- 1 ಹನ್ನೊಂದನೇ ವರುಷದ ತಿಂಗಳಿನ ಮೊದಲನೇ ದಿನದಲ್ಲಿ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--
- 2 ಮನುಷ್ಯಪುತ್ರನೇ, ತೂರ್, ಯೆರೂಸಲೇಮಿನ ವಿಷಯವಾಗಿ ಆಹಾ, ಜನರ ದ್ವಾರವಾಗಿದ್ದದ್ದು ಮುರಿದು ಹೋಯಿತು, ಅದು ನನ್ನ ಕಡೆಗೆ ತಿರುಗಿಕೊಂಡಿದೆ, ಯೆರೂಸಲೇಮು ಹಾಳಾದ ಕಾರಣ ನಾನು ತುಂಬಿಕೊಳ್ಳುವೆನು ಎಂದು ಹೇಳಿದ್ದರಿಂದ
- 3 ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ತೂರ್ ದೇಶವೇ, ನಾನು ನಿನಗೆ ವಿರೋಧವಾಗಿದ್ದೇನೆ, ಸಮುದ್ರವು ತನ್ನ ಅಲೆಗಳನ್ನು ಹೇಗೆ ಬರಮಾಡುವದೋ ಹಾಗೆಯೇ ನಾನು ನಿನಗೆ ವಿರೋಧವಾಗಿ ಅನೇಕ ಜನಾಂಗಗಳನ್ನು ನಿನ್ನ ಮೇಲೆ ಬರಮಾಡುವೆನು.
- 4 ಅವರು ತೂರಿನ ಗೋಡೆಗಳನ್ನು ಕೆಡಿಸಿ ಅದರ ಗೋಪುರಗಳನ್ನು ಒಡೆದು ಬಿಡುವರು, ನಾನು ಅದರ ದೂಳನ್ನು ಅದರಿಂದ ಒರಿಸಿ ಅದನ್ನು ಬಂಡೆಯ ತುದಿಯಂತೆ ಮಾಡುವೆನು.
- 5 ಅದು ಸಮು ದ್ರದ ಮಧ್ಯದಲ್ಲಿ ಬಲೆಗಳನ್ನು ಹಾಕುವ ಸ್ಥಳವಾಗಿ ರುವದು; ನಾನೇ ಅದನ್ನು ಹೇಳಿದ್ದೇನೆಂದು ದೇವರಾದ ಕರ್ತನು ಹೇಳುತ್ತಾನೆ. ಅದು ಜನಾಂಗಗಳಿಗೆ ಕೊಳ್ಳೆ ಯಾಗಿರುವದು,
- 6 ಇದಲ್ಲದೆ ಬಯಲು ಭೂಮಿಯಲ್ಲಿ ರುವ ಅದರ ಕುಮಾರ್ತೆಯರು ಖಡ್ಗದಿಂದ ಕೊಲ್ಲಲ್ಪಡು ವರು, ಆಗ ನಾನೇ ಕರ್ತನೆಂದು ಎಲ್ಲರಿಗೂ ತಿಳಿಯುವದು.
- 7 ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ಉತ್ತರದ ರಾಜಾಧಿರಾಜನೂ ಬಾಬೆಲಿನ ಅರಸನೂ ಆದ ನೆಬೂಕದ್ನೆಚ್ಚರನನ್ನು ಕುದುರೆಗಳ ಸಂಗಡಲೂ ಸವಾರರ ಸಂಗಡಲೂ ರಥಗಳ ಸಂಗಡಲೂ ಬಹು ಜನರ ಸಂಗಡಲೂ ತೂರಿನ ಮೇಲೆ ತರುತ್ತೇನೆ.
- 8 ಅವನು ಬಯಲು ಭೂಮಿಯಲ್ಲಿನ ನಿನ್ನ ಕುಮಾರ್ತೆಯರನ್ನು ಖಡ್ಗದಿಂದ ಕೊಂದು ನಿನಗೆ ವಿರೋಧವಾಗಿ ಕೋಟೆಯನ್ನು ಕಟ್ಟಿ ದಿಬ್ಬ ಹಾಕಿ ನಿನಗೆ ವಿರೋಧವಾಗಿ ಖೇಡ್ಯವನ್ನು ಎತ್ತುವನು;
- 9 ತನ್ನ ಯುದ್ಧಯಂತ್ರಗಳನ್ನು ನಿನ್ನ ಗೋಡೆಗಳಿಗೆ ವಿರೋಧ ವಾಗಿ ತಾಕಿಸುವೆನು ನಿನ್ನ ಗೋಪುರಗಳನ್ನು ತನ್ನ ಕೊಡಲಿಗಳಿಂದ ಒಡೆದು ಬಿಡುವನು.
- 10 ಅವನ ಲೆಕ್ಕವಿಲ್ಲದ ಕುದುರೆಗಳಿಂದ ಎದ್ದ ಧೂಳು ನಿನ್ನನ್ನು ಮುಚ್ಚುವದು; ಗೋಡೆಯಿಲ್ಲದ ಕೋಟೆಯೊಳಗೆ ಶತ್ರು ಗಳು ಪ್ರವೇಶಿಸುವ ಪ್ರಕಾರ ಅವರು ನಿನ್ನ ಬಾಗಿಲು ಗಳಲ್ಲಿ ಪ್ರವೇಶಿಸುವಾಗ ಸವಾರರ, ರಥಗಳ, ಚಕ್ರಗಳ ಶಬ್ದದಿಂದ ನಿನ್ನ ಗೋಡೆಗಳು ಕದಲುವವು.
- 11 ಅವನು ತನ್ನ ಕುದುರೆಗಳ ಗೊರಸುಗಳಿಂದ ನಿನ್ನ ಬೀದಿಗಳನ್ನೆಲ್ಲಾ ತುಳಿಸುವನು; ಜನರನ್ನು ಕತ್ತಿಯಿಂದ ಕೊಲ್ಲುವನು; ಬಲವಾದ ಕೋಟೆಗಳು ನೆಲಕ್ಕೆ ಬೀಳುವವು.
- 12 ಅವರು ನಿನ್ನ ಸಂಪತ್ತನ್ನು ಕಸಿದುಕೊಂಡು, ಸರಕುಗಳನ್ನು ಕೊಳ್ಳೇ ಹೊಡೆದು, ಗೋಡೆಗಳನ್ನು ಒಡೆದು, ರಮ್ಯವಾದ ಮನೆಗಳನ್ನು ಕೆಡವಿ, ಕಲ್ಲುಗಳನ್ನೂ ಮರಗಳನ್ನೂ ದೂಳನ್ನೂ ನೀರಿನಲ್ಲಿ ಹಾಕುವರು.
- 13 ಆಗ ನಿನ್ನ ಹಾಡು ಗಳ ಶಬ್ದವನ್ನು ನಿಲ್ಲಿಸುವೆನು, ಇನ್ನು ನಿನ್ನ ಕಿನ್ನರಿಗಳ ಧ್ವನಿ ಕೇಳಲ್ಪಡುವದಿಲ್ಲ.
- 14 ನಿನ್ನನ್ನು ಬಂಡೆಯ ತುದಿ ಯಂತೆ ಮಾಡುವೆನು. ನೀನು ಅಲ್ಲಿ ಬಲೆ ಹಾಸುವ ಸ್ಥಳವಾಗುವಿ. ಇನ್ನು ನೀನು ಕಟ್ಟಲ್ಪಡುವದಿಲ್ಲ; ಯಾಕಂ ದರೆ ಕರ್ತನಾದ ನಾನೇ ಅದನ್ನು ಹೇಳಿದ್ದೇನೆಂದು ದೇವರಾದ ಕರ್ತನು ಹೇಳುತ್ತಾನೆ.
- 15 ದೇವರಾದ ಕರ್ತನು ತೂರಿಗೆ ಹೀಗೆ ಹೇಳು ತ್ತಾನೆ--ನಿಮ್ಮನ್ನು ಬೀಳುವಿಕೆಯ ಶಬ್ದದಿಂದಲೂ ಗಾಯ ಪಟ್ಟವರು ಕೂಗುವಾಗಲೂ ನಿನ್ನ ಮಧ್ಯದಲ್ಲಿ ಕೊಲೆ ಯಾಗುವಾಗಲೂ ದ್ವೀಪಗಳು ನಡುಗುವದಿಲ್ಲವೇ?
- 16 ಆಮೇಲೆ ಸಮುದ್ರದ ಎಲ್ಲಾ ಪ್ರಭುಗಳು ತಮ್ಮ ಸಿಂಹಾಸನಗಳನ್ನು ಬಿಟ್ಟು ಇಳಿಯುವರು; ತಮ್ಮ ನಿಲು ವಂಗಿಗಳನ್ನು ತೆಗೆದುಹಾಕುವರು, ಚಿತ್ರವಾಗಿ ಹೊಲಿದ ತಮ್ಮ ವಸ್ತ್ರಗಳನ್ನು ಇಟ್ಟುಬಿಡುವರು; ನಡುಗುವಿಕೆಯನ್ನು ಹೊದ್ದುಕೊಳ್ಳುವರು; ನೆಲದ ಮೇಲೆ ಕುಳಿತುಕೊಳ್ಳು ವರು, ಕ್ಷಣಕ್ಷಣಕ್ಕೂ ನಡುಗುವರು, ನಿನ್ನ ವಿಷಯ ವಾಗಿ ಆಶ್ಚರ್ಯಪಡುವರು.
- 17 ನಿನ್ನ ವಿಷಯದಲ್ಲಿ ಗೋಳಾಟವನ್ನೆತ್ತಿ ನಿನಗೆ ಹೇಳುವದೇನಂದರೆ, ಸಮು ದ್ರಗಳ ಬಳಿಯಲ್ಲಿ ವಾಸಿಸಿದವಳೇ, ಹೆಸರು ಗೊಂಡ ಪಟ್ಟಣವೇ, ನೀನೂ ತನ್ನ ನಿವಾಸಿಗಳೂ ಸಮುದ್ರದಲ್ಲಿ ಬಲವಾಗಿದ್ದವಳೇ, ಅದರ ಸಮುದ್ರ ಸಂಚಾರವನ್ನೂ ಭಯಪಡಿಸಿದವಳೇ, ಅಯ್ಯೋ, ಹೇಗೆ ನಾಶವಾದಿ?
- 18 ಈಗ ನೀನು ಬೀಳುವ ದಿವಸದಲ್ಲಿ ದ್ವೀಪಗಳು ನಡುಗುವವು ಹೌದು, ನೀನು ಹೋಗಿಬಿಡುವದರಿಂದ ಸಮುದ್ರದಲ್ಲಿರುವ ದ್ವೀಪಗಳು ಗಾಬರಿಯಾಗುವವು.
- 19 ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ನಿನ್ನನ್ನು ನಿವಾಸಿಗಳಿಲ್ಲದ ಪಟ್ಟಣದ ಹಾಗೆ ಹಾಳಾದ ಪಟ್ಟಣವಾಗಿ ಮಾಡುವಾಗ ಹೆಚ್ಚು ನೀರು ಮುಚ್ಚುವ ಹಾಗೆ ಅಗಾಧವನ್ನು ನಿನ್ನ ಮೇಲೆ ಬರ ಮಾಡುವೆನು.
- 20 ನಿನ್ನನ್ನು ಅಧೋಲೋಕಕ್ಕೆ ತಳ್ಳಿ ಪಾತಾಳಕ್ಕೆ ಇಳಿದ ನಿಮ್ಮ ಪೂರ್ವ ಕಾಲದವರೊಂದಿಗೆ ವಾಸಿಸುವಂತೆ ಮಾಡುವೆನು. ನಾನು ನಿನ್ನ ಮಹಿಮೆಯನ್ನು ಜೀವ ಲೋಕದಲ್ಲಿ ನೆಲೆಗೊಳಿಸದ ನಿರ್ನಿವಾಸಿಯಾಗುವಂತೆ ನಿನ್ನನ್ನು ಪಾತಾಳಕ್ಕಿಳಿದವರ ಸಹವಾಸಕ್ಕೆ ಸೇರಿಸುವೆನು.
- 21 ನಾನೂ ನಿನ್ನನ್ನು ದಿಗಿಲುಪಡಿಸುವೆನು, ಇನ್ನು ಮೇಲೆ ನೀನು ಇರುವದಿಲ್ಲ; ಆಮೇಲೆ ನಿನ್ನನ್ನು ಎಷ್ಟು ಹುಡು ಕಿದರೂ ನೀನು ಸಿಗುವದಿಲ್ಲ ಎಂದು ದೇವರಾದ ಕರ್ತನು ಹೇಳುತ್ತಾನೆ.
Ezekiel 26
- Details
- Parent Category: Old Testament
- Category: Ezekiel
ಯೆಹೆಜ್ಕೇಲನು ಅಧ್ಯಾಯ 26