- 1 ಎಫ್ರಾಯಾಮು ಗಾಳಿಯನ್ನೇ ಸೇವಿಸುತ್ತದೆ; ಪಶ್ಚಿಮದ ಗಾಳಿಯ ಹಿಂದೆ ಹಿಂಬಾಲಿಸಿ ಕೊಂಡು ಹೋಗುತ್ತದೆ. ಅವರು ಪ್ರತಿದಿನವು ಸುಳ್ಳನ್ನೂ ನಾಶನವನ್ನೂ ಹೆಚ್ಚಿಸಿ ಅಶ್ಯೂರ್ಯರೊಂದಿಗೆ ಒಡಂಬಡಿಕೆ ಮಾಡಿಕೊಂಡು ಐಗುಪ್ತಕ್ಕೆ ಎಣ್ಣೆಯನ್ನು ಹೊತ್ತುಕೊಂಡು ಹೋಗುತ್ತಾರೆ.
- 2 ಯೆಹೂದ ದೊಂದಿಗೆ ಕರ್ತನು ತರ್ಕಮಾಡಿ ಯಾಕೋಬನ್ನು ತನ್ನ ಮಾರ್ಗಗಳ ಪ್ರಕಾರ ಶಿಕ್ಷಿಸಿ ಅವನ ಕ್ರಿಯೆಗಳ ಪ್ರಕಾರ ಮುಯ್ಯಿ ತೀರಿಸಿ ಅವನಿಗೆ ಪ್ರತಿಫಲವನ್ನು ಕೊಡುವನು.
- 3 ಗರ್ಭದಲ್ಲಿ ಅವನು ತನ್ನ ಸಹೋದರ ನನ್ನು ಹಿಮ್ಮಡಿಯಿಂದ ಹಿಡಿದು ತನ್ನ ಶಕ್ತಿಯಿಂದ ದೇವರೊಂದಿಗೆ ಬಲಹೊಂದಿದನು.
- 4 ಹೌದು, ದೂತನ ಮೇಲೆ ಅವನು ಬಲಹೊಂದಿ ಜಯಿಸಿದನು; ಅವನು ಅತ್ತು ಆತನಿಗೆ ವಿಜ್ಞಾಪನೆಯನ್ನು ಸಲ್ಲಿಸಿದನು; ಅವನು ಆತನನ್ನು ಬೇತೇಲಿನಲ್ಲಿ ಕಂಡುಕೊಂಡನು; ಅಲ್ಲಿ ಆತನು ನಮ್ಮೊಂದಿಗೆ ಮಾತನಾಡಿದನು.
- 5 ಆತನು ಸೈನ್ಯಗಳ ಕರ್ತನಾದ ದೇವರೇ; ಆತನ ಜ್ಞಾಪಕಾ ರ್ಥವು ಕರ್ತನೇ,
- 6 ಆದಕಾರಣ ನೀನು ನಿನ್ನ ದೇವರ ಕಡೆಗೆ ತಿರುಗಿಕೊ; ಕರುಣೆಯನ್ನೂ ನ್ಯಾಯವನ್ನೂ ಕಾಪಾಡು; ನಿನ್ನ ದೇವರಿಗಾಗಿ ಯಾವಾಗಲೂ ಕಾದುಕೊಂಡಿರು;
- 7 ಅವನು ವ್ಯಾಪಾರಿಯಾಗಿದ್ದು ಅವನ ಕೈಯಲ್ಲಿ ಮೋಸದ ತ್ರಾಸು ಇದೆ. ಕಸಕೊಳ್ಳುವದನ್ನು ಅವನು ಪ್ರೀತಿಮಾಡುತ್ತಾನೆ.
- 8 ಎಫ್ರಾಯಾಮು--ಆದಾಗ್ಯೂ ನಾನು ಐಶ್ವರ್ಯವಂತನಾದೆನು, ನಾನು ಆಸ್ತಿಯನ್ನು ಕಂಡುಕೊಂಡೆನು; ನನ್ನ ಕೆಲಸಗಳಲ್ಲೆಲ್ಲಾ ಪಾಪವಾದ ದುಷ್ಟತ್ವವನ್ನು ಅವರು ನನ್ನಲ್ಲಿ ಕಂಡುಕೊಳ್ಳುವದಿಲ್ಲ.
- 9 ಐಗುಪ್ತದೇಶದಿಂದ ನಿನ್ನ ದೇವರಾಗಿರುವ ಕರ್ತನಾದ ನಾನು ಇನ್ನೂ ಪರಿಶುದ್ಧ ಹಬ್ಬದ ದಿನದ ಪ್ರಕಾರ ಗುಡಾರಗಳಲ್ಲಿ ವಾಸಿಸುವ ಹಾಗೆ ನಿನ್ನನ್ನು ಮಾಡುವೆನು.
- 10 ನಾನು ಪ್ರವಾದಿಗಳ ಮುಖಾಂತರ ಸಹ ನಿನ್ನೊಂದಿಗೆ ಮಾತನಾಡಿದ್ದೇನೆ, ನಾನು ದರ್ಶನಗಳನ್ನು ಹೆಚ್ಚಿಸಿದ್ದೇನೆ, ಇದಲ್ಲದೆ ಪ್ರವಾದಿಗಳ ಸೇವೆಯ ಮುಖಾಂತರ ಸಾಮ್ಯಗಳನ್ನು ಉಪಯೋಗಿಸಿದ್ದೇನೆ.
- 11 ಗಿಲ್ಯಾದಿನಲ್ಲಿ ದುಷ್ಟತನ ಇದೆಯೋ? ನಿಶ್ಚಯವಾಗಿ ಅವೆಲ್ಲಾ ವ್ಯರ್ಥವೇ; ಅವರು ಗಿಲ್ಗಾಲಿನಲ್ಲಿ ಹೋರಿಗಳನ್ನು ಅರ್ಪಿಸುತ್ತಾರೆ, ಹೌದು, ಅವರ ಬಲಿಪೀಠಗಳು ಹೊಲದ ಸಾಲುಗಳಲ್ಲಿರುವ ಕಲ್ಲುಕುಪ್ಪೆಯ ಹಾಗಿದೆ ಎಂದು ಹೇಳಿದನು.
- 12 ಯಾಕೋಬನು ಸಿರಿಯಾ ದೇಶಕ್ಕೆ ಓಡಿಹೋದನು; ಇಸ್ರಾಯೇಲನು ಹೆಂಡತಿಯ ನಿಮಿತ್ತ ಸೇವೆಮಾಡಿ ಹೆಂಡತಿಯ ನಿಮಿತ್ತ ಕುರಿಗಳನ್ನು ಕಾದನು.
- 13 ಪ್ರವಾದಿಯಿಂದ ಕರ್ತನು ಇಸ್ರಾಯೇಲನ್ನು ಐಗುಪ್ತದೊಳಗಿಂದ ಬರಮಾಡಿ ಆ ಪ್ರವಾದಿ ಯಿಂದಲೇ ಆತನು ಅವನನ್ನು ಕಾಪಾಡಿದನು.
- 14 ಆದ ರೂ ಎಫ್ರಾಯಾಮು ಬಹು ಕಠೋರವಾಗಿ ಆತನನ್ನು ರೇಗಿಸಿತು. ಆದದರಿಂದ ಆತನು ಅದರ ರಕ್ತವನ್ನು ಅದರ ಮೇಲೆ ಬರಮಾಡುವನು; ಅವನ ನಿಂದೆಯನ್ನು ಅವನ ಕರ್ತನು ಅವನ ಮೇಲೆ ಬರಮಾಡುವನು.
Hosea 12
- Details
- Parent Category: Old Testament
- Category: Hosea
ಹೋಶೇ ಅಧ್ಯಾಯ 12