- 1 ಕೇಳದವರಿಂದ ನಾನು ವಿಚಾರಿಸಲ್ಪಟ್ಟಿದ್ದೇನೆ, ನನ್ನನ್ನು ಹುಡುಕದವರಿಗೂ ಕಂಡು ಕೊಳ್ಳಲ್ಪಟ್ಟಿದ್ದೇನೆ; ನನ್ನ ಹೆಸರಿನಿಂದ ಕರೆಯಲ್ಪಡದ ಜನಾಂಗಕ್ಕೆ--ಇಗೋ, ಇದ್ದೇನೆ; ಇಗೋ, ಇದ್ದೇನೆ ಎಂದು ಹೇಳಿದೆನು.
- 2 ಒಳ್ಳೇದಲ್ಲದ ಮಾರ್ಗದಲ್ಲಿ ತಮ್ಮ ಆಲೋಚನೆಗಳ ಪ್ರಕಾರ ನಡೆದುಕೊಂಡು ತಿರುಗಿ ಬೀಳುವ ಜನರಿಗೆ ಹಗಲೆಲ್ಲಾ ನನ್ನ ಕೈಗಳನ್ನು ಚಾಚಿದ್ದೇನೆ.
- 3 ಇವರು ಯಾವಾಗಲೂ ನನ್ನ ಮುಖದೆ ದುರಿಗೆ ನನಗೆ ಕೋಪೋದ್ರೇಕವನ್ನು ಎಬ್ಬಿಸುವ ಜನರು; ತೋಟಗಳಲ್ಲಿ ಬಲಿ ಅರ್ಪಿಸಿ, ಇಟ್ಟಿಗೆಯ ಯಜ್ಞವೇದಿಯ ಮೇಲೆ ಧೂಪ ಸುಡುವರು;
- 4 ಸಮಾ ಧಿಗಳಲ್ಲಿ ಉಳಿದು ಗವಿಗಳಲ್ಲಿ ತಂಗುವವರು; ಹಂದಿ ಯ ಮಾಂಸವನ್ನು ತಿನ್ನುವವರು ತಮ್ಮ ಪಾತ್ರೆಗಳಲ್ಲಿ ಅಸಹ್ಯವಾದವುಗಳ ಸಾರುಳ್ಳವರು; ಅವರು--
- 5 ನಿನ್ನ ಷ್ಟಕ್ಕೆ ನೀನೇ ನಿಂತುಕೋ, ನನ್ನ ಬಳಿಗೆ ಬರಬೇಡ, ಯಾಕಂದರೆ ನಿನಗಿಂತ ನಾನು ಪರಿಶುದ್ಧನಾಗಿದ್ದೇ ನೆಂದು ಹೇಳುವವರು; ಇವರು ನನ್ನ ಮೂಗಿನಲ್ಲಿ ಹೊಗೆಯಾಗಿಯೂ ಹಗಲೆಲ್ಲಾ ಉರಿಯುವ ಬೆಂಕಿ ಯಾಗಿಯೂ ಇದ್ದಾರೆ.
- 6 ಇಗೋ, ನನ್ನ ಮುಂದೆ ಅದು ಬರೆಯಲ್ಪಟ್ಟಿದೆ; ನಾನು ಸುಮ್ಮನಿರದೆ ಪ್ರತಿಫಲ ಕೊಡುತ್ತೇನೆ; ಅವರ ಉಡಿಯಲ್ಲಿ ಪ್ರತಿಫಲ ಕೊಡು ತ್ತೇನೆ.
- 7 ನಿಮ್ಮ ಅಕ್ರಮಗಳಿಗೂ ನಿಮ್ಮ ತಂದೆಗಳ ಅಕ್ರ ಮಗಳಿಗೂ ಪ್ರತಿಫಲ ಕೊಡುತ್ತೇನೆಂದು ಕರ್ತನು ಹೇಳುತ್ತಾನೆ; ಅವರು ಬೆಟ್ಟಗಳ ಮೇಲೆ ಧೂಪ ಸುಟ್ಟು ಗುಡ್ಡಗಳ ಮೇಲೆ ನನ್ನನ್ನು ದೂಷಿಸಿದರಲ್ಲಾ. ಹೀಗಿರು ವದರಿಂದ ಅವರ ಹಿಂದಿನ ಕೆಲಸಗಳನ್ನು ಅವರ ಉಡಿ ಯಲ್ಲಿ ಅಳೆದುಬಿಡುವೆನು.
- 8 ಕರ್ತನು ಹೇಳುವದೇನಂದರೆ--ದ್ರಾಕ್ಷೇಗೊನೆ ಯಲ್ಲಿ ಹೊಸದ್ರಾಕ್ಷಾರಸ ಕಂಡುಕೊಳ್ಳುವದನ್ನು ಒಬ್ಬನು ನೋಡಿ--ಕೆಡಿಸಬೇಡ, ಅದರಲ್ಲಿ ಆಶೀರ್ವಾದ ಉಂಟೆಂದು ಹೇಳುವದು ಹೇಗೋ ಹಾಗೆಯೇ ನನ್ನ ಸೇವಕರಿಗೋಸ್ಕರ ಅವರನ್ನೆಲ್ಲಾ ನಾನು ಕೆಡಿಸಿ ಬಿಡದ ಹಾಗೆ ಮಾಡುವೆನು.
- 9 ಯಾಕೋಬಿನೊಳಗಿಂದ ಒಂದು ಸಂತಾನವನ್ನೂ ಯೆಹೂದದೊಳಗಿಂದ ನನ್ನ ಪರ್ವತಗಳಿಗೆ ಬಾಧ್ಯಸ್ಥನಾಗಿರುವವನನ್ನೂ ಹೊರಗೆ ಬರಮಾಡುವೆನು; ನಾನು ಆದುಕೊಂಡವರು ಅದನ್ನು ಸ್ವಾಧೀನಮಾಡಿಕೊಳ್ಳುವರು; ನನ್ನ ಸೇವಕರು ಅದರಲಿವಾಸವಾಗುವರು.
- 10 ನನ್ನನ್ನು ಹುಡುಕುವ ನನ್ನ ಜನರಿ ಗೋಸ್ಕರ ಶಾರೋನು ಮಂದೆಗಳ ಹಟ್ಟಿಯಾಗಿಯೂ ಆಕೋರಿನ ತಗ್ಗು, ದನಗಳು ಮಲಗುವ ಸ್ಥಳವಾ ಗಿಯೂ ಇರುವದು.
- 11 ಆದರೆ ಕರ್ತನನ್ನು ಬಿಟ್ಟವರೇ, ನೀವು ನನ್ನ ಪರಿ ಶುದ್ಧ ಪರ್ವತವನ್ನು ಮರೆತವರೇ, ಸೈನ್ಯಕ್ಕೆ ಮೇಜನ್ನು ಸಿದ್ಧಮಾಡಿ ಅವರಿಗೆ ಪಾನದರ್ಪಣೆ ಮಾಡುವವರೇ ಆಗಿದ್ದೀರಿ.
- 12 ಆದದರಿಂದ ನಿಮ್ಮನ್ನು ಕತ್ತಿಗೆ ನೇಮಿಸು ವೆನು ನೀವೆಲ್ಲರೂ ಕೊಲೆಗೆ ಬೊಗ್ಗಿಕೊಳ್ಳುವಿರಿ. ನಾನು ಕರೆಯಲು, ನೀವು ಉತ್ತರ ಕೊಡಲಿಲ್ಲ; ನಾನು ಮಾತನಾಡಲು ನೀವು ಕೇಳಿಸಿಕೊಳ್ಳಲಿಲ್ಲ; ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದಿರಿ, ನಾನು ಮೆಚ್ಚದ್ದನ್ನು ಆರಿಸಿಕೊಂಡಿರಿ.
- 13 ಹೀಗಿರುವದರಿಂದ ದೇವರಾದ ಕರ್ತನು ಹೇಳು ವದೇನಂದರೆ--ಇಗೋ, ನನ್ನ ಸೇವಕರು ತಿನ್ನುವರು ಆದರೆ ನೀವು ಹಸಿದಿರುವಿರಿ; ಇಗೋ, ನನ್ನ ಸೇವಕರು ಕುಡಿಯುವರು, ಆದರೆ ನೀವು ಬಾಯಾರಿರುವಿರಿ; ಇಗೋ, ನನ್ನ ಸೇವಕರು ಸಂತೋಷಪಡುವರು; ಆದರೆ ನೀವು ನಾಚಿಕೆಪಡುವಿರಿ;
- 14 ಇಗೋ, ನನ್ನ ಸೇವಕರು ಹೃದಯದ ಆನಂದದಿಂದ ಹಾಡುವರು, ಆದರೆ ನೀವು ಹೃದಯದ ವ್ಯಸನದಿಂದ ಅಳುವಿರಿ ಮತ್ತು ಮುರಿದ ಆತ್ಮದಿಂದ ಗೋಳಾಡುವಿರಿ.
- 15 ನಾನು ಆದುಕೊಂಡವರಿಗೆ ನಿಮ್ಮ ಹೆಸರನ್ನು ಶಾಪವಾಗಿ ಉಳಿ ಸುವಿರಿ; ಕರ್ತನಾದ ಯೆಹೋವನು ನಿಮ್ಮನ್ನು ಕೊಂದು ಹಾಕಿ, ತನ್ನ ಸೇವಕರಿಗೆ ಬೇರೆ ಹೆಸರನ್ನು ಇಡುವನು.
- 16 ಆಗ ದೇಶದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳು ವವನು ಸತ್ಯ ದೇವರಲ್ಲಿ ಆಶೀರ್ವದಿಸಿಕೊಳ್ಳುವನು. ದೇಶದಲ್ಲಿ ಆಣೆ ಇಟ್ಟುಕೊಳ್ಳುವವನು; ಸತ್ಯದೇವರ ಮೇಲೆ ಆಣೆ ಇಟ್ಟುಕೊಳ್ಳುವನು; ಮುಂಚಿನ ಕಷ್ಟಗಳು ಮರೆತುಹೋಗಿವೆ ಮತ್ತು ಅವು ನನ್ನ ಕಣ್ಣುಗಳಿಗೆ ಮರೆಯಾಗಿವೆ.
- 17 ಇಗೋ, ನಾನು ಹೊಸ ಆಕಾಶವನ್ನೂ ಹೊಸ ಭೂಮಿಯನ್ನೂ ಸೃಷ್ಟಿಸುತ್ತೇನೆ. ಮುಂಚಿನವುಗಳು ಜ್ಞಾಪಕದಲ್ಲಿರುವದಿಲ್ಲ ಇಲ್ಲವೆ ಅದರ ಸ್ಮರಣೆಗೆ ಬರುವ ದಿಲ್ಲ.
- 18 ಆದರೆ ನಾನು ಸೃಷ್ಟಿಸಿದವುಗಳಲ್ಲಿ ನೀವು ಸಂತೋಷಿಸಿ ಎಂದೆಂದಿಗೂ ಉಲ್ಲಾಸಪಡಿರಿ; ಯಾಕಂ ದರೆ ಇಗೋ, ನಾನು ಯೆರೂಸಲೇಮಿನಲ್ಲಿ ಉಲ್ಲಾಸ ವನ್ನೂ ಅವಳ ಜನರಲ್ಲಿ ಸಂತೋಷವನ್ನೂ ಸೃಷ್ಟಿಸು ತ್ತೇನೆ.
- 19 ಯೆರೂಸಲೇಮಿನಲ್ಲಿ ಉಲ್ಲಾಸಿಸಿ, ನನ್ನ ಜನರಲ್ಲಿ ಸಂತೋಷಪಡುವೆನು; ಅದರಲ್ಲಿ ಅಳುವ ಸ್ವರವೂ ಕೂಗುವ ಸ್ವರವೂ ಇನ್ನು ಕೇಳಲ್ಪಡುವದಿಲ್ಲ.
- 20 ಅಲ್ಲಿ ಕೆಲವು ದಿವಸಗಳ ಕೂಸೂ ತನ್ನ ದಿನ ತುಂಬದ ಮುದುಕನೂ ಇನ್ನು ಇರುವದಿಲ್ಲ; ಯಾಕಂದರೆ ಮಗುವು ನೂರು ವರುಷದ್ದಾಗಿ ಸಾಯುವದು, ಆದರೆ ಪಾಪಿಷ್ಠನು ನೂರು ವರುಷದವನಾಗಿ ಶಾಪ ಹೊಂದು ವನು.
- 21 ಇದಲ್ಲದೆ, ಅವರು ಮನೆಗಳನ್ನು ಕಟ್ಟಿ, ವಾಸಮಾಡುವರು; ದ್ರಾಕ್ಷೇ ತೋಟಗಳನ್ನು ನೆಟ್ಟು, ಅವುಗಳ ಫಲವನ್ನು ಉಣ್ಣುವರು.
- 22 ಅವರು ಕಟ್ಟಿದ್ದ ರಲ್ಲಿ ಇನ್ನೊಬ್ಬರು ವಾಸಮಾಡುವದಿಲ್ಲ. ಅವರು ನೆಟ್ಟ ದ್ದನ್ನು ಇನ್ನೊಬ್ಬರು ತಿನ್ನುವದಿಲ್ಲ; ಮರದ ದಿನಗಳ ಹಾಗೆ ನನ್ನ ಜನರ ದಿನಗಳು ಇರುವವು; ನಾನು ಆದುಕೊಂಡವರು ತಮ್ಮ ಕೈಕೆಲಸವನ್ನು ಅನು ಭವಿಸುವರು.
- 23 ಅವರು ವ್ಯರ್ಥವಾಗಿ ದುಡಿಯರು ಕಷ್ಟವನ್ನು ಎದುರುಗೊಳ್ಳುವದಿಲ್ಲ; ಯಾಕಂದರೆ ಅವರು ಕರ್ತನು ಆಶೀರ್ವದಿಸಿದವರ ಸಂತಾನವಾಗಿದ್ದಾರೆ. ಅವರ ಸಂಗಡ ಅವರ ಸಂತತಿಯು ಸಹ ಆಶೀರ್ವದಿಸ ಲ್ಪಡುವದು.
- 24 ಅವರು ಕರೆಯುವದಕ್ಕಿಂತ ಮುಂಚೆ ನಾನು ಉತ್ತರ ಕೊಡುವೆನು ಅವರು ಇನ್ನೂ ಮಾತಾಡು ತ್ತಿರುವಾಗಲೇ ನಾನು ಕೇಳಿಸಿಕೊಳ್ಳುವೆನು.
- 25 ತೋಳ ವೂ ಕುರಿಮರಿಯೂ ಒಂದಾಗಿ ಮೇಯುವವು; ಸಿಂಹವು ಎತ್ತಿನ ಹಾಗೆ ಹುಲ್ಲು ತಿನ್ನುವದು; ಹಾವಿಗೋ ಅದರ ಆಹಾರವು ಮಣ್ಣೇ; ಅವು ನನ್ನ ಪರಿಶುದ್ಧ ಪರ್ವತದಲ್ಲಿ ಕೇಡುಮಾಡುವದಿಲ್ಲ ಮತ್ತು ನಾಶ ಮಾಡುವದಿಲ್ಲ ಎಂದು ಕರ್ತನು ಹೇಳುತ್ತಾನೆ.
Isaiah 65
- Details
- Parent Category: Old Testament
- Category: Isaiah
ಯೆಶಾಯ ಅಧ್ಯಾಯ 65