- 1 ಇದಾದ ಮೇಲೆ ಅರಸನಾದ ಹಿಜ್ಕೀಯನು ಅದನ್ನು ಕೇಳಿದಾಗ ಅವನು ತನ್ನ ಬಟ್ಟೆಗ ಳನ್ನು ಹರಿದುಕೊಂಡು ಗೋಣೀತಟ್ಟಿನಿಂದ ಮುಚ್ಚಿ ಕೊಂಡು ಕರ್ತನ ಆಲಯಕ್ಕೆ ಹೋದನು.
- 2 ಇದಲ್ಲದೇ ಅವನು ಮನೆಯ ಮೇಲ್ವಿಚಾರಕನಾಗಿದ್ದ ಎಲ್ಯಾಕೀಮ್, ಲೇಖಕನಾದ ಶೆಬ್ನ, ಹಿರಿಯರಾದ ಯಾಜಕರು ಇವ ರನ್ನು ಕರೆಸಿ--ನೀವು ಗೋಣೀತಟ್ಟನ್ನು ಮುಚ್ಚಿಕೊಂಡು, ಆಮೋಚನ ಮಗನೂ ಪ್ರವಾದಿಯೂ ಆಗಿರುವ ಯೆಶಾಯನ ಬಳಿಗೆ ಹೋಗಿರಿ ಎಂದು ಹೇಳಿಕಳುಹಿ ಸಿದನು.
- 3 ಆಗ ಅವರು ಅವನಿಗೆ--ಈ ದಿವಸವು ಕಷ್ಟಕರವಾಗಿಯೂ ಗದರಿಕೆಯಾಗಿಯೂ ದೂಷಣೆಯಾಗಿಯೂ ಇದೆ. ಪ್ರಸವವೇದನೆಯ ಕಾಲವು ಬಂದದೆ, ಆದರೆ ಹೆರುವದಕ್ಕೆ ಬಲ ಸಾಲದು.
- 4 ನಿನ್ನ ದೇವರಾಗಿರುವ ಕರ್ತನು ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ಮಾತುಗಳನ್ನು ಕೇಳಿರುವನು; ಅವನು ತನ್ನ ಯಜಮಾನನ ಹೆಸರಿನಲ್ಲಿ ಜೀವಸ್ವರೂ ಪನಾದ ದೇವರನ್ನು ದೂಷಿಸಿದ್ದರಿಂದ ಆತನು ಅವನಿಗೆ ಮುಯ್ಯಿ ತೀರಿಸಾನು; ಆದದರಿಂದ ಉಳಿದಿರುವ ಸ್ವಲ್ಪ ಜನರಿಗೋಸ್ಕರ ಆತನನ್ನು ಪ್ರಾರ್ಥಿಸು ಎಂಬದಾಗಿ ಹಿಜ್ಕೀಯನು ಅನ್ನುತ್ತಾನೆ ಎಂದು ಹೇಳಿದರು.
- 5 ಅರಸ ನಾದ ಹಿಜ್ಕೀಯನ ಕಡೆಯಿಂದ ತನ್ನ ಬಳಿಗೆ ಬಂದ ಸೇವಕರಿಗೆ ಯೆಶಾಯನು--
- 6 ಅಶ್ಶೂರದ ಅರಸನ ಸೇವಕರು ನನ್ನನ್ನು ದೂಷಿಸಿದ ಮಾತುಗಳನ್ನು ನೀನು ಕೇಳಿದ್ದೀ; ಆದರೆ ನೀನು ಅವುಗಳಿಗೆ ಹೆದರಬೇಡ.
- 7 ಇಗೋ, ನಾನು ಅವನ ಮೇಲೆ ಒಂದು ವಿಪತ್ತನ್ನು ಕಳುಹಿಸುವೆನು. ಅವನು ಒಂದು ಸುದ್ದಿಯನ್ನು ಕೇಳಿ ತಿರುಗಿಕೊಂಡು ಸ್ವದೇಶಕ್ಕೆ ಹೋಗಿ ಅಲ್ಲಿ ಕತ್ತಿಯಿಂದ ಬೀಳುವಂತೆ ಮಾಡುವೆನು ಎಂಬ ಈ ಮಾತುಗಳನ್ನು ನಿಮ್ಮ ಯಜಮಾನರಿಗೆ ತಿಳಿಸಿರಿ ಎಂದು ಹೇಳಿದನು.
- 8 ಹೀಗೆ ರಬ್ಷಾಕನು ಹಿಂತಿರುಗಿ ಹೋಗುವಾಗ ದಾರಿ ಯಲ್ಲಿ ಅಶ್ಶೂರದ ಅರಸನು ಲಾಕೀಷನ್ನು ಬಿಟ್ಟು ಹೋದನೆಂಬ ವರ್ತಮಾನ ಕೇಳಿ ಲಿಬ್ನಕ್ಕೆ ಹೋಗಿ ಅಲ್ಲಿ ಅವನನ್ನು ಕಂಡನು. ಆಗ ಅವನು ಆ ಪಟ್ಟಣಕ್ಕೆ ವಿರೋಧವಾಗಿ ಯುದ್ಧಮಾಡುತ್ತಾ ಇದ್ದನು.
- 9 ಅಷ್ಟ ರಲ್ಲಿ ಇಥಿಯೋಪ್ಯದ ಅರಸನಾದ ತಿರ್ಹಾಕನು ತನಗೆ ವಿರೋಧವಾಗಿ ಯುದ್ಧಮಾಡುವದಕ್ಕೆ ಹೊರಟಿದ್ದಾ ನೆಂಬ ಸುದ್ದಿಯನ್ನು ಅಶ್ಶೂರದ ಅರಸನು ಕೇಳಿ--
- 10 ನೀನು ನಂಬುವ ದೇವರು, ಯೆರೂಸಲೇಮು ಅಶ್ಶೂರದ ಅರಸನಿಗೆ ವಶವಾಗುವದಿಲ್ಲವೆಂದು ಹೇಳಿ ನಿನ್ನನ್ನು ಮೋಸಗೊಳಿಸಾನು;
- 11 ಇಗೋ, ಅಶ್ಶೂರದ ಅರಸರು ಎಲ್ಲಾ ದೇಶಗಳನ್ನು ಪೂರ್ಣವಾಗಿ ನಾಶ ಮಾಡಿದರೆಂದು ನೀನು ಕೇಳಿದಿಯಲ್ಲಾ; ಹೀಗಿದ್ದ ಮೇಲೆ ನೀನು ಬಿಡುಗಡೆಯಾಗುವಿಯೋ?
- 12 ನನ್ನ ಪಿತೃಗಳು ಗೋಜಾನ್, ಖಾರಾನ್, ರೆಚೆಫ್ ಎಂಬ ಪಟ್ಟಣ ಗಳನ್ನು ತೆಲಸ್ಸಾರ್ ಪ್ರಾಂತ್ಯದಲ್ಲಿರುವ ಏದೆನಿನ ಜನ ರನ್ನು ನಾಶಮಾಡುವದಕ್ಕೆ ಹೋದಾಗ ಜನಾಂಗಗಳ ದೇವರುಗಳು ಅವರನ್ನು ಬಿಡುಗಡೆ ಮಾಡಿದವೋ?
- 13 ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ, ಇವ್ವಾ ಎಂಬ ಪಟ್ಟಣಗಳ ಅರಸರು ಏನಾದರೂ ಎಂಬ ನನ್ನ ಮಾತನ್ನು ಯೆಹೂದದ ಅರಸನಾದ ಹಿಜ್ಕೀಯನಿಗೆ ಹೇಳಿರಿ ಎಂಬದಾಗಿ ಸೇವಕರನ್ನು ಹಿಜ್ಕೀಯನ ಬಳಿಗೆ ಕಳುಹಿಸಿದನು.
- 14 ಹಿಜ್ಕೀಯನು ಆ ಸೇವಕರ ಕೈಯಿಂದ ಪತ್ರವನ್ನು ತೆಗೆದುಕೊಂಡು ಅದನ್ನು ಓದಿದನು; ಹಿಜ್ಕೀಯನು ಕರ್ತನ ಆಲಯಕ್ಕೆ ಹೋಗಿ ಅದನ್ನು ಕರ್ತನ ಮುಂದೆ ತೆರೆದಿಟ್ಟು,
- 15 ಸೈನ್ಯಗಳ ಕರ್ತನೇ, ಕೆರೂಬಿಗಳ ಮಧ್ಯದಲ್ಲಿ ವಾಸವಾಗಿರುವ ಇಸ್ರಾ ಯೇಲ್ ದೇವರೇ, ನೀನೇ, ನೀನೊಬ್ಬನೇ, ಎಲ್ಲಾ ಭೂರಾಜ್ಯಗಳ ದೇವರು.
- 16 ನೀನೇ ಭೂಮ್ಯಾಕಾಶಗಳನ್ನು ಉಂಟು ಮಾಡಿದವನು.
- 17 ಓ ಕರ್ತನೇ, ಕಿವಿಗೊಟ್ಟು ಕೇಳು; ಓ ಕರ್ತನೇ, ನಿನ್ನ ಕಣ್ಣುಗಳನ್ನು ತೆರೆದು ನೋಡು; ಸನ್ಹೇರೀಬನು ಜೀವವುಳ್ಳ ದೇವರನ್ನು ದೂಷಿಸಿ ಕಳುಹಿಸಿದ ಮಾತುಗಳನ್ನೆಲ್ಲಾ ಕೇಳು.
- 18 ಕರ್ತನೇ, ಅಶ್ಶೂರದ ಅರಸರು ಸಕಲ ಜನಾಂಗ ಗಳನ್ನೂ ದೇಶಗಳನ್ನೂ ಹಾಳುಮಾಡಿ, ಅವರ ದೇವತೆ ಗಳನ್ನು ಸಹ ಬೆಂಕಿಯಲ್ಲಿ ಹಾಕಿದ್ದು ನಿಜ.
- 19 ಅವು ದೇವರುಗಳಲ್ಲ, ಮರ, ಕಲ್ಲು, ಮನುಷ್ಯರ ಕೈ ಕೆಲಸ ಗಳೇ ಆದದರಿಂದಲೇ ಅವರು ಅವುಗಳನ್ನು ಹಾಳು ಮಾಡಿದರು.
- 20 ಹೀಗಿರುವದರಿಂದ ಓ ಕರ್ತನಾದ ನಮ್ಮ ದೇವರೇ, ನೀನೇ, ನೀನೊಬ್ಬನೇ ಕರ್ತನೆಂದು ಭೂಮಿಯ ಎಲ್ಲಾ ರಾಜ್ಯಗಳು ತಿಳಿದುಕೊಳ್ಳುವಂತೆ ಅವನ ಕೈಯಿಂದ ನಮ್ಮನ್ನು ರಕ್ಷಿಸು ಎಂದು ಹಿಜ್ಕೀಯನು ಕರ್ತನಿಗೆ ಪ್ರಾರ್ಥಿಸಿದನು.
- 21 ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿ ಕಳುಹಿಸಿದ್ದೇನಂದರೆ--ನೀನು ಅಶ್ಶೂರದ ಅರಸನಾದ ಸನ್ಹೇರೀಬನ ವಿಷಯವಾಗಿ ಮಾಡಿದ ಬಿನ್ನಹವನ್ನು ಕೇಳಿ ಅವನನ್ನು ಕುರಿತು
- 22 ಇಸ್ರಾಯೇಲ್ ದೇವರಾದ ಕರ್ತನು ಹೇಳುವದೇ ನಂದರೆ--ಕನ್ನಿಕೆಯಾದ ಚೀಯೋನ್ ಕುಮಾರ್ತೆಯು ನಿನ್ನನ್ನು ತಿರಸ್ಕರಿಸಿ, ಪರಿಹಾಸ್ಯ ಮಾಡುತ್ತಾಳೆ; ಯೆರೂಸ ಲೇಮಿನ ಕುಮಾರ್ತೆಯು ನಿನ್ನ ಹಿಂದೆ ತಲೆಯನ್ನು ಅಲ್ಲಾಡಿಸುತ್ತಾಳೆ.
- 23 ನೀನು ಯಾರನ್ನು ನಿಂದಿಸಿ ದೂಷಿಸಿದ್ದೀ? ಯಾರಿಗೆ ವಿರೋಧವಾಗಿ ನಿನ್ನ ಸ್ವರವೆತ್ತಿ ನೀನು ಸೊಕ್ಕಿನಿಂದ ನೋಡಿದ್ದು ಯಾರನ್ನು? ಇಸ್ರಾ ಯೇಲಿನ ಪರಿಶುದ್ಧನಿಗಲ್ಲವೋ?
- 24 ನೀನು ನಿನ್ನ ಸೇವಕರ ಮುಖಾಂತರವಾಗಿ ಕರ್ತನನ್ನು ನಿಂದಿಸಿ--ನನ್ನ ರಥಸಮೂಹದೊಡನೆ ಪರ್ವತ ಶಿಖರಗಳನ್ನು ಹತ್ತಿದ್ದೇನೆ; ಲೆಬನೋನಿನ ಭಾಗಗಳಿಗೆ ಹೋಗಿದ್ದೇನೆ; ಅದರ ಎತ್ತರವಾದ ದೇವದಾರು, ಶ್ರೇಷ್ಠವಾದ ತುರಾಯಿ ಮರಗಳನ್ನು ಕಡಿದುಬಿಟ್ಟಿದ್ದೇನೆ; ಅಂಚಿನ ಉನ್ನತವಾದ ಸ್ಥಳವನ್ನೂ ಮತ್ತು ಅದರ ಕರ್ಮೇಲಿನ ಅಡವಿಯನ್ನೂ ಪ್ರವೇಶಿಸಿದ್ದೇನೆ;
- 25 ನಾನೇ ಅಗೆದು ನೀರನ್ನು ಕುಡಿದಿದ್ದೇನೆ; ನನ್ನ ಅಂಗಾಲಿನಿಂದ ಐಗು ಪ್ತದ ಎಲ್ಲಾ ಹೊಳೆಗಳನ್ನು ಬತ್ತಿಸಿದ್ದೇನೆ ಎಂಬದಾಗಿ ನೀನು ಹೇಳಿದ್ದೀ.
- 26 ಹೀಗಾಗಬೇಕೆಂದು ಬಹುಕಾಲದ ಹಿಂದೆಯೇ ಗೊತ್ತುಮಾಡಿದ್ದನ್ನು ನೀನು ಕೇಳಿಲ್ಲವೋ? ಈಗ ಪೂರ್ವಕಾಲದಲ್ಲಿ ನಿರ್ಣಯಿಸಿದ್ದನ್ನು ನೆರವೇರಿ ಸಿದ್ದೇನೆ. ಆದದರಿಂದಲೇ ಕೋಟೆಗಳುಳ್ಳ ಪಟ್ಟಣ ಗಳನ್ನು ಹಾಳು ದಿಬ್ಬಗಳನ್ನಾಗಿ ಮಾಡುವದು ನಿನಗೆ ಸಾಧ್ಯವಾಯಿತು;
- 27 ಆದದರಿಂದ ಅವುಗಳ ನಿವಾಸಿ ಗಳು ಬಲವಿಲ್ಲದವರಾಗಿ ಆಶಾಭಂಗ ಪಟ್ಟು ಕಳವಳ ಗೊಂಡರು; ಅವರು ಹೊಲದ ಹುಲ್ಲಿನಂತೆಯೂ ಹಸಿರು ಎಲೆಯಂತೆಯೂ ಮಾಳಿಗೆಯ ಮೇಲಿನ ಹುಲ್ಲಿನಂತೆಯೂ ಹೊಡೆಯುವದಕ್ಕಿಂತ ಮೊದಲೇ ಬಾಡಿಹೋಗುವ ಪೈರಿನಂತೆಯೂ ಇದ್ದರು.
- 28 ನೀನು ವಾಸಿಸುವದು ಹೊರಗೆ ಹೋಗುವದು, ಒಳಗೆ ಬರುವದು; ನೀನು ನನ್ನ ಮೇಲೆ ರೌದ್ರಾವೇಶನಾಗಿ ರುವದನ್ನೂ ನಾನು ಬಲ್ಲೆನು.
- 29 ನೀನು ನನಗೆ ವಿರೋಧವಾಗಿ ರೌದ್ರನಾಗಿರುವದೂ ಗೊಂದಲ ದಿಂದಿರುವದೂ ನನ್ನ ಕಿವಿಗೆ ಕೇಳಿಬಂತು. ಆದದರಿಂದ ನಾನು ನಿನ್ನ ಕೊಂಡಿಯನ್ನು ನಿನ್ನ ಮೂಗಿನಲ್ಲಿಯೂ ನನ್ನ ಕಡಿವಾಣವನ್ನು ನಿನ್ನ ತುಟಿಗಳಲ್ಲಿಯೂ ಹಾಕಿ, ನೀನು ಬಂದು ದಾರಿಯಿಂದಲೇ ನಿನ್ನನ್ನು ಹಿಂದಕ್ಕೆ ಎಳೆದುಕೊಂಡು ಹೋಗುವೆನು ಎಂಬದಾಗಿ ಹೇಳಿ ದ್ದಾನೆ.
- 30 ಈ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನು ಎರಡನೇ ವರ್ಷದಲ್ಲಿ ಆದರಿಂದ ಮೊಳೆತದ್ದನ್ನು ತಿನ್ನುವಿರಿ. ಮೂರನೇ ವರ್ಷದಲ್ಲಿ ನೀವು ಬೀಜವನ್ನು ಬಿತ್ತಿ ಕೊಯ್ಯುವಿರಿ; ದ್ರಾಕ್ಷೇ ತೋಟವನ್ನು ನೆಟ್ಟು ಅವುಗಳ ಫಲವನ್ನು ತಿನ್ನುವದೇ ನಿಮಗೆ ಗುರುತಾಗಿ ರುವದು.
- 31 ಯೆಹೂದನ ಮನೆತನದಿಂದ ತಪ್ಪಿಸಿ ಕೊಂಡು ಉಳಿದವರು ತಿರುಗಿ ಕೆಳಗೆ ಬೇರೂರಿ ಮೇಲಕ್ಕೆ ಫಲಫಲಿಸುವರು.
- 32 ಯೆರೂಸಲೇಮಿನಿಂದ ಉಳಿದ ವರು ಮತ್ತು ಚೀಯೋನ್ ಪರ್ವತದಿಂದ ತಪ್ಪಿಸಿ ಕೊಂಡವರು; ಹೊರಡುವರು ಇದನ್ನು ಸೈನ್ಯಗಳ ಕರ್ತನ ಆಸಕ್ತಿಯು ಮಾಡುವದು.
- 33 ಆದದರಿಂದ ಕರ್ತನು ಅಶ್ಶೂರದ ಅರಸನ ವಿಷಯವಾಗಿ ಹೇಳುವ ದೇನಂದರೆ ಅವನು ಈ ಪಟ್ಟಣಕ್ಕೆ ಬರಲಾರನು ಬಾಣವನ್ನು ಎಸೆಯನು, ಇಲ್ಲವೇ ಅದರ ಮುಂದೆ ಗುರಾಣಿಯೊಂದಿಗೆ ಬರಲಾರನು ಇಲ್ಲವೆ ಅದಕ್ಕೆ ವಿರೋಧವಾಗಿ ಮಣ್ಣಿನ ದಿಬ್ಬವನ್ನು ಹಾಕುವದಿಲ್ಲ.
- 34 ಅವನು ಬಂದ ದಾರಿಯಿಂದಲೇ ಹಿಂತಿರುಗಿ ಹೋಗುವನು ಈ ಪಟ್ಟಣಕ್ಕೆ ಬರುವದೇ ಇಲ್ಲ.
- 35 ಈ ಪಟ್ಟಣವನ್ನು ನನಗಾಗಿಯೂ ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ ಇದನ್ನು ಕಾಪಾಡು ವೆನು ಎಂದು ಕರ್ತನು ಹೇಳುತ್ತಾನೆ.
- 36 ಆಗ ಕರ್ತನ ದೂತನು ಹೊರಟು ಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿಯನ್ನು ಹೊಡೆದನು. ಇನ್ನೂ ಮೊಬ್ಬಿರು ವಾಗಲೇ ಎದ್ದಾಗ ಇಗೋ, ಅವರು ಸತ್ತ ಹೆಣಗಳಾ ಗಿದ್ದರು.
- 37 ಆಗ ಅಶ್ಶೂರದ ಅರಸನಾದ ಸನ್ಹೇರೀಬನು ಹಿಂತಿರುಗಿ ನಿನವೆ ಪಟ್ಟಣಕ್ಕೆ ಹೋಗಿ ಅಲ್ಲಿ ವಾಸಿಸಿ ದನು.
- 38 ತರುವಾಯ ಅವನು ತನ್ನ ದೇವರಾದ ನಿಸ್ರೋಕನ ಮನೆಯಲ್ಲಿ ಪೂಜಿಸುತ್ತಿದ್ದಾಗ ಅದ್ರಮ್ಮೆ ಲೆಕ್, ಸರೆಚೆರ್ ಎಂಬ ಅವನ ಮಕ್ಕಳು ಅವ ನನ್ನು ಕತ್ತಿಯಿಂದ ಹೊಡೆದು ಅರರಾಟ್ ದೇಶಕ್ಕೆ ತಪ್ಪಿಸಿ ಕೊಂಡು ಹೋದರು; ಅವನಿಗೆ ಬದಲಾಗಿ ಅವನ ಮಗನಾದ ಏಸರ್‌ಹದ್ದೋನನು ಆಳಿದನು.
Isaiah 37
- Details
- Parent Category: Old Testament
- Category: Isaiah
ಯೆಶಾಯ ಅಧ್ಯಾಯ 37