- 1 ಪೂರ್ಣವಾದ ಎರಡು ವರುಷಗಳ ಕೊನೆಯಲ್ಲಿ ಫರೋಹನು ಕನಸನ್ನು ಕಂಡನು.
- 2 ಆಗ ಇಗೋ, ಅವನು ನದಿಯ ಬಳಿಯಲ್ಲಿ ನಿಂತಿದ್ದನು. ಇಗೋ, ನದಿಯೊಳಗಿಂದ ಲಕ್ಷಣವಾದ ಮತ್ತು ಕೊಬ್ಬಿದ ಮಾಂಸವಿದ್ದ ಏಳು ಹಸುಗಳು ಏರಿ ಬಂದು ಹುಲ್ಲುಗಾವಲಲ್ಲಿ ಮೇಯುತ್ತಿದ್ದವು.
- 3 ಇಗೋ, ಅವಲಕ್ಷಣವಾದ ಮತ್ತು ಬಡಕಲಾದ ಬೇರೆ ಏಳು ಹಸುಗಳು ಅವುಗಳ ಹಿಂದೆ ನದಿಯೊಳಗಿಂದ ಏರಿಬಂದು ಹಸುಗಳ ಹತ್ತಿರ ನದೀ ತೀರದಲ್ಲಿ ನಿಂತಿದ್ದವು.
- 4 ಅವಲಕ್ಷಣವಾದ ಮತ್ತು ಬಡಕಲಾದ ಹಸುಗಳು ಕೊಬ್ಬಿದ ಮತ್ತು ಲಕ್ಷಣವಾದ ಏಳು ಹಸುಗಳನ್ನು ತಿಂದು ಬಿಟ್ಟವು. ಆಗ ಫರೋಹನು ಎಚ್ಚತ್ತನು.
- 5 ಅವನು ತಿರಿಗಿ ನಿದ್ರೆಮಾಡಿದಾಗ ಎರಡನೆಯ ಸಾರಿ ಕನಸನ್ನು ಕಂಡನು. ಇಗೋ, ಒಂದೇದಂಟಿನಲ್ಲಿ ಏಳು ಒಳ್ಳೇ ಪುಷ್ಟಿಯಾದ ತೆನೆಗಳು ಎದ್ದವು.
- 6 ಇದಲ್ಲದೆ ಇಗೋ, ಅವುಗಳ ಹಿಂದೆ ಬಡಕಲಾದ ಮತ್ತು ಮೂಡಣದ ಗಾಳಿಯಿಂದ ಬತ್ತಿಹೋದ ಏಳು ತೆನೆಗಳು ಮೊಳೆತವು.
- 7 ಆ ಬಡಕಲಾದ ತೆನೆಗಳು ಪುಷ್ಟಿಯಾದ ಏಳು ತೆನೆಗಳನ್ನು ನುಂಗಿಬಿಟ್ಟವು. ಫರೋಹನು ಎಚ್ಚೆತ್ತಾಗ ಇಗೋ, ಅದು ಒಂದು ಕನಸಾಗಿತ್ತು.
- 8 ಬೆಳಿಗ್ಗೆ ಅವನ ಆತ್ಮವು ಕಳವಳಗೊಂಡಿತು. ಆದದರಿಂದ ಅವನು ಐಗುಪ್ತದ ಎಲ್ಲಾ ಮಂತ್ರವಾದಿ ಗಳನ್ನೂ ಎಲ್ಲಾ ಜ್ಞಾನಿಗಳನ್ನೂ ಕರೇಕಳುಹಿಸಿದನು. ಫರೋಹನು ಅವರಿಗೆ ತನ್ನ ಕನಸನ್ನು ತಿಳಿಸಿದಾಗ ಅವನಿಗೆ ಅವುಗಳ ಅರ್ಥವನ್ನು ಹೇಳುವವರು ಯಾರೂ ಇರಲಿಲ್ಲ.
- 9 ಆಗ ಪಾನದಾಯಕರ ಮುಖ್ಯಸ್ಥನು ಫರೋಹ ನಿಗೆ--ಈ ಹೊತ್ತು ನನ್ನ ತಪ್ಪುಗಳನ್ನು ಜ್ಞಾಪಕ ಮಾಡಿಕೊಳ್ಳುತ್ತೇನೆ;
- 10 ಫರೋಹನು ತನ್ನ ಸೇವಕರ ಮೇಲೆ ಕೋಪಿಸಿಕೊಂಡಾಗ ನನ್ನನ್ನೂ ರೊಟ್ಟಿಗಾರರ ಮುಖ್ಯಸ್ಥನನ್ನೂ ಮೈಗಾವಲಿನ ಅಧಿಪತಿಯ ಮನೆಯಲ್ಲಿ ಕಾವಲಲ್ಲಿ ಇಟ್ಟಾಗ
- 11 ನಾವು ಒಂದು ರಾತ್ರಿಯಲ್ಲಿ ಕನಸನ್ನು ಕಂಡೆವು. ಒಬ್ಬೊಬ್ಬನ ಕನಸಿಗೆ ಬೇರೆಬೇರೆ ಅರ್ಥವಿತ್ತು.
- 12 ಮೈಗಾವಲಿನ ಅಧಿಪತಿಗೆ ಸೇವಕ ನಾಗಿದ್ದ ಇಬ್ರಿಯನಾದ ಯೌವನಸ್ಥನು ಅಲ್ಲಿ ನಮ್ಮ ಸಂಗಡ ಇದ್ದನು. ಅವನಿಗೆ ನಾವು ನಮ್ಮ ಕನಸುಗಳನ್ನು ತಿಳಿಸಿದಾಗ ಅವನು ನಮ್ಮ ನಮ್ಮ ಕನಸಿನ ಪ್ರಕಾರ ಅರ್ಥವನ್ನು ಹೇಳಿದನು.
- 13 ಅವನು ಹೇಳಿದ ಅರ್ಥದಂತೆಯೇ ನಮಗಾಯಿತು. ನನ್ನ್ನ ಉದ್ಯೋಗವು ತಿರಿಗಿ ನನಗೆ ದೊರಕಿತು; ಭಕ್ಷ್ಯ ಕಾರರಲ್ಲಿ ಮುಖ್ಯಸ್ಥನೋ ಗಲ್ಲಿಗೆ ಹಾಕಲ್ಪಟ್ಟನು ಅಂದನು.
- 14 ಆಗ ಫರೋಹನು ಯೋಸೇಫನನ್ನು ಕರೇ ಕಳುಹಿಸಿದನು. ಅವರು ಅವನನ್ನು ತ್ವರೆಯಾಗಿ ಕಾರಾ ಗೃಹದಿಂದ ಹೊರಗೆ ತಂದರು. ಅವನು ಕ್ಷೌರಮಾಡಿಸಿ ಕೊಂಡವನಾಗಿ ತನ್ನ ವಸ್ತ್ರಗಳನ್ನು ಬದಲಾಯಿಸಿ ಫರೋಹನ ಬಳಿಗೆ ಬಂದನು.
- 15 ಆಗ ಫರೋಹನು ಯೋಸೇಫನಿಗೆ--ನಾನು ಒಂದು ಕನಸನ್ನು ಕಂಡಿದ್ದೇನೆ; ಅದರ ಅರ್ಥವನ್ನು ಹೇಳುವವರು ಯಾರೂ ಇಲ್ಲ. ನೀನು ಕನಸನ್ನು ಗ್ರಹಿಸಿ ಅದರ ಅರ್ಥವನ್ನು ಹೇಳುತ್ತೀ ಎಂದು ನಿನ್ನ ವಿಷಯವಾಗಿ ನಾನು ಕೇಳಿದ್ದೇನೆ ಅಂದನು.
- 16 ಯೋಸೇಫನು ಫರೋಹನಿಗೆ ಪ್ರತ್ಯು ತ್ತರವಾಗಿ--ನನ್ನಲ್ಲಿ ಅಂಥ ಸಾಮರ್ಥ್ಯವೇನೂ ಇಲ್ಲ; ಆದರೆ ದೇವರು ಫರೋಹನಿಗೆ ಸಮಾಧಾನದ ಉತ್ತರವನ್ನು ಕೊಡುವನು ಅಂದನು.
- 17 ಅದಕ್ಕೆ ಫರೋಹನು ಯೋಸೇಫನಿಗೆ--ನನ್ನ ಕನಸಿನಲ್ಲಿ ಇಗೋ, ನಾನು ನದಿಯ ತೀರದಲ್ಲಿ ನಿಂತುಕೊಂಡಿದ್ದೆನು.
- 18 ಆಗ ಇಗೋ, ಕೊಬ್ಬಿದ ಮಾಂಸವಿದ್ದ ಲಕ್ಷಣವಾದ ಏಳು ಹಸುಗಳು ನದಿಯೊ ಳಗಿಂದ ಏರಿಬಂದು ಹುಲ್ಲುಗಾವಲಲ್ಲಿ ಮೇಯುತ್ತಿದ್ದವು.
- 19 ಅವುಗಳ ಹಿಂದೆ ಅವಲಕ್ಷಣವಾದ ಕೊಬ್ಬಿಲ್ಲದ ಬಡಕಲಾದ ಬೇರೆ ಏಳು ಹಸುಗಳು ಏರಿಬಂದವು. ಅಂಥಾ ಬಡಕಲಾದ ಹಸುಗಳನ್ನು ನಾನು ಐಗುಪ್ತ ದೇಶದಲ್ಲಿ ಎಲ್ಲಿಯೂ ನೋಡಿದ್ದಿಲ್ಲ.
- 20 ಅವಲಕ್ಷಣ ವಾದ ಮತ್ತು ಬಡಕಲಾದ ಹಸುಗಳು ಮೊದಲನೆಯ ಕೊಬ್ಬಿದ ಆ ಏಳು ಹಸುಗಳನ್ನು ತಿಂದುಬಿಟ್ಟವು;
- 21 ಇವು ಅವುಗಳನ್ನು ತಿಂದಮೇಲೆ ಅವು ತಿಂದಹಾಗೆ ತೋರಲಿಲ್ಲ. ಆದರೆ ಅವು ಮೊದಲಿನಂತೆ ಬಡಕ ಲಾಗಿಯೇ ಇದ್ದವು. ತರುವಾಯ ನಾನು ಎಚ್ಚೆತ್ತೆನು.
- 22 ನಾನು ಕನಸಿನಲ್ಲಿ ನೋಡಿದಾಗ ಇಗೋ, ಒಂದೇ ದಂಟಿನಲ್ಲಿ ಒಳ್ಳೇ ಪುಷ್ಟಿಯುಳ್ಳ ಏಳು ತೆನೆಗಳು ಎದ್ದವು.
- 23 ಇಗೋ, ಮೂಡಣ ಗಾಳಿಯಿಂದ ಬತ್ತಿ ಹೋಗಿ ಬಡಕಲಾದ ಏಳು ತೆನೆಗಳು ಅವುಗಳ ತರುವಾಯ ಮೊಳೆತವು.
- 24 ಆ ಬಡಕಲಾದ ಏಳು ತೆನೆಗಳು ಪುಷ್ಟಿಯಾದ ಏಳು ತೆನೆಗಳನ್ನು ನುಂಗಿದವು. ನಾನು ಇದನ್ನು ಮಂತ್ರವಾದಿಗಳಿಗೆ ತಿಳಿಯಪಡಿಸಿದಾಗ ಅದರ ಅರ್ಥವನ್ನು ನನಗೆ ಹೇಳುವವರು ಯಾರೂ ಇರಲಿಲ್ಲ.
- 25 ಆಗ ಯೋಸೇಫನು ಫರೋಹನಿಗೆ--ಫರೋ ಹನ ಕನಸು ಒಂದೇ; ದೇವರು ಮಾಡುವದಕ್ಕಿರು ವದನ್ನು ಫರೋಹನಿಗೆ ತಿಳಿಸಿದ್ದಾನೆ.
- 26 ಆ ಏಳು ಒಳ್ಳೇ ಹಸುಗಳು ಏಳು ವರುಷಗಳು; ಏಳು ಒಳ್ಳೇ ತೆನೆಗಳು ಏಳು ವರುಷಗಳೇ; ಅದು ಒಂದೇ ಕನಸು.
- 27 ಅವುಗಳ ತರುವಾಯ ಏರಿಬಂದ ಬಡಕಲಾದ ಕೆಟ್ಟ ಏಳು ಹಸುಗಳು ಏಳು ವರುಷಗಳು. ಮೂಡಣ ಗಾಳಿಯಿಂದ ಬತ್ತಿಹೋದ ಏಳು ಬಡಕಲಾದ ತೆನೆಗಳು ಬರವು ಇರುವ ಏಳು ವರುಷಗಳು ಅಂದನು.
- 28 ನಾನು ಫರೋಹನಿಗೆ ಹೇಳಿದ ಮಾತು ಇದೇ--ದೇವರು ಮಾಡುವದಕ್ಕಿರುವದನ್ನು ಫರೋಹನಿಗೆ ತೋರಿಸಿದ್ದಾನೆ.
- 29 ಇಗೋ, ಐಗುಪ್ತದೇಶದಲ್ಲೆಲ್ಲಾ ಮಹಾ ಸುಭಿಕ್ಷೆವರುಷಗಳು ಬರುತ್ತವೆ.
- 30 ಅವುಗಳ ಹಿಂದೆ ಏಳು ವರುಷಗಳ ಬರಗಾಲ ಬರುತ್ತವೆ. ಆಗ ಐಗುಪ್ತದಲ್ಲಿದ್ದ ಸುಭಿಕ್ಷೆಯು ಮರೆಯುವದು. ಇದಲ್ಲದೆ ಬರಗಾಲವು ದೇಶವನ್ನು ನಾಶಮಾಡುವದು.
- 31 ತರುವಾಯ ಬರಗಾಲವು ಮಹಾಕಠಿಣವಾಗಿರು ವದರಿಂದ ಸುಭಿಕ್ಷೆಯ ಕಾಲದ ನೆನಪು ದೇಶದಲ್ಲಿ ಇರದೆ ಹೋಗುವದು.
- 32 ಇದಲ್ಲದೆ ಆ ಕನಸು ಫರೋಹನಿಗೆ ಎರಡು ಸಾರಿ ಬಿದ್ದದರಿಂದ ಆ ಕಾರ್ಯವು ದೇವರಿಂದ ಸ್ಥಿರಪಡಿಸಲ್ಪಟ್ಟಿದೆ; ಆದದ ರಿಂದ ದೇವರು ಅದನ್ನು ಬೇಗನೆ ನೆರವೇರಿಸುವನು.
- 33 ಹೀಗಿರುವದರಿಂದ ಈಗ ಫರೋಹನು ವಿವೇಕಿ ಯಾದ ಬುದ್ಧಿಯುಳ್ಳ ಮನುಷ್ಯನನ್ನು ನೋಡಿ ಅವನನ್ನು ಐಗುಪ್ತದೇಶದ ಮೇಲೆ ನೇಮಿಸಲಿ.
- 34 ಫರೋಹನು ಅಧಿಕಾರಗಳನ್ನು ನೇಮಿಸಿ ದೇಶದ ಮೇಲಿಟ್ಟು ಸುಭಿಕ್ಷೆಯ ಏಳುವರುಷಗಳಲ್ಲಿ ಐಗುಪ್ತದೇಶದ ಐದರಲ್ಲಿ ಒಂದು ಭಾಗ ಬೆಳೆಯನ್ನು ತಕ್ಕೊಳ್ಳಲಿ.
- 35 ಅವರು ಮುಂಬರುವ ಈ ಒಳ್ಳೇ ವರುಷಗಳ ಆಹಾರವನ್ನೆಲ್ಲಾ ಕೂಡಿಸಿ ಫರೋಹನ ಕೈಕೆಳಗೆ ಧಾನ್ಯವನ್ನು ಪಟ್ಟಣಗಳಲ್ಲಿ ಇಟ್ಟುಕೊಂಡು ಕಾಯಲಿ.
- 36 ಐಗುಪ್ತದಲ್ಲಿ ಬರುವದ ಕ್ಕಿರುವ ಬರಗಾಲದ ಏಳು ವರುಷಗಳಲ್ಲಿ ದೇಶವು ಹಾಳಾಗದ ಹಾಗೆ ಆಹಾರವು ದೇಶಕ್ಕೆ ಸಂಗ್ರಹವಾಗಿ ರುವದು ಅಂದನು.
- 37 ಈ ಮಾತು ಫರೋಹನಿಗೂ ಅವನ ಸೇವಕ ರಿಗೂ ಒಳ್ಳೆಯದೆಂದು ತೋಚಿತು.
- 38 ಫರೋಹನು ತನ್ನ ಸೇವಕರಿಗೆಯೋಸೇಫನಂತೆ ದೇವರಾತ್ಮವುಳ್ಳ ಮನುಷ್ಯನು ಸಿಕ್ಕಾನೋ ಅಂದನು.
- 39 ಫರೋಹನು ಯೋಸೇಫನಿಗೆ--ದೇವರು ನಿನಗೆ ಇವುಗಳೆನ್ನಲ್ಲಾ ತೋರಿಸಿದ ಮೇಲೆ ನಿನ್ನ ಹಾಗೆ ವಿವೇಕಿಯೂ ಬುದ್ಧಿವಂತನೂ ಯಾರೂ ಇಲ್ಲ.
- 40 ನೀನೇ ನನ್ನ ಮನೆಯ ಮೇಲಿರಬೇಕು. ನಿನ್ನ ಮಾತಿನ ಪ್ರಕಾರ ನನ್ನ ಜನರೆಲ್ಲಾ ಆಳಲ್ಪಡಲಿ; ಸಿಂಹಾಸನದಲ್ಲಿ ಮಾತ್ರ ನಾನು ನಿನಗಿಂತ ದೊಡ್ಡವನಾಗಿರುವೆನು ಅಂದನು.
- 41 ಇದಲ್ಲದೆ ಫರೋಹನು ಯೋಸೇಫನಿಗೆ--ನೋಡು, ನಾನು ನಿನ್ನನ್ನು ಐಗುಪ್ತದೇಶದ ಮೇಲೆಲ್ಲಾ ನೇಮಿಸಿದ್ದೇನೆ ಅಂದನು.
- 42 ಇದಲ್ಲದೆ ಫರೋಹನು ತನ್ನ ಕೈಯೊಳಗಿನ ಉಂಗುರವನ್ನು ತೆಗೆದು ಯೋಸೇಫನ ಕೈಯಲ್ಲಿಟ್ಟು ನಾರುಮಡಿಯ ವಸ್ತ್ರವನ್ನು ತೊಡಿಸಿ ಚಿನ್ನದ ಸರವನ್ನು ಅವನ ಕೊರಳಿಗೆ ಹಾಕಿದನು.
- 43 ತನಗಿದ್ದ ಎರಡನೆಯ ರಥದಲ್ಲಿ ಅವನನ್ನು ಕೂರಿಸಿ ದಾಗ--ಅವನ ಮುಂದೆ ಮೊಣಕಾಲೂರಿರಿ ಎಂದು ಜನರು ಕೂಗಿದರು. ಹೀಗೆ ಅವನನ್ನು ಐಗುಪ್ತ ದೇಶದ ಮೇಲೆಲ್ಲಾ ಆಳುವವನನ್ನಾಗಿ ನೇಮಿಸಿದನು.
- 44 ಇದಲ್ಲದೆ ಫರೋಹನು ಯೋಸೇಫನಿಗೆ--ನಾನು ಫರೋಹನು, ನಿನ್ನ ಅಪ್ಪಣೆಯಿಲ್ಲದೆ ಐಗುಪ್ತದೇಶ ದಲ್ಲೆಲ್ಲಾ ಯಾವನೂ ತನ್ನ ಕೈಯನ್ನಾಗಲಿ ಕಾಲ ನ್ನಾಗಲಿ ಎತ್ತಬಾರದು ಅಂದನು.
- 45 ಫರೋಹನು ಯೋಸೇಫನಿಗೆ ಸಾಫ್ನತ್ಪನ್ನೇಹ ಎಂದು ಹೆಸರಿಟ್ಟನು. ತರುವಾಯ ಓನಿನ ಯಾಜಕನಾದ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯನ್ನು ಅವನಿಗೆ ಹೆಂಡತಿಯಾಗಿ ಕೊಟ್ಟನು. ಆಗ ಯೋಸೇಫನು ಐಗುಪ್ತದೇಶದಲ್ಲೆಲ್ಲಾ ಹೊರಟು ಸಂಚರಿಸಿದನು.
- 46 ಯೋಸೇಫನು ಐಗುಪ್ತದ ಅರಸನಾದ ಫರೋ ಹನ ಮುಂದೆ ನಿಂತಾಗ ಮೂವತ್ತು ವರುಷದ ವನಾಗಿದ್ದನು. ತರುವಾಯ ಯೋಸೇಫನು ಫರೋಹನ ಸನ್ನಿಧಿಯಿಂದ ಹೊರಟು ಐಗುಪ್ತದೇಶವನ್ನೆಲ್ಲಾ ಸಂಚರಿಸಿದನು.
- 47 ಆದರೆ ಆ ದೇಶವು ಸುಭಿಕ್ಷೆಯ ಏಳು ವರುಷಗಳಲ್ಲಿ ರಾಶಿರಾಶಿಯಾಗಿ ಫಲಕೊಟ್ಟಿತು.
- 48 ಹೀಗಿರಲಾಗಿ ಅವನು ಐಗುಪ್ತದೇಶದಲ್ಲಿದ್ದ ಆ ಏಳು ವರುಷಗಳ ಆಹಾರವನ್ನೆಲ್ಲಾ ಕೂಡಿಸಿ ಪಟ್ಟಣ ಗಳಲ್ಲಿ ಇಟ್ಟನು. ಒಂದೊಂದು ಪಟ್ಟಣದ ಸುತ್ತಲಿರುವ ಬೆಳೆಯನ್ನು ಆಯಾ ಪಟ್ಟಣದಲ್ಲಿ ಕೂಡಿಸಿಟ್ಟನು.
- 49 ಈ ಮೇರೆಗೆ ಯೋಸೇಫನು ದವಸ ಧಾನ್ಯವನ್ನು ಸಮುದ್ರದ ಮರಳಿನಷ್ಟು ರಾಶಿರಾಶಿಯಾಗಿ ಕೂಡಿಸಿ ಲೆಕ್ಕಮಾಡುವದನ್ನು ಬಿಟ್ಟುಬಿಟ್ಟನು. ಯಾಕಂದರೆ ಅದನ್ನು ಲೆಕ್ಕಮಾಡುವದಕ್ಕೆ ಆಗದೆ ಹೋಯಿತು.
- 50 ಇದಲ್ಲದೆ ಬರಗಾಲದ ವರುಷಗಳು ಬರುವದಕ್ಕೆ ಮುಂಚೆ ಯೋಸೇಫನಿಗೆ ಇಬ್ಬರು ಕುಮಾರರು ಹುಟ್ಟಿದರು. ಓನಿನ ಯಾಜಕನಾದ ಪೋಟೀಫೆರನ ಮಗಳಾಗಿದ್ದ ಆಸನತ್ ಅವರನ್ನು ಯೋಸೇಫನಿಗೆ ಹೆತ್ತಳು.
- 51 ಚೊಚ್ಚಲ ಮಗನಿಗೆ ಯೋಸೇಫನು ಮನಸ್ಸೆ ಎಂದು ಹೆಸರಿಟ್ಟನು. ಯಾಕಂದರೆ ಅವನು--ದೇವರು ನನ್ನ ಕಷ್ಟವನ್ನು ಮತ್ತು ನನ್ನ ತಂದೆಯ ಮನೆಯನ್ನೆಲ್ಲಾ ಮರೆತುಬಿಡುವಂತೆ ಮಾಡಿದನು ಅಂದನು.
- 52 ಅವನು ತನ್ನ ಎರಡನೆಯ ಮಗನಿಗೆ ಎಫ್ರಾಯಾಮ್ ಎಂದು ಹೆಸರಿಟ್ಟನು: ಯಾಕಂದರೆ ನಾನು ಬಾಧೆಯನ್ನನುಭವಿಸಿದ ದೇಶದಲ್ಲಿ ಫಲಭರಿತ ನಾಗುವಂತೆ ದೇವರು ಮಾಡಿದ್ದಾನೆ ಅಂದನು.
- 53 ಐಗುಪ್ತದೇಶದಲ್ಲಿದ್ದ ಸುಭಿಕ್ಷೆಯ ಏಳು ವರುಷ ಗಳು ಮುಗಿದ ತರುವಾಯ
- 54 ಯೋಸೇಫನು ಹೇಳಿದಂತೆ ಬರುವದಕ್ಕಿದ್ದ ಬರಗಾಲದ ಏಳು ವರುಷ ಗಳು ಆರಂಭವಾದವು. ಆಗ ಎಲ್ಲಾ ದೇಶಗಳಲ್ಲಿ ಬರವಿತ್ತು. ಆದರೆ ಐಗುಪ್ತದೇಶದಲ್ಲೆಲ್ಲಾ ಆಹಾರ ವಿತ್ತು.
- 55 ಐಗುಪ್ತದವರೆಲ್ಲಾ ಹಸಿದು ಜನರು ಆಹಾರ ಕ್ಕಾಗಿ ಫರೋಹನ ಬಳಿಗೆ ಹೋಗಿ ಕೂಗಿಕೊಂಡಾಗ ಫರೋಹನು ಎಲ್ಲಾ ಐಗುಪ್ತದವರಿಗೆ--ಯೋಸೇಫನ ಬಳಿಗೆ ಹೋಗಿರಿ; ಅವನು ನಿಮಗೆ ಹೇಳುವದನ್ನು ಮಾಡಿರಿ ಅಂದನು.
- 56 ಭೂಮುಖದ ಮೇಲೆಲ್ಲಾ ಬರವಿತ್ತು. ಯೋಸೇಫನು ಧಾನ್ಯವಿದ್ದ ಕಣಜಗಳನ್ನೆಲ್ಲಾ ತೆರೆದು ಐಗುಪ್ತ್ಯರಿಗೆ ಮಾರಿದನು. ಆಗ ಬರವು ಐಗುಪ್ತದೇಶದಲ್ಲಿ ಕಠಿಣವಾಗಿತ್ತು.
- 57 ಇದಲ್ಲದೆ ಭೂಮಿಯ ಮೇಲೆಲ್ಲಾ ಬರವು ಕಠಿಣವಾಗಿದ್ದದರಿಂದ ಎಲ್ಲಾ ದೇಶದವರು ಯೋಸೇಫನಿಂದ ಧಾನ್ಯವನ್ನು ಕೊಂಡುಕೊಳ್ಳುವದಕ್ಕೆ ಐಗುಪ್ತಕ್ಕೆ ಬಂದರು.
Genesis 41
- Details
- Parent Category: Old Testament
- Category: Genesis
ಆದಿಕಾಂಡ ಅಧ್ಯಾಯ 41