- 1 ಅಲ್ಲದೆ ಮನುಷ್ಯಪುತ್ರನೇ, ಇಸ್ರಾಯೇಲ್ ಪರ್ವತಗಳ ಕಡೆಗೆ ಪ್ರವಾದಿಸು ಮತ್ತು ಹೇಳು--ಇಸ್ರಾಯೇಲ್ ಪರ್ವತಗಳೇ, ನೀವು ಕರ್ತನ ವಾಕ್ಯವನ್ನು ಕೇಳಿರಿ;
- 2 ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಯಾಕಂದರೆ ನಿನ್ನ ಶತ್ರುವು ನಿನಗೆ ವಿರೋಧವಾಗಿ ಆಹಾ, ಪೂರ್ವದ ಉತ್ತಮ ಸ್ಥಳಗಳು ನಮಗೆ ಸ್ವಾಸ್ತ್ಯವಾದವು ಎಂದು ಹೇಳುವರು;
- 3 ಆದದ ರಿಂದ ಪ್ರವಾದಿಸು ಮತ್ತು ಹೇಳು, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಅವರು ನಿನ್ನನ್ನು ಹಾಳುಮಾಡಿ; ಎಲ್ಲಾ ಕಡೆಗಳಿಂದಲೂ ನುಂಗಿಬಿಟ್ಟರು. ಅದು ನೀವು ಅನ್ಯಜನಾಂಗಗಳ ಉಳಿಯುವಿಕೆಗೆ ಸ್ವಾಸ್ತ್ಯವಾಗ ಬೇಕೆಂದು ನೀವು ಮಾತನಾಡುವವರ ತುಟಿಗಳಲ್ಲಿಯೂ ಜನರ ನಿಂದೆಯಲ್ಲಿಯೂ ಮೇಲೆತ್ತಲ್ಪಟ್ಟಿದ್ದೀರಿ;
- 4 ಆದ ದರಿಂದ ಇಸ್ರಾಯೇಲ್ ಪರ್ವತಗಳೇ, ನೀವು ದೇವ ರಾದ ಕರ್ತನ ವಾಕ್ಯವನ್ನು ಕೇಳಿರಿ--ಹೀಗೆ ಪರ್ವತ ಗಳಿಗೂ ಬೆಟ್ಟಗಳಿಗೂ ನದಿಗಳಿಗೂ ಕಣಿವೆಗಳಿಗೂ ಹಾಳಾದ ಒಣಭೂಮಿಗೂ ಸುತ್ತಣ ಅನ್ಯಜನಾಂಗ ಗಳಲ್ಲಿ ಉಳಿದವರು ಕೊಳ್ಳೆಹೊಡೆದು ತೊರೆದು ಬಿಡುವ ಹಾಳು ಪಟ್ಟಣಗಳಿಗೂ ದೇವರಾದ ಕರ್ತನು ಹೇಳು ತ್ತಾನೆ.
- 5 ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಿಶ್ಚಯವಾಗಿ ನನ್ನ ರೋಷದ ಬೆಂಕಿ ಯಿಂದ ಅನ್ಯಜನಾಂಗಗಳಲ್ಲಿ ಉಳಿದವರಿಗೂ ಎಲ್ಲಾ ಎದೋಮಿಗೆ ವಿರುದ್ಧವಾಗಿ ನಾನು ಮಾತನಾಡಿದ್ದೇನೆ; ಅವರ ಸಂಪೂರ್ಣ ಹೃದಯದ ಸಂತೋಷದಿಂದಲೂ ತಮ್ಮ ಹಗೆಯ ಮನೋಭಾವದಿಂದಲೂ ನನ್ನ ದೇಶ ವನ್ನು ಕೊಳ್ಳೆಯಾಗಿ ಹೊರಗೆ ಹಾಕುವ ಹಾಗೆ ತಮಗೆ ಸ್ವಾಸ್ತ್ಯವಾಗಿ ಕೊಟ್ಟಿದ್ದಾರೆ.
- 6 ಆದದರಿಂದ ಇಸ್ರಾಯೇಲ್ ದೇಶಕ್ಕೆ ಸಂಬಂಧಪಟ್ಟ ಹಾಗೆ ಪ್ರವಾದಿಸು; ಪರ್ವತ ಗಳಿಗೂ ಬೆಟ್ಟಗಳಿಗೂ ಹಳ್ಳಕೊಳ್ಳಗಳಿಗೂ ಹೇಳಬೇಕಾ ದದ್ದೇನಂದರೆ, ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಇಗೋ, ಅನ್ಯಜನಾಂಗಗಳ ಅವಮಾನವನ್ನು ನೀನು ಹೊತ್ತದ್ದರಿಂದ ನಾನು ರೋಷದಿಂದಲೂ ರೌದ್ರ ದಿಂದಲೂ ಮಾತನಾಡಿದ್ದೇನೆ.
- 7 ಆದದರಿಂದ ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ನನ್ನ ಕೈಯನ್ನು ಮೇಲೆತ್ತಿದ್ದೇನೆ, ನಿಶ್ಚಯವಾಗಿ ನಿನ್ನ ಮೇಲಿ ರುವ ಅನ್ಯಜನಾಂಗಗಳು ತಾವಾಗಿಯೇ ತಮ್ಮ ನಿಂದೆಯನ್ನು ಹೊರುವರು.
- 8 ಆದರೆ ಓ ಇಸ್ರಾಯೇಲ್ ಪರ್ವತಗಳೇ, ನೀವು ನಿಮ್ಮ ಕೊಂಬೆಗಳನ್ನು ಹೊರಡಿಸಿ ನನ್ನ ಜನರಾದ ಇಸ್ರಾಯೇಲ್ಯರಿಗೆ ಫಲಕೊಡುವಿರಿ; ಅವರ ಬರುವಿಕೆಯು ಸವಿಾಪವಾಗಿದೆ.
- 9 ಇಗೋ, ನಾನು ನಿಮ್ಮ ಪಕ್ಷದಲ್ಲಿ ಇದ್ದೇವೆ, ನಾನು ನಿಮ್ಮ ಕಡೆಗೆ ತಿರುಗಿ ಕೊಳ್ಳುತ್ತೇನೆ. ನೀವು ಉತ್ತುಬಿತ್ತುವಿರಿ.
- 10 ನಾನು ಮನುಷ್ಯರನ್ನೂ ಎಲ್ಲಾ ಇಸ್ರಾಯೇಲ್ ಮನೆತನದ ವರನ್ನೂ ಅಂದರೆ ಎಲ್ಲರನ್ನೂ ನಿನ್ನ ಮೇಲೆ ವೃದ್ಧಿ ಮಾಡುತ್ತೇನೆ, ಪಟ್ಟಣಗಳು ಜನಭರಿತವಾಗುವವು, ಹಾಳಾದ ಪ್ರದೇಶಗಳು ಕಟ್ಟಲ್ಪಡುವವು;
- 11 ನಾನು ನಿಮ್ಮಲ್ಲಿ ಮನುಷ್ಯರನ್ನೂ ಮೃಗಗಳನ್ನೂ ವೃದ್ಧಿಮಾಡು ವೆನು; ಅವು ಹೆಚ್ಚಾಗಿ ನಿಮಗೆ ಫಲವನ್ನು ತರುವವು; ನಾನು ನಿಮ್ಮನ್ನು ನಿಮ್ಮ ಹಳೆಯ ಸ್ಥಳಗಳಲ್ಲಿ ವಾಸಿಸುವಂತೆ ಮಾಡಿ ನಿಮ್ಮ ಮೊದಲಿನ ಸ್ಥಿತಿಗಿಂತ ನಿಮ್ಮನ್ನು ಉತ್ತಮ ಸ್ಥಿತಿಗೆ ತರುವೆನು; ಆಗ ನಾನೇ ಕರ್ತನೆಂದು ನೀವು ತಿಳಿಯುವಿರಿ.
- 12 ಹೌದು, ಮನುಷ್ಯರು ನಿಮ್ಮ ಮೇಲೆ ನಡೆಯುವಂತೆ ನಾನು ಮಾಡುವೆನು, ಅದು ನನ್ನ ಜನರಾದ ಇಸ್ರಾಯೇಲ್ಯರ ಮೇಲೆಯೇ; ಅವರು ನಿನ್ನನ್ನು ಸ್ವಾಧೀನಮಾಡಿಕೊಳ್ಳುವರು, ನೀನು ಅವರಿಗೆ ಸ್ವಾಸ್ಥ್ಯವಾಗುವಿ ಮತ್ತು ನೀನು ಇನ್ನು ಮೇಲೆ ಅವರನ್ನು ಮಕ್ಕಳಿಲ್ಲದ ಮನುಷ್ಯರನ್ನಾಗಿ ಮಾಡುವದಿಲ್ಲ.
- 13 ದೇವ ರಾದ ಕರ್ತನು ಹೀಗೆ ಹೇಳುತ್ತಾನೆ, ನೀನು ಮನುಷ್ಯರನ್ನು ನುಂಗುವಂಥ ದೇಶ ಮತ್ತು ನಿನ್ನ ಜನಗಳನ್ನು ಮಕ್ಕಳಿಲ್ಲ ದಂಥ ಜನಾಂಗಗಳನ್ನಾಗಿ ಮಾಡುವಂಥದ್ದು ಆಗಿರುವಿ ಎಂದು ಅವರು ನಿನಗೆ ಹೇಳುವರು;
- 14 ಆದದರಿಂದ ಇನ್ನು ಮುಂದೆ ನೀನು ಮನುಷ್ಯರನ್ನು ನುಂಗುವದಿಲ್ಲ; ಇನ್ನು ಮೇಲೆ ನಿನ್ನ ಜನಾಂಗದವರನ್ನು ಮಕ್ಕಳಿಲ್ಲದವ ರನ್ನಾಗಿ ಮಾಡುವದಿಲ್ಲ ಎಂದು ದೇವರಾದ ಕರ್ತನು ಹೇಳುತ್ತಾನೆ.
- 15 ಅಲ್ಲದೆ ಇನ್ನು ಮೇಲೆ ನೀನು ಅನ್ಯ ಜನಾಂಗಗಳ ನಿಂದೆಯನ್ನು ಕೇಳಿಸಿಕೊಳ್ಳದಂತೆ ನಾನು ಮಾಡುವೆನು; ನೀನು ಇನ್ನು ಮೇಲೆ ಜನಾಂಗದವರಿಂದ ತಿರಸ್ಕರಿಸಲ್ಪಡುವದಿಲ್ಲ; ನೀನು ನಿನ್ನ ಜನಾಂಗವನ್ನು ಇನ್ನೆಂದಿಗೂ ಬೀಳಿಸುವದಿಲ್ಲ ಎಂದು ದೇವರಾದ ಕರ್ತನು ಹೇಳುತ್ತಾನೆ.
- 16 ಇದಲ್ಲದೆ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--
- 17 ಮನುಷ್ಯಪುತ್ರನೇ, ಯಾವಾಗ ಇಸ್ರಾಯೇಲ್ಯರ ಮನೆತನದವರು ಸ್ವಂತ ದೇಶದಲ್ಲಿ ವಾಸಿಸಿದರೋ, ಆಗ ಅವರು ಅದನ್ನು ತಮ್ಮ ಸ್ವಂತ ಮಾರ್ಗಗಳಿಂದಲೂ ದುಷ್ಕಾರ್ಯಗಳಿಂದಲೂ ಅಶುದ್ಧ ಗೊಳಿಸಿದರು. ಅವರ ಆ ದುಷ್ಕಾರ್ಯಗಳು ನನ್ನ ಮುಂದೆ ಮುಟ್ಟಾಗಿರುವವಳ ಅಶುದ್ಧತ್ವದ ಹಾಗಿತ್ತು.
- 18 ಆದದರಿಂದ ಅವರು ದೇಶದಲ್ಲಿ ಚೆಲ್ಲಿದ ರಕ್ತದ ನಿಮಿತ್ತವಾಗಿಯೂ ಅವರು ಅದನ್ನು ಅಶುದ್ಧಪಡಿಸಿದ ಅವರ ವಿಗ್ರಹಗಳ ನಿಮಿತ್ತವಾಗಿಯೂ ನನ್ನ ರೋಷ ವನ್ನು ಅವರ ಮೇಲೆ ಸುರಿಸಿದೆನು.
- 19 ನಾನು ಅವರನ್ನು ಅನ್ಯಜನಾಂಗಗಳಲ್ಲಿ ಚದರಿಸಿದೆನು. ಅವರು ಆ ದೇಶ ಗಳಲ್ಲಿ ಚದರಿಹೋದರು; ಅವರ ಮಾರ್ಗಗಳ ದುಷ್ಕ್ರಿ ಯೆಗಳ ಪ್ರಕಾರವಾಗಿ ಅವರಿಗೆ ನಾನು ನ್ಯಾಯ ತೀರಿಸಿದೆನು.
- 20 ಅವರು ಆ ಅನ್ಯಜನಾಂಗಗಳೊಳಗೆ ಸೇರಿಕೊಂಡ ಮೇಲೆ--ಇವರೇ ಕರ್ತನ ಜನರು ಮತ್ತು ಇವರು ಆತನ ದೇಶದಿಂದ ಹೊರಟುಹೋದರು ಎಂದು ಅವರಿಗೆ ಹೇಳಿ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಮಾಡುವರು.
- 21 ಆದರೆ ಇಸ್ರಾಯೇಲಿನ ಮನೆತನದವರು ತಾವು ಹೋದ ಅನ್ಯಜನಾಂಗಗಳಲ್ಲಿ ಅಪವಿತ್ರಮಾಡಿದ ನನ್ನ ಪರಿಶುದ್ಧವಾದ ಹೆಸರನ್ನು ನಾನು ಕನಿಕರಿಸಿದೆನು.
- 22 ಆದದರಿಂದ ನೀನು ಇಸ್ರಾ ಯೇಲನ ಮನೆತನದವರಿಗೆ ಹೇಳು--ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು--ಓ ಇಸ್ರಾಯೇಲಿನ ಮನೆತನದವರೇ, ನಾನು ಇದನ್ನು ನಿಮಗಾಗಿ ಮಾಡು ತ್ತಿಲ್ಲ, ಆದರೆ ನೀವು ಹೋಗುವಾಗ ಅನ್ಯಜನಾಂಗಗಳ ಮಧ್ಯೆ ಅಪವಿತ್ರಪಡಿಸಿದ ನನ್ನ ಪರಿಶುದ್ಧನಾಮಕ್ಕಾಗಿ ಮಾಡುತ್ತೇನೆ.
- 23 ನೀವು ಅನ್ಯಜನಾಂಗಗಳ ಮಧ್ಯೆ ಅಪವಿತ್ರಪಡಿಸಿದ ನನ್ನ ಮಹತ್ತರ ನಾಮವನ್ನು ನಾನು ಪರಿಶುದ್ಧಮಾಡುವೆನು; ಹಾಗೆ ನಾನು ಅವರ ಕಣ್ಣುಗಳ ಮುಂದೆ ನಿಮ್ಮಲ್ಲಿ ಪರಿಶುದ್ಧನಾದ ಮೇಲೆ ಆ ಅನ್ಯ ಜನಾಂಗಗಳವರು ನಾನೇ ಕರ್ತನೆಂದು ತಿಳಿಯುವರು ಎಂದು ದೇವರಾದ ಕರ್ತನು ಹೇಳುತ್ತಾನೆ.
- 24 ನಾನು ನಿಮ್ಮನ್ನು ಅನ್ಯಜನಾಂಗಗಳ ಮಧ್ಯದಿಂದ ತೆಗೆದು ಎಲ್ಲಾ ದೇಶಗಳೊಳಗಿಂದ ಕೂಡಿಸಿ ನಿಮ್ಮ ನಿಮ್ಮ ಸ್ವಂತ ದೇಶಗಳಲ್ಲಿ ಸೇರಿಸುವೆನು.
- 25 ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ; ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು.
- 26 ನಿನಗೆ ಹೊಸ ಹೃದಯವನ್ನು ಕೊಟ್ಟು ಹೊಸ ಆತ್ಮ ವನ್ನು ನಿಮ್ಮೊಳಗೆ ಇಡುವೆನು; ನಿಮ್ಮ ದೇಹದಿಂದ ಕಲ್ಲಿನ ಹೃದಯವನ್ನು ಹೊರಗೆ ತೆಗೆದು ನಿಮಗೆ ಮಾಂಸದ ಹೃದಯವನ್ನು ಕೊಡುತ್ತೇನೆ.
- 27 ನನ್ನ ಆತ್ಮ ವನ್ನು ನಿಮ್ಮೊಳಗೆ ಇಡುವೆನು; ನೀವು ನನ್ನ ನಿಯಮ ಗಳಲ್ಲಿ ನಡೆಯುವ ಹಾಗೆ ಮಾಡುವೆನು ಮತ್ತು ನೀವು ನನ್ನ ನ್ಯಾಯವಿಧಿಗಳನ್ನು ಅನುಸರಿಸಿ ನಡೆಯುವಿರಿ.
- 28 ನಾನು ನಿಮ್ಮ ತಂದೆಗಳಿಗೆ ಕೊಟ್ಟ ದೇಶದಲ್ಲಿ ವಾಸಿ ಸುವಿರಿ; ನೀವು ನನ್ನ ಜನರಾಗಿರುವಿರಿ; ನಾನು ನಿಮ್ಮ ದೇವರಾಗಿರುವೆನು.
- 29 ಅಲ್ಲದೆ ನಾನು ನಿಮ್ಮನ್ನು ನಿಮ್ಮ ಅಶುದ್ಧತ್ವಗಳಿಂದಲೂ ಸಹ ರಕ್ಷಿಸುವೆನು; ಬೆಳೆ ಬೆಳೆ ಯಲೆಂದು ಹೇಳಿ ಅದನ್ನು ಹೆಚ್ಚಿಸುವೆನು, ಕ್ಷಾಮವನ್ನು ನಿಮ್ಮ ಮೇಲೆ ಬರಮಾಡುವದಿಲ್ಲ.
- 30 ಅನ್ಯಜನಾಂಗ ಗಳಲ್ಲಿ ನಿಮಗೆ ಬರಗಾಲದ ನಿಂದೆಯು ಇನ್ನು ಮೇಲೆ ಬಾರದ ಹಾಗೆ ನಾನು ಮರಗಳ ಫಲವನ್ನೂ ಹೊಲದ ಆದಾಯವನ್ನು ಹೆಚ್ಚಿಸುವೆನು.
- 31 ಆಮೇಲೆ ನೀವು ನಿಮ್ಮ ದುರ್ಮಾರ್ಗ ದುರಾಚಾರಗಳನ್ನು ಜ್ಞಾಪಕಕ್ಕೆ ತಂದುಕೊಂಡು ನಿಮ್ಮ ಅಪರಾಧಗಳ ಮತ್ತು ಅಸಹ್ಯ ಕಾರ್ಯಗಳ ನಿಮಿತ್ತ ನಿಮಗೆ ನೀವೇ ಹೇಸಿಕೊಳ್ಳುವಿರಿ.
- 32 ಇದು ನಿಮಗಾಗಿ ಮಾಡಲಿಲ್ಲವೆಂದು ನಿಮಗೆ ತಿಳಿದಿರಲಿ ಎಂದು ದೇವರಾದ ಕರ್ತನು ಹೇಳುತ್ತಾನೆ; ಓ ಇಸ್ರಾಯೇಲಿನ ಮನೆತನದವರೇ, ನಿಮ್ಮ ದುರ್ಮಾ ರ್ಗಗಳಿಗೆ ನಾಚಿಕೆ ಪಟ್ಟು ಲಜ್ಜೆಹೊಂದಿರಿ.
- 33 ದೇವ ರಾದ ಕರ್ತನು ಹೀಗೆ ಹೇಳುತ್ತಾನೆ; ನಾನು ನಿಮ್ಮ ಎಲ್ಲಾ ಅಕ್ರಮಗಳಿಂದ ನಿಮ್ಮನ್ನು ಶುದ್ಧಮಾಡುವ ಆ ದಿನದಲ್ಲಿ ಪಟ್ಟಣಗಳನ್ನು ನಿವಾಸಿಗಳಿಂದ ತುಂಬಿಸು ವೆನು; ಹಾಳಾಗಿರುವ ಸ್ಥಳಗಳೂ ಸಹ ಕಟ್ಟಲ್ಪಡುವವು.
- 34 ದೇಶವು ಅಲ್ಲಿ ಹಾದುಹೋಗುವ ಜನರೆಲ್ಲರ ಮುಂದೆ ಬೀಡಾಗಿ ಕಾಣದೆ ಉಳುಮೆಗೊಂಡಿರುವದು.
- 35 ಹಾಳಾಗಿದ್ದ ಈ ದೇಶವು ಏದೆನಿನ ಉದ್ಯಾನವನದ ಹಾಗಾಯಿತೆಂದು ಮತ್ತು ಹಾಳಾಗಿ ಬಿದ್ದುಹೋಗಿ ಬೀಡಾಗಿ ನಶಿಸಿ ಹೋಗಿರುವ ಪಟ್ಟಣಗಳು ನಾಡಾಗಿ ಕೋಟೆಗಳಿಂದಲೂ ನಿವಾಸಿಗಳಿಂದಲೂ ತುಂಬಿವೆ ಎಂದು ಹೇಳುವರು.
- 36 ಆಮೇಲೆ ನಿಮ್ಮ ಸುತ್ತಲೂ ಉಳಿದಿರುವ ಅನ್ಯಜನಾಂಗಗಳು ನಶಿಸಿ ಹೋಗಿರುವ ಸ್ಥಳಗಳನ್ನು ಮತ್ತು ಹಾಳಾಗಿರುವ ಸ್ಥಳದಲ್ಲಿ ಗಿಡ ನೆಟ್ಟ ವನು ಕರ್ತನಾದ ನಾನೇ ಎಂದು ತಿಳಿಯುವರು; ಕರ್ತನಾದ ನಾನೇ ಇದನ್ನು ಹೇಳಿದ್ದೇನೆ, ನಾನೇ ಇದನ್ನು ಮಾಡುತ್ತೇನೆ.
- 37 ದೇವರಾದ ಕರ್ತನು ಹೀಗೆ ಹೇಳುತ್ತಾನೆ; ಇದನ್ನು ಅವರಿಗೆ ಮಾಡಲು ನಾನಿನ್ನೂ ಇಸ್ರಾಯೇಲನ ಮನೆ ತನದವರಿಂದ ವಿಚಾರಿಸುವೆನು; ನಾನು ಅವರನ್ನು ಮನುಷ್ಯರಲ್ಲಿ ಮಂದೆಯಂತೆ ಹೆಚ್ಚಿಸುವೆನು.
- 38 ಪರಿ ಶುದ್ಧ ಮಂದೆಯ ಹಾಗೆಯೂ ಯೆರೂಸಲೇಮಿನ ಪರಿಶುದ್ಧ ಹಬ್ಬಗಳ ಮಂದೆಯ ಹಾಗೆಯೂ ಇರುವರು; ಆದಕಾರಣ ಬೀಡಾದ ಪಟ್ಟಣಗಳು ಮನುಷ್ಯರ ಮಂದೆಗಳಿಂದ ತುಂಬುವವು; ನಾನೇ ಕರ್ತನೆಂದು ಅವರಿಗೆ ತಿಳಿಯುವದು.
Ezekiel 36
- Details
- Parent Category: Old Testament
- Category: Ezekiel
ಯೆಹೆಜ್ಕೇಲನು ಅಧ್ಯಾಯ 36