- 1 ಶಿಗ್ಯೋನೋತನ ಮೇಲೆ ಪ್ರವಾದಿಯಾದ ಹಬಕ್ಕೂಕನ ಪ್ರಾರ್ಥನೆ. ಕರ್ತನೇ, ನಿನ್ನ ಮಾತನ್ನು ಕೇಳಿ ಭಯಪಟ್ಟಿದ್ದೇನೆ.
- 2 ಕರ್ತನೇ, ವರುಷ ಗಳ ಮಧ್ಯದಲ್ಲಿ ನಿನ್ನ ಕೆಲಸವನ್ನು ಉಜ್ಜೀವಿಸಮಾಡು. ವರುಷಗಳ ಮಧ್ಯದಲ್ಲಿ ತಿಳಿಯಮಾಡು, ರೌದ್ರದಲ್ಲಿ ಕರುಣೆಯನ್ನು ಜ್ಞಾಪಕಮಾಡು;
- 3 ದೇವರು ತೇಮಾನಿ ನಿಂದಲೂ ಪರಿಶುದ್ಧನು ಪಾರಾನ್ ಪರ್ವತದಿಂದಲೂ ಬಂದನು. ಸೆಲಾ. ಆತನ ಮಹಿಮೆ ಆಕಾಶಗಳನ್ನು ಮುಚ್ಚಿತು: ಆತನ ಸ್ತೋತ್ರವು ಭೂಮಿಯನ್ನು ತುಂಬಿ ಸಿತು.
- 4 ಆತನ ಪ್ರಕಾಶವು ಬೆಳಕಿನ ಹಾಗಿತ್ತು; ಆತನಿಗೆ ತನ್ನ ಕೈಯೊಳಗಿಂದ ಕೊಂಬುಗಳು ಬಂದವು; ಅಲ್ಲಿ ಆತನ ಅಧಿಕಾರವನ್ನು ಮರೆಮಾಡುವದಾಗಿತ್ತು.
- 5 ಆತನ ಮುಂದೆ ಜಾಡ್ಯವು ಹೋಯಿತು. ಆತನ ಕಾಲುಗಳಿಂದ ಉರಿ ಕೆಂಡಗಳು ಹೊರಟವು.
- 6 ಆತನು ನಿಂತುಕೊಂಡು ಭೂಮಿಯನ್ನು ಅಳೆದನು. ಆತನು ನೋಡಿ ಜನಾಂಗ ಗಳನ್ನು ಓಡಿಸಿಬಿಟ್ಟನು; ಶಾಶ್ವತವಾದ ಪರ್ವತಗಳು ಚದುರಿಸಲ್ಪಟ್ಟವು; ನಿತ್ಯವಾದ ಗುಡ್ಡಗಳು ನಡುಗಿ ದವು; ಆತನ ಮಾರ್ಗಗಳು ನಿತ್ಯವಾದವುಗಳೇ.
- 7 ಕೂಷಾನಿನ ಡೇರೆಗಳನ್ನು ಕಷ್ಟದೊಳಗೆ ನೋಡಿ ದೆನು; ಮಿದ್ಯಾನಿನ ದೇಶದ ತೆರೆಗಳು ನಡುಗಿದವು.
- 8 ಕರ್ತನು ನದಿಗಳ ಮೇಲೆ ಉರಿಗೊಂಡನೋ? ನದಿಗಳ ಮೇಲೆ ನಿನ್ನ ಕೋಪವಿತ್ತೋ? ಸಮುದ್ರದ ಮೇಲೆ ನಿನ್ನ ರೌದ್ರ ವಿತ್ತೋ? ಇದಕ್ಕಾಗಿ ನಿನ್ನ ಕುದುರೆ ಗಳ ಮೇಲೆ ಸವಾರಿ ಮಾಡಿ ನಿನ್ನ ರಕ್ಷಣೆಯ ರಥಗ ಳಲ್ಲಿ ಹತ್ತಿದಿಯೋ?
- 9 ನೀನು ಗೋತ್ರಗಳಿಗೆ ಆಣೆ ಯಿಟ್ಟ ವಾಕ್ಯದ ಪ್ರಕಾರ ನಿನ್ನ ಬಿಲ್ಲು ಪೂರ್ಣ ಬರಿದಾ ಯಿತು. ಸೆಲಾ. ಭೂಮಿಯನ್ನು ನದಿಗಳಿಂದ ಸೀಳಿದಿ.
- 10 ಬೆಟ್ಟಗಳು ನಿನ್ನನ್ನು ನೋಡಿ ನಡುಗಿದವು; ಜಲ ಪ್ರವಾಹವು ಹಾದು ಹೋಯಿತು; ಅಗಾಧವು ತನ್ನ ಶಬ್ದವನ್ನು ಕೊಟ್ಟಿತು; ತನ್ನ ಕೈಗಳನ್ನು ಮೇಲಕ್ಕೆ ಎತ್ತಿ ಕೊಂಡಿತು.
- 11 ಸೂರ್ಯ ಚಂದ್ರಗಳು ತಮ್ಮ ನಿವಾಸ ದಲ್ಲಿ ಕದಲದೆ ನಿಂತುಬಿಟ್ಟವು. ನಿನ್ನ ಬಾಣಗಳು ಬೆಳಕಿ ನಿಂದಲೂ ನಿನ್ನ ಈಟಿಯು ಮಿಂಚುವ ಪ್ರಕಾಶದಿಂದಲೂ ಹೊರಟವು.
- 12 ನೀನು ಸಿಟ್ಟಿನಿಂದ ದೇಶದ ಮೇಲೆ ನಡೆದುಹೋಗಿ ಕೋಪದಿಂದ ಅನ್ಯಜನಾಂಗಗಳನ್ನು ತುಳಿದುಹಾಕಿದ್ದೀ.
- 13 ನಿನ್ನ ಜನರ ರಕ್ಷಣೆಗೋಸ್ಕರವೂ ನಿನ್ನ ಅಭಿಷಿಕ್ತರ ರಕ್ಷಣೆಗೊಸ್ಕರವೂ ನೀನು ಹೊರಟು ಹೋಗಿ ಕುತ್ತಿಗೆಯ ವರೆಗೂ ಆಸ್ತಿವಾರವನ್ನು ಬರಿದು ಮಾಡಿದ ಹಾಗೆ ದುಷ್ಟರ ಮನೆಯ ತಲೆಯನ್ನು ಗಾಯ ಮಾಡಿಬಿಟ್ಟಿದ್ದೀ. ಸೆಲಾ.
- 14 ಅವನ ದೊಣ್ಣೆಗಳಿಂದಲೇ ತನ್ನ ಹಳ್ಳಿಗಳ ಮುಖ್ಯಸ್ಥನನ್ನು ಹೊಡೆದಿದ್ದೀ; ಅವರು ನನ್ನನ್ನು ಚದುರಿಸುವದಕ್ಕೆ ಬಿರುಗಾಳಿಯಂತೆ ಬಂದರು; ಬಡವರನ್ನು ಅಂತರಂಗದಲ್ಲಿ ನುಂಗಿಬಿಡುವ ಹಾಗೆ ಅವರಿಗೆ ಸಂತೋಷವು ಇರುವದು.
- 15 ನೀನು ನಿನ್ನ ಕುದುರೆಗಳ ಸಂಗಡ ಸಮುದ್ರದಲ್ಲಿಯೂ ಮಹಾಜಲ ಗಳ ಸಮೂಹದಲ್ಲಿಯೂ ನಡೆದುಹೋದಿ.
- 16 ನಾನು ಕೇಳಿದಾಗ ನನ್ನ ಹೊಟ್ಟೆಯು ತಳಮಳಗೊಂಡಿತು, ಆ ಶಬ್ದಕ್ಕೆ ನನ್ನ ತುಟಿಗಳು ಅದರಿದವು; ಇಕ್ಕಟ್ಟಿನ ದಿನದಲ್ಲಿ ನಾನು ವಿಶ್ರಾಂತಿಯನ್ನು ಹೊಂದುವ ಹಾಗೆ ಕೊಳೆಯುವಿಕೆಯು ನನ್ನ ಎಲುಬುಗಳಲ್ಲಿ ಸೇರಿತು, ನಾನು ನಿಂತ ಹಾಗೆಯೇ ನಡುಗಿದೆನು; ಆತನು ಜನರ ಬಳಿಗೆ ಬರುವಾಗ ತನ್ನ ಸೈನ್ಯಗಳ ಕೂಡ ಅವರ ಮೇಲೆ ದಾಳಿ ಮಾಡುವನು.
- 17 ಅಂಜೂರದ ಮರವು ಚಿಗುರ ದಿದ್ದರೂ ದ್ರಾಕ್ಷೇಬಳ್ಳಿಗಳಲ್ಲಿ ಹಣ್ಣು ಇಲ್ಲದಿದ್ದರೂ ಎಣ್ಣೇ ಮರಗಳ ಉತ್ಪತ್ತಿಯು ನಿಂತುಹೋದರೂ ಹೊಲಗಳು ಆಹಾರ ಕೊಡದಿದ್ದರೂ ಹಟ್ಟಿಯೊಳಗಿಂದ ಮಂದೆಗಳು ಕಡಿದು ಬಿಡಲ್ಪಟ್ಟಿದ್ದರೂ ಗೋದಲಿಗಳಲ್ಲಿ ಮಂದೆ ಇಲ್ಲದಿದ್ದರೂ
- 18 ನಾನು ಕರ್ತನಲ್ಲಿ ಸಂತೋಷಿ ಸುವೆನು, ನನ್ನ ರಕ್ಷಣೆಯ ದೇವರಲ್ಲಿ ಉಲ್ಲಾಸಪಡು ವೆನು.
- 19 ಕರ್ತನಾದ ದೇವರು ನನ್ನ ಬಲವಾಗಿದ್ದಾನೆ. ಆತನು ನನ್ನ ಕಾಲುಗಳನ್ನು ಜಿಂಕೆಯ ಕಾಲುಗಳ ಹಾಗೆ ಮಾಡಿ ನನ್ನ ಉನ್ನತ ಸ್ಥಳಗಳಲ್ಲಿ ನಾನು ನಡೆಯುವಂತೆ ಆತನು ಮಾಡುವನು. ಪ್ರಧಾನ ಗಾಯಕನ ಕೀರ್ತನ ಸಂಗ್ರಹದಿಂದ ತೆಗೆದದ್ದು: ನನ್ನ ತಂತಿವಾದ್ಯದೊಡನೆ ಹಾಡತಕ್ಕದ್ದು.
Habakkuk 03
- Details
- Parent Category: Old Testament
- Category: Habakkuk
ಹಬಕ್ಕೂಕ್ಕ ಅಧ್ಯಾಯ 3