- 1 ಓ ಯಾಜಕರೇ, ಇದನ್ನು ನೀವು ಕೇಳಿರಿ, ಇಸ್ರಾಯೇಲಿನ ಮನೆತನದವರೇ, ನೀವು ಕೇಳಿಸಿಕೊಳ್ಳಿರಿ; ಅರಸನ ಮನೆಯವರೇ, ನೀವು ಕಿವಿಗೊಡಿರಿ. ನೀವು ಮಿಚ್ಪದಲ್ಲಿ ಉರ್ಲಾಗಿಯೂ ತಾಬೋರಿನ ಮೇಲೆ ಒಡ್ಡಿದ ಬಲೆಯಾಗಿಯೂ ಇದ್ದಕಾರಣ ನಿಮಗೆ ನ್ಯಾಯತೀರ್ಪು ಬಂದಿದೆ.
- 2 ನಾನು ಅವರನ್ನು ಗದರಿಸಿದ್ದಾಗ್ಯೂ ನನಗೆ ತಿರುಗಿಬಿದ್ದವರು ಕೊಲೆಯನ್ನು ಮಾಡುವದರಲ್ಲಿ ಮಗ್ನರಾಗಿದ್ದಾರೆ.
- 3 ನಾನು ಎಫ್ರಾಯಾಮನ್ನು ಬಲ್ಲೆನು ಮತ್ತು ಇಸ್ರಾ ಯೇಲು ನನಗೆ ಮರೆಯಾಗಿಲ್ಲ; ಓ ಎಫ್ರಾಯಾಮೇ, ನೀನು ಈಗಲೇ ವ್ಯಭಿಚಾರಮಾಡುತ್ತೀ, ಇಸ್ರಾಯೇಲು ಸಹ ಅಪವಿತ್ರವಾಯಿತು.
- 4 ಅವರು ತಮ್ಮ ದೇವರ ಬಳಿಗೆ ತಿರುಗಿಕೊಳ್ಳುವ ಹಾಗೆ ತಮ್ಮ ಕ್ರಿಯೆಗಳನ್ನು ಸರಿ ಮಾಡುವದಿಲ್ಲ; ಯಾಕಂದರೆ ವ್ಯಭಿಚಾರಗಳ ಆತ್ಮವು ಅವರ ಮಧ್ಯದಲ್ಲಿ ಉಂಟು; ಅವರು ಕರ್ತನನ್ನು ತಿಳಿದುಕೊಳ್ಳಲಿಲ್ಲ.
- 5 ಇಸ್ರಾಯೇಲಿನ ಗರ್ವವು ತನ್ನ ಮುಖದ ಮುಂದೆ ಸಾಕ್ಷಿ ಕೊಡುತ್ತದೆ. ಆದದರಿಂದ ಇಸ್ರಾಯೇಲು ಮತ್ತು ಎಫ್ರಾಯಾಮು ತಮ್ಮ ಕೆಟ್ಟ ತನದಲ್ಲಿ ಬೀಳುವವು. ಯೆಹೂದವು ಅವರೊಂದಿಗೆ ಬೀಳುವದು.
- 6 ಅವರು ಕರ್ತನನ್ನು ಹುಡುಕುವದಕ್ಕೆ ಅವರ ಮಂದೆಗಳೊಂದಿಗೂ ಹಿಂಡುಗಳೊಂದಿಗೂ ಹೋಗುವರು. ಆದರೆ ಆತನು ಅವರಿಂದ ತನ್ನನ್ನು ಹಿಂದೆಗೆದುಕೊಂಡ ಕಾರಣ ಅವರು ಆತನನ್ನು ಕಾಣುವದೇ ಇಲ್ಲ.
- 7 ದ್ರೋಹದಿಂದ ಅವರು ಕರ್ತನಿಗೆ ವಿರುದ್ಧವಾಗಿ ನಡೆಸಿದ್ದಾರೆ. ಯಾಕಂದರೆ ಅವರು ಅನ ್ಯಮಕ್ಕಳನ್ನು ಪಡೆದಿದ್ದಾರೆ. ಈಗ ತಿಂಗಳು ತಮ್ಮ ಪಾಲು ಗಳೊಂದಿಗೆ ಅವರನ್ನು ನುಂಗಿ ಬಿಡುವದು.
- 8 ಗಿಬ್ಯದಲ್ಲಿ ಕೊಂಬನ್ನೂ ರಾಮದಲ್ಲಿ ತುತೂರಿ ಯನ್ನೂದಿರಿ; ಓ ಬೆನ್ಯಾವಿಾನೇ ನಿನ್ನ ಹಿಂದೆ ಬೆತಾ ವೇನಿನಲ್ಲಿ ಗಟ್ಟಿಯಾಗಿ ಕೂಗು;
- 9 ಎಫ್ರಾಯಾಮು ಗದರಿಸುವ ದಿನದಲ್ಲೇ ಹಾಳಾಗುವದು. ಇಸ್ರಾಯೇ ಲಿನ ಗೋತ್ರಗಳಲ್ಲಿ ನಾನು ನಿಜವಾಗಿ ಆಗುವಂಥದ್ದನ್ನೇ ತಿಳಿಸಿದ್ದೇನೆ.
- 10 ಯೆಹೂದದ ಪ್ರಭುಗಳು ಮೇರೆಗಳನ್ನು ಬಿಡಿಸುವವರ ಹಾಗೆ ಇದ್ದರು; ಆದದರಿಂದ ಅವರ ಮೇಲೆ ನೀರಿನ ಹಾಗೆ ನನ್ನ ಕೋಪವನ್ನು ಸುರಿಸುವೆನು.
- 11 ಎಫ್ರಾಯಾಮು ಆಜ್ಞೆಯಂತೆ ಇಷ್ಟ ಪೂರ್ವಕವಾಗಿ ನಡೆದ ಕಾರಣ ಅವನು ನ್ಯಾಯತೀರ್ಪಿನೊಳಗೆ ಕುಂದಿ ಹೋಗಿ ಜಜ್ಜಲ್ಪಟ್ಟನು.
- 12 ಆದದರಿಂದ ನಾನು ಎಫ್ರಾ ಯಾಮಿಗೆ ನುಸಿಯ ಹಾಗೆಯೂ ಯೆಹೂದದ ಮನೆ ತನದವರಿಗೆ ಕೊಳೆಯುವಿಕೆಯ ಹಾಗೆಯೇ ಇರುವೆನು.
- 13 ಎಫ್ರಾಯಾಮು ತನ್ನ ರೋಗವನ್ನು ಯೆಹೂದವು ತನ್ನ ಗಾಯವನ್ನು ನೋಡಿದಾಗ ಎಫ್ರಾಯೀಮ್ ಅಶ್ಯೂರಕ್ಕೆ ಹೋಗಿ ಅರಸನಾದ ಯಾರೇಬನ ಬಳಿಗೆ ಕಳುಹಿಸಿತು; ಆದಾಗ್ಯೂ ಅವನು ನಿಮ್ಮನ್ನು ಸ್ವಸ್ಥಮಾಡ ಲಿಲ್ಲ, ಇಲ್ಲವೆ ನಿಮ್ಮ ಗಾಯವನ್ನು ಗುಣಪಡಿಸಲೂ ಇಲ್ಲ.
- 14 ನಾನು ಎಫ್ರಾಯಾಮಿಗೆ ಸಿಂಹದ ಹಾಗೆಯೂ ಯೆಹೂದದ ಮನೆತನದವರಿಗೆ ಪ್ರಾಯದ ಸಿಂಹದ ಹಾಗೆಯೂ ಇರುವೆನು. ಹೌದು, ನಾನು, ನಾನೇ ಸೀಳಿಬಿಟ್ಟು ಹೋಗುವೆನು, ನಾನು ಎತ್ತಿಕೊಂಡು ಹೋಗಲು ಅವನನ್ನು ಯಾರೂ ಬಿಡಿಸಲಾರರು.
- 15 ತಾವು ತಮ್ಮ ಅಪರಾಧವನ್ನು ಅರಿಕೆಮಾಡಿ ನನ್ನ ಮುಖವನ್ನು ಹುಡುಕುವ ವರೆಗೂ ನಾನು ತಿರುಗಿ ಕೊಂಡು ನನ್ನ ಸ್ಥಳಕ್ಕೆ ಹೋಗುವೆನು, ಅವರ ಕಷ್ಟದಲ್ಲಿ ಅವರು ನನ್ನನ್ನು ಬೇಗ ಹುಡುಕುವರು.
Hosea 05
- Details
- Parent Category: Old Testament
- Category: Hosea
ಹೋಶೇ ಅಧ್ಯಾಯ 5