- 1 ಓ ದ್ವೀಪನಿವಾಸಿಗಳೇ, ನನ್ನ ಮುಂದೆ ಮೌನದಿಂದಿರ್ರಿ; ಜನಗಳು ಹೊಸ ಬಲ ವನ್ನು ಹೊಂದಿಕೊಳ್ಳಲಿ; ಅವರು ನನ್ನ ಸವಿಾಪಕ್ಕೆ ಬಂದು ಮಾತಾಡಲಿ; ನ್ಯಾಯತೀರ್ಪಿಗಾಗಿ ಸವಿಾಪಕ್ಕೆ ಒಟ್ಟಾಗಿ ಬರೋಣ.
- 2 ಮೂಡಣದಿಂದ ನೀತಿವಂತ ನನ್ನು ಎಬ್ಬಿಸಿ, ಅವನನ್ನು ತನ್ನ ಪಾದಸನ್ನಿಧಿಗೆ ಕರೆದು ಜನಾಂಗಗಳನ್ನು ಅವನ ಮುಂದೆ ಕೊಟ್ಟುಬಿಟ್ಟು ಅವ ನನ್ನು ರಾಜರ ಮೇಲೆ ಆಳುವದಕ್ಕೆ ಮಾಡಿದವನು ಯಾರು? ಅವನ ಕತ್ತಿಗೆ ದೂಳನ್ನಾಗಿಯೂ ಅವನ ಬಿಲ್ಲಿಗೆ ಹಾರಿ ಹೋಗುವ ಹೊಟ್ಟಿನಂತೆಯೂ ಅವ ರನ್ನು ಕೊಟ್ಟನು.
- 3 ತಾನು ಎಂದೂ ಹೆಜ್ಜೆಯಿಡದ ಮಾರ್ಗದಲ್ಲಿ ಸುರಕ್ಷಿತವಾಗಿ ಆತನು ಅವರನ್ನು ಹಿಂದ ಟ್ಟುತ್ತಾ ಹೋದನು.
- 4 ಇದನ್ನೆಲ್ಲಾ ನಡೆಯಿಸಿ ನೆರವೇರಿ ಸಿದವನು ಆದಿಯಿಂದ ತಲತಲಾಂತರಗಳನ್ನು ಬರ ಮಾಡಿದವನು ಯಾರು? ಕರ್ತನಾಗಿರುವ ನಾನೇ ಮೊದಲನೆಯವನು ಅಂತ್ಯಕಾಲದಲ್ಲಿ ಸಂಗಡಿಗನು ಆಗಿರುವಾತನೇ ನಾನು.
- 5 ದ್ವೀಪ ನಿವಾಸಿಗಳೆಲ್ಲರೂ ನೋಡಿ ಬೆರಗಾದರು; ಭೂಮಿಯ ಕಟ್ಟಕಡೆಯವರು ನಡುಗಿದರು. ಅವರ ಸವಿಾಪಕ್ಕೆ ಬಂದರು.
- 6 ಪ್ರತಿಯೊಬ್ಬನು ತನ್ನ ನೆರೆಯವನಿಗೆ ಸಹಾಯಮಾಡಿ ಮತ್ತು ಪ್ರತಿಯೊಬ್ಬನು ತನ್ನ ಸಹೋದರನಿಗೆ--ಧೈರ್ಯ ವಾಗಿರ್ರಿ ಎಂದು ಹೇಳಲಿ.
- 7 ಹಾಗೆಯೇ ಮರಗೆಲಸ ದವನು ಅಕ್ಕಸಾಲಿಗನನ್ನು ಪ್ರೋತ್ಸಾಹಗೊಳಿಸಿದನು, ಸುತ್ತಿಗೆಯಿಂದ ಸಮಮಾಡುವವನು ಬಡಿಗಲ್ಲಿನ ಮೇಲೆ ಹೊಡೆಯುವವನನ್ನು ಧೈರ್ಯಪಡಿಸಿದನು; ಬೇಸಿಗೆ ಚೆನ್ನಾಗಿದೆ ಎಂದು ಹೇಳಿ ಅದು ಕದಲದ ಹಾಗೆ ಮೊಳೆಗಳಿಂದ ಜಡಿದರು.
- 8 ಆದರೆ ನನ್ನ ಸೇವಕನಾದ ಇಸ್ರಾಯೇಲೇ, ನಾನು ಆದುಕೊಂಡ ಯಾಕೋಬೇ, ನನ್ನ ಸ್ನೇಹಿತನಾದ ಅಬ್ರಹಾಮನ ಸಂತತಿಯೇ;
- 9 ನಿನ್ನನ್ನು ಕಟ್ಟಕಡೆಗಳಿಂದ ಆರಿಸಿಕೊಂಡು, ಅದರ ಕೊನೆಯಿಂದ ಕರೆದು--ನೀನು ನನ್ನ ಸೇವಕನು, ನಿನ್ನನ್ನು ನಾನು ಆದುಕೊಂಡಿದ್ದೇನೆ. ನಿನ್ನನ್ನು ತಳ್ಳಿಬಿಡುವದಿಲ್ಲ.
- 10 ನೀನಂತೂ ಹೆದರಬೇಡ; ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು. ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿ ಸುತ್ತೇನೆ; ಹೌದು, ನಾನು ನಿನಗೆ ಸಹಾಯ ಮಾಡು ತ್ತೇನೆ. ಹೌದು, ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿ ಹಿಡಿಯುತ್ತೇನೆ.
- 11 ಇಗೋ, ನಿನಗೆ ವಿರೋಧ ವಾಗಿ ಉರಿಗೊಂಡವರೆಲ್ಲರೂ ಅವಮಾನಹೊಂದಿ, ಆಶಾಭಂಗಪಡುವರು; ನಿನ್ನ ಸಂಗಡ ವ್ಯಾಜ್ಯವಾಡಿದ ವರು ನಾಶವಾಗಿ ಇಲ್ಲದೆ ಹೋಗುವರು;
- 12 ನಿನ್ನೊಡನೆ ಹೋರಾಡಿದವರನ್ನು ಹುಡುಕಿದರೂ ಅವರು ನಿನಗೆ ಕಾಣಿಸರು; ನಿನ್ನ ಸಂಗಡ ಯುದ್ಧಮಾಡಿದವರು ಇಲ್ಲದೆ ಹೋಗಿ ನಿರ್ನಾಮವಾಗುವರು.
- 13 ನಿನಗೆ ಸಹಾಯ ಮಾಡುತ್ತೇನೆಂದು ನಿನಗೆ ಹೇಳುವ ಕರ್ತನೂ ನಿನ್ನ ದೇವರೂ ಆಗಿರುವ ನಾನೇ ನಿನ್ನ ಕೈಹಿಡಿಯುತ್ತೇನಲ್ಲಾ.
- 14 ಹುಳುವಾದ ಯಾಕೋಬೇ, ಮತ್ತು ಇಸ್ರಾಯೇಲ್ ಜನವೇ, ಭಯಪಡಬೇಡ; ನಾನೇ ನಿನಗೆ ಸಹಾಯ ಮಾಡುತ್ತೇನೆಂದು ಕರ್ತನೂ ನಿನ್ನ ವಿಮೋಚಕನೂ ಇಸ್ರಾಯೇಲಿನ ಪರಿಶುದ್ಧನೂ ಹೇಳುತ್ತಾನಲ್ಲಾ!
- 15 ಇಗೋ, ನಿನ್ನನ್ನು ಹದವಾದ, ಹೊಸ, ಮೊನೆಹಲ್ಲಿನ ಹಂತಿಕುಂಟೆಯನ್ನಾಗಿ (ಹೊಕ್ಕುವ ಯಂತ್ರ) ಮಾಡು ವೆನು, ನೀನು ಬೆಟ್ಟಗಳನ್ನು ಹೊಕ್ಕು ಪುಡಿಪುಡಿ ಮಾಡಿ ಗುಡ್ಡಗಳನ್ನು ಹೊಟ್ಟಿನಂತೆ ಮಾಡುವಿ.
- 16 ನೀನು ಅವುಗಳನ್ನು ತೂರಲು ಗಾಳಿಯು ಅವುಗಳನ್ನು ಬಡಿದುಕೊಂಡು ಹೋಗುವದು, ಬಿರುಗಾಳಿಯು ಚೆಲ್ಲಾಪಿಲ್ಲಿ ಮಾಡುವದು; ನೀನಂತೂ ಕರ್ತನಲ್ಲಿ ಸಂತೋಷಿಸಿ, ಇಸ್ರಾಯೇಲಿನ ಪರಿಶುದ್ಧನಲ್ಲಿ ಮಹಿಮೆಹೊಂದುವಿ.
- 17 ಬಡವರೂ ದರಿದ್ರರೂ ನೀರನ್ನು ಹುಡುಕಿ ಕಾಣದೇ ಬಾಯಾರಿಕೆಯಿಂದ ನಾಲಿಗೆ ಒಣಗಿದಾಗ ಕರ್ತನಾದ ನಾನೇ ಅವರನ್ನು ಅಲೈಸುವೆನು, ಇಸ್ರಾಯೇಲ್ ದೇವ ರಾಗಿರುವ ನಾನು ಅವರನ್ನು ಕೈಬಿಡೆನು.
- 18 ಎತ್ತರವಾದ ಸ್ಥಳಗಳಲ್ಲಿ ನದಿಗಳನ್ನು, ತಗ್ಗುಗಳ ಮಧ್ಯದಲ್ಲಿ ಬುಗ್ಗೆ ಗಳನ್ನು ಹೊರಡಿಸಿ ಅರಣ್ಯವನ್ನು ನೀರಿನ ಕೆರೆಯ ನ್ನಾಗಿಯೂ ಒಣನೆಲವನ್ನು ನೀರಿನ ಒರತೆಗಳನ್ನಾ ಗಿಯೂ ಮಾಡುವೆನು.
- 19 ಅರಣ್ಯದಲ್ಲಿ ದೇವದಾರು, ಜಾಲಿಮರ, ಸುಗಂಧ, ಒಲೀವ ಮರಗಳನ್ನು ನಾನು ನೆಡುವೆನು, ಮರುಭೂಮಿಯಲ್ಲಿ ತುರಾಯಿ, ತಪಸಿಟ್ಟಿ, ತಿಲಕವೃಕ್ಷಗಳನ್ನು ಒಟ್ಟಿಗೆ ಬೆಳೆಯಿಸುವೆನು.
- 20 ಆಗ ಕರ್ತನ ಹಸ್ತವು ಇದನ್ನು ಮಾಡಿದೆ ಎಂದೂ ಇಸ್ರಾ ಯೇಲಿನ ಪರಿಶುದ್ಧನು ಇದನ್ನು ಸೃಷ್ಟಿಸಿದನು ಎಂದೂ ಅವರು ನೋಡಿ, ತಿಳಿದು ಮನಸ್ಸಿಗೆ ತಂದು ಗ್ರಹಿಸಿ ಕೊಳ್ಳುವರು.
- 21 ನಿಮ್ಮ ವ್ಯಾಜ್ಯವನ್ನು ತನ್ನಿರಿ ಎಂದು ಕರ್ತನು ಅನ್ನುತ್ತಾನೆ; ನಿಮ್ಮ ಬಲವಾದ ಕಾರಣಗಳನ್ನು ತನ್ನಿರಿ ಎಂದು ಯಾಕೋಬ್ಯರ ಅರಸನು ಹೇಳುತ್ತಾನೆ.
- 22 ಅವರು ಅವುಗಳನ್ನು ತಂದು ಮುಂದೆ ಏನಾಗುವದು ಎಂದು ನಮಗೆ ತೋರಿಸಲಿ; ಹಿಂದಿನವುಗಳನ್ನು ನಾವು ಮನಸ್ಸಿಗೆ ತಂದುಕೊಂಡು ಅವುಗಳ ಪರಿಣಾಮವನ್ನು ಇಲ್ಲವೇ ಮುಂದಿನವುಗಳನ್ನು ತಿಳಿಸಿದರೆ ಗ್ರಹಿಸುವೆವು.
- 23 ನೀವು ದೇವರುಗಳೆಂದು ತಿಳಿದುಕೊಳ್ಳುವಂತೆ ಮುಂದೆ ಬರುವವುಗಳನ್ನು ನಮಗೆ ತಿಳಿಸಿರಿ; ಹೌದು, ನಾವು ಗಾಬರಿಯಿಂದ ಭಯಪಡುವ ಹಾಗೆ ಒಳ್ಳೆಯದ ನ್ನಾಗಲಿ ಕೆಟ್ಟದ್ದನ್ನಾಗಲಿಮಾಡಿರಿ.
- 24 ಇಗೋ, ನೀವು ಶೂನ್ಯವೇ ಮತ್ತು ನಿಮ್ಮ ಕಾರ್ಯವು ಮಟ್ಟಮಾಯವೇ ನಿಮ್ಮನ್ನು ಆರಿಸಿಕೊಂಡವನು ಅಸಹ್ಯನೇ.
- 25 ಉತ್ತರ ದಿಕ್ಕಿನಿಂದ ಒಬ್ಬನನ್ನು ನಾನು ಎಬ್ಬಿಸಿದ್ದೇನೆ, ಸೂರ್ಯೋ ದಯದ ಕಡೆಯಿಂದ ಅವನು ನನ್ನ ಹೆಸರನ್ನು ಸ್ಮರಿಸು ವನು; ಅವನು ಜೇಡಿಮಣ್ಣಿನಂತೆಯೂ ಕುಂಬಾರನು ಮಣ್ಣನ್ನು ತುಳಿಯುವಂತೆಯೂ ಅಧಿಕಾರಸ್ಥರ ಮೇಲೆ ಬರುವನು.
- 26 ಆತನು ನೀತಿವಂತನೆಂದು ನಾನು ತಿಳಿಯುವಂತೆ ಮತ್ತು ಹೇಳುವಂತೆ ಆದಿಯಲ್ಲಿ ಯಾರು ಅದನ್ನು ತಿಳಿಸಿದ್ದಾರೆ? ಹೌದು, ಯಾರೂ ತೋರಿಸು ವವನಿಲ್ಲ, ತಿಳಿಸುವವನು ಒಬ್ಬನೂ ಇಲ್ಲ. ನಿನ್ನ ಮಾತನ್ನೂ ಕೇಳುವವನು ಒಬ್ಬನೂ ಇಲ್ಲ.
- 27 ನಾನು ಮೊದಲನೆಯವನಾಗಿ ಚೀಯೋನಿಗೆ ಇಗೋ, ಅವ ರನ್ನು ನೋಡು ಎಂದು ಹೇಳಿ, ಶುಭ ಸಮಾಚಾರ ತರತಕ್ಕವನನ್ನು ಯೆರೂಸಲೇಮಿಗೆ ಅನುಗ್ರಹಿಸುವೆನು.
- 28 ನಾನು ನೋಡಿದಾಗ ಅಲ್ಲಿ ಯಾರೂ ಇಲ್ಲ; ನಾನು ಅವರನ್ನು ಕೇಳುವ ಪ್ರಶ್ನೆಗೆ ಅವರಲ್ಲಿ ಒಂದು ಮಾತನ್ನು ಉತ್ತರಿಸುವ ಸಲಹೆಗಾರನು ಇಲ್ಲವೇ ಇಲ್ಲ.
- 29 ಇಗೋ, ಅವರೆಲ್ಲಾ ವ್ಯರ್ಥವೇ, ಅವರ ಕಾರ್ಯಗಳು ಶೂನ್ಯವೇ. ಅವರ ಕೆತ್ತಿದ ವಿಗ್ರಹಗಳು ಗಾಳಿ ಮತ್ತು ಗಲಿಬಿಲಿಯೇ.
Isaiah 41
- Details
- Parent Category: Old Testament
- Category: Isaiah
ಯೆಶಾಯ ಅಧ್ಯಾಯ 41