wheel

AJC Publications and Media Portal

 

But the Comforter, which is the Holy Ghost, whom the Father will send in my name, he shall teach you all things,
and bring all things to your remembrance, whatsoever I have said unto you. John 14:26


ಯೆಶಾಯಅಧ್ಯಾಯ 21
  • 1 ಸಮುದ್ರದ ಅಡವಿಯ ವಿಷಯವಾದ ದೈವೋಕ್ತಿ ದಕ್ಷಿಣ ಸೀಮೆಯಲ್ಲಿ ಬೀಸುವ ಬಿರುಗಾಳಿ ದಾಟಿಹೋಗುವಂತೆ ಅದು ಮರುಭೂಮಿ ಕಡೆಯಿಂದ ಭಯಂಕರವಾದ ದೇಶದಿಂದ ಬರುತ್ತದೆ.
  • 2 ಘೋರದರ್ಶನವು ನನಗೆ ತಿಳಿಯಬಂದಿದೆ. ಬಾಧ ಕನು ಬಾಧಿಸುತ್ತಿದ್ದಾನೆ. ಸೂರೆಗಾರನು ಸೂರೆಮಾಡು ತ್ತಿದ್ದಾನೆ. ಏಲಾಮೇ, ಏಳು ಮೇದ್ಯವೇ ಮುತ್ತಿಗೆ ಹಾಕು, ಅದರ ನಿಟ್ಟುಸಿರನ್ನೆಲ್ಲಾ ನಿಲ್ಲಿಸಿಬಿಟ್ಟಿದ್ದೇನೆ.
  • 3 ಆದ ದರಿಂದ ನನ್ನ ಸೊಂಟಗಳು ನೋವಿನಿಂದ ತುಂಬಿವೆ. ಹೆರುವವಳ ವೇದನೆಗಳಂತಿರುವ ವೇದನೆಗಳು ನನ್ನನ್ನು ಹಿಡಿದಿವೆ; ಕೇಳಕೂಡದ ಹಾಗೆ ಸಂಕಟಪಡುತ್ತೇನೆ, ನೋಡಕೂಡದ ಹಾಗೆ ಭ್ರಾಂತನಾಗಿದ್ದೇನೆ.
  • 4 ನನ್ನ ಹೃದಯವು (ಎದುರಿಸುತ್ತದೆ) ಗಾಬರಿಗೊಂಡಿದೆ, ನಡು ಗುವಿಕೆಯು ನನ್ನನ್ನು ಕಳವಳಗೊಳಿಸಿದೆ, ನನ್ನ ಆನಂ ದದ ರಾತ್ರಿಯನ್ನು ನನಗೆ ಭಯಭ್ರಾಂತಿಯಾಗಿ ಮಾಡಿದ್ದಾನೆ.
  • 5 ಮೇಜನ್ನು ಸಿದ್ಧಮಾಡು ಬುರುಜಿನ ಮೇಲೆ ಕಾವ ಲಿರು, ಉಣ್ಣು, ಕುಡಿ; ಪ್ರಭುಗಳೇ, ಏಳಿರಿ, ಗುರಾಣಿಗೆ ಎಣ್ಣೆಯನ್ನು ಬಳಿಯಿರಿ.
  • 6 ಕರ್ತನು ನನಗೆ ಹೇಳಿರುವ ದೇನಂದರೆ--ಹೋಗು, ಕಾವಲುಗಾರನನ್ನು ನೇಮಿಸು. ಅವನು ಕಂಡದ್ದನ್ನು ತಿಳಿಸಲಿ.
  • 7 ಅವನು ಜೋಡಿ ಜೋಡಿಯಾಗಿ ಬರುವ ರಥ ಸವಾರರ ಸಾಲನ್ನು ಕತ್ತೆಗಳ, ಒಂಟೆಗಳ, ರಥಗಳ ಸಾಲುಗಳನ್ನು ನೋಡಿ ದರೆ, ಬಹು ಗಮನದಿಂದ ಕಿವಿಗೊಟ್ಟು ಗಮನಿಸಲಿ ಎಂಬದೇ.
  • 8 ಬಳಿಕ ಅವನು ಸಿಂಹದಂತೆ ಕೂಗಿದ್ದೇ ನಂದರೆ, ನನ್ನ ಒಡೆಯನೇ, ನಾನು ಹಗಲೆಲ್ಲಾ ಕಾವ ಲಿನ ಬುರುಜಿನ ಮೇಲೆ ನಿಂತಿದ್ದೇನೆ. ರಾತ್ರಿಯೆಲ್ಲಾ ಕಾವಲಿನ ಕೆಲಸ ನನಗೆ ಬಿದ್ದಿದೆ.
  • 9 ಇಗೋ, ಸವಾರರು ಜೋಡಿ ಜೋಡಿಯಾಗಿ ಬರುತ್ತಾರೆ ಮತ್ತು ಪ್ರತ್ಯುತ್ತರ ವಾಗಿ--ಬಾಬೆಲ್‌ ಬಿತ್ತು, ಆದರೆ ಕೆತ್ತಿದ ದೇವತೆಗಳ ವಿಗ್ರಹಗಳನ್ನು ಮುರಿದು ನೆಲಸಮ ಮಾಡಿಬಿಟ್ಟರು ಎಂದು ಹೇಳಿದನು.
  • 10 ನಾನು ತುಳಿಯುವ ತೆನೆಯೇ, ನನ್ನ ಕಣದ ಧಾನ್ಯವೇ, ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ಕರ್ತನಿಂದ ನಾನು ಕೇಳಿದ್ದನ್ನು ನಿಮಗೆ ತಿಳಿಸಿದ್ದೇನೆ.
  • 11 ದೂಮದ ವಿಷಯವಾದ ದೈವೋಕ್ತಿ, ಆತನು ಸೇಯಾರಿನಿಂದ ನನಗೆ ಕರೆದನು. ಹೇಗಂದರೆ, ಕಾವ ಲುಗಾರನೇ, ಈಗ ರಾತ್ರಿ ಎಷ್ಟು ಕಳೆಯಿತು? ಕಾವಲು ಗಾರನೇ ರಾತ್ರಿ ಎಷ್ಟು ಕಳೆಯಿತು?
  • 12 ಉದಯವು ಬರುತ್ತದೆ, ರಾತ್ರಿಯೂ ಬರುತ್ತದೆ, ವಿಚಾರಿಸಬೇಕಾದರೆ ವಿಚಾರಿಸಿರಿ; ತಿರಿಗಿ ಬನ್ನಿರಿ ಎಂದು ಕಾವಲುಗಾರನು ಹೇಳಿದನು.
  • 13 ಅರಬಿಯದ ವಿಷಯವಾದ ದೈವೋಕ್ತಿ. ಓ ದೇದಾನ್ಯರ ಪ್ರಯಾಣಿಕರೇ, ಅರಬಿಯದ ಕಾಡಿನಲ್ಲಿ ಇಳಿದುಕೊಳ್ಳಿರಿ.
  • 14 ತೇಮಾ ದೇಶದ ನಿವಾಸಿಗಳೇ, ಬಾಯಾರಿದವರಿಗೆ ನೀರನ್ನು ತರುತ್ತಾರೆ. ಓಡಿ ಹೋಗುವವರನ್ನು ತಮ್ಮ ರೊಟ್ಟಿಯಿಂದ ನಿವಾರಿಸು ತ್ತಾರೆ.
  • 15 ಕತ್ತಿ, ಹಿರಿದ ಕತ್ತಿ, ಬಾಗಿದ ಬಿಲ್ಲು, ಕಠಿಣ ಯುದ್ಧ ಇವುಗಳ ಕಡೆಯಿಂದ ಓಡಿಹೋಗುತ್ತಿದ್ದಾರಷ್ಟೆ.
  • 16 ಕರ್ತನು ನನಗೆ ಹೀಗೆ ಹೇಳುತ್ತಾನೆ--ಕೂಲಿಯವನ ವರುಷಗಳಂತೆ ಒಂದು ವರುಷದೊಳಗೆ ಕೇದಾರಿನ ವೈಭವವು ತೀರಿಹೋಗುವದು.
  • 17 ಬಿಲ್ಲುಗಾರರಲ್ಲಿ ಉಳಿದವರು ಕೇದಾರಿನ ಮಕ್ಕಳ ಬಲಿಷ್ಠರು ಕುಗ್ಗಿಸಲ್ಪಡು ವರು ಎಂದು ಇಸ್ರಾಯೇಲ್ಯರ ದೇವರಾದ ಕರ್ತನು ಇದನ್ನು ನುಡಿದಿದ್ದಾನೆ.