- 1 ಆದರೆ ಪ್ರವಾದಿಗಳಾದ ಹಗ್ಗಾಯನೂ ಇದ್ದೋನನ ಮಗನಾದ ಜೆಕರ್ಯನೂ ಯೆಹೂದ ಮತ್ತು ಯೆರೂಸಲೇಮಿನಲ್ಲಿ ಇರುವ ಯೆಹೂದ್ಯರಿಗೆ, ಇಸ್ರಾಯೇಲ್ ದೇವರ ನಾಮದಲ್ಲಿ ಅವರಿಗೆ ಪ್ರವಾದಿಸಿದರು.
- 2 ಆಗ ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲನೂ ಯೋಚಾದಾಕನ ಮಗ ನಾದ ಯೇಷೂವನೂ ಎದ್ದು ಯೆರೂಸಲೇಮಿನಲ್ಲಿ ರುವ ದೇವರ ಆಲಯವನ್ನು ಕಟ್ಟಿಸಲು ಪ್ರಾರಂಭಿಸಿ ದರು; ಅವರಿಗೆ ಸಹಾಯಕರಾಗಿ ದೇವರ ಪ್ರವಾದಿಗಳು ಅವರ ಸಂಗಡ ಇದ್ದರು.
- 3 ಆ ವೇಳೆಯಲ್ಲಿ ನದಿಯ ಈಚೆಯಲ್ಲಿರುವ ತತ್ತೆನೈನೆಂಬ ಅಧಿಪತಿಯೂ ಶೆತ ರ್ಬೋಜೆನೈಯೂ, ಅವರ ಜೊತೆಗಾರರೂ ಅವರ ಬಳಿಗೆ ಬಂದು--ಈ ಮನೆಯನ್ನು ಕಟ್ಟುವದಕ್ಕೂ ಈ ಗೋಡೆಯನ್ನು ಕಟ್ಟಿತೀರಿಸುವದಕ್ಕೂ ನಿಮಗೆ ಅಪ್ಪಣೆ ಕೊಟ್ಟವರು ಯಾರೆಂದು ಅವರನ್ನು ಕೇಳಿದರು.
- 4 ಆಗ ನಾವು ಈ ರೀತಿಯಾಗಿ ಅವರಿಗೆ ಹೇಳಿದ ತರುವಾಯ ಈ ಕಟ್ಟುವಿಕೆಯನ್ನು ಮಾಡುವ ಮನುಷ್ಯರ ಹೆಸರುಗಳೇನೆಂದು ಕೇಳಿದರು.
- 5 ಆದರೆ ಈ ಕಾರ್ಯವು ದಾರ್ಯಾವೆಷನ ಬಳಿಗೆ ಬರುವ ವರೆಗೂ ಅವರು ಇವರನ್ನು ನಿಲ್ಲಿಸದ ಹಾಗೆ ಇವರ ದೇವರ ಕಣ್ಣು ಯೆಹೂದ್ಯರ ಹಿರಿಯರ ಮೇಲೆ ಇತ್ತು. ಆಗ ಇದನ್ನು ಕುರಿತು ಅವರು ಪ್ರತ್ಯುತ್ತರವನ್ನು ಪತ್ರದಲ್ಲಿ ಕಳುಹಿಸಿದರು.
- 6 ನದಿಯ ಈಚೆಯಲ್ಲಿರುವ ಅಧಿಪತಿಯಾದ ತತ್ತೆ ನೈಯೂ ಶೆತರ್ಬೋಜೆನೈಯೂ ನದಿಯ ಈಚೆಯ ಲ್ಲಿರುವ ಅಪರ್ಸತ್ಕಾಯರಾದ ಅವನ ಜೊತೆಗಾರರೂ ಅರಸನಾದ ದಾರ್ಯಾವೆಷನಿಗೆ ಬರೆದು ಕಳುಹಿಸಿದ ಪತ್ರದ ಪ್ರತಿ.
- 7 ಅವರು ಅವನ ಬಳಿಗೆ ಕಳುಹಿಸಿದ ಪತ್ರದಲ್ಲಿ--
- 8 ಅರಸನಾದ ದಾರ್ಯಾವೆಷನಿಗೆ ಸಮಸ್ತ ಸಮಾ ಧಾನವು. ಅರಸನಿಗೆ ತಿಳಿಯಬೇಕಾದದ್ದೇನಂದರೆ--ನಾವು ಯೆಹೂದ್ಯರ ದೇಶದಲ್ಲಿರುವ ಮಹಾದೇವರ ಆಲಯಕ್ಕೆ ಹೋದೆವು; ಅದು ದೊಡ್ಡ ಕಲ್ಲುಗಳಿಂದ ಕಟ್ಟಲ್ಪಟ್ಟಿದೆ; ಗೋಡೆಗಳ ಮೇಲೆ ತೊಲೆಗಳು ಹೊದಿಸ ಲ್ಪಟ್ಟಿವೆ; ಆ ಕೆಲಸವು ತೀವ್ರವಾಗಿ ನಡೆಯುತ್ತಾ ಅವರ ಕೈಗಳಲ್ಲಿ ವೃದ್ಧಿಯಾಗುತ್ತದೆ.
- 9 ಆಗ ಈ ಮನೆಯನ್ನು ಕಟ್ಟಿಸುವದಕ್ಕೂ ಈ ಗೋಡೆಗಳನ್ನು ತೀರಿಸುವದಕ್ಕೂ ನಿಮಗೆ ಅಪ್ಪಣೆಕೊಟ್ಟವರು ಯಾರೆಂದು ನಾವು ಆ ಹಿರಿಯರನ್ನು ಕೇಳಿದೆವು.
- 10 ಇದಲ್ಲದೆ ಅವರಲ್ಲಿರುವ ಮುಖ್ಯಸ್ಥರ ಮನುಷ್ಯರ ಹೆಸರುಗಳನ್ನು ನಿನಗೆ ಬರೆದು ತಿಳಿಸುವ ಹಾಗೆ ಅವರ ಹೆಸರುಗಳನ್ನು ಕೇಳಿದೆವು.
- 11 ಅವರು ನಮಗೆ ಕೊಟ್ಟ ಪ್ರತ್ಯುತ್ತರವೇನಂದರೆನಾವು ಪರಲೋಕ ಮತ್ತು ಭೂಲೋಕಗಳ ದೇವರ ಸೇವಕರಾಗಿದ್ದೇವೆ. ಅನೇಕ ವರುಷಗಳ ಹಿಂದೆ ಇಸ್ರಾ ಯೇಲಿನಲ್ಲಿದ್ದ ಒಬ್ಬ ಮಹಾ ಅರಸನು ಕಟ್ಟಿಸಿ ತೀರಿಸಿದ್ದ ಆಲಯವನ್ನು ನಾವು ಕಟ್ಟಿಸುತ್ತೇವೆ.
- 12 ಆದರೆ ನಮ್ಮ ತಂದೆಗಳು ಪರಲೋಕದ ದೇವರಿಗೆ ಕೋಪವನ್ನು ಎಬ್ಬಿಸಿದ ತರುವಾಯ ಆತನು ಅವರನ್ನು ಬಾಬೆಲಿನ ಅರಸನಾಗಿದ್ದ ಕಸ್ದೀಯರ ದೇಶದವನಾದ ನೆಬೂಕ ದ್ನೆಚ್ಚರನ ಕೈಯಲ್ಲಿ ಒಪ್ಪಿಸಿಕೊಟ್ಟನು. ಅವನು ಈ ಆಲಯವನ್ನು ಹಾಳುಮಾಡಿ ಜನರನ್ನು ಬಾಬೆಲಿಗೆ ತಕ್ಕೊಂಡು ಹೋದನು.
- 13 ಆದರೆ ಬಾಬೆಲಿನ ಅರಸ ನಾದ ಕೋರೆಷನು ಮೊದಲನೇ ವರುಷದಲ್ಲಿ ಅರಸ ನಾದ ಕೋರೆಷನು ದೇವರ ಈ ಆಲಯವನ್ನು ಕಟ್ಟಲು ಆಜ್ಞೆಯನ್ನು ಕೊಟ್ಟನು.
- 14 ಇದಲ್ಲದೆ ನೆಬೂಕದ್ನೆಚ್ಚರನು ಯೆರೂಸಲೇಮಿನಲ್ಲಿರುವ ಮಂದಿರದಿಂದ ತಕ್ಕೊಂಡು ಬಾಬೆಲಿನ ಮಂದಿರಕ್ಕೆ ತಂದ ದೇವರ ಆಲಯದ ಬೆಳ್ಳಿಬಂಗಾರದ ಸಾಮಾನುಗಳನ್ನು ಅರಸನಾದ ಕೋರೆ ಷನು ಬಾಬೆಲಿನ ಮಂದಿರದಿಂದ ತಕ್ಕೊಂಡು ತಾನು ನೇಮಿಸಿದ ಅಧಿಪತಿಯಾದ ಶೆಷ್ಬಚ್ಚರನಿಗೆ ಒಪ್ಪಿಸಿ ಅವ ನಿಗೆ--
- 15 ಈ ಪಾತ್ರೆಗಳನ್ನು ತೆಗೆದುಕೊಂಡು ಯೆರೂ ಸಲೇಮಿನಲ್ಲಿರುವ ಆಲಯಕ್ಕೆ ತಕ್ಕೊಂಡು ಹೋಗು; ದೇವರ ಆಲಯವು ಅದರ ಸ್ಥಳದಲ್ಲಿ ಕಟ್ಟಿಸಲ್ಪಡಲಿ ಅಂದನು.
- 16 ಅಗ ಶೆಷ್ಬಚ್ಚರನು ಬಂದು ಯೆರೂಸಲೇಮಿ ನಲ್ಲಿರುವ ದೇವರ ಆಲಯಕ್ಕೆ ಅಸ್ತಿವಾರವನ್ನು ಹಾಕಿಸಿ ದನು. ಆ ದಿವಸದಿಂದ ಇದು ವರೆಗೂ ಅದು ಕಟ್ಟಲ್ಪ ಡುತ್ತದೆ; ಇನ್ನೂ ಮುಗಿಯಲಿಲ್ಲ ಅಂದರು.
- 17 ಆದದರಿಂದ ಅರಸನಿಗೆ ಚೆನ್ನಾಗಿ ಕಾಣಿಸಿದರೆ ಯೆರೂಸಲೇಮಿನಲ್ಲಿರುವ ದೇವರ ಆಲಯವನ್ನು ಕಟ್ಟಲು ಅರಸನಾದ ಕೋರೆಷನು ಅಪ್ಪಣೆ ಮಾಡಿದ್ದು ಉಂಟೋ ಇಲ್ಲವೋ ಹುಡುಕು; ಬಾಬೆಲಿನಲ್ಲಿರುವ ಅರಸನ ಬೊಕ್ಕಸದ ಮನೆಯಲ್ಲಿ ವಿಚಾರಿಸಲ್ಪಡಲಿ. ತರುವಾಯ ಅರಸನು ಈ ಕಾರ್ಯಕ್ಕೋಸ್ಕರ ತನ್ನ ಚಿತ್ತವೇನೆಂದು ನಮಗೆ ತಿಳಿಸಲಿ.
Ezra 05
- Details
- Parent Category: Old Testament
- Category: Ezra
ಎಜ್ರನು ಅಧ್ಯಾಯ 5