wheel

AJC Publications and Media Portal

 

But the Comforter, which is the Holy Ghost, whom the Father will send in my name, he shall teach you all things,
and bring all things to your remembrance, whatsoever I have said unto you. John 14:26


ಹೋಶೇಅಧ್ಯಾಯ 8
  • 1 ನಿನ್ನ ಬಾಯಿಗೆ ತುತೂರಿಯನ್ನು ಇಟ್ಟುಕೋ, ಅವರು ನನ್ನ ಒಡಂಬಡಿಕೆಯನ್ನು ವಿಾರಿ ನನ್ನ ನ್ಯಾಯಪ್ರಮಾಣಕ್ಕೆ ವಿರುದ್ಧವಾಗಿ ಅಪರಾಧ ಮಾಡಿದ್ದರಿಂದ ಅವನು ಹದ್ದಿನ ಹಾಗೆ ಕರ್ತನ ಆಲಯಕ್ಕೆ ವಿರುದ್ಧವಾಗಿ ಬರುತ್ತಾನೆ.
  • 2 ಇಸ್ರಾಯೇಲಿ ನವರು--ನನ್ನ ದೇವರೇ, ನಾವು ನಿನ್ನನ್ನು ತಿಳಿದಿದ್ದೇವೆ ಎಂದು ನನಗೆ ಕೂಗುವರು.
  • 3 ಇಸ್ರಾಯೇಲು ಒಳ್ಳೆಯ ಸಂಗತಿಯನ್ನು ತಳ್ಳಿಬಿಟ್ಟಿದೆ. ಶತ್ರುವು ಅವನನ್ನು ಹಿಂದಟ್ಟುವನು.
  • 4 ಅವರು ಅರಸುಗಳನ್ನು ನೇಮಿಸಿದ್ದಾರೆ. ಆದರೆ ನನ್ನಿಂದಲ್ಲ, ಪ್ರಧಾನರನ್ನು ನೇಮಿಸಿದ್ದಾರೆ, ಅದು ನನಗೆ ತಿಳಿಯಲಿಲ್ಲ; ಅವರು ಕಡಿದುಬಿಡಲ್ಪಡುವ ಹಾಗೆ ತಮ್ಮ ಬೆಳ್ಳಿಯಿಂದಲೂ ತಮ್ಮ ಬಂಗಾರದಿಂದಲೂ ತಮಗೆ ವಿಗ್ರಹಗಳನ್ನು ಮಾಡಿಕೊಂಡಿದ್ದಾರೆ.
  • 5 ಓ ಸಮಾ ರ್ಯವೇ, ನಿನ್ನ ಬಸವನನ್ನು ನಾನು ತಳ್ಳಿಹಾಕಿದ್ದೇನೆ; ನನ್ನ ಕೋಪವು ಅವರ ಮೇಲೆ ಉರಿಯುತ್ತದೆ; ಅವರು ನಿರಪರಾಧಿಗಳಾಗದೆ ಇರುವದು ಎಷ್ಟರ ವರೆಗೆ?
  • 6 ಅದು ಇಸ್ರಾಯೇಲ್ಯರಿಂದಲೂ ಆಗಿದೆ; ಕೆಲಸಗಾರನು ಅದನ್ನು ಮಾಡಿದನು, ಆದ್ದರಿಂದ ಅದು ದೇವರಲ್ಲ; ಆದರೆ ಸಮಾರ್ಯದ ಕರುವು ಪುಡಿಪುಡಿಯಾಗಿ ಮುರಿಯಲ್ಪಡುವದು.
  • 7 ಅವರು ಗಾಳಿಯನ್ನು ಬಿತ್ತಿ ದ್ದಾರೆ; ಬಿರುಗಾಳಿಯನ್ನು ಕೊಯ್ಯುತ್ತಾರೆ. ಅದಕ್ಕೆ ಕಾಂಡ ವಿಲ್ಲ; ಮೊಳಕೆಯು ಆಹಾರವನ್ನು ಕೊಡುವದಿಲ್ಲ. ಒಂದು ವೇಳೆ ಅದು ಕೊಟ್ಟರೂ ಪರಕೀಯರು ಅದನ್ನು ನುಂಗುತ್ತಾರೆ.
  • 8 ಇಸ್ರಾಯೇಲು ನುಂಗಲ್ಪಟ್ಟಿದೆ; ಅವರು ಅನ್ಯಜನಾಂಗಗಳಲ್ಲಿ ಮೆಚ್ಚಿಕೆಯಿಲ್ಲದ ಪಾತ್ರೆಯ ಹಾಗೆ ಇದ್ದಾರೆ.
  • 9 ಅವರು ಒಂಟಿಯಾದ ಕಾಡುಕತ್ತೆಯ ಹಾಗೆ ಅಶ್ಯೂರಕ್ಕೆ ಹೋಗಿದ್ದಾರೆ. ಎಫ್ರಾಯಾಮು ಮಿಂಡರಿಗೆ ಕೂಲಿ ಕೊಟ್ಟಿದೆ.
  • 10 ಹೌದು, ಅವರು ಜನಾಂಗಗಳಲ್ಲಿ ಕೂಲಿ ಕೊಟ್ಟಿದ್ದರೂ ಅವರನ್ನು ನಾನು ಈಗ ಒಟ್ಟುಗೂಡಿ ಸುವೆನು; ಸ್ವಲ್ಪವಾದವರಲ್ಲಿ ಅವರು ಪ್ರಧಾನರು ಗಳ ಅರಸನ ಭಾರದಿಂದ ಕಷ್ಟಪಡುವರು.
  • 11 ಎಫ್ರಾ ಯಾಮು ಪಾಪಕ್ಕಾಗಿ ಅನೇಕ ಬಲಿಪೀಠಗಳನ್ನು ಮಾಡಿ ದ್ದರಿಂದ, ಬಲಿಪೀಠಗಳು ಅವನ ಪಾಪಕ್ಕಾಗಿ ಇರುವವು.
  • 12 ನಾನು ನನ್ನ ನ್ಯಾಯಪ್ರಮಾಣದ ದೊಡ್ಡ ಸಂಗತಿ ಗಳನ್ನು ಅವನಿಗೆ ಬರೆದಿದ್ದೇನೆ; ಆದರೆ ಅವುಗಳು ಅನ್ಯವಾದವುಗಳೆಂದು ಎಣಿಸಲ್ಪಟ್ಟಿವೆ.
  • 13 ಅವರು ಯಜ್ಞದ ಮಾಂಸವನ್ನು ಬಲಿಯಾಗಿ ಅರ್ಪಿಸಿ ನನ್ನ ಕಾಣಿಕೆಗಳಿಂದ ಬಲಿಗಳನ್ನು ತಿನ್ನುತ್ತಾರೆ; ಆದರೆ ಕರ್ತನು ಅವುಗಳಿಗೆ ಮೆಚ್ಚುವದಿಲ್ಲ. ಈಗ ಅವರ ಅಕ್ರಮಗಳನ್ನು ಜ್ಞಾಪಕ ಮಾಡಿಕೊಂಡು ಅವರ ಪಾಪಗಳನ್ನು ವಿಚಾ ರಿಸುವನು; ಅವರು ಐಗುಪ್ತಕ್ಕೆ ಹಿಂದಿರುಗುವರು.
  • 14 ಇಸ್ರಾಯೇಲು ತನ್ನ ನಿರ್ಮಾಣಿಕ ನನ್ನು ಮರೆತುಬಿಟ್ಟು ಆಲಯಗಳನ್ನು ಕಟ್ಟಿಕೊಂಡಿದೆ; ಯೆಹೂದವು ಸಹ ಕೋಟೆಯುಳ್ಳ ಪಟ್ಟಣಗಳನ್ನು ಹೆಚ್ಚು ಮಾಡಿಕೊಂಡಿದೆ; ಆದರೆ ನಾನು ಅದರ ಪಟ್ಟಣಗಳ ಮೇಲೆ ಬೆಂಕಿಯನ್ನು ಕಳುಹಿಸುವೆನು. ಅದು ಅವುಗಳ ಅರಮನೆಗಳನ್ನು ನುಂಗಿಬಿಡುವದು.