- 1 ತೂರಿನ ವಿಷಯವಾದ ದೈವೋಕ್ತಿ. ತಾರ್ಷೀಷಿನ ಹಡಗುಗಳೇ, ಗೋಳಾ ಡಿರಿ; ಅದು ಹಾಳಾಗಿರುವದರಿಂದ ನಿಮಗೆ ಮನೆಯಿಲ್ಲ ಮತ್ತು ಒಳಗೆ ಪ್ರವೇಶವೂ ಇಲ್ಲ. ಇದು ಕಿತ್ತೀಮ್ ದೇಶದವರಿಂದ ಅವರಿಗೆ ತಿಳಿಯಿತು.
- 2 ದ್ವೀಪಗಳ ನಿವಾಸಿಗಳೇ, ಸಮುದ್ರವನ್ನು ದಾಟುವ ಚೀದೋನಿನ ವರ್ತಕರಿಂದ ಸಮೃದ್ಧಿಯನ್ನು ಹೊಂದಿದವರೇ, ಮೌನ ವಾಗಿರ್ರಿ.
- 3 ವಿಶಾಲವಾದ ನೀರುಗಳಿಂದ ಸೀಹೋರಿನ ಧಾನ್ಯವೂ ನದಿಯ ಸುಗ್ಗಿಯೂ ನೈಲಿನ ಬೆಳೆಯಿಂ ದಲೂ ಅದಕ್ಕೆ ಆದಾಯವಾಗಿತ್ತು. ಅನೇಕ ಜನಾಂಗ ಗಳಿಗೆ ವ್ಯಾಪಾರ ಸ್ಥಳವಾಗಿತ್ತು.
- 4 ಚೀದೋನೇ, ನಾಚಿಕೆ ಪಡು, ಸಮುದ್ರವು, ಸಮುದ್ರದುರ್ಗವೂ--ನಾವು ಪ್ರಸವವೇದನೆ ಪಡುವದಿಲ್ಲ, ಹೆರುವದಿಲ್ಲ; ಇಲ್ಲವೆ ಮಕ್ಕಳನ್ನು ಬೆಳೆಸುವದಿಲ್ಲ ಕನ್ಯಾಸ್ತ್ರೀಯರನ್ನು ಸಾಕಿ ಸಲ ಹಲಿಲ್ಲ ಎಂದು ಹೇಳಿದೆಯಷ್ಟೆ.
- 5 ಐಗುಪ್ತದ ಸುದ್ದಿಗೆ ಆದ ಹಾಗೆ ತೂರಿನ ಸುದ್ದಿಗೆ ಬಹಳ ವೇದನೆಪಡು ವರು.
- 6 ತಾರ್ಷೀಷಿಗೆ ದಾಟಿಹೋಗಿರಿ, ದ್ವೀಪ ನಿವಾ ಸಿಗಳೇ ಗೋಳಾಡಿರಿ.
- 7 ನಿಮ್ಮ ಉಲ್ಲಾಸದ ಪಟ್ಟಣವೂ ಪೂರ್ವಕಾಲದ ಹಳೆಯ ಸಂಪ್ರದಾಯದಿಂದ ಬಂದಿದ್ದೂ ಇದೆಯೋ? ಅವಳ ಸ್ವಂತ ಕಾಲುಗಳು ಅದನ್ನು ದೂರ ದೇಶದಲ್ಲಿ ನಿವಾಸಿಸುವದಕ್ಕೆ ತಕ್ಕೊಂಡು ಹೋ ಗುವವು.
- 8 ಅದು ಕಿರೀಟದಾಯಕವಾದ ಪಟ್ಟಣವು ಅದರ ವರ್ತಕರಾದ ಪ್ರಭುಗಳು, ವ್ಯಾಪಾರಿಗಳು ಭೂಮಿಯಲ್ಲಿ ಘನವುಳ್ಳವರಾಗಿದ್ದಾರೆ. ಇಂಥ ತೂರಿಗೆ ವಿರುದ್ಧವಾಗಿ ಈ ಆಲೋಚನೆ ಮಾಡಿದವರು ಯಾರು?
- 9 ಗರ್ವದ ಸಕಲ ವೈಭವವನ್ನು ಹೊಲಸು ಮಾಡಬೇ ಕೆಂತಲೂ ಭೂಮಿಯಲ್ಲಿ ಘನವುಳ್ಳವರೆಲ್ಲರನ್ನು ಅವ ಮಾನಪಡಿಸಬೇಕೆಂತಲೂ ಸೈನ್ಯಗಳ ಕರ್ತನೇ, ಹೀಗೆ ಸಂಕಲ್ಪಿಸಿದ್ದಾನೆ.
- 10 ತಾರ್ಷೀಷಿನ ಮಗಳೇ, ನದಿಯಂತೆ ನಿನ್ನ ದೇಶದಲ್ಲಿ ಹಾದುಹೋಗು, ಅಲ್ಲಿ ಇನ್ನು ಬಲವು ಇರುವುದೇ ಇಲ್ಲ.
- 11 ಆತನು ಸಮುದ್ರದ ಮೇಲೆ ತನ್ನ ಕೈಚಾಚಿ ರಾಜ್ಯಗಳನ್ನು ನಡುಗಿಸಿದ್ದಾನೆ; ಕರ್ತನು ವ್ಯಾಪಾರದ ಪಟ್ಟಣವನ್ನು (ಕಾನಾನ್) ಅದರ ದುರ್ಗ ಗಳನ್ನು ನಾಶಮಾಡಬೇಕೆಂದು ಆಜ್ಞಾಪಿಸಿದ್ದಾನೆ.
- 12 ಆತನು ಹೇಳಿದ್ದೇನಂದರೆ--ಹಿಂಸೆಗೆ ಈಡಾದ ಕನ್ಯೆಯಂತಿರುವ ಚೀದೋನ್ ನಗರಿಯೇ, ಇನ್ನು ಮೇಲೆ ನಿನಗೆ ಹರ್ಷವೇ ಇಲ್ಲ; ಎದ್ದು ಕಿತ್ತೀಮಿಗೆ ಸಮುದ್ರದ ಮೇಲೆ ಹಾದುಹೋಗು ಅಲ್ಲಿಯೂ ನಿನಗೆ ವಿಶ್ರಾಂತಿ ಇರದು.
- 13 ಇಗೋ, ಕಸ್ದೀಯರ ದೇಶವು! ಅಶ್ಶೂರರು ಅದನ್ನು ಅರಣ್ಯ ನಿವಾಸಿಗಳಿಗೆ ಈಡು ಮಾಡುವತನಕ ಈ ಜನರು ಇರಲಿಲ್ಲ. (ನಿರ್ನಾ ಮವಾಗಿರಲಿಲ್ಲ) ಅವರು ಗೋಪುರಗಳನ್ನೂ ಅದರ ಅರಮನೆಗಳನ್ನೂ ಕಟ್ಟಿಸಿಕೊಂಡು ಅದನ್ನು ಹಾಳು ಮಾಡಿದ್ದಾರೆ.
- 14 ತಾರ್ಷೀಷಿನ ಹಡಗುಗಳೇ, ಗೋ ಳಾಡಿರಿ! ನಮ್ಮ ಆಶ್ರಯಸ್ಥಾನವು ಹಾಳಾಯಿತು.
- 15 ಆ ದಿವಸದಲ್ಲಿ ಆಗುವದೇನಂದರೆ, ತೂರ್ ಪಟ್ಟಣವು ಒಬ್ಬ ಅರಸನ ದಿವಸಗಳ ಪ್ರಕಾರ ಎಪ್ಪತ್ತು ವರುಷಗಳ ತನಕ (ಮೂಲ ದಿನಗಳು) ಜ್ಞಾಪಕಕ್ಕೆ ಬಾರದೇ ಇರುವದು; ಎಪ್ಪತ್ತು ವರುಷಗಳ ಕೊನೆಯಲ್ಲಿ ತೂರ್ ಪಟ್ಟಣವು ಸೂಳೆಯರ ವಿಷಯವಾದ ಗೀತೆಯ ಹಾಗಾಗುವದು.
- 16 ಮರೆತುಹೋದ ಸೂಳೆಯೇ, ಕಿನ್ನರಿಯನ್ನು ತಕ್ಕೋ, ಪಟ್ಟಣಗಳಲ್ಲಿ ಅಲೆಯುತ್ತಾ ನೀನು ನೆನಪಾಗುವ ಹಾಗೆ ಚೆನ್ನಾಗಿ ನುಡಿಸಿ ಬಹಳ ಗೀತೆಗಳನ್ನು ಹಾಡು (ಎಂಬದೇ).
- 17 ಎಪ್ಪತ್ತು ವರುಷ ಗಳಾದ ಮೇಲೆ ಆಗುವದೇನಂದರೆ -- ಕರ್ತನು ತೂರನ್ನು ಪರಾಮರಿಸುವನು (ಹಿತ ತರುವನು). ಅದು ತನ್ನ ಆದಾಯಕ್ಕಾಗಿ ಹಿಂದಿರುಗಿ ಭೂಲೋಕ ದಲ್ಲಿರುವ ಎಲ್ಲಾ ರಾಜ್ಯಗಳ ಸಂಗಡ ಭೂಮಿಯ ಮೇಲೆ ಸೂಳೆತನ ಮಾಡುವದು.
- 18 (ಆದರೆ) ಅವಳ ವ್ಯಾಪಾರವೂ ಆದಾಯವೂ ಬೊಕ್ಕಸದಲ್ಲಿ ಹಾಕದೆ ಇಲ್ಲವೆ ಇಟ್ಟುಕೊಳ್ಳದೆ ಕರ್ತನಿಗೆ ಪರಿಶುದ್ಧವಾಗು ವದು. ಅವಳ ವ್ಯಾಪಾರವು ಕರ್ತನ ಸನ್ನಿಧಾನದಲ್ಲಿ ವಾಸಿಸುವ ವರೆಗೆ ಬೇಕಾದಷ್ಟು ಅನ್ನವನ್ನೂ ಶ್ರೇಷ್ಠವಾದ ಉಡುಪನ್ನೂ ಒದಗಿಸಲು ಅನು ಕೂಲವಾಗುವದು.
Isaiah 23
- Details
- Parent Category: Old Testament
- Category: Isaiah
ಯೆಶಾಯ ಅಧ್ಯಾಯ 23