- 1 ಯೋಥಾಮನ ಮಗನೂ ಉಜ್ಜೀಯನ ಮೊಮ್ಮಗನೂ ಯೆಹೂದದ ಅರಸನೂ ಆದ ಆಹಾಜನ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀನ, ರೆಮಲ್ಯನ ಮಗನೂ ಇಸ್ರಾಯೇಲ್ಯರ ಅರ ಸನೂ ಆದ ಪೆಕಹ ಎಂಬವರು ಯೆರೂಸಲೇಮಿನ ವಿರುದ್ಧವಾಗಿ ಯುದ್ಧಕ್ಕೆ ಹೋದರು. ಆದರೆ ಅದನ್ನು ಜಯಿಸಲು ಸಾಧ್ಯವಾಗಲಿಲ್ಲ.
- 2 ಸಿರಿಯಾದವರು ಎಫ್ರಾಯಾಮ್ಯರೊಂದಿಗೆ ಹೊಂದಿಕೊಂಡಿದ್ದಾರೆಂದು ದಾವೀದನ ಮನೆಗೆ ತಿಳಿದಾಗ ಅವನ ಹೃದಯವು ಪ್ರಜೆಯ ಹೃದಯವು ಅರಣ್ಯದ ಮರಗಳು ಗಾಳಿಗೆ ಅಲುಗಾಡುವಂತೆ ನಡುಗಿದವು.
- 3 ಆಗ ಕರ್ತನು, ಯೆಶಾಯನಿಗೆ--ನೀನು ಶೆಯಾರ್ ಯಾಶೂಬನೆಂಬ ನಿನ್ನ ಮಗನನ್ನು ಕರೆದುಕೊಂಡು ಹೋಗಿ ಮಡಿವಾಳರ ಹೊಲದ ಮೇಲೆ ಹೋಗುವ ದಾರಿಯಲ್ಲಿ ಮೇಲಿನ ಕೆರೆಯ ಕಾಲುವೆಯ ಕೊನೆಯ ಹತ್ತಿರ ಆಹಾಜನನ್ನು ಎದುರುಗೊಂಡು ಅವನಿಗೆ ಹೀಗೆ ಹೇಳು--
- 4 ಜಾಗ ರೂಕನಾಗಿ ಸುಮ್ಮನಿರು; ಭಯಪಡಬೇಡ ಇಲ್ಲವೆ ರೆಚೀನ ಅರಾಮ್ಯ ರೆಮಲ್ಯನ ಮಗ ಇವರ ಕೋಪವು ಎಷ್ಟು ಹೆಚ್ಚಿದರೂ ಹೊಗೆಯಾಡುವ ಈ ಎರಡು ಮೋಟು ಕೊಳ್ಳಿಗಳಿಗೆ ನಿನ್ನ ಹೃದಯವು ಕುಂದದಿರಲಿ.
- 5 ಸಿರಿಯಾದವರೂ ಎಫ್ರಾಯಿಮಿನವರೂ ರೆಮಲ್ಯನ ಮಗನೂ ನಿನಗೆ ವಿರೋಧವಾಗಿ ದುರಾಲೋಚನೆ ಮಾಡಿ,
- 6 ನಾವು ಯೆಹೂದಕ್ಕೆ ವಿರೋಧವಾಗಿ ಹೋಗಿ ಅದನ್ನು ವ್ಯಥೆಪಡಿಸಿ ಅದರಲ್ಲಿ ನಮಗಾಗಿ ಮಾಡಿ ಕೊಂಡಿರುವ ಒಪ್ಪಂದವನ್ನು ಉಲ್ಲಂಘಿಸಿ ಅದರ ಮಧ್ಯದಲ್ಲಿ ಒಬ್ಬ ಅರಸನನ್ನು ಅಂದರೆ ಟಾಬೇಲನ ಮಗನನ್ನು ನೇಮಿಸಿಕೊಳ್ಳೋಣ ಎಂದು ಹೇಳುವರು
- 7 ಅದಕ್ಕೆ ಕರ್ತನಾದ ದೇವರು--ಅದು ನಿಲ್ಲುವದಿಲ್ಲ; ಇಲ್ಲವೆ ಅದು ಆಗುವದೇ ಇಲ್ಲ.
- 8 ದಮಸ್ಕವು ಸಿರಿ ಯಾದ ತಲೆಯಾಗಿದೆ ಮತ್ತು ದಮಸ್ಕದ ತಲೆಯು ರೆಚೀನ; ಅರುವತ್ತೈದು ವರುಷಗಳೊಳಗೆ ಎಫ್ರಾಯಾ ಮ್ಯರು ಭಂಗಪಟ್ಟು ಜನಾಂಗವೆನಿಸಿಕೊಳ್ಳರು.
- 9 ಎಫ್ರಾ ಯಾಮಿನ ತಲೆ ಸಮಾರ್ಯ ಸಮಾರ್ಯದ ತಲೆ ರೆಮಲ್ಯನ ಮಗನು. ನೀವು ನಂಬದೆ ಹೋದರೆ ನೀವು ನಿಜವಾಗಿಯೂ ನೆಲೆಗೊಳ್ಳುವದಿಲ್ಲ ಎಂಬದೇ.
- 10 ಇದಲ್ಲದೆ ಕರ್ತನು ಆಹಾಜನಿಗೆ --
- 11 ನಿನ್ನ ದೇವರಾದ ಕರ್ತನಿಂದ ಒಂದು ಗುರುತನ್ನು ಕೇಳು; ಅದು ಕೆಳಗೆ ಆಳದಲ್ಲಾದರೂ ಇಲ್ಲವೆ ಮೇಲೆ ಎತ್ತರದ ಲ್ಲಿದ್ದರೂ ಅದನ್ನು ಕೇಳಿಕೋ ಎಂದು ಹೇಳಿದನು.
- 12 ಆದರೆ ಆಹಾಜನು -- ನಾನು ಕೇಳಿಕೊಳ್ಳುವದಿಲ್ಲ; ಇಲ್ಲವೆ ಕರ್ತನನ್ನು ಪರೀಕ್ಷಿಸುವದಿಲ್ಲ ಅಂದನು.
- 13 ಅದಕ್ಕೆ (ಯೆಶಾಯನು) ದಾವೀದನ ಮನೆಯ ವರೇ, ಈಗ ಕೇಳಿರಿ, ಮನುಷ್ಯರನ್ನು ಬೇಸರಗೊಳಿ ಸುವದು ಅಷ್ಟು ದೊಡ್ಡದಲ್ಲವೆಂದೆಣಿಸಿ ನನ್ನ ದೇವ ರನ್ನೂ ಬೇಸರಗೊಳಿಸುವಿರಾ?
- 14 ಆದಕಾರಣ ಕರ್ತನು ತಾನೇ ಒಂದು ಗುರುತನ್ನು ನಿನಗೆ ಕೊಡು ವನು; ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹಡೆಯುವಳು. ಆತನನ್ನು ಇಮ್ಮಾನು ವೇಲ್ ಎಂದು ಕರೆಯುವರು.
- 15 ಆತನು ಕೆಟ್ಟದ್ದನ್ನು ನಿರಾಕರಿಸಿ ಒಳ್ಳೆಯದನ್ನು ಆರಿಸಿಕೊಳ್ಳುವಷ್ಟು ತಿಳುವ ಳಿಕೆಯು ಬರುವ ತನಕ ಬೆಣ್ಣೆ ಮತ್ತು ಜೇನನ್ನು ತಿನ್ನುವನು.
- 16 ಆ ಮಗುವು ಕೆಟ್ಟದ್ದನ್ನು ನಿರಾಕರಿಸಿ ಒಳ್ಳೆಯದನ್ನು ಆರಿಸಿಕೊಳ್ಳುವದಕ್ಕಿಂತ ಮುಂಚೆಯೇ ನೀನು ಹೇಸಿಕೊಳ್ಳುವ ದೇಶವನ್ನು ಅವಳ ಇಬ್ಬರು ಅರಸರು ತ್ಯಜಿಸಿಬಿಡುವರು.
- 17 ಕರ್ತನು ನಿನ್ನ ಮೇಲೆ ಯೂ ನಿನ್ನ ಜನರ ಮೇಲೆಯೂ ನಿನ್ನ ತಂದೆಯ ಮನೆಯ ಮೇಲೆಯೂ ಯೆಹೂದದಿಂದ ಎಫ್ರಾ ಯಾಮು ಅಗಲಿದಂದಿನಿಂದ ಅಂದರೆ ಅಶ್ಯೂರ ಅರ ಸನ ಕಾಲದಿಂದಲೂ ಬಾರದೆ ಇದ್ದ ದಿವಸಗಳನ್ನು ಬರಮಾಡುವನು.
- 18 ಆ ದಿನದಲ್ಲಿ ಐಗುಪ್ತದ ನದಿಗಳ ಕಟ್ಟಕಡೆ ಯಿಂದ ನೊಣಕ್ಕೂ ಅಶ್ಯೂರ ದೇಶದ ಜೇನು ಹುಳಕ್ಕೂ ಕರ್ತನು ಸಿಳ್ಳುಹಾಕುವನು.
- 19 ಅವು ಬಂದು ಹಾಳಾದ ಕಣಿವೆಗಳಲ್ಲಿಯೂ ಬಂಡೆಗಳ ಬಿರುಕುಗಳಲ್ಲಿಯೂ ಎಲ್ಲಾ ಮುಳ್ಳಿನ ಮೇಲೆಯೂ ಎಲ್ಲಾ ಪೊದೆಗಳಲ್ಲಿಯೂ ಮುತ್ತಿಕೊಳ್ಳುವವು.
- 20 ಅದೇ ದಿನದಲ್ಲಿ ಕರ್ತನು ನದಿಯ ಆಚೆಗಿರುವ ಅಶ್ಯೂರದ ರಾಜನೆಂಬವನಿಂದ ಬಾಡಿಗೆ ಕ್ಷೌರದ ಕತ್ತಿ ಯಿಂದ (ಯೆಹೂದದ) ತಲೆಯನ್ನು ಕಾಲುಕೂದ ಲನ್ನು ಬೋಳಿಸುವನು ಗಡ್ಡವನ್ನು ತೆಗೆದುಬಿಡುವನು.
- 21 ಆ ದಿನದಲ್ಲಿ ಮನುಷ್ಯನು ಒಂದು ಕಡಸನ್ನು ಮತ್ತು ಎರಡು ಕುರಿಗಳನ್ನು ಸಾಕುವನು.
- 22 ಆಗ ಅವು ಸಮೃದ್ಧಿಯಾಗಿ ಹಾಲನ್ನು ಕೊಡುವದರಿಂದ ಅವನು ಬೆಣ್ಣೆಯನ್ನು ತಿನ್ನುವನು; ಆ ದೇಶದಲ್ಲಿ ಉಳಿದಿರುವ ವರೆಲ್ಲರೂ ಬೆಣ್ಣೆಯನ್ನು ಮತ್ತು ಜೇನು ತುಪ್ಪವನ್ನು ತಿನ್ನುವರು.
- 23 ಆ ದಿನದಲ್ಲಿ ಸಾವಿರ ರೂಪಾಯಿ ಬೆಲೆಯ ಸಹಸ್ರ ದ್ರಾಕ್ಷೆಯ ಬಳ್ಳಿಗಳು ಬೆಳೆಯುವ ಪ್ರತಿಯೊಂದು ಪ್ರದೇಶವು ಮುಳ್ಳು ಮತ್ತು ದತ್ತೂರಿ ಗಳಿಂದ ತುಂಬಿರುವದು.
- 24 ದೇಶವೆಲ್ಲಾ ಮುಳ್ಳು ದತ್ತೂರಿಗಳಿಂದ ತುಂಬಿರುವದರಿಂದ ಮನುಷ್ಯರು ಬಿಲ್ಲು ಮತ್ತು ಬಾಣಗಳೊಂದಿಗೆ ಅಲ್ಲಿಗೆ ಬರುವರು.
- 25 ಗುದ್ದಲಿಯಿಂದ ಅಗೆಯುವ ಗುಡ್ಡಗಳ ಮೇಲೆ ಮುಳ್ಳು ದತ್ತೂರಿಗಳಿಗೆ ಹೆದರಿ ಅಲ್ಲಿಗೆ ಬರಲಾರದೆ ಇರುವಿ; ಆದರೆ ಅದು ಎತ್ತುಗಳನ್ನು ಬಿಡುವದಕ್ಕೂ ಚಿಕ್ಕ ಕರುಗಳು ತುಳಿದಾಡುವದಕ್ಕೂ ಎಡೆಯಾಗುವದು.
Isaiah 07
- Details
- Parent Category: Old Testament
- Category: Isaiah
ಯೆಶಾಯ ಅಧ್ಯಾಯ 7