- 1 ಆಗ ಭೂಮಿಯಲ್ಲೆಲ್ಲಾ ಒಂದೇ ಭಾಷೆ, ಒಂದೇ ಮಾತು ಇತ್ತು.
- 2 ಇದಾದ ಮೇಲೆ ಅವರು ಪೂರ್ವ ದಿಕ್ಕಿನಿಂದ ಹೊರಟು ಪ್ರಯಾಣ ಮಾಡುವಾಗ ಶಿನಾರ್ ದೇಶದ ಬೈಲನ್ನು ಕಂಡುಕೊಂಡು ಅಲ್ಲಿ ವಾಸಮಾಡಿದರು.
- 3 ಅವರು--ಬನ್ನಿರಿ, ಇಟ್ಟಿಗೆ ಗಳನ್ನು ಮಾಡಿ ಚೆನ್ನಾಗಿ ಸುಡೋಣ ಎಂದು ಅವರು ಒಬ್ಬರಿಗೊಬ್ಬರು ಮಾತನಾಡಿಕೊಂಡರು. ಅವರಿಗೆ ಕಲ್ಲಿಗೆ ಬದಲಾಗಿ ಇಟ್ಟಿಗೆಯೂ ಸುಣ್ಣಕ್ಕೆ ಬದಲಾಗಿ ಜೇಡಿಮಣ್ಣೂ ಇದ್ದವು.
- 4 ಅವರು--ಬನ್ನಿರಿ, ಭೂಮಿಯ ಮೇಲೆಲ್ಲಾ ನಾವು ಚದರಿಹೋಗದ ಹಾಗೆ ಆಕಾಶವನ್ನು ಮುಟ್ಟುವ ಒಂದು ಪಟ್ಟಣವನ್ನೂ ಗೋಪುರವನ್ನೂ ನಮಗಾಗಿ ಕಟ್ಟಿಕೊಂಡು ನಾವು ಹೆಸರನ್ನು ಪಡೆಯೋಣ ಅಂದರು;
- 5 ಆಗ ನರಪುತ್ರರು ಕಟ್ಟುವ ಪಟ್ಟಣವನ್ನೂ ಗೋಪುರವನ್ನೂ ನೋಡುವದಕ್ಕೆ ಕರ್ತನು ಇಳಿದು ಬಂದನು.
- 6 ಕರ್ತನು--ಇಗೋ, ಜನವು ಒಂದೇ; ಅವರೆಲ್ಲರಿಗೆ ಭಾಷೆಯೂ ಒಂದೇ. ಈಗ ಅವರು ಇದನ್ನು ಮಾಡಲಾರಂಭಿಸಿದ್ದಾರೆ; ಇನ್ನು ಮುಂದೆ ಅವರು ಮಾಡುವದಕ್ಕೂ ಊಹಿಸುವದಕ್ಕೂ ಅಡ್ಡಿ ಯಾಗದು.
- 7 ಆದದರಿಂದ ನಾವು ಇಳಿದು ಹೋಗಿ ಅವರು ಒಬ್ಬರ ಮಾತು ಒಬ್ಬರು ತಿಳಿಯದ ಹಾಗೆ ಅವರ ಭಾಷೆಯನ್ನು ಗಲಿಬಿಲಿ ಮಾಡೋಣ ಅಂದನು.
- 8 ಹೀಗೆ ಕರ್ತನು ಅವರನ್ನು ಅಲ್ಲಿಂದ ಭೂಮಿಯ ಮೇಲೆಲ್ಲಾ ಚದರಿಸಿಬಿಟ್ಟನು. ಆಗ ಅವರು ಪಟ್ಟಣ ಕಟ್ಟುವದನ್ನು ನಿಲ್ಲಿಸಿ ಬಿಟ್ಟರು.
- 9 ಆದದರಿಂದ ಅದಕ್ಕೆ ಬಾಬೆಲ್ ಎಂದು ಹೆಸರಾಯಿತು; ಯಾಕಂದರೆ ಅಲ್ಲಿ ಕರ್ತನು ಭೂಮಿಯ ಮೇಲೆಲ್ಲಾ ಭಾಷೆಗಳನ್ನು ಗಲಿಬಿಲಿ ಮಾಡಿದನು; ಅಲ್ಲಿಂದ ಕರ್ತನು ಅವರನ್ನು ಭೂಮಿಯ ಮೇಲೆಲ್ಲಾ ಚದರಿಸಿಬಿಟ್ಟನು.
- 10 ಶೇಮನ ವಂಶಾವಳಿಗಳು ಇವೇ; ಶೇಮನು ನೂರು ವರುಷದವನಾಗಿದ್ದಾಗ ಅಂದರೆ ಪ್ರಳಯವಾಗಿ ಎರಡು ವರುಷಗಳಾದ ಮೇಲೆ ಅವನಿಂದ ಅರ್ಪಕ್ಷದನು ಹುಟ್ಟಿದನು.
- 11 ಶೇಮನಿಂದ ಅರ್ಪಕ್ಷದನು ಹುಟ್ಟಿದ ಮೇಲೆ ಶೇಮನು ಐನೂರು ವರುಷ ಬದುಕಿದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.
- 12 ಅರ್ಪಕ್ಷದನು ಮೂವತ್ತೈದು ವರುಷದವನಾ ಗಿದ್ದಾಗ ಅವನಿಂದ ಶೆಲಹನು ಹುಟ್ಟಿದನು.
- 13 ಅರ್ಪಕ್ಷದನಿಂದ ಶೆಲಹನು ಹುಟ್ಟಿದ ಮೇಲೆ ಅರ್ಪಕ್ಷದನು ನಾನೂರ ಮೂರು ವರುಷ ಬದುಕಿದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.
- 14 ಶೆಲಹನು ಮೂವತ್ತು ವರುಷದವನಾಗಿದ್ದಾಗ ಅವನಿಂದ ಎಬರನು ಹುಟ್ಟಿದನು.
- 15 ಶೆಲಹನಿಂದ ಎಬರನು ಹುಟ್ಟಿದ ಮೇಲೆ ಶೆಲಹನು ನಾನೂರ ಮೂರು ವರುಷ ಬದುಕಿದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.
- 16 ಎಬರನು ಮೂವತ್ತುನಾಲ್ಕು ವರುಷದವ ನಾಗಿದ್ದಾಗ ಅವನಿಂದ ಪೆಲೆಗನು ಹುಟ್ಟಿದನು.
- 17 ಎಬರನಿಂದ ಪೆಲೆಗನು ಹುಟ್ಟಿದ ಮೇಲೆ ಎಬರನು ನಾನೂರ ಮೂವತ್ತು ವರುಷ ಬದುಕಿದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.
- 18 ಪೆಲೆಗನು ಮೂವತ್ತು ವರುಷದವನಾಗಿದ್ದಾಗ ಅವನಿಂದ ರೆಗೂವನು ಹುಟ್ಟಿದನು.
- 19 ಪೆಲೆಗನಿಂದ ರೆಗೂವನು ಹುಟ್ಟಿದ ಮೇಲೆ ಪೆಲೆಗನು ಇನ್ನೂರ ಒಂಭತ್ತು ವರುಷ ಬದುಕಿದನು. ಅವನಿಂದ ಕುಮಾ ರರೂ ಕುಮಾರ್ತೆಯರೂ ಹುಟ್ಟಿದರು.
- 20 ರೆಗೂವನು ಮೂವತ್ತೆರಡು ವರುಷದವನಾಗಿದ್ದಾಗ ಅವನಿಂದ ಸೆರೂಗನು ಹುಟ್ಟಿದನು.
- 21 ರೆಗೂವ ನಿಂದ ಸೆರೂಗನು ಹುಟ್ಟಿದ ಮೇಲೆ ರೆಗೂವನು ಇನ್ನೂರ ಏಳು ವರುಷ ಬದುಕಿದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.
- 22 ಸೆರೂಗನು ಮೂವತ್ತು ವರುಷದವನಾಗಿದ್ದಾಗ ಅವನಿಂದ ನಾಹೋರನು ಹುಟ್ಟಿದನು.
- 23 ಸೆರೂಗ ನಿಂದ ನಾಹೋರನು ಹುಟ್ಟಿದ ಮೇಲೆ ಸೆರೂಗನು ಇನ್ನೂರು ವರುಷ ಬದುಕಿದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.
- 24 ನಾಹೋರನು ಇಪ್ಪತ್ತೊಂಭತ್ತು ವರುಷದವನಾಗಿ ದ್ದಾಗ ಅವನಿಂದ ತೆರಹನು ಹುಟ್ಟಿದನು.
- 25 ನಾಹೋರ ನಿಂದ ತೆರಹನು ಹುಟ್ಟಿದ ಮೇಲೆ ನಾಹೋರನು ನೂರಹತ್ತೊಂಭತ್ತು ವರುಷ ಬದುಕಿದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.
- 26 ತೆರಹನು ಎಪ್ಪತ್ತು ವರುಷದವನಾಗಿದ್ದಾಗ ಅವ ನಿಂದ ಅಬ್ರಾಮನೂ ನಾಹೋರನೂ ಹಾರಾನನೂ ಹುಟ್ಟಿದರು.
- 27 ತೆರಹನ ವಂಶಾವಳಿಗಳು ಇವೇ; ತೆರಹನಿಂದ ಅಬ್ರಾಮನೂ ನಾಹೋರನೂ ಹಾರಾನನೂ ಹುಟ್ಟಿದರು. ಹಾರಾನನಿಂದ ಲೋಟನು ಹುಟ್ಟಿದನು.
- 28 ಆದರೆ ಹಾರಾನನು ತಾನು ಹುಟ್ಟಿದ ಸೀಮೆಯಾದ ಕಲ್ದಿಯರ ಊರ್‌ನಲ್ಲಿ ತನ್ನ ತಂದೆಯಾದ ತೆರಹನ ಮುಂಚೆಯೇ ಸತ್ತನು.
- 29 ಅಬ್ರಾಮನೂ ನಾಹೋ ರನೂ ತಮಗೆ ಹೆಂಡತಿಯರನ್ನು ತೆಗೆದುಕೊಂಡರು. ಅಬ್ರಾಮನ ಹೆಂಡತಿಯ ಹೆಸರು ಸಾರಯಳು, ನಾಹೋರನ ಹೆಂಡತಿಯ ಹೆಸರು ಮಿಲ್ಕಾ; ಈಕೆಯು ಹಾರಾನನ ಮಗಳು; ಹಾರಾನನು ಮಿಲ್ಕಳಿಗೂ ಇಸ್ಕಳಿಗೂ ತಂದೆ.
- 30 ಆದರೆ ಸಾರಯಳು ಬಂಜೆ ಯಾದದ್ದರಿಂದ ಮಕ್ಕಳಿಲ್ಲದೆ ಇದ್ದಳು.
- 31 ತೆರಹನು ತನ್ನ ಮಗನಾದ ಅಬ್ರಾಮನನ್ನೂ ತನ್ನ ಮೊಮ್ಮಗನೂ ಹಾರಾನನ ಮಗನೂ ಆಗಿದ್ದ ಲೋಟನನ್ನೂ ತನ್ನ ಸೊಸೆಯಾದ ಅಬ್ರಾಮನ ಹೆಂಡತಿ ಸಾರಯಳನ್ನೂ ಕರಕೊಂಡು ಕಾನಾನ್ ದೇಶಕ್ಕೆ ಹೋಗು ವದಕ್ಕಾಗಿ ಕಲ್ದೀಯರ ಊರ್ ಅನ್ನು ಬಿಟ್ಟು ಅವರು ಹಾರಾನಿಗೆ ಬಂದು ಅಲ್ಲಿ ವಾಸವಾಗಿದ್ದರು.
- 32 ತೆರಹನ ದಿನಗಳು ಒಟ್ಟು ಇನ್ನೂರ ಐದು ವರುಷಗಳಾಗಿದ್ದವು. ತರುವಾಯ ತೆರಹನು ಹಾರಾನಿನಲ್ಲಿ ಸತ್ತನು.
Genesis 11
- Details
- Parent Category: Old Testament
- Category: Genesis
ಆದಿಕಾಂಡ ಅಧ್ಯಾಯ 11