- 1 ಇಸ್ರಾಯೇಲಿನ ಮನೆತನದವರೇ,ಕರ್ತನು ನಿಮಗೆ ಹೇಳುವ ವಾಕ್ಯವನ್ನು ಕೇಳಿರಿ;
- 2 ಕರ್ತನು ಹೀಗೆ ಹೇಳುತ್ತಾನೆ, ಅನ್ಯರ ಆಚ ರಣೆಯನ್ನು ಕಲಿತುಕೊಳ್ಳಬೇಡಿರಿ, ಆಕಾಶದ ಗುರುತುಗಳಿಗೆ ದಿಗ್ಭ್ರಮೆಗೊಳ್ಳಬೇಡಿರಿ. ಅನ್ಯರು ಅವುಗಳಿಗೆ ದಿಗ್ಭ್ರಮೆಗೊಳ್ಳುತ್ತಾರೆ,
- 3 ಜನಗಳ ಪದ್ಧತಿಗಳು ವ್ಯರ್ಥ ವಾಗಿವೆ. ಹೇಗಂದರೆ ಅಡವಿಯಲ್ಲಿ ಒಬ್ಬನು ಮರವನ್ನು ಕಡಿಯುತ್ತಾನೆ; ಅದು ಕೊಡಲಿಯಿಂದ ಬಡಿಗೆಯವನ ಕೈ ಕೆಲಸವೇ
- 4 ಬೆಳ್ಳಿಯಿಂದಲೂ ಬಂಗಾರದಿಂದಲೂ ಅದನ್ನು ಅಲಂಕರಿಸುತ್ತಾರೆ; ಮೊಳೆಗಳಿಂದಲೂ ಸುತ್ತಿಗೆ ಗಳಿಂದಲೂ ಚಲಿಸದ ಹಾಗೆ ಅದನ್ನು ಬಿಗಿಸುತ್ತಾರೆ.
- 5 ಅವು ಖರ್ಜೂರ ಮರದಂತೆ ನೆಟ್ಟಗೆ ಇವೆ. ಅವು ಮಾತನಾಡುವದಿಲ್ಲ; ಅವುಗಳನ್ನು ಹೊತ್ತುಕೊಳ್ಳ ತಕ್ಕದ್ದು, ಅವು ನಡೆಯಲಾರವು. ಅವುಗಳಿಗೆ ಭಯ ಪಡಬೇಡಿರಿ. ಅವು ಕೆಟ್ಟದ್ದನ್ನು ಮಾಡಲಾರವು ಇಲ್ಲವೆ ಒಳ್ಳೇದು ಮಾಡುವದು ಸಹ ಅವುಗಳಲ್ಲಿಲ್ಲ.
- 6 ಓ ಕರ್ತನೇ, ನಿನ್ನ ಹಾಗೆ ಯಾರೂ ಇಲ್ಲ; ನೀನು ಮಹೋ ತ್ತಮನು, ನಿನ್ನ ಹೆಸರು ಪರಾಕ್ರಮದಲ್ಲಿ ದೊಡ್ಡದು.
- 7 ಓ ಜನಾಂಗಗಳ ಅರಸನೇ, ನಿನಗೆ ಭಯಪಡದವ ನಾರು? ಅದು ನಿನಗೆ ಸಲ್ಲತಕ್ಕದ್ದು; ಜನಾಂಗಗಳ ಎಲ್ಲಾ ಜ್ಞಾನಿಗಳಲ್ಲಿಯೂ ಅವುಗಳ ಎಲ್ಲಾ ರಾಜ್ಯಗ ಳಲ್ಲಿಯೂ ನಿನ್ನ ಹಾಗೆ ಯಾರೂ ಇಲ್ಲ.
- 8 ಅವರು ಒಟ್ಟಾರೆ ಕ್ರೂರಿಗಳೂ ಮೂರ್ಖರೂ ಆಗಿದ್ದಾರೆ; ಮರವು ವ್ಯರ್ಥವಾದ ಬೋಧನೆಯಾಗಿವೆ.
- 9 ಬೆಳ್ಳಿಯ ತಗಡುಗಳನ್ನು ತಾರ್ಷೀಷಿನಿಂದಲೂ ಬಂಗಾರವನ್ನು ಊಫಜಿನಿಂದಲೂ ತರುತ್ತಾರೆ; ಅದು ಕೆತ್ತನೆಯವನ ಕೆಲಸ, ಎರಕ ಹೊಯ್ಯುವವನ ಕೈಯಿಂದ ಉಂಟಾ ದದ್ದು. ನೀಲಿಯೂ ಧೂಮ್ರ ವರ್ಣವೂ ಅವುಗಳ ವಸ್ತ್ರವಾಗಿದೆ; ಅವುಗಳೆಲ್ಲಾ ಕೌಶಲ್ಯಗಾರರ ಕೆಲಸವೇ.
- 10 ಆದರೆ ಕರ್ತನು ನಿಜವಾದ ದೇವರಾಗಿದ್ದಾನೆ, ಆತನು ಜೀವವುಳ್ಳ ದೇವರೂ ನಿತ್ಯವಾದ ಅರಸನೂ ಆಗಿದ್ದಾನೆ; ಆತನ ರೌದ್ರದಿಂದ ಭೂಮಿ ಕಂಪಿಸುವದು ಆತನ ಉಗ್ರತೆಯನ್ನು ಜನಾಂಗಗಳು ತಾಳಲಾರವು.
- 11 ನೀವು ಅವರಿಗೆ ಹೀಗೆ ಹೇಳಬೇಕು--ಆಕಾಶ ಗಳನ್ನೂ ಭೂಮಿಯನ್ನೂ ಸೃಷ್ಟಿಸದ ದೇವರುಗಳು ಭೂಮಿಯ ಮೇಲಿನಿಂದಲೂ ಈ ಆಕಾಶಗಳ ಕೆಳಗಿ ನಿಂದಲೂ ನಾಶವಾಗುವವು.
- 12 ಆತನು ಭೂಮಿಯನ್ನು ತನ್ನ ಶಕ್ತಿಯಿಂದ ಉಂಟು ಮಾಡಿದನು, ಭೂಲೋಕವನ್ನು ತನ್ನ ಜ್ಞಾನದಿಂದ ಸ್ಥಾಪಿಸಿದನು, ಆಕಾಶಗಳನ್ನು ತನ್ನ ವಿವೇಕದಿಂದ ಹಾಸಿ ದನು;
- 13 ಆತನು ತನ್ನ ಶಬ್ದ ಮಾಡುವಾಗಲೇ ಆಕಾಶ ಗಳಲ್ಲಿ ನೀರುಗಳ ಸಮೂಹವಿರುವದು. ಆತನು ಭೂಮಿಯ ಅಂತ್ಯದಿಂದ ಹಬೆಯನ್ನು ಏಳಮಾಡುತ್ತಾನೆ; ಮಳೆಯ ಸಂಗಡ ಮಿಂಚನ್ನು ಉಂಟು ಮಾಡುತ್ತಾನೆ; ತನ್ನ ಭಂಡಾರಗಳೊಳಗಿಂದ ಗಾಳಿಯನ್ನು ಹೊರಗೆ ತರುತ್ತಾನೆ.
- 14 ಪ್ರತಿ ಮನುಷ್ಯನು ತನ್ನ ಜ್ಞಾನದಲ್ಲಿ ಪಶುವಾಗಿದ್ದಾನೆ; ಎರಕ ಹೊಯ್ಯುವವರೆಲ್ಲಾ ಕೆತ್ತಿದ ವಿಗ್ರಹಕ್ಕೋಸ್ಕರ ನಾಚಿಕೆಪಡುತ್ತಾರೆ; ಅವರ ಎರಕ ವಿಗ್ರಹವು ಸುಳ್ಳಾದದ್ದು; ಅವುಗಳಲ್ಲಿ ಉಸಿರು ಇಲ್ಲ.
- 15 ಅವು ವ್ಯರ್ಥವೇ, ತಪ್ಪಾದ ಕೆಲಸವೇ; ಅವು ವಿಚಾ ರಿಸಲ್ಪಡುವ ಕಾಲದಲ್ಲಿ ನಾಶವಾಗುವವು.
- 16 ಯಾಕೋ ಬ್ಯರ ಪಾಲು ಇವುಗಳ ಹಾಗಲ್ಲ; ಆತನು ಸಮಸ್ತ ವನ್ನು ರೂಪಿಸಿದಾತನೇ; ಇಸ್ರಾಯೇಲ್ ಆತನ ಸ್ವಾಸ್ತ್ಯದ ಕೋಲು; ಸೈನ್ಯಗಳ ಕರ್ತನು ಎಂಬದು ಆತನ ಹೆಸರಾಗಿದೆ.
- 17 ಕೋಟೆಯಲ್ಲಿ ವಾಸವಾಗಿರುವವನೇ, ದೇಶದೊಳ ಗಿಂದ ನಿನ್ನ ಸರಕುಗಳನ್ನು ಕೂಡಿಸು.
- 18 ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಈ ಒಂದೇ ಸಾರಿ ದೇಶದ ನಿವಾಸಿಗಳನ್ನು ಕವಣಿಯಿಂದ ಎಸೆದು ಬಿಡುತ್ತೇನೆ; ಅವರಿಗೆ ತಗಲುವ ಹಾಗೆ ಅವರನ್ನು ಸಂಕಟಪಡಿಸುತ್ತೇನೆ.
- 19 ನನ್ನ ನೋವಿನ ನಿಮಿತ್ತ ನನಗೆ ಅಯ್ಯೋ, ನನ್ನ ಗಾಯವು ಕಠಿಣವಾಗಿದೆ; ಆದರೆ ನಾನು--ನಿಶ್ಚಯ ವಾಗಿ ಇದು ಸಂತಾಪವಾಗಿದೆ; ನಾನು ತಾಳಲೇಬೇಕು ಅಂದೆನು.
- 20 ನನ್ನ ಗುಡಾರವು ಸೂರೆಯಾಯಿತು; ನನ್ನ ಹಗ್ಗಗಳೆಲ್ಲಾ ಹರಿದಿವೆ; ನನ್ನ ಮಕ್ಕಳು ನನ್ನನ್ನು ಬಿಟ್ಟು ಹೋಗಿದ್ದಾರೆ, ಅವರು ಇಲ್ಲ; ಇನ್ನು ಮೇಲೆ ನನ್ನ ಡೇರೆಯನ್ನು ಹರಡುವದಕ್ಕೂ ನನ್ನ ಪರದೆಗಳನ್ನು ನಿಲ್ಲಿಸುವದಕ್ಕೂ ಒಬ್ಬನೂ ಇಲ್ಲ.
- 21 ಕುರುಬರು ಪಶು ಗಳಂತಾದರು; ಅವರು ಕರ್ತನನ್ನು ಹುಡುಕಲಿಲ್ಲ, ಆದದರಿಂದ ಅವರು ಸಫಲವಾಗುವದಿಲ್ಲ; ಅವರ ಮಂದೆಗಳೆಲ್ಲಾ ಚದರಿಸಲ್ಪಡುವವು.
- 22 ಇಗೋ, ಯೆಹೂದದ ಪಟ್ಟಣಗಳನ್ನು ಹಾಳು ಮಾಡುವದಕ್ಕೂ ಘಟಸರ್ಪದ ಗುಹೆಯನ್ನಾಗಿ ಮಾಡು ವದಕ್ಕೂ ಸುದ್ದಿಯ ಶಬ್ದವೂ ಉತ್ತರ ದೇಶದಿಂದ ಮಹಾ ಗಲಭೆಯೂ ಬರುತ್ತದೆ.
- 23 ಕರ್ತನೇ, ಮನುಷ್ಯನ ಮಾರ್ಗವು ತನ್ನಲ್ಲಿಲ್ಲವೆಂದೂ ತನ್ನ ಹೆಜ್ಜೆ ನೆಟ್ಟಗೆ ಮಾಡುವದು ನಡೆಯುವ ಮನುಷ್ಯನದಲ್ಲವೆಂದೂ ಬಲ್ಲೆನು.
- 24 ಕರ್ತನೇ, ನನ್ನನ್ನು ತಿದ್ದು, ನ್ಯಾಯದಿಂದ ನನ್ನನ್ನು ಇಲ್ಲದಂತೆ ಮಾಡುವ ಹಾಗೆ ನಿನ್ನ ಕೋಪದಲ್ಲಿ ಅಲ್ಲ.
- 25 ನಿನ್ನನ್ನು ತಿಳಿಯದ ಅನ್ಯರ ಮೇಲೆಯೂ ನಿನ್ನ ಹೆಸರನ್ನು ಕರೆಯದ ಕುಟುಂಬಗಳ ಮೇಲೆಯೂ ನಿನ್ನ ರೌದ್ರವನ್ನು ಹೊಯಿದುಬಿಡು; ಅವರು ಯಾಕೋ ಬ್ಯರನ್ನು ತಿಂದು ಬಿಟ್ಟಿದ್ದಾರೆ; ಅವರನ್ನು ನುಂಗಿ ಇಲ್ಲದಾಗಿ ಮಾಡಿ ಅವರ ನಿವಾಸವನ್ನು ಹಾಳುಮಾಡಿದ್ದಾರೆ.
Jeremiah 10
- Details
- Parent Category: Old Testament
- Category: Jeremiah
ಯೆರೆಮಿಯ ಅಧ್ಯಾಯ 10