- 1 ಅಯ್ಯೋ, ನನ್ನ ತಲೆ ನೀರಾಗಿಯೂ ನನ್ನ ಕಣ್ಣುಗಳು ಕಣ್ಣೀರಿನ ಬುಗ್ಗೆಯಾಗಿಯೂ ಇದ್ದರೆ ಒಳ್ಳೇದು! ಆಗ ನನ್ನ ಜನರ ಮಗಳ ಹತವಾದ ವರ ನಿಮಿತ್ತ ಹಗಲು ರಾತ್ರಿ ಅಳುವೆನು.
- 2 ಹಾ, ಅರಣ್ಯದಲ್ಲಿ ನನಗೆ ಪ್ರಯಾಣಸ್ಥರ ಛತ್ರವು ಇದ್ದರೆ ಒಳ್ಳೇದು, ಆಗ ನನ್ನ ಜನರನ್ನು ಬಿಟ್ಟು ಹೊರಟು ಹೋಗುತ್ತಿದ್ದೆನು; ಅವರೆಲ್ಲರೂ ವ್ಯಭಿಚಾರಿಗಳೇ, ವಂಚಕರ ಕೂಟವೇ.
- 3 ಅವರು ತಮ್ಮ ನಾಲಿಗೆಗಳನ್ನು ಬಿಲ್ಲಿನಂತೆ ಸುಳ್ಳುಗಳಿಗಾಗಿ ಬೊಗ್ಗಿಸುತ್ತಾರೆ. ಆದರೆ ಭೂಮಿಯಲ್ಲಿ ಸತ್ಯಕ್ಕಾಗಿ ಬಲಿಷ್ಠರಾಗುವದಿಲ್ಲ; ಅವರು ಕೇಡಿನಿಂದ ಕೇಡಿಗೆ ಹೋಗುತ್ತಾ ನನ್ನನ್ನು ಅರಿಯದೆ ಇದ್ದಾರೆಂದು ಕರ್ತನು ಅನ್ನುತ್ತಾನೆ.
- 4 ನಿಮ್ಮ ನಿಮ್ಮ ನೆರೆಯವರಿಗೆ ಎಚ್ಚರಿಕೆಯಾಗಿರಿ; ಯಾವ ಸಹೋದರ ನಲ್ಲಾದರೂ ನಂಬಿಕೆ ಇಡಬೇಡಿರಿ; ಸಹೋದರರೆಲ್ಲರೂ ಸಂಪೂರ್ಣವಾಗಿ ಮೋಸಮಾಡುವರು, ನೆರೆಯವ ರೆಲ್ಲರು ಚಾಡಿಹೇಳುತ್ತಾ ತಿರುಗಾಡುವರು.
- 5 ತಮ್ಮ ತಮ್ಮ ನೆರೆಯವರಿಗೆ ವಂಚನೆಮಾಡಿ ಸತ್ಯವನ್ನು ಮಾತಾ ಡರು; ಸುಳ್ಳುಗಳನ್ನು ಹೇಳುವದಕ್ಕೆ ಅವರು ತಮ್ಮ ನಾಲಿಗೆಗೆ ಬೋಧಿಸಿದ್ದಾರೆ. ಅಕ್ರಮ ಮಾಡುವದಕ್ಕೆ ಪ್ರಯಾಸಪಡುತ್ತಾರೆ.
- 6 ನಿನ್ನ ನಿವಾಸವು ಮೋಸದ ಮಧ್ಯದಲ್ಲಿ ಅದೆ; ಮೋಸದಿಂದಲೇ ನನ್ನನ್ನು ನಿರಾಕರಿಸು ತ್ತಾರೆಂದು ಕರ್ತನು ಅನ್ನುತ್ತಾನೆ.
- 7 ಆದದರಿಂದ ಸೈನ್ಯಗಳ ಕರ್ತನು ಹೇಳುವದೇ ನಂದರೆ--ಇಗೋ, ನಾನು ಅವರನ್ನು ಕರಗಿಸಿ ಶೋಧಿ ಸುತ್ತೇನೆ; ನನ್ನ ಜನರ ಮಗಳಿಗೋಸ್ಕರ ನಾನು ಹೇಗೆ ಮಾಡಲಿ?
- 8 ಅವರ ನಾಲಿಗೆ ಎಸೆದ ಬಾಣದಂತಿದೆ, ಅದು ಮೋಸವನ್ನಾಡುತ್ತದೆ. ತನ್ನ ಬಾಯಿಂದ ತನ್ನ ನೆರೆಯವರ ಸಂಗಡ ಸಮಾಧಾನವಾಗಿ ಮಾತನಾಡಿ ಹೃದಯದಲ್ಲಿ ಅವನಿಗೆ ಹೊಂಚುಹಾಕುತ್ತಾನೆ.
- 9 ಇವು ಗಳ ನಿಮಿತ್ತ ನಾನು ಅವರನ್ನು ವಿಚಾರಿಸುವದಿಲ್ಲವೋ? ಇಂಥಾ ಜನಾಂಗಕ್ಕೆ ನನ್ನ ಪ್ರಾಣವು ಮುಯ್ಯಿಗೆ ಮುಯ್ಯಿ ತೀರಿಸುವದಿಲ್ಲವೋ ಎಂದು ಕರ್ತನು ಅನ್ನುತ್ತಾನೆ.
- 10 ಬೆಟ್ಟಗಳಿಗೋಸ್ಕರ ನಾನು ಅಳುವಿಕೆಯನ್ನೂ ದುಃಖವನ್ನೂ ಅರಣ್ಯದ ಸ್ಥಳಗಳಿಗೋಸ್ಕರ ಗೋಳಾಟ ವನ್ನೂ ಎತ್ತುವೆನು; ಅವುಗಳ ಮೂಲಕ ಹಾದು ಹೋಗದ ಹಾಗೆ ಅದು ಸುಡಲ್ಪಟ್ಟಿದೆ; ದನಗಳ ಶಬ್ದವು ಕೇಳಲ್ಪಡುವದಿಲ್ಲ; ಆಕಾಶದ ಪಕ್ಷಿಗಳೂ ಮೃಗಗಳೂ ಸಹ ಓಡಿಹೋಗಿವೆ.
- 11 ಇದಲ್ಲದೆ ಯೆರೂಸಲೇಮನ್ನು ದಿಬ್ಬೆಗಳಾಗಿಯೂ ನರಿಗಳ ಸ್ಥಾನವಾಗಿಯೂ ಮಾಡು ತ್ತೇನೆ; ಯೆಹೂದದ ಪಟ್ಟಣಗಳನ್ನು ನಿವಾಸಿಗಳಿಲ್ಲದೆ ಹಾಳುಮಾಡುತ್ತೇನೆ.
- 12 ಇದನ್ನು ಗ್ರಹಿಸುವ ಜ್ಞಾನಿ ಯಾದ ಮನುಷ್ಯನು ಯಾರು? ಇದನ್ನು ತಿಳಿಸುವ ಹಾಗೆ ಕರ್ತನ ಬಾಯಿ ಯಾರ ಸಂಗಡ ಮಾತನಾಡಿತ್ತು? ದೇಶವು ಯಾವದಕ್ಕಾಗಿ ನಾಶವಾಗಿ ಹಾದು ಹೋಗುವ ವನಿಲ್ಲದೆ ಅರಣ್ಯದ ಹಾಗೆ ಹಾಳಾಯಿತು?
- 13 ಕರ್ತನು ಹೇಳುವದೇನಂದರೆ--ನಾನು ಅವರ ಮುಂದೆ ಇಟ್ಟ ನನ್ನ ನ್ಯಾಯಪ್ರಮಾಣವನ್ನು ಅವರು ಬಿಟ್ಟು ನನ್ನ ಶಬ್ದಕ್ಕೆ ಕಿವಿಗೊಡದೆ ಅದರಲ್ಲಿ ನಡೆಯದೆ
- 14 ತಮ್ಮ ಹೃದಯದ ಕಾಠಿಣ್ಯದ ಪ್ರಕಾರವಾಗಿಯೂ ತಮ್ಮ ತಂದೆಗಳು ಅವರಿಗೆ ಬೋಧಿಸಿದ ಬಾಳ್ ದೇವತೆ ಗಳ ಹಿಂದೆಯೂ ನಡೆದರು.
- 15 ಈ ಕಾರಣದಿಂದ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ; ಇಗೋ, ನಾನು ಅವರಿಗೆ, ಹೌದು, ಈ ಜನರಿಗೆ, ಮಾಚಿಪತ್ರೆಯನ್ನು ತಿನ್ನುವದಕ್ಕೆ ಕೊಡು ತ್ತೇನೆ. ವಿಷದ ನೀರನ್ನು ಅವರಿಗೆ ಕುಡಿಯಲು ಕೊಡು ತ್ತೇನೆ.
- 16 ಅವರಿಗೂ ಅವರ ತಂದೆಗಳಿಗೂ ತಿಳಿಯದ ಅನ್ಯಜನಾಂಗಗಳಲ್ಲಿ ಅವರನ್ನು ಚದರಿಸುತ್ತೇನೆ; ಅವ ರನ್ನು ಮುಗಿಸಿ ಬಿಡುವ ವರೆಗೆ ಕತ್ತಿಯನ್ನು ಅವರ ಹಿಂದೆ ಕಳುಹಿಸುತ್ತೇನೆ.
- 17 ಸೈನ್ಯಗಳ ಕರ್ತನು ಹೇಳುವದೇನಂದರೆ --ಆಲೋಚನೆ ಮಾಡಿರಿ; ದುಃಖಿಸುವ ಸ್ತ್ರೀಯರನ್ನು ಕರೆಯಿರಿ, ಅವರು ಬರಲಿ; ಜಾಣೆಯರನ್ನು ಕರೇ ಕಳುಹಿಸಿರಿ, ಅವರು ಬರಲಿ.
- 18 ಅವರು ತ್ವರೆಪಟ್ಟು ನಮಗೋಸ್ಕರ ಗೋಳಾಟವನ್ನು ಎತ್ತಲಿ; ನಮ್ಮ ಕಣ್ಣು ಗಳು ಕಣ್ಣೀರು ಸುರಿಸಲಿ; ನಮ್ಮ ರೆಪ್ಪೆಗಳು ನೀರು ಎರೆಯಲಿ.
- 19 ನಾವು ಹೇಗೆ ಹಾಳಾದೆವು, ನಾವು ದೇಶವನ್ನು ಬಿಟ್ಟದ್ದರಿಂದಲೂ ನಮ್ಮ ನಿವಾಸಗಳು ನಮ್ಮನ್ನು ಹೊರಗೆ ಹಾಕಿದ್ದರಿಂದಲೂ ಬಹಳವಾಗಿ ನಾಚಿಕೆಪಡುತ್ತೇವೆ ಎಂಬ ಗೋಳಾಟದ ಶಬ್ದವು ಚೀಯೋನಿನಿಂದ ಕೇಳಿ ಬಂತು.
- 20 ಆದಾಗ್ಯೂ ಓ ಸ್ತ್ರೀಯರೇ, ಕರ್ತನ ವಾಕ್ಯವನ್ನು ಕೇಳಿರಿ. ನಿಮ್ಮ ಕಿವಿಯು ಆತನ ಬಾಯಿಯ ವಾಕ್ಯವನ್ನು ಅಂಗೀಕರಿಸಲಿ; ನಿಮ್ಮ ಕುಮಾರ್ತೆಯರಿಗೆ ಗೋಳಾಟವನ್ನೂ ನಿಮ್ಮ ನಿಮ್ಮ ನೆರೆಯವರಿಗೆ ಪ್ರಲಾಪವನ್ನೂ ಕಲಿಸಿರಿ.
- 21 ಮರಣವು ನಮ್ಮ ಕಿಟಕಿಗಳೊಳಗೆ ಏರಿ ಬಂತು, ನಮ್ಮ ಅರಮನೆ ಗಳಲ್ಲಿ ಸೇರಿತು; ಹೊರಗಡೆ ಮಕ್ಕಳನ್ನೂ ಬೀದಿಗಳಲ್ಲಿ ಯೌವ್ವನಸ್ಥರನ್ನೂ ಕಡಿದು ಹಾಕುತ್ತದೆ.
- 22 ಕರ್ತನು ಹೀಗೆ ಅನ್ನುತ್ತಾನೆ--ಮಾತನಾಡು, ಏನಂದರೆ ಮನು ಷ್ಯರ ಹೆಣಗಳು ಗೊಬ್ಬರದಂತೆ ಬಯಲಿನಲ್ಲಿ ಬೀಳು ವವು; ಧಾನ್ಯ ಕೊಯ್ಯುವವನು ಉಳಿಸಿದ ಕೈ ಹಿಡಿಯಂತೆ ಕೂಡಿಸುವವನಿಲ್ಲದೆ ಬೀಳುವವು.
- 23 ಕರ್ತನು ಹೀಗೆ ಹೇಳುತ್ತಾನೆ--ಜ್ಞಾನಿಯು ತನ್ನ ಜ್ಞಾನದಲ್ಲಿ ಹೆಚ್ಚಳಪಡದಿರಲಿ; ಬಲಿಷ್ಟನು ತನ್ನ ಬಲ ದಲ್ಲಿ ಹೆಚ್ಚಳ ಪಡದಿರಲಿ; ಐಶ್ವರ್ಯವಂತನು ತನ್ನ ಐಶ್ವರ್ಯದಲ್ಲಿ ಹೆಚ್ಚಳಪಡದಿರಲಿ.
- 24 ಆದರೆ ಹೆಚ್ಚಳ ಪಡುವವನು ಇದರಲ್ಲಿ ಹೆಚ್ಚಳಪಡಲಿ; ಯಾವದರಲ್ಲಿ ಅಂದರೆ ಕರ್ತನಾದ ನಾನು ಭೂಮಿಯಲ್ಲಿ ಕೃಪೆಯನ್ನೂ ನ್ಯಾಯವನ್ನೂ ನೀತಿಯನ್ನೂ ನಡಿಸುವವನಾಗಿದ್ದೇ ನೆಂದು ನನ್ನನ್ನು ಗ್ರಹಿಸಿ ತಿಳುಕೊಳ್ಳುವದರಲ್ಲಿಯೇ; ಇವುಗಳಲ್ಲಿ ನಾನು ಸಂತೋಷ ಪಡುತ್ತೇನೆಂದು ಕರ್ತನು ಅನ್ನುತ್ತಾನೆ.
- 25 ಕರ್ತನು ಹೇಳುವದೇನಂದರೆ --ಇಗೋ, ನಾನು ಸುನ್ನತಿಯಿಲ್ಲದವರ ಸಂಗಡ ಸುನ್ನತಿ ಯುಳ್ಳವರೆಲ್ಲರನ್ನೂ
- 26 ಐಗುಪ್ತವನ್ನೂ ಯೆಹೂದ ವನ್ನೂ ಎದೋಮನ್ನೂ ಅಮ್ಮೋನನ ಮಕ್ಕಳನ್ನೂ ಮೋವಾಬನ್ನೂ ಅರಣ್ಯ ನಿವಾಸಿಗಳಾಗಿರುವ ಕಟ್ಟ ಕಡೆಯ ಮೂಲೆಯಲ್ಲಿ ಇರುವವರನ್ನೂ ನಾನು ಶಿಕ್ಷಿಸುವ ದಿನಗಳು ಬರುತ್ತವೆ. ಈ ಜನಾಂಗಗಳವರು ಸುನ್ನತಿ ಯಿಲ್ಲದವರು; ಇಸ್ರಾಯೇಲಿನ ಮನೆತನದವರೆಲ್ಲರೂ ಹೃದಯದಲ್ಲಿ ಸುನ್ನತಿಯಿಲ್ಲದವರಾಗಿದ್ದಾರೆ.
Jeremiah 09
- Details
- Parent Category: Old Testament
- Category: Jeremiah
ಯೆರೆಮಿಯ ಅಧ್ಯಾಯ 9