- 1 ನೀವು ನನ್ನ ಜನರನ್ನು ಸಂತೈಸಿರಿ, ಸಂತೈಸಿರಿ ಎಂದು ನಿಮ್ಮ ದೇವರು ಹೇಳುತ್ತಾನೆ.
- 2 ಯೆರೂಸಲೇಮಿನ ಸಂಗಡ ನೀವು ಹೃದಯಾಂಗಮ ವಾಗಿ ಮಾತಾಡಿರಿ; ಅದರ ಯುದ್ಧವು ತೀರಿತೆಂದೂ ದೋಷವು ಕ್ಷಮಿಸಲ್ಪಟ್ಟಿದೆ ಎಂದು ಕೂಗಿರಿ; ಅದು ಎಲ್ಲಾ ಪಾಪಗಳಿಗೂ ಕರ್ತನಿಂದ ಎರಡರಷ್ಟು ಹೊಂದಿ ದ್ದಾಯಿತು.
- 3 ಇಗೋ, ಒಂದು ವಾಣಿ, ಅರಣ್ಯದಲ್ಲಿ ಕರ್ತನ ದಾರಿಯನ್ನು ನೆಟ್ಟಗೆ ಮಾಡಿರಿ; ಅಡವಿಯಲ್ಲಿ ನಮ್ಮ ದೇವರಿಗೆ ರಾಜಮಾರ್ಗವನ್ನು ನೆಟ್ಟಗೆ ಮಾಡಿರಿ.
- 4 ಎಲ್ಲಾ ತಗ್ಗುಗಳು ಮುಚ್ಚಲ್ಪಡಲಿ, ಎಲ್ಲಾ ಬೆಟ್ಟ ಗುಡ್ಡ ಗಳು ತಗ್ಗಿಸಲ್ಪಡಲಿ, ಕೊರಕಲ ನೆಲವು ಸಮವಾಗು ವದು; ಕರ್ತನ ಮಹಿಮೆಯು ಗೋಚರವಾಗುವದು.
- 5 ಎಲ್ಲಾ ಮನುಷ್ಯರು ಒಟ್ಟಿಗೆ ಅದನ್ನು ಕಾಣುವರು ಕರ್ತನ ಬಾಯಿಯೇ ಇದನ್ನು ನುಡಿದದೆ ಎಂದು ಒಬ್ಬನು ಕೂಗುತ್ತಾನೆ.
- 6 ವಾಣಿಯು ಕೂಗು ಅನ್ನುತ್ತದೆ. ಅವನು--ನಾನು ಏನು ಕೂಗಲಿ ಅನ್ನಲು ಎಲ್ಲಾ ನರಮನುಷ್ಯರು ಹುಲ್ಲಿನ ಹಾಗಿದ್ದಾರೆ. ಕರ್ತನ ಶ್ವಾಸವು ಅವರ ಮೇಲೆ ಬೀಸುವದರಿಂದ ಅವರ ಲಾವಣ್ಯವೆಲ್ಲಾ ಹೊಲದ ಹೂವಿನಂತಿದೆ.
- 7 ಹುಲ್ಲು ಒಣಗಿ ಹೋಗು ವದು ಹೂವು ಬಾಡಿಹೋಗುವದು. ಕರ್ತನ ಆತ್ಮ ಅವುಗಳ ಮೇಲೆ ಊದುವನು; ನಿಶ್ಚಯವಾಗಿ ಜನರು ಹುಲ್ಲೇ.
- 8 ಹುಲ್ಲು ಒಣಗಿಹೋಗುವದು ಹೂವು ಬಾಡಿಹೋಗುವದು. ಆದರೆ ನಮ್ಮ ದೇವರ ವಾಕ್ಯವು ಸದಾಕಾಲ ನಿಲ್ಲುವದು ಎಂದು ಉತ್ತರವಾಯಿತು.
- 9 ಶುಭಸಮಾಚಾರವನ್ನು ತಿಳಿಸುವ ಓ ಚೀಯೋನೇ, ನೀನು ಉನ್ನತಪರ್ವತವನ್ನು ಏರು; ಶುಭಸಮಾ ಚಾರವನ್ನು ತಿಳಿಸುವ ಓ ಯೆರೂಸಲೇಮೇ, ಬಲವಾಗಿ ನಿನ್ನ ಸ್ವರವನ್ನು ಎತ್ತು, ಭಯಪಡದೆ ಎತ್ತು; ಯೆಹೂದದ ಪಟ್ಟಣಗಳಿಗೆ ಇಗೋ, ನಿನ್ನ ದೇವರು ಎಂದು ಹೇಳು.
- 10 ಇಗೋ, ಕರ್ತನಾದ ದೇವರು ಬಲವುಳ್ಳ ಕೈಯಿಂದ ಬರುತ್ತಾನೆ, ಆತನ ತೋಳು ತನಗೋಸ್ಕರ ಆಳುವದು. ಇಗೋ, ಆತನ ಬಹುಮಾನವು ಆತನ ಸಂಗಡಲೂ ಆತನ ಪ್ರತಿಫಲವು ಆತನ ಮುಂದೆಯೂ ಇದೆ.
- 11 ಆತನು ತನ್ನ ಮಂದೆಯನ್ನು ಕುರುಬನಂತೆ ಮೇಯಿ ಸುವನು. ಕುರಿಮರಿಗಳನ್ನು ಕೂಡಿಸಿ ಅವುಗಳನ್ನು ತನ್ನ ಎದೆಗಪ್ಪಿಕೊಳ್ಳುವನು ಎಳೇಮರಿಗಳನ್ನು ಮೆಲ್ಲಗೆ ನಡಿಸುವನು ಎಂದು ಸಾರು.
- 12 ಸಮುದ್ರ ಸಾಗರವನ್ನು ಬರಿದಾದ ತನ್ನ ಕೈಯಿಂದ ಅಳತೆ ಮಾಡಿದವನೂ ಆಕಾಶಗಳ ಮೇರೆಯನ್ನು ಗೇಣಿನಿಂದ ಅಳೆದವನೂ ಭೂಮಿಯ ದೂಳನ್ನು ಅಳತೆ ಮಾಡಿ ತಿಳುಕೊಂಡವನೂ ಬೆಟ್ಟಗಳ ಮಟ್ಟ ವನ್ನೂ ಗುಡ್ಡಗಳನ್ನೂ ತಕ್ಕಡಿಯಿಂದ ತೂಗಿದವನು ಯಾರು?
- 13 ಕರ್ತನ ಆತ್ಮವನ್ನು ನಡಿಸಿದವನೂ ಇಲ್ಲವೇ ಆತನಿಗೆ ಆಲೋಚನಾಕರ್ತನಾಗಿ ಕಲಿಸಿದವನು ಯಾರು?
- 14 ಆತನು ಯಾವನ ಆಲೋಚನೆಯನ್ನು ಪಡೆದನು. ಆತನಿಗೆ ಉಪದೇಶಿಸಿದವನೂ ನ್ಯಾಯದ ಹಾದಿ ಯನ್ನು ಕಲಿಸಿ, ತಿಳುವಳಿಕೆಯನ್ನು ಆತನಿಗೆ ಬೋಧಿಸಿ, ವಿವೇಕದ ಮಾರ್ಗವನ್ನು ತಿಳಿಸಿದವನು ಯಾರು?
- 15 ಇಗೋ, ಆತನ ಎಣಿಕೆಯಲ್ಲಿ ಜನಾಂಗಗಳು ಕಪಿಲೆ ಯಿಂದುದುರುವ ಹನಿಯಂತೆಯೂ ತಕ್ಕಡಿಯಲ್ಲಿನ ದೂಳಿನ ಹಾಗೂ ಇರುತ್ತವೆ. ಇಗೋ, ದ್ವೀಪಗಳನ್ನು ಅಣುರೇಣುವಿನಂತೆ ಆತನು ಎತ್ತುತ್ತಾನೆ.
- 16 ಲೆಬ ನೋನು ಸುಡುವದಕ್ಕೆ ಸಾಲವು ಅದರ ಮೃಗಗಳು ಬಲಿಗೆ (ಯಜ್ಞಕ್ಕೆ, ಹೋಮಕ್ಕೆ) ಸಾಲವು.
- 17 ಸಕಲ ಜನಾಂಗಗಳು ಆತನ ಮುಂದೆ ಏನೂ ಇಲ್ಲದಂತಿವೆ; ಅವು ಆತನ ಎಣಿಕೆಯಲ್ಲಿ ಶೂನ್ಯವಾಗಿಯೂ ವ್ಯರ್ಥ ವಾಗಿಯೂ ಇವೆ.
- 18 ಹೀಗಿರಲು ದೇವರನ್ನು ಯಾರಿಗೆ ಹೋಲಿಸು ವಿರಿ? ಅಥವಾ ಯಾವ ಹೋಲಿಕೆಯನ್ನು ಆತನಿಗೆ ಸಮಾನ ಮಾಡುವಿರಿ?
- 19 ಕಂಚುಗಾರನು ವಿಗ್ರಹವನ್ನು ಎರಕ ಹೊಯ್ಯುತ್ತಾನೆ; ಅಕ್ಕಸಾಲಿಗನು ಅದಕ್ಕೆ ಚಿನ್ನದ ಕವಚವನ್ನು ಹೊದಿಸಿ; ಬೆಳ್ಳಿಯ ಸರಪಣಿಗಳನ್ನು ಹಾಕುವನು.
- 20 ಕಾಣಿಕೆಯನ್ನಾಗಿ ಪ್ರತಿಷ್ಠಿಸಿಕೊಳ್ಳ ಲಾರದ ಬಡವನು ಹುಳುತು ಹೋಗದ ಮರವನ್ನು ಹುಡುಕಿ ಚಲಿಸದ ವಿಗ್ರಹವನ್ನು ತಯಾರಿಸುವದಕ್ಕೆ ಕುಯುಕ್ತಿಯ ಕೆಲಸಗಾರರನ್ನು ವಿಚಾರಿಸಿಕೊಳ್ಳುವನು.
- 21 ನಿಮಗೆ ತಿಳಿದಿಲ್ಲವೋ? ನೀವು ಕೇಳಿಲ್ಲವೋ? ಆದಿಯಿಂದಲೇ ನಿಮಗೆ ತಿಳಿಸಲ್ಪಟ್ಟಿಲ್ಲವೋ? ಭೂಮಿ ಯು ಸ್ಥಾಪಿತವಾದಂದಿನಿಂದ ನಿಮಗೆ ಅರ್ಥವಾಗ ಲಿಲ್ಲವೋ?
- 22 ಆಕಾಶ ಮಂಡಲವನ್ನು ತೆರೆಯಂತೆ ವಿಸ್ತರಿಸಿ ಅದರೊಳಗೆ ವಾಸಮಾಡುವ ಗುಡಾರದಂತೆ ಹರಡಿ ಭೂನಿವಾಸಿಗಳು ಮಿಡತೆಯಂತೆ ಕಾಣಿಸುವಷ್ಟು ಭೂವೃತ್ತದ ಮೇಲೆ ಕೂತಿರುವಾತನು ಆತನೇ.
- 23 ಅದು ಪ್ರಭುಗಳನ್ನು ನಿರ್ನಾಮ ಮಾಡುತ್ತದೆ ಭೂಮಿಯ ನ್ಯಾಯಾಧಿಪತಿಗಳನ್ನು ಶೂನ್ಯವಾಗುವಂತೆ ಮಾಡು ತ್ತದೆ.
- 24 ಹೌದು, ಅವರು ನೆಡಲ್ಪಡುವದಿಲ್ಲ ಬಿತ್ತ ಲ್ಪಡುವದಿಲ್ಲ. ಹೌದು ಅವರ ಬುಡವು ಭೂಮಿ ಯಲ್ಲಿ ಬೇರೂರುವದಿಲ್ಲ. ಆತನು ಶ್ವಾಸವನ್ನು ಅವರ ಮೇಲೆ ಊದಲು ಒಣಗಿಹೋಗುವರು. ಬಿರು ಗಾಳಿಯು ಅವರನ್ನು ಹೊಟ್ಟಿನಂತೆ ಬಡಿದುಕೊಂಡು ಹೋಗುವದು.
- 25 ಹೀಗಿರಲು ನನ್ನನ್ನು ಯಾರಿಗೆ ಹೋಲಿಸಿ ಸರಿ ಸಮಾನ ಮಾಡುತ್ತೀರಿ ಎಂದು ಪರಿಶುದ್ಧನಾದವನು ಹೇಳುತ್ತಾನೆ.
- 26 ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ನೋಡಿರಿ; ಇಗೋ, ಇವುಗಳನ್ನು ಸೃಷ್ಟಿಸಿದಾತನು ಯಾರು? ಆತನೇ ತನ್ನ ಮಹಾಶಕ್ತಿಯಿಂದಲೂ ಅವುಗಳ ಸೈನ್ಯವನ್ನೆಲ್ಲಾ ಲೆಕ್ಕಮಾಡಿ ಹೊರಗೆ ತರು ವನು. ಆತನು ಅತಿ ಬಲಾಢ್ಯನಾಗಿರುವದರಿಂದ ಅವುಗಳೊಳಗೆ ಒಂದೂ ತಪ್ಪದು.
- 27 ನನ್ನ ಮಾರ್ಗವು ಕರ್ತನಿಗೆ ಮರೆಯಾಗಿದೆ ಮತ್ತು ನನ್ನ ನ್ಯಾಯವು ನನ್ನ ದೇವರಿಂದ ದಾಟಿ ಹೋಯಿ ತಲ್ಲಾ! ಎಂದು ಯಾಕೋಬೇ ಯಾಕೆ ಹೇಳುತ್ತಿ? ಇಸ್ರಾಯೇಲೇ ಯಾಕೆ ಮಾತಾಡುತ್ತಿ?
- 28 ನಿನಗೆ ಗೊತ್ತಿಲ್ಲವೋ? ನೀನು ಕೇಳಲಿಲ್ಲವೋ? ಕರ್ತನು ನಿರಂತರವಾದ ದೇವರೂ ಭೂಮಿಯ ಅಂತ್ಯಗಳನ್ನು ಸೃಷ್ಟಿಸಿದವನೂ ದಣಿಯುವದಿಲ್ಲ ಇಲ್ಲವೆ ಬಳಲುವ ದಿಲ್ಲ; ಆತನ ತಿಳುವಳಿಕೆಯು ಪರಿಶೋಧನೆಗೆ ಅಗಮ್ಯ.
- 29 ಆತನು ದಣಿದವನಿಗೆ ಶಕ್ತಿಯನ್ನೂ ಬಲಹೀನನಿಗೆ ಬಹುಬಲವನ್ನೂ ಕೊಡುತ್ತಾನೆ.
- 30 ಯೌವನಸ್ಥರೋ ದಣಿದು ಬಳಲುವರು ತರುಣರು ಸಂಪೂರ್ಣವಾಗಿ ಬೀಳುವರು.
- 31 ಆದರೆ ಕರ್ತನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಅವರು ಹದ್ದುಗ ಳಂತೆ ರೆಕ್ಕೆಗಳಿಂದ ಬೆಟ್ಟವನ್ನು ಏರುವರು. ಓಡಿ ದಣಿಯರು, ನಡೆದು ಬಳಲರು.
Isaiah 40
- Details
- Parent Category: Old Testament
- Category: Isaiah
ಯೆಶಾಯ ಅಧ್ಯಾಯ 40