್ನ ಕಣ್ಣುಗಳನ್ನು ಎತ್ತಿ ಅಸಹ್ಯ ವಾದವುಗಳನ್ನು ಮಾಡಿ;
- 13 ಬಡ್ಡಿಗೆ ಕೊಟ್ಟು ಲಾಭ ತೆಗೆದುಕೊಂಡು ಅವನು ಬದುಕುವನೋ? ಅವನು ಬದುಕುವದಿಲ್ಲ, ಅವನು ಈ ಅಸಹ್ಯಗಳನ್ನೆಲ್ಲಾ ಮಾಡಿ ದ್ದಾನೆ; ಅವನು ನಿಶ್ಚಯವಾಗಿ ಸಾಯುವನು ಅವನ ರಕ್ತವು ಅವನ ಮೇಲೆಯೇ ಇರುವದು.
- 14 ಆಗ ಇಗೋ, ಅವನು ಮಗನನ್ನು ಪಡೆದ ಮೇಲೆ ತನ್ನ ತಂದೆ ಮಾಡಿದ ಪಾಪಗಳನ್ನೆಲ್ಲಾ ನೋಡಿ ಆಲೊಚಿಸಿ, ಅವುಗಳಂತೆ ಮಾಡದೆ;
- 15 ಪರ್ವತಗಳ ಮೇಲೆ ತಿನ್ನದೆ, ಇಸ್ರಾಯೇಲಿನ ಮನೆತನ ದವರ ವಿಗ್ರಹಗಳ ಕಡೆಗೆ ತನ್ನ ಕಣ್ಣುಗಳನ್ನು ಎತ್ತದೆ, ತನ್ನ ನೆರೆಯವನ ಹೆಂಡತಿಯನ್ನು ಕೆಡಿಸದೆ,
- 16 ಇಲ್ಲವೆ ಯಾರಿಗೂ ತೊಂದರೆಪಡಿಸದೆ, ಒತ್ತೆಯನ್ನು ಹಿಡಿಯದೆ, ಇಲ್ಲವೆ ಹಿಂಸೆಯಿಂದ ಸುಲಿಗೆ ಮಾಡದೆ, ಹಸಿದವನಿಗೆ ತನ್ನ ರೊಟ್ಟಿಯನ್ನು ಕೊಟ್ಟು ಬೆತ್ತಲೆಯಾದವನಿಗೆ ವಸ್ತ್ರ ವನ್ನು ಹೊದಿಸಿ,
- 17 ಬಡವನ ಮೇಲೆ ಕೈಮಾಡದೆ, ಬಡ್ಡಿಯನ್ನೂ ಲಾಭವನ್ನು ತೆಗೆದುಕೊಳ್ಳದೆ, ನನ್ನ ನ್ಯಾಯ ಗಳನ್ನು ಮಾಡಿ ನಿಯಮಗಳಲ್ಲಿ ನಡೆದರೆ, ಅವನು ತನ್ನ ತಂದೆಯ ಅಕ್ರಮಗಳ ನಿಮಿತ್ತ ಸಾಯುವದಿಲ್ಲ ನಿಶ್ಚಯವಾಗಿ ಬದುಕುವನು.
- 18 ಆತನ ತಂದೆಯ ವಿಷಯವಾದರೋ ಅವನು ಬಹಳ ಬಲಾತ್ಕಾರ ಮಾಡಿ ದ್ದರಿಂದಲೂ ತನ್ನ ಸಹೋದರನನ್ನು ಹಿಂಸಿಸಿ ಸುಲಿಗೆ ಮಾಡಿದ್ದರಿಂದಲೂ ತನ್ನ ಜನರ ಮಧ್ಯದಲ್ಲಿ ಕೆಟ್ಟದನ್ನು ಮಾಡಿದ್ದರಿಂದಲೂ ಇಗೋ, ಅವನು ಅಕ್ರಮದಲಿ ಸಾಯುವನು.
- 19 ಆದಾಗ್ಯೂ ಇನ್ನೂ ನೀವು--ಮಗನು ತಂದೆಯ ಅಕ್ರಮವನ್ನು ಹೊರುವದಿಲ್ಲವೇ ಎಂದು ಹೇಳುವಿರಿ; ನಿಶ್ಚಯವಾಗಿ ಮಗನು ನ್ಯಾಯವನ್ನೂ ನೀತಿಯನ್ನೂ ಮಾಡಿ ನನ್ನ ನಿಯಮಗಳನ್ನೆಲ್ಲಾ ಕೈಕೊಂಡು ನಡೆದರೆ ಅವನು ನಿಶ್ಚಯವಾಗಿ ಬದುಕುವನು.
- 20 ಪಾಪ ಮಾಡುವ ಪ್ರಾಣವು ತಾನಾಗಿ ಸಾಯುವದು; ಮಗನು ತಂದೆಯ ಅಕ್ರಮವನ್ನು ಹೊರುವದಿಲ್ಲ. ತಂದೆಯು ಮಗನ ಅಕ್ರಮವನ್ನು ಹೊರುವದಿಲ್ಲ. ನೀತಿವಂತನ ನೀತಿಯು ಅವನ ಮೇಲೆಯೇ ಇರುವದು. ದುಷ್ಟನ ದುಷ್ಟತ್ವವು ಅವನ ಮೇಲೆಯೇ ಇರುವದು.
- 21 ಆದರೆ ದುಷ್ಟನು ತಾನು ಮಾಡಿದ ಪಾಪಗಳನ್ನೆಲ್ಲಾ ಬಿಟ್ಟು ತಿರುಗಿಕೊಂಡು ನನ್ನ ನಿಯಮಗಳನ್ನೆಲ್ಲಾ ಕೈಕೊಂಡು ನ್ಯಾಯವನ್ನೂ ನೀತಿಯನ್ನೂ ನಡೆಸಿದರೆ ಅವನು ಸಾಯದೆ ನಿಶ್ಚಯವಾಗಿ ಬದುಕುವನು.
- 22 ಅವನು ಮಾಡಿದ ಅಪರಾಧಗಳೆಲ್ಲಾ ಅವನಿಗೆ ವಿರುದ್ದವಾಗಿ ಜ್ಞಾಪಕಮಾಡಲ್ಪಡುವದಿಲ್ಲ; ಅವನು ಮಾಡಿದ ನೀತಿಯಿಂದಲೇ ಅವನು ಬದುಕುವನು.
- 23 ದುಷ್ಟನು ಸಾಯುವದರಲ್ಲಿ ನನಗೆ ಸ್ವಲ್ಪವಾದರೂ ಸಂತೋಷವಿ ರುವದೋ ಎಂದು ದೇವರಾದ ಕರ್ತನು ಹೇಳುತ್ತಾನೆ; ಅವನು ತನ್ನ ನಡತೆಗಳಿಂದ ಹಿಂತಿರುಗಿಕೊಂಡು ಬದು ಕಿದರೆ ನನಗೆ ಸಂತೋಷವಲ್ಲವೇ?
- 24 ಆದರೆ ನೀತಿ ವಂತನು ತನ್ನ ನೀತಿಯನ್ನು ಬಿಟ್ಟು ಅನ್ಯಾಯ ಮಾಡಿ ದುಷ್ಟನು ಮಾಡುವ ಎಲ್ಲಾ ಅಸಹ್ಯವಾದವುಗಳ ಹಾಗೆ ಮಾಡಿದರೆ ಅವನು ಬದುಕುವನೇ? ಅವನು ಮಾಡಿ ರುವ ಎಲ್ಲಾ ನೀತಿಯು ಜ್ಞಾಪಕಮಾಡಲ್ಪಡುವದಿಲ್ಲ; ಅವನು ಮಾಡಿರುವ ಅಪರಾಧದಿಂದಲೂ ಪಾಪ ದಿಂದಲೂ ಅವುಗಳಲ್ಲಿ ಸಾಯುವನು.
- 25 ಆದರೆ ನೀವು, ಕರ್ತನ ಮಾರ್ಗವು ಸರಿಯಲ್ಲ ಅನ್ನುತ್ತೀರಿ; ಓ ಇಸ್ರಾ ಯೇಲಿನ ಮನೆಯವರೇ, ಈಗ ಕೇಳಿರಿ, ನನ್ನ ಮಾರ್ಗವು ಸಮವಲ್ಲವೇ? ನಿಮ್ಮ ಮಾರ್ಗಗಳು ಸಮವಲ್ಲದವು ಗಳೇ.
- 26 ನೀತಿವಂತನು ತನ್ನ ನೀತಿಯನ್ನು ಬಿಟ್ಟು ತಿರುಗಿಕೊಂಡು ಅನ್ಯಾಯಮಾಡಿ ಇವುಗಳಲ್ಲಿ ಸತ್ತರೆ, ಅವನು ಮಾಡಿದ ಅನ್ಯಾಯದಿಂದಲೇ ಸಾಯುವನು.
- 27 ದುಷ್ಟನು ತನ್ನ ದುಷ್ಟತನವನ್ನು ಬಿಟ್ಟು ನ್ಯಾಯವನ್ನೂ ನೀತಿಯನ್ನೂ ಅನುಸರಿಸಿದರೆ ತನ್ನ ಪ್ರಾಣವನ್ನು ಉಳಿಸಿಕೊಂಡು ಬದುಕುವನು.
- 28 ತಾನು ಆಲೋಚಿಸಿ ತಾನು ಮಾಡುವ ಎಲ್ಲಾ ದುಷ್ಕೃತ್ಯಗಳನ್ನು ಬಿಟ್ಟು ತಿರುಗಿ ಕೊಳ್ಳುವದರಿಂದ ಸಾಯದೆ ನಿಶ್ಚಯವಾಗಿ ಬದುಕು ವನು.
- 29 ಆದರೆ ಇಸ್ರಾಯೇಲಿನ ಮನೆತನದವರು ಕರ್ತನ ಮಾರ್ಗ ಸಮವಲ್ಲ ಎನ್ನುತ್ತಾರೆ. ಇಸ್ರಾಯೇಲಿನ ಮನೆತನದವರೇ, ನನ್ನ ಮಾರ್ಗ ಸರಿಯಲ್ಲವೇ? ನಿಮ್ಮ ಮಾರ್ಗಗಳು ಸಮವಲ್ಲದವುಗಳೇ.
- 30 ಆದದರಿಂದ ಇಸ್ರಾಯೇಲಿನ ಮನೆತನದವರೇ, ನಿಮ್ಮ ನಿಮ್ಮ ಮಾರ್ಗಗಳ ಪ್ರಕಾರ ನ್ಯಾಯತೀರಿಸುವೆನಂದು ದೇವ ರಾದ ಕರ್ತನು ಹೇಳುತ್ತಾನೆ; ನಿಮ್ಮ ದುಷ್ಟತ್ವಗಳನ್ನೆಲ್ಲಾ ಬಿಟ್ಟು ತಿರುಗಿಕೊಂಡು ಪಶ್ಚಾತ್ತಾಪಪಡಿರಿ; ಆಗ ಅಕ್ರಮ ಗಳು ನಿಮ್ಮನ್ನು ಆಳುವದಿಲ್ಲ.
- 31 ನೀವು ಮಾಡುವ ದುಷ್ಟತ್ವಗಳನ್ನೆಲ್ಲಾ ನಿಮ್ಮಿಂದ ಬಿಟ್ಟುಬಿಡಿರಿ; ಹೊಸ ಹೃದಯವನ್ನೂ ಹೊಸ ಆತ್ಮವನ್ನೂ ನೀವು ಪಡಕೊಳ್ಳಿರಿ; ಯಾಕಂದರೆ ಓ ಇಸ್ರಾಯೇಲಿನ ಮನೆತನದವರೇ, ನೀವು ಸಾಯುವದೇಕೆ?
- 32 ಸಾಯುವವನ ಸಾವಿನಲ್ಲಿ ನನಗೆ ಸಂತೋಷವಿಲ್ಲವೆಂದು ದೇವರಾದ ಕರ್ತನು ಹೇಳುತ್ತಾನೆ; ಆದಕಾರಣ ತಿರುಗಿಕೊಂಡು ಬಾಳಿರಿ.
Ezekiel 18
- Details
- Parent Category: Old Testament
- Category: Ezekiel
ಯೆಹೆಜ್ಕೇಲನು ಅಧ್ಯಾಯ 18