- 1 ಇಗೋ, ನಾನು ಆಧಾರವಾಗಿರುವ ನನ್ನ ಸೇವಕನು; ನಾನು ಆದುಕೊಂಡವನಲ್ಲಿ ನನ್ನ ಆತ್ಮ ಆನಂದಿಸುವದು. ನನ್ನ ಆತ್ಮವನ್ನು ಅವನ ಮೇಲೆ ಇರಿಸಿದ್ದೇನೆ, ಅವನು ಅನ್ಯಜನಾಂಗಗಳಿಗೆ ನ್ಯಾಯತೀರ್ಪನ್ನು ತರುವನು.
- 2 ಅವನು ಕೂಗು ವದಿಲ್ಲ, ಶಬ್ದವನ್ನು ಎತ್ತುವದಿಲ್ಲ ಇಲ್ಲವೆ ಬೀದಿಗಳಲ್ಲಿ ತನ್ನ ಸ್ವರವನ್ನು ಕೇಳಗೊಡಿಸುವದಿಲ್ಲ.
- 3 ಜಜ್ಜಿದ ದಂಟನ್ನು ಮುರಿದುಹಾಕದೆ, ಕಳೆಗುಂದಿದ ದೀಪ ವನ್ನು ನಂದಿಸದೆ, ಸತ್ಯದಿಂದ ನ್ಯಾಯವನ್ನು ಹೊರ ತರುತ್ತಾನೆ.
- 4 ಲೋಕದಲ್ಲಿ ನ್ಯಾಯವನ್ನು ಸ್ಥಾಪಿಸುವ ತನಕ ಅವನು ಸೋಲುವದಿಲ್ಲ ಇಲ್ಲವೇ ಮನ ಗುಂದುವದಿಲ್ಲ; ದ್ವೀಪಗಳು ಅವನ ನ್ಯಾಯಪ್ರಮಾ ಣಕ್ಕೆ ಕಾದಿರುವವು.
- 5 ಆಕಾಶವನ್ನು ನಿರ್ಮಿಸಿ ಹಾಸಿದವನು ಭೂಮಿಯನ್ನು ಅದರಿಂದ ಉತ್ಪತ್ತಿ ಯನ್ನೂ ವಿಸ್ತರಿಸಿ, ಅದರ ಮೇಲಿರುವ ಜನರಿಗೆ ಶ್ವಾಸವನ್ನೂ ಸಂಚರಿಸುವವರಿಗೆ ಆತ್ಮವನ್ನು ಕೊಡು ತ್ತೇನೆಂದು ದೇವರಾದ ಕರ್ತನು ಹೇಳುತ್ತಾನೆ--
- 6 ನೀನು ಕುರುಡರಿಗೆ ಕಣ್ಣುಗಳನ್ನು ತೆರೆದು, ಬಂದಿ ಗಳನ್ನು ಸೆರೆಯಿಂದಲೂ ಕತ್ತಲೆಯಲ್ಲಿ ವಾಸಿಸುವವ ರನ್ನು ಕಾರಾಗೃಹದಿಂದಲೂ ಹೊರಗೆ ತರಬೇಕು ಎಂದು --
- 7 ಕರ್ತನಾಗಿರುವ ನಾನೇ ನಿನ್ನನ್ನು ನೀತಿಯಿಂದ ಕರೆದು, ನಿನ್ನ ಕೈಯನ್ನು ಹಿಡಿದು ಕಾಪಾಡಿ ನಿನ್ನನ್ನು ಜನಗಳಿಗೆ ಒಡಂಬಡಿಕೆಯ ಆಧಾರವನ್ನಾಗಿಯೂ ಅನ್ಯಜನಗಳಿಗೆ ಬೆಳಕನ್ನಾಗಿಯೂ ನೇಮಿಸಿದ್ದೇನೆ.
- 8 ನಾನೇ ಕರ್ತನು, ಅದೇ ನನ್ನ ಹೆಸರು; ನನ್ನ ಮಹಿಮೆಯನ್ನು ಮತ್ತೊಬ್ಬನಿಗೆ ಇಲ್ಲವೆ ನನ್ನ ಸ್ತೋತ್ರ ವನ್ನು ಎರಕದ ವಿಗ್ರಹಗಳಿಗೂ ಕೊಡೆನು.
- 9 ಇಗೋ, ಹಿಂದಿನವುಗಳು ನೆರವೇರಿವೆ. ಹೊಸ ಸಂಗತಿಗಳನ್ನು ಪ್ರಕಟಿಸುತ್ತೇನೆ; ಅವು ಹುಟ್ಟುವದಕ್ಕಿಂತ ಮುಂಚೆಯೇ ನಾನು ಅವುಗಳನ್ನು ನಿಮಗೆ ತಿಳಿಸುತ್ತೇನೆ.
- 10 ಸಮುದ್ರ ಪ್ರಯಾಣಿಕರೇ, ಸಕಲ ಜಲಚರಗಳೇ, ದ್ವೀಪಗಳೇ, ಅದರ ನಿವಾಸಿಗಳೇ, ಕರ್ತನಿಗೆ ಹೊಸ ಹಾಡನ್ನು ಹಾಡಿರಿ. ಭೂಮಿಯ ಕಟ್ಟಕಡೆಯಿಂದ ಆತನಿಗೆ ಸ್ತೋತ್ರ ಮಾಡಿರಿ.
- 11 ಅರಣ್ಯವು ಅದರ ಪಟ್ಟಣಗಳು ಸ್ವರವೆತ್ತಲಿ; ಕೇದಾರ್ ಊರಿನ ನಿವಾಸಿಗಳು, ಬಂಡೆಯ ಪ್ರದೇಶದ ನಿವಾಸಿಗಳು ಹಾಡಲಿ; ಅವರು ಪರ್ವತದ ತುದಿಯಲ್ಲಿ ಕೂಗಲಿ,
- 12 ಅವರು ಕರ್ತನಿಗೆ ಮಹಿಮೆಯನ್ನು ಕೊಡಲಿ ಆತನ ಸ್ತೋತ್ರವನ್ನು ದ್ವೀಪಗಳಲ್ಲಿ ಪ್ರಕಟಿಸಲಿ.
- 13 ಕರ್ತನು ಪರಾಕ್ರಮ ಶಾಲಿಯಾಗಿ ಮುಂದೆ ಹೋಗುವನು; ಯುದ್ಧ ವೀರನ ಹಾಗೆ ತನ್ನ ರೌದ್ರವನ್ನು ಎಬ್ಬಿಸು ವನು; ತನ್ನ ಶತ್ರುಗಳಿಗೆ ವಿರೋಧವಾಗಿ ಜಯ ಶಾಲಿಯಾಗುವನು.
- 14 ಬಹುಕಾಲದಿಂದ ಸುಮ್ಮನೆ ಮೌನವಾಗಿ ನನ್ನನ್ನುಬಿಗಿಹಿಡಿದಿದ್ದೆನು. ಈಗ ನಾನು ಹೆರುವವಳಂತೆ ಕೂಗುವೆನು ನಾನು ನಾಶಮಾಡಿ ಒಂದೇ ಸಾರಿ ನುಂಗಿಬಿಡುವೆನು.
- 15 ನಾನು ಬೆಟ್ಟ ಗುಡ್ಡಗಳನ್ನು ನಾಶಮಾಡಿ, ಅಲ್ಲಿಯ ಮೇವನ್ನು ಒಣಗಿಸಿ, ನದಿ ಗಳನ್ನು ದ್ವೀಪಗಳನ್ನಾಗಿಯೂ ಕೆರೆಗಳನ್ನು ಬತ್ತಿ ಹೋಗುವಂತೆಯೂ ಮಾಡುವೆನು.
- 16 ಕುರುಡರನ್ನು ಅವರು ತಿಳಿಯದ ಮಾರ್ಗದಲ್ಲಿ ಬರಮಾಡುವೆನು. ಅವರನ್ನು ತಿಳಿಯದ ಹಾದಿಗಳಲ್ಲಿ ನಡಿಸುವೆನು; ಕತ್ತಲೆಯನ್ನು ಅವರ ಮುಂದೆ ಬೆಳಕಾಗಿಯೂ ಸೊಟ್ಟಾದವುಗಳನ್ನು ನೆಟ್ಟಗಾಗಿಯೂ ಮಾಡುವೆನು. ಇವುಗಳನ್ನು ನಾನು ಅವರಿಗೋಸ್ಕರ ಮಾಡುವೆನು. ನಾನು ಅವರನ್ನು ಕೈಬಿಡುವದಿಲ್ಲ.
- 17 ಕೆತ್ತಿದ ವಿಗ್ರಹಗಳಲ್ಲಿ ನಂಬಿಕೆಯಿಡುವವರು ಎರಕಹೊಯ್ದ ವಿಗ್ರಹಗಳಿಗೆ ನೀವೇ ನಮ್ಮ ದೇವರುಗಳೆಂದು ಹೇಳುವ ವರು ಹಿಂದೆ ಬಿದ್ದು ನಾಚಿಕೆಗೆ ಈಡಾಗುವರು.
- 18 ಕಿವುಡರೇ, ಕೇಳಿರಿ; ಕುರುಡರೇ ನೀವು ದೃಷ್ಟಿಸಿ ನೋಡಿರಿ.
- 19 ನನ್ನ ಸೇವಕನಲ್ಲದೆ ಕುರುಡನು ಯಾರು? ಇಲ್ಲವೆ ನಾನು ಕಳುಹಿಸಿದ ಸೇವಕನಲ್ಲದೇ ಕಿವುಡನು ಯಾರು? ಸಂಪೂರ್ಣನಂತೆ ಕುರುಡನು ಯಾರು? ಕರ್ತನ ಸೇವಕನಂತೆ ಕುರುಡನು ಯಾರು?
- 20 ನೀನು ಅನೇಕ ಸಂಗತಿಗಳನ್ನು ಕಂಡಿದ್ದರೂ ನಿನಗೆ ಗಮನವಿಲ್ಲ; ಅವನ ಕಿವಿಗಳು ತೆರೆದಿದ್ದರೂ ಕೇಳನು.
- 21 ಕರ್ತನು ಆತನ ನೀತಿಗೋಸ್ಕರ ಬಹಳವಾಗಿ ಮೆಚ್ಚುವನು, ಆತನು ನ್ಯಾಯಪ್ರಮಾಣವನ್ನು ಹೆಚ್ಚಿಸಿ ಘನಪಡಿಸುವನು.
- 22 ಆದರೆ ಈ ಜನರೇ ಕೊಳ್ಳೆಗೆ ಈಡಾಗಿ ಸೂರೆಹೋಗಿದ್ದಾರೆ. ಅವರೆಲ್ಲರೂ ಹಳ್ಳ ಕೊಳ್ಳಗಳಿಗೆ ಸಿಕ್ಕಿಬಿದ್ದಿದ್ದಾರೆ; ಸೆರೆಮನೆಗಳಲ್ಲಿ ಮುಚ್ಚಲ್ಪ ಟ್ಟಿದ್ದಾರೆ; ಅವರು ಸೂರೆಯಾದರೂ ತಪ್ಪಿಸುವವನು ಒಬ್ಬನೂ ಇಲ್ಲ, ಕೊಳ್ಳೆಯಾದದ್ದನ್ನು ತಿರಿಗಿ ಹಿಂದಕ್ಕೆ ಕೊಡು ಎಂದು ಹೇಳುವ ಒಬ್ಬನೂ ಇಲ್ಲ.
- 23 ನಿಮ್ಮಲ್ಲಿ ಯಾರು ಇವುಗಳಿಗೆ ಕಿವಿಕೊಡುವರು, ಯಾರು ಇನ್ನು ಮುಂದೆ ಆಲಿಸಿ ಕೇಳುವರು?
- 24 ಯಾಕೋಬನ್ನು ಸುಲಿಗೆಗೂ ಇಸ್ರಾಯೇಲನ್ನು ಕೊಳ್ಳೆಗೂ ಗುರಿಮಾಡಿ ದವನು ಯಾರು? ನಾವು ಯಾರಿಗೆ ವಿರೋಧವಾಗಿ ಪಾಪವನ್ನು ಮಾಡಿದೆವು, ಅದು ಕರ್ತನಿಗಲ್ಲವೇ? ಅವರು ಆತನ ಮಾರ್ಗದಲ್ಲಿ ನಡೆಯದೆ ಇಲ್ಲವೆ ಆತನ ನ್ಯಾಯಪ್ರಮಾಣಕ್ಕೆ ಅವಿಧೇಯರಾದರಲ್ಲಾ.
- 25 ಆದದರಿಂದ ಆತನು ತನ್ನ ಯುದ್ದದ ರೌದ್ರವನ್ನು ಮತ್ತು ರೋಷಾಗ್ನಿಯನ್ನು ಅವನ ಮೇಲೆ ಸುರಿಸಿದನು. ಅದು ಅವನ ಸುತ್ತಲೂ ಉರಿಯು ಹತ್ತಿದರೂ ಅವನಿಗೆ ತಿಳಿಯಲಿಲ್ಲ; ಅದು ಅವನನ್ನು ಸುಟ್ಟರೂ ಅವನು ಮನಸ್ಸಿಗೆ ತಂದುಕೊಳ್ಳಲಿಲ್ಲ.
Isaiah 42
- Details
- Parent Category: Old Testament
- Category: Isaiah
ಯೆಶಾಯ ಅಧ್ಯಾಯ 42