- 1 ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--
- 2 ಮನುಷ್ಯಪುತ್ರನೇ, ನಿನ್ನ ಜನರ ಮಕ್ಕಳೊಂದಿಗೆ ಮಾತನಾಡು ಮತ್ತು ಅವ ರಿಗೆ--ನಾನು ಒಂದು ದೇಶದ ಮೇಲೆ ಯಾವಾಗ ಕತ್ತಿಯನ್ನು ತರುವೆನೋ ಆಗ ಆ ದೇಶದ ಜನರು ತಮ್ಮ ಪ್ರಾಂತ್ಯದ ಒಬ್ಬ ಮನುಷ್ಯನನ್ನು ಆರಿಸಿ ತಮಗೆ ಕಾವಲುಗಾರನನ್ನಾಗಿ ಇಟ್ಟರೆ,
- 3 ಅವನ ಕತ್ತಿಯು ದೇಶದ ಮೇಲೆ ಬರುವದನ್ನು ನೋಡಿ, ಕಹಳೆಯನ್ನೂದಿ ಜನರನ್ನು ಎಚ್ಚರಿಸಿದಾಗ,
- 4 ಯಾವನು ಕಹಳೆಯ ಧ್ವನಿಯನ್ನು ಕೇಳಿ ಎಚ್ಚರವಾಗುವದಿಲ್ಲವೋ? ಆಗ ಕತ್ತಿಯು ಬಂದು ಅವನನ್ನು ತೆಗೆದುಕೊಂಡರೆ ಅವನ ರಕ್ತವು ಅವನ ತಲೆಯ ಮೇಲೆಯೇ ಇರುವದು.
- 5 ಅವನು ಕಹಳೆಯ ಧ್ವನಿಯನ್ನು ಕೇಳಿ ಎಚ್ಚರಗೊಳ್ಳಲಿಲ್ಲ; ಅವನ ರಕ್ತವು ಅವನ ಮೇಲೆ ಇರುವದು. ಆದರೆ ಎಚ್ಚರಿಕೆಯಾಗುವವನು ತನ್ನ ಪ್ರಾಣವನ್ನು ಉಳಿಸಿಕೊ ಳ್ಳುವನು.
- 6 ಆದರೆ ಕಾವಲುಗಾರನು ಕತ್ತಿಯನ್ನು ನೋಡಿ, ಒಂದು ವೇಳೆ ಕಹಳೆಯನ್ನು ಊದದೆ ಜನರನ್ನೂ ಎಚ್ಚರಿಸದಿದ್ದರೆ, ಆಗ ಕತ್ತಿಯು ಬಂದು ಅವರೊಳಗಿಂದ ಯಾರೊಬ್ಬನನ್ನಾದರೂ ತೆಗೆದುಕೊಂಡರೆ ಅವನು ತನ್ನ ಅಕ್ರಮದಲ್ಲಿ ತೆಗೆಯಲ್ಪಡುತ್ತಾನೆ. ಆದರೆ ನಾನು ಅವನ ರಕ್ತವನ್ನು ಕಾವಲುಗಾರನ ಕೈಯಿಂದ ವಿಚಾರಿಸುವೆನು.
- 7 ಓ ಮನುಷ್ಯಪುತ್ರನೇ, ನಿನ್ನನ್ನು ನಾನು ಇಸ್ರಾಯೇಲಿನ ಮನೆತನದವರಿಗೆ ಕಾವಲುಗಾರನನ್ನಾಗಿ ಇಟ್ಟಿದ್ದೇನೆ; ಆದದರಿಂದ ನೀನು ನನ್ನ ಬಾಯಿಯ ವಾಕ್ಯವನ್ನು ಕೇಳು, ನನ್ನಿಂದ ಅವರನ್ನು ಎಚ್ಚರಿಸು.
- 8 ನಾನು ದುಷ್ಟನಿಗೆ--ಓ ದುಷ್ಟ ಮನುಷ್ಯನೇ, ನೀನು ನಿಶ್ಚಯವಾಗಿ ಸಾಯುವಿ ಎಂದು ಹೇಳುವಾಗ ಒಂದು ವೇಳೆ ನೀನು ಅವನೊಂದಿಗೆ ಮಾತನಾಡದೆ ದುಷ್ಟನನ್ನು ಅವನ ಮಾರ್ಗದಿಂದ ಎಚ್ಚರಿಸದಿದ್ದರೆ ಆ ದುಷ್ಟ ಮನುಷ್ಯನು ಅವನ ಅಕ್ರಮಗಳಲ್ಲಿಯೇ ಸಾಯುವನು; ಅವನ ರಕ್ತವನ್ನು ನಾನು ನಿನ್ನ ಕೈಯಿಂದ ವಿಚಾರಿಸುವೆನು.
- 9 ಆದಾಗ್ಯೂ ನೀನು ಒಂದು ವೇಳೆ ದುಷ್ಟನನ್ನು ಅವನ ದುಮಾರ್ಗಗಳಿಂದ ತಿರುಗಲು ಎಚ್ಚರಿಸಿದರೂ ಅವನು ತನ್ನ ದುಷ್ಟಮಾರ್ಗದಿಂದ ತಿರುಗದಿದ್ದರೆ ಅವನ ಅಕ್ರಮಗಳಲ್ಲಿಯೇ ಸಾಯುವನು; ಆದರೆ ನೀನು ನಿನ್ನ ಪ್ರಾಣವನ್ನು ತಪ್ಪಿಸಿಕೊಳ್ಳುವಿ.
- 10 ಓ ಮನುಷ್ಯಪುತ್ರನೇ, ನೀನು ಇಸ್ರಾಯೇಲಿನ ಮನೆತನದವರೊಂದಿಗೆ ಮಾತನಾಡಿ ಹೀಗೆ ಹೇಳು --ನಮ್ಮ ಅಪರಾಧಗಳೂ ಪಾಪಗಳೂ ನಮ್ಮ ಮೇಲಿದ್ದು ನಾವು ಅವುಗಳಲ್ಲಿ ಕ್ಷೀಣಿಸುತ್ತಾ ಹೋದರೆ ಹೇಗೆ ಬದುಕುವೆವು; ಎಂದು ಹೇಳುವಿರಲ್ಲಾ?
- 11 ಅವರಿಗೆ ಹೀಗೆ ಹೇಳು ಎಂದು ದೇವರಾದ ಕರ್ತನು ಹೇಳುತ್ತಾನೆ --ನನ್ನ ಜೀವದಾಣೆ, ನನಗೆ ದುಷ್ಟನ ಸಾವಿನಿಂದ ಸಂತೋಷ ಸಿಗುವದಿಲ್ಲ; ಆದರೆ ಆ ದುಷ್ಟನು ದುರ್ಮಾ ರ್ಗದಿಂದ ತಿರುಗಿಕೊಂಡು ಜೀವಿಸುವದಾದರೆ ಅದರಲ್ಲಿಯೇ ನನಗೆ ಸಂತೋಷಸಿಗುವದು; ಇಸ್ರಾ ಯೇಲಿನ ಮನೆತನದವರೇ, ನೀವು ನಿಮ್ಮ ನಿಮ್ಮ ದುಷ್ಟಮಾರ್ಗಗಳನ್ನು ಬಿಟ್ಟು ತಿರುಗಿರಿ, ನೀವು ತಿರುಗಿ ಕೊಳ್ಳಿರಿ. ನೀವು ಸಾಯುವದು ಯಾಕೆ?
- 12 ಮನುಷ್ಯ ಪುತ್ರನೇ. ನೀನು ನಿನ್ನ ಜನರ ಮಕ್ಕಳಿಗೆ ಹೇಳು--ನೀತಿವಂತನ ನೀತಿಯು ಅವನ ಅಪರಾಧದ ದಿನದಲ್ಲಿ ಅವನನ್ನು ತಪ್ಪಿಸುವದಿಲ್ಲ; ಹಾಗೆಯೇ ದುಷ್ಟನ ದುಷ್ಟತ್ವವು ಅವನು ತನ್ನ ದುಷ್ಟತ್ವವನ್ನು ಬಿಟ್ಟು ತಿರುಗುವ ದಿನದಲ್ಲಿ ಅದರಿಂದ ಬೀಳುವದಿಲ್ಲ; ನೀತಿವಂತನು ಪಾಪಮಾಡುವ ದಿನದಲ್ಲಿ ನೀತಿಯಿಂದ ಬದುಕ ಲಾರನು.
- 13 ನಾನು ನೀತಿವಂತನಿಗೆ--ನೀನು ನಿಶ್ಚಯವಾಗಿ ಬದುಕುವಿ ಎಂದು ಹೇಳುವಾಗ--ಅವನು ಒಂದು ವೇಳೆ ಅವನ ಸ್ವಂತ ನೀತಿಯನ್ನು ನಂಬಿ ಅನ್ಯಾಯವನ್ನು ಮಾಡಿದರೆ ಅವನ ಎಲ್ಲಾ ನೀತಿಯು ಜ್ಞಾಪಕಮಾಡಿ ಕೊಳ್ಳಲ್ಪಡುವದಿಲ್ಲ; ಆದರೆ ಅವನು ಮಾಡಿದ ಅವನ ಅಕ್ರಮಗಳಿಗಾಗಿಯೇ ಅವನು ಸಾಯುತ್ತಾನೆ.
- 14 ನಾನು ದುಷ್ಟನಿಗೆ--ನೀನು ನಿಶ್ಚಯ ವಾಗಿ ಸಾಯುವಿ ಎಂದು ಹೇಳುವಾಗ ಅವನು ಪಾಪ ದಿಂದ ತಿರುಗಿಕೊಂಡರೆ ಮತ್ತು ನ್ಯಾಯವನ್ನೂ ನೀತಿ ಯನ್ನೂ ಮಾಡಿದರೆ
- 15 ದುಷ್ಟನು ತನ್ನ ಒತ್ತೆಯನ್ನು ಹಿಂದಕ್ಕೆ ಕೊಟ್ಟರೆ ಮತ್ತು ದೋಚಿಕೊಂಡದ್ದನ್ನು ತಿರುಗಿ ಕೊಟ್ಟು ಅನ್ಯಾಯವನ್ನು ಮಾಡದೆ ಜೀವದ ನಿಯಮಗಳಲ್ಲಿ ನಡೆದರೆ ಅವನು ಸಾಯದೆ ಖಂಡಿತ ವಾಗಿ ಬದುಕುವನು.
- 16 ಅವನು ಮಾಡಿರುವ ಪಾಪ ಗಳಲ್ಲಿ ಒಂದಾದರೂ ಅವನಿಗೆ ವಿರೋಧವಾಗಿ ಜ್ಞಾಪ ಕಕ್ಕೆ ಬರುವದಿಲ್ಲ; ಅವನು ನ್ಯಾಯವನ್ನೂ ನೀತಿ ಯನ್ನೂ ಮಾಡಿದ್ದರಿಂದ ನಿಶ್ಚಯವಾಗಿ ಬದುಕುವನು.
- 17 ಆದರೂ ನಿನ್ನ ಜನರ ಮಕ್ಕಳು--ಕರ್ತನ ಮಾರ್ಗವು ಸಮವಿಲ್ಲ ಅನ್ನುತ್ತಾರೆ. ಅವರಿಗಾದರೋ ಅವರ ಮಾರ್ಗವೇ ಸಮವಾಗಿಲ್ಲ.
- 18 ಯಾವಾಗ ನೀತಿ ವಂತನು ತನ್ನ ನೀತಿಯಿಂದ ತಿರುಗಿಕೊಳ್ಳುವನೋ ಮತ್ತು ಅಕ್ರಮವನ್ನು ಮಾಡುವನೋ ಅವನು ಖಂಡಿತ ವಾಗಿಯೂ ಅದರಲ್ಲಿಯೇ ಸಾಯುವನು.
- 19 ಆದರೆ ದುಷ್ಟನು ದುಷ್ಟತ್ವವನ್ನು ಬಿಟ್ಟು ತಿರುಗಿಕೊಂಡು ನ್ಯಾಯ ವನ್ನೂ ನೀತಿಯನ್ನೂ ನಡೆಸಿದರೆ ಅವನು ಅದರಲ್ಲಿಯೇ ಬದುಕುವನು.
- 20 ಆದರೂ ನೀವು ಕರ್ತನ ಮಾರ್ಗ ಸರಿಯಲ್ಲ ಅನ್ನುತ್ತೀರಿ; ಓ ಇಸ್ರಾಯೇಲಿನ ಮನೆತನ ದವರೇ, ನಿಮ್ಮಲ್ಲಿ ಪ್ರತಿಯೊಬ್ಬರಿಗೆ ನಿಮ್ಮ ಮಾರ್ಗಗಳ ಪ್ರಕಾರ ನಾನು ನ್ಯಾಯ ತೀರಿಸುವೆನು.
- 21 ನಮ್ಮ ಸೆರೆಯ ಹನ್ನೆರಡನೇ ವರುಷದ ಹತ್ತನೇ ತಿಂಗಳಿನ ಐದನೇ ದಿನದಲ್ಲಿ ಆದದ್ದೇನಂದರೆ, ಯೆರೂಸ ಲೇಮಿನಿಂದ ತಪ್ಪಿಸಿಕೊಂಡವನೊಬ್ಬನು ನನ್ನ ಬಳಿಗೆ ಬಂದು ಪಟ್ಟಣವು ಹೊಡೆಯಲ್ಪಟ್ಟಿದೆ ಎಂದು ಹೇಳಿದನು.
- 22 ಆಗ ಅವನು ತಪ್ಪಿಸಿಕೊಂಡು ಬರುವ ದಕ್ಕಿಂತ ಮೊದಲೇ, ಸಾಯಂಕಾಲದಲ್ಲಿ ಕರ್ತನ ಕೈ ನನ್ನ ಮೇಲೆ ಇತ್ತು. ಅವನು ಮುಂಜಾನೆ ನನ್ನ ಬಳಿಗೆ ಬರುವ ತನಕ ನನ್ನ ಬಾಯಿ ತೆರೆಯಲ್ಪಟ್ಟಿದೆ; ನನ ಬಾಯಿ ತೆರೆದಿತ್ತು. ನಾನು ಮೂಕನಾಗಿರಲಿಲ್ಲ.
- 23 ಆಮೇಲೆ, ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇ ನಂದರೆ--
- 24 ಮನುಷ್ಯಪುತ್ರನೇ, ಇಸ್ರಾಯೇಲಿನ ದೇಶದ ಹಾಳು ಪ್ರದೇಶಗಳಲ್ಲಿ ವಾಸಿಸುವರು-- ಅಬ್ರಹಾಮನೇ ಒಬ್ಬನಾಗಿದ್ದು ದೇಶವನ್ನು ಸ್ವತಂತ್ರಿಸಿ ಕೊಂಡನು, ಆದರೆ ನಾವು ಬಹಳ ಜನರಾಗಿದ್ದು ದೇಶವು ನಮಗೆ ಸ್ವಾಸ್ತ್ಯವಾಗಿ ಕೊಡಲ್ಪಟ್ಟಿದೆ ಎಂದು ಹೇಳುತ್ತಾರೆ.
- 25 ಆದದರಿಂದ ನೀನು ಅವರಿಗೆ ಹೇಳಬೇಕಾದದ್ದೇ ನಂದರೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀವು ರಕ್ತದಿಂದ ಕೂಡಿದ ಮಾಂಸವನ್ನು ತಿನ್ನುವರ ಲ್ಲವೇ? ನಿಮ್ಮ ಕಣ್ಣುಗಳು ವಿಗ್ರಹಗಳ ಕಡೆಗೆ ಎತ್ತಿ ರಕ್ತವನ್ನು ಚೆಲ್ಲುವ ನೀವು ದೇಶವನ್ನು ಸ್ವಾಧೀನಪಡಿಸಿ ಕೊಳ್ಳುವಿರೋ?
- 26 ನೀವು ನಿಮ್ಮ ಕತ್ತಿಯ ಮೇಲೆ ನಿಂತು ಅಸಹ್ಯವಾದ ಕೆಲಸಗಳನ್ನು ಮಾಡುವಿರಿ; ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ನೆರೆಯವನ ಹೆಂಡತಿಯನ್ನು ಕೆಡಿಸುತ್ತಾನೆ; ಹೀಗಾದರೆ ನೀವು ದೇಶವನ್ನು ಸ್ವತಂತ್ರಿಸಿ ಕೊಳ್ಳಬಹುದೋ?
- 27 ನೀನು ಅವರಿಗೆ ಹೇಳಬೇಕಾದ ದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ನನ್ನ ಜೀವದಾಣೆ, ನಿಶ್ಚಯವಾಗಿ ಹಾಳು ಸ್ಥಳಗಳಲ್ಲಿರುವವರು ಕತ್ತಿಯಿಂದ ಬೀಳುವರು; ಬಯಲಿ ನಲ್ಲಿರುವವರಿಗೆ ಮೃಗಗಳನ್ನು ಆಹಾರವನ್ನಾಗಿ ಕೊಡು ತ್ತೇನೆ; ಕೋಟೆಗಳಲ್ಲಿಯೂ ಗುಹೆಗಳಲ್ಲಿಯೂ ಇರುವ ವರು ವ್ಯಾಧಿಗಳಿಂದ ಸಾಯುವರು.
- 28 ನಾನು ಈ ದೇಶವನ್ನು ಹಾಳುಪಾಳು ಮಾಡುವೆನು. ಅದರ ಬಲದ ಮಹತ್ತು ತೀರಿಹೋಗುವದು. ಇಸ್ರಾಯೇಲಿನ ಪರ್ವತಗಳು ಹಾದುಹೋಗುವವರಿಲ್ಲದೆ ಹಾಳಾಗು ವವು.
- 29 ಆಮೇಲೆ ಅವರು ಮಾಡಿದ ಎಲ್ಲಾ ಅಸಹ್ಯಗ ಳಿಂದಾಗಿ ನಾನು ಆ ದೇಶವನ್ನು ಸಂಪೂರ್ಣವಾಗಿ ನಾಶಗೊಳಿಸಿದಾಗ ನಾನೇ ಕರ್ತನೆಂದು ಅವರು ತಿಳಿಯುವರು.
- 30 ಇದಲ್ಲದೆ ಮನುಷ್ಯಪುತ್ರನೇ, ನಿನ್ನ ಜನರ ಮಕ್ಕಳು ಇನ್ನು ಮನೆಗಳ ಬಾಗಲುಗಳಿಗೂ ಗೋಡೆಗಳಿಗೂ ವಿರುದ್ಧವಾಗಿ ಮಾತನಾಡುತ್ತಾರೆ, ನಿನ್ನ ವಿಷಯವಾಗಿ ಮಾತನಾಡಿಕೊಂಡು ಒಬ್ಬರಿಗೊಬ್ಬರು ತಮ್ಮ ತಮ್ಮ ಸಹೋದರರೆಲ್ಲರೂ--ಕರ್ತನಿಂದ ಹೊರಡುವ ಮಾತು ಏನೆಂದು ಕೇಳಿ ಪ್ರಾರ್ಥಿಸೋಣ ಬನ್ನಿ ಎಂದು ಹೇಳಿಕೊಳ್ಳುತ್ತಾರೆ.
- 31 ಬೇರೆ ಜನರು ಬರುವ ಹಾಗೆ ಅವರು ನಿನ್ನ ಬಳಿಗೆ ಬಂದು ಜನರು ಕುಳಿತುಕೊಳ್ಳುವ ಹಾಗೆ ನಿನ್ನ ಮುಂದೆ ಕುಳಿತುಕೊಳ್ಳುವರು; ಅವರು ನಿನ್ನ ವಾಕ್ಯಗಳನ್ನು ಕೇಳುವರು, ಆದರೆ ಅವರು ಅವುಗಳನ್ನು ಮಾಡುವದಿಲ್ಲ. ಅವರು ತಮ್ಮ ಬಾಯಿಂದ ಹೆಚ್ಚಾದ ಪ್ರೀತಿಯನ್ನು ತೋರಿಸುವರು; ಆದರೆ ಅವರ ಹೃದಯವು ಲೋಭತ್ವದ ಕಡೆಗೆ ಹೋಗುವದು.
- 32 ಇಗೋ, ನೀನು ಅವರಿಗೆ ಇಂಪಾದ ಶಬ್ದವುಳ್ಳಂತ, ತಂತಿವಾದ್ಯಗಳನ್ನು ಚೆನ್ನಾಗಿ ಬಾರಿಸುವಂತ ಒಬ್ಬನ ಮನೋಹರವಾದ ರಾಗದ ಹಾಗಿರುವಿ; ಅವರು ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಅವುಗಳನ್ನು ಮಾಡುವದಿಲ್ಲ.
- 33 ಯಾವಾಗ ಇದು ಬರುತ್ತದೋ ಆಗ ಅವರಿಗೆ ಪ್ರವಾದಿಯು ತಮ್ಮ ಸಂಗಡ ಇದ್ದಾನೆಂದು ತಿಳಿಯುವದು.
Ezekiel 33
- Details
- Parent Category: Old Testament
- Category: Ezekiel
ಯೆಹೆಜ್ಕೇಲನು ಅಧ್ಯಾಯ 33