- 1 ಕರ್ತನು ಯಾಕೋಬ್ಯರನ್ನು ಕರುಣಿಸಿ ಮತ್ತೆ (ಇನ್ನೂ) ಇಸ್ರಾಯೇಲ್ಯರನ್ನು ಆದುಕೊಂಡು ಅವರನ್ನು ತಮ್ಮ ಸ್ವಂತ ದೇಶದಲ್ಲಿ ಸೇರಿಸಬೇಕೆಂದಿದ್ದಾನೆ. ಅನ್ಯರು ಅವರೊಂದಿಗೆ ಕೂಡಿ ಬಂದು ಯಾಕೋಬನ ಮನೆತನಕ್ಕೆ ಸೇರಿಕೊಳ್ಳುವರು.
- 2 ಜನರು ಅವರನ್ನು ತೆಗೆದುಕೊಂಡು ತಮ್ಮ ಸ್ಥಳಕ್ಕೆ ಅವರನ್ನು ಬರಮಾಡುವರು. ಆಗ ಇಸ್ರಾಯೇಲಿನ ಮನೆತನದವರು ಕರ್ತನ ದೇಶದಲ್ಲಿ ಆ ಜನಾಂಗದ ವರನ್ನು ಗಂಡು ಹೆಣ್ಣಾಳುಗಳನ್ನಾಗಿ (ದಾಸದಾಸಿಯ ರನ್ನಾಗಿ) ಇಟ್ಟುಕೊಳ್ಳುವರು. ತಮ್ಮನ್ನು ಸೆರೆಹಿಡಿದ ವರನ್ನು ಸೆರೆಹಿಡಿಯುವರು, ತಮ್ಮನ್ನು ಹಿಂಸಿಸಿದವರ ಮೇಲೆ ಅಧಿಕಾರನಡಿಸುವರು.
- 3 ಕರ್ತನು ನಿಮ್ಮ ಸಂಕಟದಿಂದಲೂ ಕಳವಳದಿಂದ ಲೂ ಕಠಿಣವಾದ ಬಿಟ್ಟಿಯ ಸೇವೆಯಿಂದಲೂ ನಿಮ್ಮನ್ನು ವಿಶ್ರಾಂತಿಗೊಳಿಸುವ ದಿನದಲ್ಲಿ ಬಾಬೆಲಿನ ರಾಜನಿಗೆ ವಿರುದ್ಧವಾದ ಈ ಸಾಮತಿಯನ್ನು (ಪದ್ಯವನ್ನು) ನೀವು ಹೀಗೆ ಎತ್ತಿ ಹೇಳಬೇಕು.
- 4 ಹೀಗೆ ಹಿಂಸಕನು ಕೊನೆ ಗೊಂಡನು, ಬಂಗಾರದ ಪಟ್ಟಣವು ಸುಮ್ಮನೆ ಇದೆ.
- 5 ಜನರನ್ನು ಉಗ್ರಕೋಪದಿಂದ ಎಡೆಬಿಡದೆ ಹೊಡೆ ದು ಜನಾಂಗಗಳನ್ನು ಸಿಟ್ಟಿನಿಂದ ತಡೆಯಿಲ್ಲದೆ ಹಿಂಸಿಸಿ
- 6 ಆಳುತ್ತಿದ್ದ ದುಷ್ಟರ ಕೋಲನ್ನೂ ರಾಜರ ದಂಡವನ್ನೂ ಕರ್ತನು ಮುರಿದುಬಿಟ್ಟಿದ್ದಾನೆ. ಯಾವನೂ ಅಡ್ಡಿ ಮಾಡನು.
- 7 ಭೂಲೋಕವೆಲ್ಲಾ ಶಾಂತವಾಗಿ ವಿಶ್ರಾಂತಿ ಗೊಂಡಿದೆ. ಅವರು ಉತ್ಸಾಹಧ್ವನಿಯನ್ನು ಎತ್ತುತ್ತಾರೆ.
- 8 ಹೌದು, ತುರಾಯಿ ಮರಗಳೂ ಲೆಬನೋನಿನ ದೇವದಾರು ಮರಗಳೂ ನೀನು ಬಿದ್ದಂದಿನಿಂದ ಕಡಿಯುವವನು ಯಾವನೂ ತಮ್ಮ ಮೇಲೆ ಬರಲಿಲ್ಲವೆಂದು ನಿನ್ನ ವಿಷಯವಾಗಿ ಉಲ್ಲಾಸಗೊಳ್ಳುತ್ತವೆ.
- 9 ನಿನಗೋ ಸ್ಕರ ನಿನ್ನ ಬರೋಣವನ್ನು ಎದುರುಗೊಳ್ಳುವದಕ್ಕೆ ಪಾತಾಳವು ಕೆಳಗಿನಿಂದ ತಳಮಳಪಡುತ್ತದೆ. ಸತ್ತವ ರನ್ನೂ ಅಂದರೆ, ಭೂಲೋಕದ ಮುಖಂಡರಾಗಿದ್ದವರೆ ಲ್ಲರನ್ನೂ ಕಲಕಿ (ಎಚ್ಚರಿಸಿ) ಜನಾಂಗಗಳ ಎಲ್ಲಾ ರಾಜ ರುಗಳನ್ನು ಅವರ ಸಿಂಹಾಸನಗಳಿಂದ ಎಬ್ಬಿಸುತ್ತದೆ.
- 10 ಅವರೆಲ್ಲರು ನಿನಗೆ--ನಮ್ಮ ಹಾಗೆ ನೀನು ಸಹ ಬಲಹೀನನಾಗಿದ್ದೀ, ನೀನು ನಮ್ಮ ಸಮಾನನಾಗಿದ್ದೀ ಎಂದು ಮಾತಾಡಿ ಹೇಳುವರು.
- 11 ನಿನ್ನ ವೈಭವವೂ ವೀಣೆಗಳ ಸ್ವರವೂ ಸಮಾಧಿಗೆ ಇಳಿಸಲ್ಪಟ್ಟಿವೆ. ನಿನಗೆ ಹುಳುಗಳೇ ಹಾಸಿಗೆ, ನಿನ್ನ ಹೊದಿಕೆಯು ಕ್ರಿಮಿಗಳೇ;
- 12 ಓ ಲೂಸಿಫರ್ ಉದಯದ ಮಗನೇ. ಆಕಾಶದಿಂದ ನೀನು ಹೇಗೆ ಬಿದ್ದೀ? ಜನಾಂಗಗಳನ್ನು ಬಲಹೀನ ಮಾಡಿದ ನೀನು ಭೂಮಿಗೆ ಹೇಗೆ ಕಡಿಯಲ್ಪಟ್ಟಿದ್ದೀ?
- 13 ನೀನು ನಿನ್ನ ಹೃದಯದಲ್ಲಿ ನಾನು ಆಕಾಶಕ್ಕೆ ಏರಿ ದೇವರ ನಕ್ಷತ್ರಗಳ ಮೇಲೆ ನನ್ನ ಸಿಂಹಾಸನವನ್ನು ಘನತೆಗೇರಿಸುವೆನು; ಉತ್ತರ ದಿಕ್ಕಿನ ಕಡೆಗಿರುವ ಸಮೂಹ ಪರ್ವತದ ಮೇಲೆಯೂ ನಾನು ಆಸೀನನಾ ಗುವೆನು.
- 14 ಉನ್ನತವಾದ ಮೇಘ ಮಂಡಲದ ಮೇಲೆ ಏರಿ ಮಹೋನ್ನತನಿಗೆ ಸಮಾನನಾಗುತ್ತೇನೆ ಅಂದು ಕೊಂಡಿದ್ದೆಯಲ್ಲಾ;
- 15 ಆದಾಗ್ಯೂ ಪಾತಾಳದ ಕುಣಿಯ ಪಾರ್ಶ್ವಗಳಿಗೆ ಇಳಿಸಲ್ಪಡುವಿ.
- 16 ನಿನ್ನನ್ನು ನೋಡುವ ವರು ನಿನ್ನನ್ನು ಸೂಕ್ಷ್ಮವಾಗಿ ದೃಷ್ಟಿಸಿ ಯೋಚಿಸುತ್ತಾ --ಭೂಮಿಯನ್ನು ನಡುಗಿಸಿ ರಾಜ್ಯಗಳನ್ನು ಕದಲಿಸಿ ಪಟ್ಟಣವನ್ನು ನಾಶಮಾಡಿ
- 17 ಲೋಕವನ್ನು ಕಾಡ ನ್ನಾಗಿ ಮಾಡಿ ಸೆರೆಹಿಡಿದವರನ್ನು ಮನೆಗೆ ಬಿಡದೆ ಇದ್ದ ವನು ಈ ಮನುಷ್ಯನೋ ಎಂದು ಅಂದುಕೊಳ್ಳುವರು.
- 18 ಜನಾಂಗಗಳ ಅರಸುಗಳೆಲ್ಲಾ ಅವರೆಲ್ಲರೂ ವೈಭವ ದಿಂದ ತಮ್ಮತಮ್ಮ ಮನೆಗಳಲ್ಲಿ ಮಲಗುತ್ತಾರೆ.
- 19 ಆದರೆ ನೀನು ಅಸಹ್ಯವಾದ ಕೊಂಬೆಯಂತೆಯೂ ಕತ್ತಿಯಿಂದ ತಿವಿದು ಗುಂಡಿಯ ಕಲ್ಲುಗಳ ಪಾಲಾಗಿ ಹತರಾದವರ ಉಡುಪಿನಂತೆಯೂ ಕಾಲಕೆಳಗೆ ತುಳಿಯಲ್ಪಟ್ಟ ಹೆಣ ದಂತೆಯೂ ನಿನ್ನ ಸಮಾಧಿಯೊಳಗಿಂದ ಹೊರಗೆ ಹಾಕ ಲ್ಪಟ್ಟಿದ್ದೀ.
- 20 ನೀನು ಅವರೊಂದಿಗೆ ಹೂಣಿಡುವಿಕೆ ಯಲ್ಲಿ ಕೂಡಿಕೊಳ್ಳದೆ ಇರುವಿ. ನಿನ್ನ ದೇಶವನ್ನು ನೀನು ನಾಶಮಾಡಿ ನಿನ್ನ ಜನರನ್ನು ಕೊಂದುಹಾಕಿದಿ. ಕೆಟ್ಟವರ ಸಂತಾನವು ಎಂದೆಂದಿಗೂ ಹೆಸರು ಹೊಂದು ವದಿಲ್ಲ.
- 21 ಅವರು ಏಳದೆ ಇಲ್ಲವೆ ದೇಶವನ್ನು ವಶ ಪಡಿಸಿಕೊಳ್ಳದೆ ಇಲ್ಲವೆ ಲೋಕವನ್ನು ಪಟ್ಟಣಗಳಿಂದ ತುಂಬಿಸದಂತೆ ಅವರ ತಂದೆಗಳ ಅಪರಾಧದ ನಿಮಿತ್ತ ಅವನ ಮಕ್ಕಳ ಕೊಲೆಗೆ ಸಿದ್ಧಮಾಡಿರಿ.
- 22 ಅವರಿಗೆ ವಿರುದ್ಧವಾಗಿ ಏಳುತ್ತೇನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಬಾಬೆಲಿನಿಂದ ಹೆಸರನ್ನೂ ಉಳಿದ ಜನರನ್ನೂ ಮಗನನ್ನೂ ಸೋದರಳಿಯನನ್ನೂ ನಿರ್ಮೂಲ ಮಾಡುವೆನು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- 23 ಅದನ್ನು ಸಹ ಮುಳ್ಳುಹಂದಿಗೆ ಬಾಧ್ಯ ವಾಗಿಯೂ ನೀರಿನ ಕುಣಿಗಳಾಗಿಯೂ ಮಾಡಿ ನಾಶ ವೆಂಬ ಕಸಬರಿಕೆಯಿಂದ ಗುಡಿಸುತ್ತೇನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- 24 ಸೈನ್ಯಗಳ ಕರ್ತನು ಆಣೆಯಿಟ್ಟು ಹೇಳುವದೇನ ಂದರೆ--ನಾನು ನೆನಸಿದ ಪ್ರಕಾರವೇ ನೆರವೇರುವದು; ನಾನು ಉದ್ದೇಶಿಸಿದ್ದೇ ನಿಲ್ಲುವದು.
- 25 ಏನಂದರೆ ಅಶ್ಶೂ ರ್ಯರನ್ನು ನನ್ನ ದೇಶದಲ್ಲಿ ಮುರಿದುಬಿಡುತ್ತೇನೆ. ನನ್ನ ಪರ್ವತಗಳ ಮೇಲೆ ಅವನನ್ನು ತುಳಿದುಬಿಡುತ್ತೇನೆ; ಅವನ ನೊಗವು ಅವರ ಮೇಲಿನಿಂದ ತೊಲಗಿ ಅವ ನ ಭಾರವು ಅವನ ಭುಜದ ಮೇಲಿನಿಂದ ತೊಲಗು ವದು.
- 26 ಇದೇ ಸಮಸ್ತ ಭೂಮಿಯ ವಿಷಯ ಆಲೋ ಚಿಸಿದ ಉದ್ದೇಶ. ಇದೇ ಜನಾಂಗಗಳ ಮೇಲೆಲ್ಲಾ ಚಾಚಿದ ನನ್ನ ಕೈ.
- 27 ಸೈನ್ಯಗಳ ಕರ್ತನುಉದ್ದೇಶಿಸಿ ದ್ದಾನೆ; ಅದನ್ನು ಯಾರು ವ್ಯರ್ಥಪಡಿಸುವರು. ಆತನ ಕೈಚಾಚಿದೆ, ಹಿಂದಕ್ಕೆ ತಳ್ಳುವವರು ಯಾರು ಎಂಬದೇ.
- 28 ಅರಸನಾದ ಆಹಾಜನು ಸತ್ತ ವರುಷದಲ್ಲಿ ಈ ದೇವವಾಣಿಯಾಯಿತು.
- 29 ಸಮಸ್ತ ಫಿಲಿಷ್ಟಿಯರೇ, ನಿಮ್ಮನ್ನು ಹೊಡೆದ ಆತನ ಕೋಲು ಮುರಿದುಹೋಯಿ ತೆಂದು ನೀವು ಉಲ್ಲಾಸಿಸಬೇಡಿರಿ; ಹಾವಿನ ಸಂತಾನ ದಿಂದ ವಿಷಸರ್ಪವು ಉಂಟಾಗುವದು; ಅದರ ಫಲವು ಹಾರುವ ಅಗ್ನಿಮಯ ಸರ್ಪವೇ.
- 30 ದೀನರ ಚೊಚ್ಚಲು ಮಕ್ಕಳು ಉಣ್ಣುವರು, ದಿಕ್ಕಿಲ್ಲದವರು ನಿರ್ಭಯವಾಗಿ ಮಲಗಿಕೊಳ್ಳುವರು; ನಿನ್ನ ಸಂತಾನವನ್ನು ಕ್ಷಾಮದಿಂದ ಸಾಯಿಸುವೆನು. ನಿನ್ನಲ್ಲಿ ಉಳಿದವರನ್ನು ಅವನು ಹತ ಮಾಡುವನು.
- 31 ಓ ದ್ವಾರವೇ, ಗೋಳಾಡು; ಓ ಪಟ್ಟಣವೇ, ಕೂಗು; ನಿನ್ನ ಫಿಲಿಷ್ಟಿ ಯರೆಲ್ಲಾ ಕುಂದಿ ಹೋಗಿದ್ದಾರೆ; ಅವರ ಹೊಗೆಯು ಉತ್ತರದಿಂದ ಬರುತ್ತದೆ. ಆತನ ನೇಮಕವಾದ ಕಾಲ ಗಳಲ್ಲಿ ಯಾವನೂ ಒಂಟಿಯಾಗಿರುವದಿಲ್ಲ.
- 32 ಆಗ ಜನಾಂಗಗಳ ದೂತರಿಗೆ ಯಾವ ಉತ್ತರವನ್ನು ಕೊಡ ಬೇಕೆಂದರೆ? ಕರ್ತನು ಚೀಯೋನನ್ನು ಸ್ಥಾಪಿಸಿದ್ದಾನೆ, ಆತನ ಜನರಲ್ಲಿನ ಬಡವರು ಅದನ್ನು ಆಶ್ರಯಿಸಿ ಕೊಳ್ಳುವರು ಎಂಬದೇ.
Isaiah 14
- Details
- Parent Category: Old Testament
- Category: Isaiah
ಯೆಶಾಯ ಅಧ್ಯಾಯ 14