- 1 ಐಗುಪ್ತದಲ್ಲಿ ಧಾನ್ಯ ಉಂಟೆಂದುಯಾಕೋಬನು ತಿಳಿದಾಗ ಅವನು ತನ್ನ ಕುಮಾರರಿಗೆನೀವು ಒಬ್ಬರನ್ನೊಬ್ಬರು ನೋಡಿಕೊಳ್ಳು ವದೇನು ಅಂದನು.
- 2 ಅವನು--ಇಗೋ, ಐಗುಪ್ತದಲ್ಲಿ ಧಾನ್ಯ ಉಂಟೆಂದು ನಾನು ಕೇಳಿದ್ದೇನೆ. ನಾವು ಸಾಯದೆ ಬದುಕುವಂತೆ ನೀವು ಅಲ್ಲಿಗೆ ಇಳಿದು ಹೋಗಿ ನಮಗಾಗಿ ಅಲ್ಲಿಂದ ಧಾನ್ಯವನ್ನು ಕೊಂಡು ಕೊಳ್ಳಿರಿ ಅಂದನು.
- 3 ಆಗ ಯೋಸೇಫನ ಹತ್ತು ಮಂದಿ ಸಹೋದರರು ಐಗುಪ್ತದಲ್ಲಿ ಧಾನ್ಯವನ್ನು ಕೊಂಡುಕೊಳ್ಳುವದಕ್ಕೆ ಇಳಿದು ಹೋದರು.
- 4 ಆದರೆ ಯಾಕೋಬನು ಯೋಸೆಫನ ತಮ್ಮನಾದ ಬೆನ್ಯಾವಿಾನ ನಿಗೆ ಕೇಡುಬಂದೀತು ಎಂದು ಹೇಳಿ ಅಣ್ಣಂದಿರ ಸಂಗಡ ಅವನನ್ನು ಕಳುಹಿಸಲಿಲ್ಲ.
- 5 ಕಾನಾನ್ ದೇಶದಲ್ಲಿ ಬರವಿದ್ದದರಿಂದ ಧಾನ್ಯ ವನ್ನು ಕೊಂಡುಕೊಳ್ಳುವದಕ್ಕಾಗಿ ಬರುವವರೊಂದಿಗೆ ಇಸ್ರಾಯೇಲನ ಕುಮಾರರು ಬಂದರು.
- 6 ಆಗ ಯೋಸೇಫನು ದೇಶದ ಮೇಲೆಲ್ಲಾ ಅಧಿಪತಿಯಾ ಗಿದ್ದನು. ದೇಶದ ಜನರಿಗೆಲ್ಲಾ ಧಾನ್ಯವನ್ನು ಮಾರು ವವನು ಅವನೇ ಆಗಿದ್ದನು. ಹೀಗಿರಲಾಗಿ ಯೋಸೇಫನ ಸಹೋದರರು ಬಂದು ತಮ್ಮ ಮುಖಗಳನ್ನು ನೆಲದ ಮಟ್ಟಿಗೂ ತಗ್ಗಿಸಿ ಅವನಿಗೆ ಅಡ್ಡಬಿದ್ದರು.
- 7 ಯೋಸೇ ಫನು ತನ್ನ ಸಹೋದರರನ್ನು ನೋಡಿ ಅವರನ್ನು ಗುರುತಿಸಿದಾಗ್ಯೂ ತಿಳಿಯದವನ ಹಾಗೆ ಅನ್ಯನಂತೆ ಕಠಿಣವಾದ ಮಾತುಗಳನ್ನಾಡಿ ಅವರಿಗೆ--ಎಲ್ಲಿಂದ ಬಂದಿರಿ ಅಂದನು. ಅದಕ್ಕೆ ಅವರು--ಆಹಾರ ಕೊಂಡುಕೊಳ್ಳುವದಕ್ಕೆ ಕಾನಾನ್ ದೇಶದಿಂದ ಬಂದೆವು ಅಂದರು.
- 8 ಯೋಸೇಫನು ತನ್ನ ಸಹೋದರರನ್ನು ಗುರುತಿಸಿದಾಗ್ಯೂ ಅವರು ಅವನನ್ನು ಗುರುತಿಸಲಿಲ್ಲ.
- 9 ಆಗ ಯೋಸೇಫನು ತಾನು ಅವರ ವಿಷಯದಲ್ಲಿ ಕಂಡ ಕನಸುಗಳನ್ನು ಜ್ಞಾಪಕಮಾಡಿಕೊಂಡು ಅವ ರಿಗೆ--ನೀವು ಗೂಢಚಾರರು; ದೇಶದ ಒಳಗುಟ್ಟನ್ನು ನೋಡುವದಕ್ಕಾಗಿ ಬಂದಿದ್ದೀರಿ ಅಂದನು.
- 10 ಅದ ಕ್ಕವರು--ಅಲ್ಲ, ನಮ್ಮ ಒಡೆಯಾ, ನಿನ್ನ ದಾಸರಾದ ನಾವು ಆಹಾರವನ್ನು ಕೊಂಡುಕೊಳ್ಳುವದಕ್ಕಾಗಿ ಬಂದಿದ್ದೇವೆ.
- 11 ನಾವೆಲ್ಲರೂ ಒಬ್ಬ ಮನುಷ್ಯನ ಕುಮಾರರಾಗಿದ್ದು ಸತ್ಯವಂತರಾಗಿದ್ದೇವೆ. ಆದದರಿಂದ ನಿನ್ನ ದಾಸರು ಗೂಢಚಾರರಲ್ಲ ಅಂದರು.
- 12 ಆದರೆ ಅವನು ಅವರಿಗೆ--ಇಲ್ಲ, ದೇಶದ ಒಳಗುಟ್ಟನ್ನು ನೀವು ತಿಳುಕೊಳ್ಳುವದಕ್ಕೋಸ್ಕರವೇ ಬಂದಿದ್ದೀರಿ ಅಂದನು.
- 13 ಅದಕ್ಕವರು--ನಿನ್ನ ದಾಸರಾದ ನಾವು ಹನ್ನೆರಡು ಮಂದಿ ಸಹೋದರರು; ನಾವು ಕಾನಾನ್ ದೇಶದಲ್ಲಿರುವ ಒಬ್ಬ ಮನುಷ್ಯನ ಮಕ್ಕಳು. ಇಗೋ, ಈಗ ಚಿಕ್ಕವನು ನಮ್ಮ ತಂದೆಯೊಂದಿಗೆ ಇದ್ದಾನೆ. ಮತ್ತೊಬ್ಬನು ಇಲ್ಲ ಎಂದು ಹೇಳಿದರು.
- 14 ಆಗ ಯೋಸೇಫನು ಅವರಿಗೆ--ನೀವು ಗೂಢಚಾರರೆಂದು ನಾನು ನಿಮಗೆ ಹೇಳಿದ ಮಾತು ನಿಜವೇ.
- 15 ನೀವು ಪರೀಕ್ಷಿಸಲ್ಪಡುವದು ಹೇಗಂದರೆ--ನಿಮ್ಮ ತಮ್ಮನನ್ನು ಇಲ್ಲಿಗೆ ತಾರದ ಹೊರತು ಫರೋಹನ ಜೀವದಾಣೆ ನೀವು ಇಲ್ಲಿಂದ ಹೊರಗೆ ಹೋಗಬಾರದು.
- 16 ನಿಮ್ಮಲ್ಲಿ ಒಬ್ಬನನ್ನು ಕಳುಹಿಸಿರಿ; ಅವನು ನಿಮ್ಮ ಸಹೋದರ ನನ್ನು ಕರಕೊಂಡು ಬರಲಿ. ಆದರೆ ನೀವು ಸೆರೆಮನೆ ಯಲ್ಲಿರಬೇಕು. ಹೀಗೆ ನಿಮ್ಮಲ್ಲಿ ಸತ್ಯವು ಉಂಟೋ ಇಲ್ಲವೋ ಎಂದು ನಿಮ್ಮ ಮಾತುಗಳು ಪರೀಕ್ಷಿಸಲ್ಪಡು ವವು. ಇಲ್ಲದಿದ್ದರೆ ಫರೋಹನ ಜೀವದಾಣೆ ನಿಶ್ಚಯವಾಗಿ ನೀವು ಗೂಢಚಾರರು ಎಂದು ಹೇಳಿದನು.
- 17 ಯೋಸೇಫನು ಎಲ್ಲರನ್ನು ಒಟ್ಟಿಗೆ ಮೂರು ದಿನಗಳು ಸೆರೆಯಲ್ಲಿಟ್ಟನು.
- 18 ಮೂರನೆಯ ದಿನದಲ್ಲಿ ಯೋಸೇಫನು ಅವರಿಗೆ--ಇದನ್ನು ಮಾಡಿ ಬದುಕಿರಿ, ಯಾಕಂದರೆ ನಾನು ದೇವರಿಗೆ ಭಯಪಡುವವನಾ ಗಿದ್ದೇನೆ.
- 19 ನೀವು ಸತ್ಯವಂತರಾಗಿದ್ದರೆ ನಿಮ್ಮ ಸಹೋದರರಲ್ಲಿ ಒಬ್ಬನು ನೀವು ಇದ್ದ ಸೆರೆಮನೆಯಲ್ಲಿ ಬಂಧಿಸಲ್ಪಡಲಿ. ಆದರೆ ನೀವು ನಿಮ್ಮ ಮನೆಗಳ ಕ್ಷಾಮಕ್ಕೆ ಧಾನ್ಯವನ್ನು ತಕ್ಕೊಂಡು ಹೋಗಿರಿ.
- 20 ನಿಮ್ಮ ತಮ್ಮನನ್ನು ನನ್ನ ಬಳಿಗೆ ಕರತನ್ನಿರಿ. ಆಗ ನಿಮ್ಮ ಮಾತುಗಳು ಸತ್ಯವೆಂದು ದೃಢವಾಗುವವು, ನೀವು ಸಾಯದೆ ಇರುವಿರಿ ಅಂದನು. ಅವರು ಹಾಗೆಯೇ ಮಾಡಿದರು.
- 21 ಆಗ ಅವರು--ನಿಶ್ಚಯವಾಗಿ ನಮ್ಮ ಸಹೋದರನ ಅಪರಾಧವು ನಮ್ಮ ಮೇಲೆ ಇದೆ. ಅವನು ನಮ್ಮನ್ನು ಬೇಡಿಕೊಂಡಾಗ ಅವನ ಪ್ರಾಣ ಸಂಕಟವನ್ನು ನೋಡಿಯೂ ಕೇಳದೆ ಹೋದೆವು. ಆದಕಾರಣ ಈ ಸಂಕಟವು ನಮ್ಮ ಮೇಲೆ ಬಂದಿತು ಎಂದು ಅಂದುಕೊಂಡರು.
- 22 ಆಗ ರೂಬೇನನು ಅವರಿಗೆ ಪ್ರತ್ಯುತ್ತರವಾಗಿ--ಆ ಹುಡುಗನಿಗೆ ಏನೂ ಕೇಡುಮಾಡಬೇಡಿರಿ ಎಂದು ನಾನು ನಿಮಗೆ ಹೇಳಿ ದಾಗ್ಯೂ ನೀವು ಕೇಳಲಿಲ್ಲ. ಆದದರಿಂದ ಈಗ ಇಗೋ, ಅವನ ರಕ್ತವು ನಮ್ಮ ಮೇಲೆ ಇದೆ ಅಂದನು.
- 23 ಆದರೆ ಅವನು ಅವರು ಆಡಿದ್ದನ್ನು ತಿಳಿದುಕೊಳ್ಳುತ್ತಾನೆಂದು ಅವರಿಗೆ ಗೊತ್ತಾಗಲಿಲ್ಲ; ದ್ವಿಭಾಷೆಯಿಂದ ಅವರ ಸಂಗಡ ಮಾತನಾಡಿದನು.
- 24 ಆಗ ಅವನು ಅವರ ಕಡೆಯಿಂದ ಹೊರಟುಹೋಗಿ ಅತ್ತು ಮತ್ತೆ ಅವರ ಬಳಿಗೆ ಬಂದು ಅವರ ಸಂಗಡ ಮಾತನಾಡಿ ಅವರಲ್ಲಿ ಸಿಮೆಯೋನನನ್ನು ಹಿಡಿಸಿ ಅವರ ಕಣ್ಣೆದುರಿನಲ್ಲಿ ಬಂಧಿಸಿ ಸೆರೆಯಲ್ಲಿ ಹಾಕಿಸಿದನು..
- 25 ತರುವಾಯ ಯೋಸೇಫನು ಧಾನ್ಯವನ್ನು ತುಂಬಿಸ ಬೇಕೆಂದೂ ಒಬ್ಬೊಬ್ಬನ ಚೀಲದಲ್ಲಿ ಅವನವನ ಹಣವನ್ನು ತಿರಿಗಿ ಇಡಬೇಕೆಂದೂ ಹಾದಿಗೋಸ್ಕರ ಅವರಿಗೆ ಆಹಾರ ಸರಬರಾಜು ಮಾಡಬೇಕೆಂದೂ ಆಜ್ಞಾಪಿಸಿದನು. ಹೀಗೆಯೇ ಅವನು ಅವರಿಗೆ ಮಾಡಿ ದನು.
- 26 ಆಗ ಅವರು ತಮ್ಮ ಧಾನ್ಯವನ್ನು ಕತ್ತೆಗಳ ಮೇಲೆ ಹೇರಿಕೊಂಡು ಅಲ್ಲಿಂದ ಹೋಗಿಬಿಟ್ಟರು.
- 27 ಒಬ್ಬನು ತನ್ನ ಕತ್ತೆಗೆ ಆಹಾರವನ್ನು ಕೊಡುವದಕ್ಕಾಗಿ ವಸತಿ ಗೃಹದಲ್ಲಿ ತನ್ನ ಚೀಲವನ್ನು ಬಿಚ್ಚಿದಾಗ ಇಗೋ, ಚೀಲದ ಬಾಯಿಯಲ್ಲಿಟ್ಟಿದ ತನ್ನ ಹಣವನ್ನು ಕಂಡನು.
- 28 ಅವನು ತನ್ನ ಸಹೋದರರಿಗೆ--ನನ್ನ ಹಣವು ಹಿಂದಕ್ಕೆ ಕೊಡಲ್ಪಟ್ಟಿದೆ. ಇಗೋ, ಅದು ನನ್ನ ಚೀಲದಲ್ಲಿದೆ ಅಂದಾಗ ಅವರಿಗೆ ಹೃದಯ ಕುಗ್ಗಿ ದಂತಾಗಿ ಹೆದರಿ ಒಬ್ಬರಿಗೊಬ್ಬರು--ದೇವರು ನಮಗೆ ಮಾಡಿದ್ದೇನು ಅಂದರು.
- 29 ಅವರು ಕಾನಾನ್ ದೇಶಕ್ಕೆ ತಮ್ಮ ತಂದೆಯಾದ ಯಾಕೋಬನ ಬಳಿಗೆ ಬಂದು ತಮಗೆ ಸಂಭವಿಸಿದ್ದೆಲ್ಲ ವನ್ನು ಅವನಿಗೆ ತಿಳಿಸಿದರು. ಅದೇನಂದರೆ--
- 30 ಆ ದೇಶದ ಪ್ರಭುವಾಗಿರುವ ಮನುಷ್ಯನು ನಮ್ಮ ಸಂಗಡ ಕಠಿಣವಾಗಿ ಮಾತನಾಡಿ ಗೂಢಚಾರ ರನ್ನಾಗಿ ನಮ್ಮನ್ನು ಎಣಿಸಿದನು.
- 31 ನಾವು ಅವ ನಿಗೆ--ನಾವು ಗೂಢಚಾರರಲ್ಲ, ಸತ್ಯವಂತರೇ.
- 32 ನಾವು ಒಬ್ಬನೇ ತಂದೆಗೆ ಹುಟ್ಟಿದ ಹನ್ನೆರಡು ಮಂದಿ ಸಹೋದರರಾಗಿದ್ದೇವೆ; ಒಬ್ಬನು ಇಲ್ಲ; ಚಿಕ್ಕವನು ಇಂದು ನಮ್ಮ ತಂದೆಯ ಸಂಗಡ ಕಾನಾನ್ ದೇಶದಲ್ಲಿ ಇದ್ದಾನೆ ಅಂದೆವು.
- 33 ಆಗ ದೇಶದ ಪ್ರಭುವಾಗಿರುವ ಆ ಮನುಷ್ಯನು--ನೀವು ಯಥಾರ್ಥರೆಂದು ನಾನು ಇದರ ಮೂಲಕ ತಿಳುಕೊಳ್ಳುವೆನು. ನೀವು ನಿಮ್ಮ ಸಹೋದರರಲ್ಲಿ ಒಬ್ಬನನ್ನು ನನ್ನ ಬಳಿಯಲ್ಲಿಟ್ಟು ನಿಮ್ಮ ಮನೆಯ ಕ್ಷಾಮಕ್ಕೆ ಅವಶ್ಯವಾದದ್ದನ್ನು ತಕ್ಕೊಂಡುಹೋಗಿರಿ.
- 34 ನಿಮ್ಮ ಚಿಕ್ಕ ತಮ್ಮನನ್ನು ನನ್ನ ಬಳಿಗೆ ತನ್ನಿರಿ, ಆಗ ನೀವು ಗೂಢಚಾರರಲ್ಲವೆಂದೂ ಯಥಾರ್ಥ ರೆಂದೂ ತಿಳುಕೊಂಡು ನಿಮ್ಮ ಸಹೋದರನನ್ನು ನಿಮಗೆ ಒಪ್ಪಿಸುವೆನು. ಆಗ ನೀವು ದೇಶದಲ್ಲಿ ವ್ಯಾಪಾರ ಮಾಡಬಹುದು ಎಂದು ಹೇಳಿದನು ಅಂದರು.
- 35 ಇದಲ್ಲದೆ ಅವರು ತಮ್ಮ ಚೀಲಗಳನ್ನು ಬರಿದು ಮಾಡುತ್ತಿದ್ದಾಗ ಇಗೋ, ಅವನವನ ಹಣದ ಗಂಟು ಅವನವನ ಚೀಲದಲ್ಲಿ ಇತ್ತು. ಅವರೂ ಅವರ ತಂದೆಯೂ ಆ ಹಣದ ಗಂಟುಗಳನ್ನು ನೋಡಿ ಭಯಪಟ್ಟರು.
- 36 ಆಗ ಅವರ ತಂದೆಯಾದ ಯಾಕೋಬನು ಅವರಿಗೆ--ನನ್ನನ್ನು ಮಕ್ಕಳಿಲ್ಲದವ ನನ್ನಾಗಿ ಮಾಡಿದ್ದೀರಿ. ಯೋಸೇಫನೂ ಇಲ್ಲ, ಸಿಮೆಯೋನನೂ ಇಲ್ಲ, ಬೆನ್ಯಾವಿಾನನ್ನೂ ಕರಕೊಂಡು ಹೋಗುವದಕ್ಕಿದ್ದೀರಿ. ಇವುಗಳೆಲ್ಲಾ ನನಗೆ ವಿರೋಧವಾಗಿವೆ ಅಂದನು.
- 37 ರೂಬೇನನು ತನ್ನ ತಂದೆಗೆ--ನಾನು ಅವನನ್ನು ನಿನ್ನ ಬಳಿಗೆ ತಾರದೆ ಹೋದರೆ ನನ್ನ ಇಬ್ಬರು ಕುಮಾರರನ್ನು ಕೊಂದುಬಿಡು. ನೀನು ಅವನನ್ನು ನನ್ನ ಕೈಯಲ್ಲಿ ಒಪ್ಪಿಸು. ನಾನು ಅವನನ್ನು ನಿನ್ನ ಬಳಿಗೆ ತಿರಿಗಿ ತರುವೆನು ಅಂದನು.
- 38 ಆದರೆ ಅವನು--ನನ್ನ ಮಗನು ನಿಮ್ಮ ಸಂಗಡ ಹೋಗಬಾರದು; ಅವನ ಅಣ್ಣನು ಸತ್ತುಹೋಗಿ ಅವನೊಬ್ಬನೇ ಉಳಿದಿದ್ದಾನೆ; ನೀವು ಹೋಗುವ ಮಾರ್ಗದಲ್ಲಿ ಇವನಿಗೆ ಕೇಡು ಬಂದರೆ ಮುದಿ ಪ್ರಾಯದಲ್ಲಿ ನನ್ನನ್ನು ದುಃಖದಿಂದ ಸಮಾಧಿಗೆ ಹೋಗುವಂತೆ ಮಾಡುವಿರಿ ಅಂದನು.
Genesis 42
- Details
- Parent Category: Old Testament
- Category: Genesis
ಆದಿಕಾಂಡ ಅಧ್ಯಾಯ 42