wheel

AJC Publications and Media Portal

 

But the Comforter, which is the Holy Ghost, whom the Father will send in my name, he shall teach you all things,
and bring all things to your remembrance, whatsoever I have said unto you. John 14:26


ಯೆಶಾಯಅಧ್ಯಾಯ 66
  • 1 ಕರ್ತನು ಹೇಳುವದೇನಂದರೆ--ಆಕಾಶವು ನನ್ನ ಸಿಂಹಾಸನವು; ಭೂಮಿಯು ನನ್ನ ಪಾದ ಪೀಠವು: ನೀವು ನನಗೋಸ್ಕರ ಕಟ್ಟುವ ಮನೆ ಎಲ್ಲಿ? ನನ್ನ ವಿಶ್ರಾಂತಿಯ ಸ್ಥಳವು ಎಲ್ಲಿ?
  • 2 ಇವುಗಳ ನ್ನೆಲ್ಲಾ ನನ್ನ ಕೈ ಉಂಟುಮಾಡಿತು; ಇವುಗಳೆಲ್ಲಾ ಇದ್ದವೆಂದು ಕರ್ತನು ಅನ್ನುತ್ತಾನೆ. ಆದರೆ ಇವನ ಮೇಲೆ ದೃಷ್ಟಿ ಇಡುವೆನು ದೀನನೂ ಜಜ್ಜಿದ ಆತ್ಮವುಳ್ಳ ವನೂ ನನ್ನ ವಾಕ್ಯಕ್ಕೆ ನಡುಗುವವನೂ ಯಾವನೋ ಅವನ ಮೇಲೆಯೂ ದೃಷ್ಟಿ ಇಡುವೆನು.
  • 3 ಎತ್ತನ್ನು ಕೊಂದುಹಾಕುವವನು ಮನುಷ್ಯನನ್ನು ಹತ್ಯೆ ಮಾಡು ವವನ ಹಾಗಿದ್ದಾನೆ; ಕುರಿಮರಿಯನ್ನು ಬಲಿಯಾಗಿ ಕೊಡುವವನು ನಾಯಿಯ ಕುತ್ತಿಗೆಯನ್ನು ಕಡಿಯು ವವನ ಹಾಗಿದ್ದಾನೆ; ಕಾಣಿಕೆಯನ್ನು ಅರ್ಪಿಸುವವನು ಹಂದಿಯ ರಕ್ತವನ್ನು ಅರ್ಪಿಸುವವನ ಹಾಗಿದ್ದಾನೆ. ಧೂಪವನ್ನು ಸುಡುವವನು ವಿಗ್ರಹವನ್ನು ಆಶೀರ್ವದಿ ಸುವವನ ಹಾಗಿದ್ದಾನೆ. ಹೌದು, ಅವರು ಸ್ವಂತ ಮಾರ್ಗಗಳನ್ನು ಆದುಕೊಂಡಿದ್ದಾರೆ; ಅವರ ಪ್ರಾಣವು ಅವರ ಅಸಹ್ಯವಾದವುಗಳಲ್ಲಿ ಹರ್ಷಿಸುತ್ತವೆ.
  • 4 ನಾನು ಸಹ ಅವರ ಮೋಸಗಳನ್ನು ಆದುಕೊಂಡು ಅವರ ಭಯಗಳನ್ನು ಅವರ ಮೇಲೆ ಬರಮಾಡುವೆನು; ಯಾಕಂದರೆ ನಾನು ಕರೆಯಲು ಯಾರೂ ಉತ್ತರ ಕೊಡಲಿಲ್ಲ. ನಾನು ಮಾತನಾಡಲು ಅವರು ಕೇಳಲಿಲ್ಲ. ಆದರೆ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದರು. ನಾನು ಮೆಚ್ಚದ್ದನ್ನು ಆದುಕೊಂಡರು.
  • 5 ಕರ್ತನ ವಾಕ್ಯವನ್ನು ಕೇಳಿರಿ, ಆತನ ವಾಕ್ಯಕ್ಕೆ ನಡಗುವವರೇ, ನಿಮ್ಮ ಸಹೋದರರು ನಿಮ್ಮನ್ನು ಹಗೆಮಾಡಿ ನನ್ನ ಹೆಸರಿಗೋಸ್ಕರ ನಿಮ್ಮನ್ನು ಹೊರಗೆ ಹಾಕಿ--ಕರ್ತನು ಮಹಿಮೆ ಹೊಂದಲೆಂದು ಹೇಳಿ ದ್ದಾರೆ; ಆದರೆ ಆತನು ನಿಮ್ಮ ಸಂತೋಷಕ್ಕಾಗಿ ಕಾಣಿಸಿ ಕೊಳ್ಳುವನು; ಅವರು ನಾಚಿಕೆಪಡುವರು.
  • 6 ಪಟ್ಟಣ ದೊಳಗಿನ ಗದ್ದಲದ ಶಬ್ದವೂ ದೇವಾಲಯದೊಳಗಿಂದ ಸ್ವರವೂ ತನ್ನ ಶತ್ರುಗಳಿಗೆ ಮುಯ್ಯಿಗೆಮುಯ್ಯಿ ತೀರಿ ಸುವ ಕರ್ತನ ಸ್ವರವಾಗಿದೆ.
  • 7 ಅವಳಿಗೆ ಪ್ರಸವವೇದನೆ ಆಗುವದಕ್ಕಿಂತ ಮುಂಚೆ ಹೆತ್ತಳು, ಅವಳಿಗೆ ನೋವು ಬರುವದಕ್ಕಿಂತ ಮುಂಚೆ ಗಂಡು ಮಗುವನ್ನು ಹೆತ್ತಳು.
  • 8 ಇಂಥಾದ್ದನ್ನು ಯಾರು ಕೇಳಿದ್ದಾರೆ? ಇಂಥವುಗಳನ್ನು ಯಾರು ನೋಡಿದ್ದಾರೆ? ಭೂಮಿ ಒಂದೇ ದಿವಸದಲ್ಲಿ ಹೆರುವಂತೆ ಮಾಡಿತೇ? ಅಥವಾ ಜನಾಂಗವು ಕ್ಷಣ ಮಾತ್ರದಲ್ಲಿ ಹುಟ್ಟೀತೇ? ಚೀಯೋನು ಪ್ರಸವವೇದನೆ ಪಟ್ಟಾಗಲೇ ತನ್ನ ಮಕ್ಕಳನ್ನು ಹೆತ್ತಳು.
  • 9 ನಾನು ಪ್ರಸವಕ್ಕೆ ತಂದ ಮೇಲೆ ಹೆರದಂತೆ ಮಾಡೆನೋ ಎಂದು ಕರ್ತನು ಹೇಳುತ್ತಾನೆ; ಇಲ್ಲವೆ ಹೆರುವಂತೆ ಮಾಡುವವನಾದ ನಾನು ಗರ್ಭವನ್ನು ಮುಚ್ಚುವೆನೇ ಎಂದು ನಿನ್ನ ದೇವರು ಹೇಳುತ್ತಾನೆ.
  • 10 ಯೆರೂಸಲೇಮಿನ ಸಂಗಡ ನೀವು ಸಂತೋಷಿ ಸಿರಿ, ಅವಳನ್ನು ಪ್ರೀತಿ ಮಾಡುವವರೆಲ್ಲರೇ, ಅವಳೊಂ ದಿಗೆ ಉಲ್ಲಾಸಪಡಿರಿ; ಅವಳಿಗೋಸ್ಕರ ದುಃಖಿಸಿದವ ರೆಲ್ಲರೇ, ಅವಳ ಸಂತೋಷಕ್ಕಾಗಿ ಆನಂದಪಡಿರಿ.
  • 11 ಅವಳ ಆದರಣೆಗಳ ಮೊಲೆ ಹೀರಿಕೊಂಡು ತೃಪ್ತಿ ಯಾಗುವ ಹಾಗೆ ಅವಳ ಸಮೃದ್ಧಿಯಾದ ವೈಭವ ದೊಂದಿಗೆ ಹಾಲನ್ನು ಕುಡಿದು ಆನಂದಗೊಳ್ಳಿರಿ.
  • 12 ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನದಿಯಂತೆ ಸಮಾಧಾನವನ್ನೂ ಹರಿಯುವ ಹಳ್ಳ ದಂತೆ ಜನಾಂಗಗಳ ವೈಭವವನ್ನೂ ಅವಳ ಕಡೆಗೆ ಬರಮಾಡುವೆನು; ಆಗ ನೀವು ಅವುಗಳನ್ನು ಹೀರಿ ಕೊಂಡು ಅವಳ ಪಕ್ಕೆಗಳಲ್ಲಿ ಹೊರಲ್ಪಡುವಿರಿ, ಅವಳ ಮೊಣಕಾಲುಗಳ ಮೇಲೆ ಆಡಿಸಲ್ಪಡುವಿರಿ,
  • 13 ಒಬ್ಬ ನನ್ನು ಅವನ ತಾಯಿ ಆದರಿಸುವ ಪ್ರಕಾರವೇ ನಾನು ನಿಮ್ಮನ್ನು ಆದರಿಸುವೆನು; ಯೆರೂಸಲೇಮಿನಲ್ಲಿ ಆದ ರಣೆ ಹೊಂದುವಿರಿ.
  • 14 ನೀವು ಅದನ್ನು ನೋಡುವಾಗ ನಿಮ್ಮ ಹೃದಯವು ಸಂತೋಷಿಸುವದು, ನಿಮ್ಮ ಎಲುಬು ಗಳು ಹಸಿರು ಪಲ್ಯದ ಹಾಗೆ ಚಿಗುರುವವು; ಕರ್ತನ ಕೈ ಆತನ ಸೇವಕನ ಕಡೆಗೂ ಆತನ ರೌದ್ರವು ಆತನ ಶತ್ರುಗಳ ಕಡೆಗೂ ಕಾಣಬರುವದು.
  • 15 ಇಗೋ, ಕರ್ತನು ಬೆಂಕಿಯೊಡನೆ ಬರುವನು. ಆತನ ರಥಗಳು ಬಿರುಗಾಳಿಯ ಹಾಗೆ ಇರುವವು; ಉಗ್ರದಿಂದ ತನ್ನ ಕೋಪವನ್ನೂ ಅಗ್ನಿಜ್ವಾಲೆಗಳಿಂದ ತನ್ನ ಗದರಿಕೆ ಯನ್ನೂ ಸಲ್ಲಿಸುವದಕ್ಕಾಗಿಯೇ ಬರುವನು.
  • 16 ಬೆಂಕಿ ಯಿಂದಲೂ ತನ್ನ ಕತ್ತಿಯಿಂದಲೂ ಕರ್ತನು ಮನುಷ್ಯ ರಿಗೆಲ್ಲಾ ನ್ಯಾಯತೀರಿಸುವನು; ಕರ್ತನಿಂದ ಕೊಲ್ಲಲ್ಪಟ್ಟ ವರು ಅನೇಕರಾಗಿರುವರು.
  • 17 ತೋಟಗಳ ಮಧ್ಯದಲ್ಲಿ ಒಂದು ಮರದ ಹಿಂದೆ ತಮ್ಮನ್ನು ಪರಿಶುದ್ಧ ಮಾಡಿ ಕೊಂಡು ಪವಿತ್ರಮಾಡಿಕೊಳ್ಳುವವರೂ ಹಂದಿ ಮಾಂಸವನ್ನೂ ಅಸಹ್ಯವಾದದ್ದನ್ನೂ ಇಲಿಯನ್ನೂ ತಿನ್ನು ವವರೂ ಒಟ್ಟಾಗಿ ದಹಿಸಲ್ಪಡುವರು ಎಂದು ಕರ್ತನು ಹೇಳುತ್ತಾನೆ.
  • 18 ನಾನು ಅವರ ಕ್ರಿಯೆಗಳನ್ನೂ ಅವರ ಆಲೋಚನೆಗಳನ್ನೂ ಬಲ್ಲೆನು. ಎಲ್ಲಾ ಜನಾಂಗ ಗಳನ್ನೂ ಭಾಷೆಯವರನ್ನೂ ಇನ್ನು ಮುಂದೆ ಒಟ್ಟಿಗೆ ಬರಮಾಡುವೆನು; ಆಗ ಅವರು ಬಂದು ನನ್ನ ಮಹಿ ಮೆಯನ್ನು ನೋಡುವರು.
  • 19 ಅವರ ಮಧ್ಯದಲ್ಲಿ ಒಂದು ಗುರುತನ್ನಿಟ್ಟು ಅವರಲ್ಲಿ ತಪ್ಪಿಸಿಕೊಂಡವರನ್ನು ಜನಾಂಗಗಳಿಗೂ ತಾರ್ಷೀಷಿಗೂ ಫೂಲಿಗೂ ಲೂದಿಗೂ ಬಿಲ್ಲು ಬೊಗ್ಗಿಸುವವರಿಗೂ ತೂಬಲಿಗೂ ಯಾವಾನಿಗೂ ನನ್ನ ಸಮಾಚಾರವನ್ನು ಕೇಳದೆ ನನ್ನ ಮಹಿಮೆಯನ್ನು ನೋಡದೆ ಇರುವ ದೂರದ ದ್ವೀಪ ಗಳಿಗೂ ಕಳುಹಿಸುವೆನು; ಅವರು ಅನ್ಯಜನಾಂಗಗಳಲ್ಲಿ ನನ್ನ ಮಹಿಮೆಯನ್ನು ತಿಳಿಸುವರು.
  • 20 ಅವರು ನಿಮ್ಮ ಸಹೋದರರನ್ನು ಕುದುರೆಗಳ ಮೇಲೆಯೂ ರಥ ಗಳಲ್ಲಿಯೂ ಪಾಲ್ಕಿಗಳಲ್ಲಿಯೂ ಹೇಸರ ಕತ್ತೆಗಳ ಮೇಲೆಯೂ ವೇಗವಾಗಿ ಹೋಗುವ ಪ್ರಾಣಿಗಳ ಮೇಲೆಯೂ ಸಮಸ್ತ ಜನಾಂಗಗಳೊಳಗಿಂದ ಕರ್ತ ನಿಗೆ ಕಾಣಿಕೆಯಾಗಿ ಇಸ್ರಾಯೇಲಿನ ಮಕ್ಕಳು ಕಾಣಿಕೆ ಯನ್ನು ಶುದ್ಧ ಪಾತ್ರೆಯಲ್ಲಿ ಕರ್ತನ ಮನೆಗೆ ತರುವ ಪ್ರಕಾರ ನನ್ನ ಪರಿಶುದ್ಧ ಪರ್ವತವಾದ ಯೆರೂಸ ಲೇಮಿಗೆ ತರುವರೆಂದು ಕರ್ತನು ಹೇಳುತ್ತಾನೆ.
  • 21 ಅವರಲ್ಲಿ ಯಾಜಕರಿಗಾಗಿಯೂ ಲೇವಿಯರಿಗಾ ಗಿಯೂ ಅವರಿಂದ ತಕ್ಕೊಳ್ಳುವೆನೆಂದು ಕರ್ತನು ಹೇಳುತ್ತಾನೆ.
  • 22 ನಾನು ಉಂಟು ಮಾಡುವ ಹೊಸ ಆಕಾಶವೂ ಹೊಸ ಭೂಮಿಯೂ ನನ್ನ ಮುಂದೆ ನೆಲೆಯಾಗಿರುವ ಪ್ರಕಾರವೇ ನಿಮ್ಮ ಸಂತಾನವೂ ನಿಮ್ಮ ಹೆಸರೂ ನೆಲೆಯಾಗಿರುವದೆಂದು ಕರ್ತನು ಅನ್ನುತ್ತಾನೆ.
  • 23 ಇದಾದ ಮೇಲೆ ಒಂದು ಅಮಾವಾಸ್ಯೆಯಿಂದ ಇನ್ನೊಂದಕ್ಕೂ ಒಂದು ಸಬ್ಬತ್ತಿನಿಂದ ಇನ್ನೊಂದಕ್ಕೂ ಮನುಷ್ಯರೆಲ್ಲಾ ನನ್ನ ಮುಂದೆ ಆರಾಧಿಸುವದಕ್ಕೆ ಬರುವರೆಂದು ಕರ್ತನು ಹೇಳುತ್ತಾನೆ.
  • 24 ಅವರು ಮುಂದೆ ಹೋಗಿ ನನಗೆ ವಿರೋಧವಾಗಿ ದ್ರೋಹ ಮಾಡಿದ ಮನುಷ್ಯರ ಹೆಣಗಳನ್ನು ನೋಡುವರು; ಯಾಕಂದರೆ ಅವರ ಹುಳ ಸಾಯುವದಿಲ್ಲ; ಅವರ ಬೆಂಕಿ ಆರುವದಿಲ್ಲ; ಅವರು ಎಲ್ಲಾ ಮನುಷ್ಯರಿಗೆ ಹೇಸಿಕೆಯಾಗುವರು.