- 1 ಕರ್ತನ ವಾಕ್ಯವು ಮತ್ತೆ ನನಗೆ ಬಂದು ಹೇಳಿದ್ದೇನಂದರೆ
- 2 ಮನುಷ್ಯಪುತ್ರನೇ, ಪ್ರವಾದಿಸು ಮತ್ತು ಹೇಳು--ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಅಯ್ಯೋ! ದಿನವೇ ಎಂದು ಅರಚಿಕೊಳ್ಳಿರಿ.
- 3 ಆ ದಿನವು ಸವಿಾಪವಾಯಿತು, ಕರ್ತನ ದಿನವು, ಆ ಕಾರ್ಮುಗಿಲಿನ ದಿನವು ಸವಿಾಪ ವಾಯಿತು; ಅದೇ ಅನ್ಯಜನಾಂಗಗಳ ಕಾಲವಾಗಿ ರುವದು.
- 4 ಕತ್ತಿಯು ಐಗುಪ್ತದ ಮೇಲೆ ಬರುವದು, ಅಲ್ಲಿನ ಪ್ರಜೆಗಳು ಹತರಾಗಲು ಐಥಿಯೋಪ್ಯ ದಲ್ಲಿಯೂ ಸಂಕಟವಾಗುವದು; ಐಗುಪ್ತದ ಜನಸಮೂ ಹವು ಒಯ್ಯಲ್ಪಡುವದು ಅದರ ಅಸ್ತಿವಾರವು ಮುರಿದು ಹಾಳಾಗುವದು.
- 5 ಐಥಿಯೋಪ್ಯ, ಲಿಬಿಯ ಮತ್ತು ಲಿಡಿಯ ಎಲ್ಲಾ ಮಿಶ್ರಜನರೂ ಕೂಬ್ಯರೂ ಮಿತ್ರರಾಜ್ಯ ದವರೂ ಅವರ ಸಂಗಡ ಕತ್ತಿಯಿಂದ ಹತರಾಗುವರು.
- 6 ಕರ್ತನು ಹೀಗೆ ಹೇಳುತ್ತಾನೆ--ಐಗುಪ್ತಕ್ಕೆ ಆಧಾರ ವಾದವರು ಬೀಳುವರು. ಅದರ ಶಕ್ತಿಯ ಮದವು ಇಳಿದು ಹೋಗುವದು. ಅಲ್ಲಿನ ಜನರು ಮಿಗ್ದೋಲಿ ನಿಂದ ಸೆವೇನೆಯ ಗೋಪುರ ಮೊದಲುಗೊಂಡು ಅವರಲ್ಲಿ ಕತ್ತಿಯಿಂದ ಹತರಾಗುವರು ಎಂದು ದೇವ ರಾದ ಕರ್ತನು ಹೇಳುತ್ತಾನೆ.
- 7 ಆಗ ಅವರು ಹಾಳಾಗಿರುವ ದೇಶಗಳೊಳಗೆ ಹಾಳಾಗುವರು. ಅದರ ಪಟ್ಟಣ ಗಳು ಹಾಳಾದ ಪಟ್ಟಗಳ ಮಧ್ಯದಲ್ಲಿ ಇರುವವು.
- 8 ನಾನು ಐಗುಪ್ತದಲ್ಲಿ ಬೆಂಕಿಯಿಟ್ಟಾಗ ಅದಕ್ಕೆ ಸಹಾಯ ಮಾಡುವವರೆಲ್ಲರೂ ನಾಶವಾದ ಮೇಲೆ ಅವರಿಗೆ ನಾನೇ ಕರ್ತನೆಂದು ತಿಳಿಯುವದು.
- 9 ಆ ದಿನದಲ್ಲಿ ದೂತರು ನನ್ನ ಸನ್ನಿಧಾನದಿಂದ ಹೊರಟು ಹಡಗುಗಳಲ್ಲಿ ಪ್ರಯಾಣ ಮಾಡಿ ನಿಶ್ಚಿಂತರಾದ ಐಥಿಯೋಪ್ಯರನ್ನು ಹೆದರಿಸುವರು; ಐಗುಪ್ತದ ದಿನದಲ್ಲಿ ಆದಹಾಗೆ ಅವರ ಮೇಲೆ ದೊಡ್ಡಬಾಧೆ ಉಂಟಾಗುವದು; ಇಗೋ, ಅದು ಬಂತು.
- 10 ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಐಗುಪ್ತದ ಜನಸಮೂಹವನ್ನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಯಿಂದ ಕೊನೆಗಾಣಿಸುವೆನು.
- 11 ಆ ದೇಶವನ್ನು ನಾಶಪಡಿಸುವದಕ್ಕೆ ಅವನನ್ನು ಅತಿಭಯಂಕರ ಜನಾಂಗದವರಾದ ಅವನೊಡನೆ ಬರ ಮಾಡುವೆನು. ಅವರು ಐಗುಪ್ತಕ್ಕೆ ವಿರೋಧವಾಗಿ ಕತ್ತಿ ಹಿರಿದು ದೇಶವನ್ನು ಹತವಾದವುಗಳಿಂದ ತುಂಬಿ ಸುವರು.
- 12 ಇದಲ್ಲದೆ ನಾನು ನದಿಗಳನ್ನು ಒಣಗಿಸಿ ದೇಶವನ್ನು ದುಷ್ಟರ ಕೈಗೆ ಮಾರಿಬಿಡುವೆನು; ದೇಶವನ್ನು ಅದರ ಪರಿಪೂರ್ಣತೆಯನ್ನೂ ಅವರ ಅನ್ಯರ ಕೈಯಿಂದ ಹಾಳುಮಾಡುವೆನು. ಕರ್ತನಾದ ನಾನೇ ಇದನ್ನು ಮಾತನಾಡಿದ್ದೇನೆ.
- 13 ದೇವರಾದ ಕರ್ತನು ಹೀಗೆ ಹೇಳುತ್ತಾನೆ. ನಾನು ವಿಗ್ರಹಗಳನ್ನು ಹಾಳು ಮಾಡಿ ಬೊಂಬೆಗಳನ್ನು ನೋಫಿನಲ್ಲಿ ತೀರಿಸಿಬಿಡುವೆನು; ಐಗುಪ್ತದೇಶದ ಪ್ರಭುವು ಇನ್ನು ಇರುವದಿಲ್ಲ, ನಾನು ಐಗುಪ್ತ ದೇಶದಲ್ಲಿ ಭಯವನ್ನು ಉಂಟುಮಾಡುತ್ತೇನೆ.
- 14 ನಾನು ಪತ್ರೋಸನ್ನು ಹಾಳು ಮಾಡುವೆನು; ಚೋವನಿನಲ್ಲಿ ಬೆಂಕಿಯಿಡುವೆನು, ನೋಪುರದಲ್ಲಿ ನ್ಯಾಯಗಳನ್ನು ತೀರಿಸುವೆನು.
- 15 ಐಗುಪ್ತಕ್ಕೆ ರಕ್ಷಣೆಯ ಕೋಟೆಯಾದ ಸೀನಿನ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿ ನೋಪುರದ ಜನಸಮೂಹಗಳನ್ನೆಲ್ಲಾ ಕತ್ತರಿಸಿ ಬಿಡು ವೆನು.
- 16 ನಾನು ಐಗುಪ್ತಕ್ಕೆ ಕಿಚ್ಚನ್ನು ಹೆಚ್ಚಿಸಲು ಸೀನ್ ಪ್ರಾಣಸಂಕಟಪಡುವದು, ನೋಪುರವು ಭಾಗಭಾಗ ವಾಗಿ ಸೀಳಲ್ಪಡುವದು, ನೋಫಿನ ಮೇಲೆ ಪ್ರತಿ ದಿನವೂ ಇಕ್ಕಟ್ಟು ಇರುವದು.
- 17 ಆವೇನಿನ ಮತ್ತು ಪೀಬೆಸೆತಿನ ಯೌವನಸ್ಥರು ಕತ್ತಿಯಿಂದ ಸಾಯುವರು; ಈ ಪಟ್ಟಣಗಳು ಸೆರೆಯಾಗಿ ಹೋಗುವವು,
- 18 ತಹಪನೇಸಿನಲ್ಲಿಯೂ ನಾನು ಐಗುಪ್ತದ ನೊಗ ಗಳನ್ನು ಮುರಿಯುವಾಗ ಹಗಲು ಕತ್ತಲಾಗುವದು. ಅದರ ಶಕ್ತಿಯ ಮದವು ಅಡಗಿ ಹೋಗುವದು, ಅದನ್ನು ಮೇಘವು ಮುಚ್ಚುವದು. ಅದರ ಕುಮಾರಿ ಯರು ಸೆರೆಗೆ ಹೋಗುವರು.
- 19 ಹೀಗೆ ನಾನು ಐಗುಪ್ತ ದಲ್ಲಿ ನ್ಯಾಯಗಳನ್ನು ತೀರಿಸುವೆನು, ಆಗ ನಾನೇ ಕರ್ತನೆಂದು ಅವರಿಗೆ ತಿಳಿಯುವದು.
- 20 ಇದಲ್ಲದೆ ಹನ್ನೊಂದನೇ ವರುಷದಲ್ಲಿ ಮೊದಲ ನೆಯ ತಿಂಗಳಿನ, ಏಳನೆಯ ದಿನದಲ್ಲಿ ಏನಾಯಿತಂದರೆ, ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ --
- 21 ಮನುಷ್ಯ ಪುತ್ರನೇ, ನಾನು ಐಗುಪ್ತದ ಅರಸ ನಾದ ಫರೋಹನ ತೋಳನ್ನು ಮುರಿದು ಹಾಕಿದ್ದೇನೆ; ಇಗೋ, ಅದು ಕಟ್ಟಲ್ಪಡುವ ಹಾಗೆ ವಾಸಿಯಾಗುವದೇ ಇಲ್ಲ, ಅದು ಕತ್ತಿಯನ್ನು ಹಿಡಿಯುವ ಹಾಗೆಯೇ ಅದಕ್ಕೆ ಬಲಬರುವ ಹಾಗೆ ಪಟ್ಟಿ ಬಿಗಿಸಲ್ಪಡುವದಿಲ್ಲ.
- 22 ಆದ ದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಇಗೋ, ನಾನು ಐಗುಪ್ತದೇಶದ ಅರಸನಾದ ಫರೋಹನಿಗೆ ವಿರುದ್ಧವಾಗಿದ್ದೇನೆ. ಬಲವುಳ್ಳದ್ದೂ ಮುರಿದದ್ದೂ ಆಗಿರುವ ಅವನ ತೋಳುಗಳನ್ನು ಮುರಿ ಯುತ್ತೇನೆ; ಅವನ ಕೈಯಿಂದ ಕತ್ತಿಯನ್ನು ಬೀಳಿಸುತ್ತೇನೆ.
- 23 ಐಗುಪ್ತರನ್ನು ಜನಾಂಗಗಳಲ್ಲಿ ಚದರಿಸಿ ದೇಶಗಳ ಮೇಲೆ ಹರಡುವೆನು.
- 24 ಬಾಬೆಲಿನ ಅರಸನ ತೋಳು ಗಳನ್ನು ನಾನು ಬಲಪಡಿಸುವೆನು; ಅವನ ಕೈಯಲ್ಲಿ ನನ್ನ ಕತ್ತಿಯನ್ನಿಡುವೆನು; ಫರೋಹನ ತೋಳನ್ನು ಮುರಿಯುವೆನು, ಅವನು ಗಾಯದಿಂದ ಸಾಯುವ ಹಾಗೆ ಅವನ ಮುಂದೆ ನರಳಾಡುವನು.
- 25 ನಾನು ಬಾಬೆಲಿನ ಅರಸನ ತೋಳುಗಳಿಗೆ ಬಲ ಕೊಡುವೆನು, ಫರೋಹನ ತೋಳುಗಳು ಬಿದ್ದು ಹೋಗುವವು; ಯಾವಾಗ ನಾನು ನನ್ನ ಕತ್ತಿಯನ್ನು ಬಾಬೆಲಿನ ಅರಸನ ಕೈಗೆ ಕೊಡುವೆನೋ ಅದನ್ನು ಐಗುಪ್ತದೇಶದಿಂದ ಹೊರಗೆ ಚಾಚುವೆನೋ ಆಗ ನಾನೇ ಕರ್ತನೆಂದು ಅವರಿಗೆ ಗೊತ್ತಾಗುವದು.
- 26 ನಾನು ಐಗುಪ್ತರನ್ನು ಜನಾಂಗಗಳೊಳಗೆ ಚದರಿಸಿ ದೇಶಗಳಲ್ಲಿ ಹರಡಿಸು ತ್ತೇನೆ; ಆಗ ನಾನೇ ಕರ್ತನೆಂದು ಅವರಿಗೆ ತಿಳಿಯುವದು.
Ezekiel 30
- Details
- Parent Category: Old Testament
- Category: Ezekiel
ಯೆಹೆಜ್ಕೇಲನು ಅಧ್ಯಾಯ 30