- 1 ಕರ್ತನು ನನಗೆ--ನೀನು ಹೋಗಿ ನಾರಿನ ದಟ್ಟಿಯನ್ನು ತೆಗೆದುಕೊಂಡು ನಿನ್ನ ನಡುವಿಗೆ ಕಟ್ಟು, ಆದರೆ ಅದನ್ನು ನೀರಿನಲ್ಲಿ ಹಾಕಬೇಡ ಅಂದನು;
- 2 ಆಗ ಕರ್ತನ ಮಾತಿನ ಪ್ರಕಾರ ನಾನು ಆ ದಟ್ಟಿಯನ್ನು ತಕ್ಕೊಂಡು ನನ್ನ ನಡುವಿಗೆ ಕಟ್ಟಿಕೊಂಡೆನು.
- 3 ಆಗ ಕರ್ತನ ವಾಕ್ಯವು ನನಗೆ ಎರಡನೇ ಸಾರಿ ಉಂಟಾಗಿ ಹೇಳಿದ್ದೆನಂದರೆ--ನೀನು ನಿನ್ನ ನಡುವಿನಲ್ಲಿರುವ
- 4 ದಟ್ಟಿಯನ್ನು ತಕ್ಕೊಂಡು ಎದ್ದು ಯೂಫ್ರೇಟೀಸ್‌ಗೆ ಹೋಗಿ ಅದನ್ನು ಅಲ್ಲಿ ಬಂಡೆಯ ಬಿರುಕಿನಲ್ಲಿ ಅಡಗಿಸು ಎಂದಿತು.
- 5 ಆಗ ನಾನು ಹೋಗಿ ಕರ್ತನು ನನಗೆ ಆಜ್ಞಾಪಿಸಿದ ಪ್ರಕಾರ ಅದನ್ನು ಯೂಫ್ರೇಟೀಸ್ ಬಳಿ ಯಲ್ಲಿ ಅಡಗಿಸಿದೆನು.
- 6 ಬಹಳ ದಿವಸಗಳಾದ ಮೇಲೆ ಕರ್ತನು ನನಗೆ--ನೀನು ಎದ್ದು ಯೂಫ್ರೆಟೀ ಸ್‌ಗೆ ಹೋಗಿ ಅಲ್ಲಿ ಅಡಗಿಸಬೇಕೆಂದು ನಾನು ಆಜ್ಞಾಪಿಸಿದ ದಟ್ಟಿಯನ್ನು ಅಲ್ಲಿಂದ ತಕ್ಕೋ ಅಂದನು.
- 7 ಆಗ ನಾನು ಯೂಫ್ರೇಟೀಸಿಗೆ ಹೋಗಿ ಅಗೆದು ಆ ದಟ್ಟಿಯನ್ನು ನಾನು ಅಡಗಿಸಿದ್ದಲ್ಲಿಂದ ತೆಗೆದೆನು; ಇಗೋ, ಆ ದಟ್ಟಿಯು ಯಾವ ಕೆಲಸಕ್ಕಾದರೂ ಬಾರದೆ ಕೆಟ್ಟು ಹೋಗಿತ್ತು.
- 8 ಆಗ ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ--
- 9 ಕರ್ತನು ಹೀಗೆ ಹೇಳುತ್ತಾನೆ --ಈ ಪ್ರಕಾರ ನಾನು ಯೆಹೂದದ ಗರ್ವವನ್ನೂ ಯೆರೂಸಲೇಮಿನ ದೊಡ್ಡ ಗರ್ವವನ್ನೂ ಕೆಡಿಸುವೆನು.
- 10 ನನ್ನ ವಾಕ್ಯಗಳನ್ನು ಕೇಳಲೊಲ್ಲದೆ ತಮ್ಮ ಹೃದಯದ ಕಲ್ಪನೆಯಂತೆ ನಡಕೊಂಡು ಬೇರೆ ದೇವರುಗಳನ್ನು ಸೇವಿಸುವದಕ್ಕೂ ಅವುಗಳನ್ನು ಆರಾಧಿಸುವದಕ್ಕೂ ಹಿಂಬಾಲಿಸುವ ಈ ಕೆಟ್ಟ ಜನರು ಯಾವ ಕೆಲಸಕ್ಕಾದರೂ ಬಾರದ ಈ ನಡುಕಟ್ಟಿನ ಹಾಗಿರುವರು.
- 11 ಯಾವ ಪ್ರಕಾರ ದಟ್ಟಿಯು ಮನುಷ್ಯನ ನಡುವಿಗೆ ಹತ್ತಿಕೊ ಳ್ಳುವದೋ ಅದೇ ಪ್ರಕಾರ ನಾನು ಇಸ್ರಾಯೇಲಿನ ಮನೆತನವನ್ನೆಲ್ಲವನ್ನೂ ಯೆಹೂದದ ಮನೆತನವ ನ್ನೆಲ್ಲವನ್ನೂ ನನಗೆ ಜನರೂ ಹೆಸರೂ ಸ್ತೋತ್ರವೂ ಮಹಿಮೆಯೂ ಆಗುವ ಹಾಗೆ ನನಗೆ ಹತ್ತಿಕೊಳ್ಳುವಂತೆ ಮಾಡಿದೆನು; ಆದರೆ ಅವರು ಕೇಳಲಿಲ್ಲ.
- 12 ಆದದರಿಂದ ನೀನು ಅವರಿಗೆ ಈ ಮಾತನ್ನು ಹೇಳಬೇಕು--ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ ಬುದ್ದಲಿಗಳೆಲ್ಲಾ ದ್ರಾಕ್ಷಾರಸದಿಂದ ತುಂಬಿರುವವು; ಆಗ ಅವರು ನಿನಗೆ--ಬುದ್ದಲಿಗಳೆಲ್ಲಾ ದ್ರಾಕ್ಷಾರಸದಿಂದ ತುಂಬಿರುವವೆಂದು ನಮಗೆ ಚೆನ್ನಾಗಿ ತಿಳಿಯಿತಲ್ಲವೋ ಎಂದು ನಿನಗೆ ಹೇಳುವರು.
- 13 ಆಗ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಈ ದೇಶದ ನಿವಾಸಿಗಳನ್ನೆಲ್ಲಾ ದಾವೀದನ ಸಿಂಹಾಸನದಲ್ಲಿ ಕೂಡ್ರುವ ಅರಸುಗಳನ್ನೂ ಯಾಜಕರನ್ನೂ ಪ್ರವಾದಿ ಗಳನ್ನೂ ಯೆರೂಸಲೇಮಿನ ನಿವಾಸಿಗಳೆಲ್ಲರನ್ನೂ ಅಮಲಿನಿಂದ ತುಂಬಿಸುವೆನು.
- 14 ಅವರ ತಂದೆಗಳನ್ನೂ ಮಕ್ಕಳನ್ನೂ ಕೂಡ ಒಬ್ಬನ ಮೇಲೊಬ್ಬನನ್ನು ಅಪ್ಪಳಿಸು ವೆನು. ನಾನು ಅವರನ್ನು ಕನಿಕರಿಸುವದಿಲ್ಲ, ಕರುಣಿಸು ವದಿಲ್ಲ ಅಂತಃಕರುಣೆಪಡುವದಿಲ್ಲ ಅವರನ್ನು ಕೆಡಿಸು ವೆನು ಎಂದು ಕರ್ತನು ಅನ್ನುತ್ತಾನೆ.
- 15 ಕೇಳಿರಿ, ಕಿವಿಗೊಡಿರಿ, ಗರ್ವಪಡಬೇಡಿರಿ; ಕರ್ತನು ಮಾತನಾಡಿದ್ದಾನೆ.
- 16 ಆತನು ಕತ್ತಲೆಯನ್ನು ತರುವದಕ್ಕಿಂತ ಮುಂಚೆಯೂ ನಿಮ್ಮ ಕಾಲುಗಳು ಅಂಧಕಾರದ ಪರ್ವತಗಳ ಮೇಲೆ ಎಡವುವದಕ್ಕಿಂತ ಮುಂಚೆಯೂ ನೀವು ಬೆಳಕಿಗೆ ಕಾದುಕೊಳ್ಳುತ್ತಿರುವಾಗ ಆತನು ಅದನ್ನು ಮರಣದ ನೆರಳಾಗಿ ಮಾಡಿ ಕಾರ್ಗ ತ್ತಲಿಗೆ ಬದಲಾಯಿಸುವದಕ್ಕಿಂತ ಮುಂಚೆಯೇ ನಿಮ್ಮ ದೇವರಾದ ಕರ್ತನನ್ನು ಮಹಿಮೆಪಡಿಸಿರಿ.
- 17 ಆದರೆ ನೀವು ಅದನ್ನು ಕೇಳದೆ ಹೋದರೆ ನನ್ನ ಪ್ರಾಣವು ನಿಮ್ಮ ಗರ್ವದ ನಿಮಿತ್ತ ಅಂತರಂಗದ ಸ್ಥಳಗಳಲ್ಲಿ ಅಳು ವದು. ನನ್ನ ಆತ್ಮವು ಬಹಳವಾಗಿ ದುಃಖಿಸುವದು; ಕಣ್ಣೀರು ಬಹಳವಾಗಿ ಸುರಿಸುವದು; ಕರ್ತನ ಮಂದೆಯು ಸೆರೆಯಾಗಿ ಒಯ್ಯಲ್ಪಟ್ಟಿದೆ.
- 18 ಅರಸನಿಗೂ ರಾಣಿಗೂ ನೀನು ಹೇಳತಕ್ಕದ್ದೇ ನಂದರೆ--ನೀವು ತಗ್ಗಿಸಿಕೊಂಡು ಕೂತುಕೊಳ್ಳಿರಿ; ನಿಮ್ಮ ದೊರೆತನಗಳು ಅಂದರೆ ನಿಮ್ಮ ಗೌರವದ ಕಿರೀಟವು ಕೆಳಗೆ ಬರುವದು.
- 19 ದಕ್ಷಿಣದ ಪಟ್ಟಣಗಳು ತೆರೆಯುವ ವನಿಲ್ಲದೆ ಮುಚ್ಚಲ್ಪಡುವವು, ಯೆಹೂದವೆಲ್ಲವೂ ಸಂಪೂರ್ಣವಾಗಿ ಸೆರೆಯಾಗಿ ಒಯ್ಯಲ್ಪಡುವದು.
- 20 ನಿಮ್ಮ ಕಣ್ಣುಗಳನ್ನು ಎತ್ತಿ ಉತ್ತರದಿಂದ ಬರುವವ ರನ್ನು ನೋಡಿರಿ; ನಿನಗೆ ಕೊಡಲ್ಪಟ್ಟ ಹಿಂಡೂ ನನ್ನ ಶೃಂಗಾರದ ಮಂದೆಯೂ ಎಲ್ಲಿ?
- 21 ಆತನು ನಿನ್ನನ್ನು ಶಿಕ್ಷಿಸುವಾಗ ಏನು ಹೇಳುವಿ? ನಿನ್ನ ಮೇಲೆ ಅವರು ಮುಖ್ಯ ಪ್ರಭುಗಳೂ ಮುಖ್ಯಸ್ಥರೂ ಆಗಿರುವದಕ್ಕೆ ನೀನೇ ಅವರಿಗೆ ಕಲಿಸಿದಿಯಲ್ಲಾ? ಹೆರುವ ಸ್ತ್ರೀಯ ಪ್ರಕಾರ ನಿನ್ನನ್ನು ದುಃಖಗಳು ಹಿಡಿಯುವವಲ್ಲವೋ?
- 22 ಇವು ನನಗೆ ಯಾಕೆ ಸಂಭವಿಸಿದವೆಂದು ನೀನು ನಿನ್ನ ಹೃದಯದಲ್ಲಿ ಅಂದುಕೊಂಡರೆ, ಬಹಳವಾದ ನಿನ್ನ ಅಕ್ರಮದ ನಿಮಿತ್ತ ನಿನ್ನ ಬಟ್ಟೆಗಳು ತೆಗೆಯಲ್ಪಟ್ಟು ನಿನ್ನ ಹಿಮ್ಮಡಿಗಳು ಬೆತ್ತಲೆಯಾದವು.
- 23 ಕೂಷ್ಯನು ತನ್ನ ಚರ್ಮವನ್ನೂ ಚಿರತೆಯು ತನ್ನ ಮಚ್ಚೆಗಳನ್ನೂ ಮಾರ್ಪಡಿಸುವದಕ್ಕಾಗುವದೋ? ಹಾಗಾದರೆ ಕೆಟ್ಟ ತನದ ಅಭ್ಯಾಸವುಳ್ಳವರಾದ ನೀವು ಸಹ ಒಳ್ಳೆದನ್ನು ಹೇಗೆ ಮಾಡುವದಕ್ಕಾದೀತು.
- 24 ಆದಕಾರಣ ಅಡವಿಯ ಗಾಳಿಯಿಂದ ಹಾರಿ ಹೋಗುವ ಹುಲ್ಲಿನಂತೆ ಅವರನ್ನು ಚದರಿಸುವೆನು.
- 25 ಇದೇ ನಿನ್ನ ಭಾಗವು, ನನ್ನಿಂದ ನಿನಗೆ ಅಳತೆ ಮಾಡಿದ ಪಾಲು ಎಂದು ಕರ್ತನು ಅನ್ನುತ್ತಾನೆ; ನನ್ನನ್ನು ಮರೆತುಬಿಟ್ಟು ಸುಳ್ಳಿನಲ್ಲಿ ಭರವಸವಿಟ್ಟಿದ್ದಿ.
- 26 ಆದದರಿಂದ ನಾನು ನಿನ್ನ ಬಟ್ಟೆಗಳನ್ನು ನಿನ್ನ ನಾಚಿಕೆ ಕಾಣುವ ಹಾಗೆ ನಿನ್ನ ಮುಖದ ಮೇಲೆ ಎತ್ತುವೆನು.
- 27 ನಿನ್ನ ವ್ಯಭಿಚಾರಗಳನ್ನೂ ಬುಸುಗುಟ್ಟು ವಿಕೆಗಳನ್ನೂ ಸೂಳೆತನದ ದೋಷವನ್ನೂ ಹೊಲಗಳ ಲ್ಲಿರುವ ಗುಡ್ಡಗಳ ಮೇಲೆ ಆಗುವ ನಿನ್ನ ಅಸಹ್ಯಗಳನ್ನೂ ನೋಡಿದ್ದೇನೆ, ಓ ಯೆರೂಸಲೇಮೇ, ನಿನಗೆ ಅಯ್ಯೋ, ನೀನು ಶುದ್ಧವಾಗುವದಿಲ್ಲವೋ? ಒಂದು ಸಾರಿ ಇದು ಯಾವಾಗ ಆದೀತು?
Jeremiah 13
- Details
- Parent Category: Old Testament
- Category: Jeremiah
ಯೆರೆಮಿಯ ಅಧ್ಯಾಯ 13