- 1 ಅರಸನಾದ ಯೆಕೊನ್ಯನೂ ರಾಣಿಯೂ ಕಂಚುಕಿಗಳೂ ಯೆಹೂದದ ಯೆರೂಸ ಲೇಮಿನ ಪ್ರಧಾನರೂ ಬಡಿಗೆಯವರೂ ಕಮ್ಮಾರರೂ ಯೆರೂಸಲೇಮನ್ನು ಬಿಟ್ಟುಹೋದ ಮೇಲೆ
- 2 ಪ್ರವಾದಿ ಯಾದ ಯೆರೆವಿಾಯನು ಸೆರೆಯಲ್ಲಿರುವ ಹಿರಿಯರ ಉಳಿದವರಿಗೂ ಯಾಜಕರಿಗೂ ಪ್ರವಾದಿಗಳಿಗೂ ನೆಬೂಕದ್ನೆಚ್ಚರನು ಯೆರೂಸಲೇಮಿನಿಂದ ಬಾಬೆಲಿಗೆ ಒಯ್ದ ಜನರೆಲ್ಲರಿಗೆ
- 3 ಯೆಹೂದದ ಅರಸನಾದ ಚಿದ್ಕೀಯನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಬಳಿಗೆ ಕಳುಹಿಸಿದ ಶಾಫಾನನ ಮಗನಾದ ಎಲ್ಲಾಸನ ಕೈಯಿಂದಲೂ ಹಿಲ್ಕೀಯನ ಮಗನಾದ ಗೆಮರ್ಯನ ಕೈಯಿಂದಲೂ ಕಳುಹಿಸಿದ ಪತ್ರದ ಮಾತುಗಳು ಯಾವ ವಂದರೆ--
- 4 ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಯೆರೂಸಲೇಮಿನಿಂದ ಬಾಬೆಲಿಗೆ ತಾನು ಸೆರೆಯಾಗಿ ಸಾಗಿಸಿದವರಿಗೆ ಹೇಳುವದೇನಂದರೆ--
- 5 ಮನೆಗಳನ್ನು ಕಟ್ಟಿ ವಾಸಮಾಡಿರಿ; ತೋಟಗಳನ್ನು ನೆಟ್ಟು ಅವುಗಳ ಫಲವನ್ನು ತಿನ್ನಿರಿ; ಹೆಂಡತಿಯರನ್ನು ತಕ್ಕೊಂಡು ಕುಮಾರ ಕುಮಾರ್ತೆಯರನ್ನು ಪಡೆಯಿರಿ;
- 6 ನಿಮ್ಮ ಕುಮಾರರಿಗೆ ಹೆಂಡತಿಯರನ್ನು ತಕ್ಕೊಳ್ಳಿರಿ; ನಿಮ್ಮ ಕುಮಾರ್ತೆಯರನ್ನು ಪುರಷರಿಗೆ ಕೊಡಿರಿ, ಅವರು ಕುಮಾರ ಕುಮಾರ್ತೆಯರನ್ನು ಹೆರಲಿ; ಹೀಗೆ ನೀವು ಕಡಿಮೆಯಾಗದೆ ಅಲ್ಲಿ ಹೆಚ್ಚಿರಿ.
- 7 ನಾನು ನಿಮ್ಮನ್ನು ಸೆರೆಯಾಗಿ ಒಯ್ಯಲ್ಪಟ್ಟ ಪಟ್ಟಣದ ಸಮಾಧಾನವನ್ನು ಹುಡುಕಿರಿ; ಅದಕ್ಕೋಸ್ಕರ ಕರ್ತನಿಗೆ ಪ್ರಾರ್ಥನೆ ಮಾಡಿರಿ; ಅದರ ಸಮಾಧಾನದಿಂದ ನಿಮಗೆ ಸಮಾ ಧಾನವಾಗುವದು.
- 8 ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮ ಮಧ್ಯ ದಲ್ಲಿರುವ ನಿಮ್ಮ ಪ್ರವಾದಿಗಳೂ ಶಕುನದವರೂ ನಿಮಗೆ ಮೋಸಮಾಡದಿರಲಿ; ನಿಮಗಾಗಿ ಕನಸು ಕಂಡು ಹೇಳು ವವರಿಗೆ ಕಿವಿಗೊಡಬೇಡಿರಿ.
- 9 ಅವರು ನಿಮಗೆ ನನ್ನ ಹೆಸರಿನಲ್ಲಿ ಸುಳ್ಳಾಗಿ ಪ್ರವಾದಿಸುತ್ತಾರೆ; ನಾನು ಅವರನ್ನು ಕಳುಹಿಸಲಿಲ್ಲವೆಂದು ಕರ್ತನು ಅನ್ನುತ್ತಾನೆ.
- 10 ಕರ್ತನು ಹೀಗೆ ಹೇಳುತ್ತಾನೆ--ಬಾಬೆಲಿನಲ್ಲಿ ಎಪ್ಪತ್ತು ವರುಷ ತುಂಬಿದ ಮೇಲೆ ನಿಮ್ಮನ್ನು ಪರಾಮರಿ ಸುವೆನು; ನನ್ನ ಶುಭ ವಾಕ್ಯವನ್ನು ನಿಮ್ಮ ವಿಷಯದಲ್ಲಿ ಸ್ಥಾಪಿಸಿ ನಿಮ್ಮನ್ನು ತಿರುಗಿ ಈ ಸ್ಥಳಕ್ಕೆ ಬರಮಾಡುವೆನು.
- 11 ನಾನು ನಿಮ್ಮನ್ನು ಕುರಿತು ಮಾಡುವ ಆಲೋಚನೆ ಗಳನ್ನು ಬಲ್ಲೆನೆಂದು ಕರ್ತನು ಅನ್ನುತ್ತಾನೆ; ಅವು ಕೇಡಿ ಗಲ್ಲ, ಸಮಾಧಾನಕ್ಕಿರುವ ಆಲೋಚನೆಗಳು; ನೀವು ನಿರೀಕ್ಷಿಸಿದ್ದ ಸ್ಥಿತಿಯನ್ನು ಕೊಡುವವುಗಳೇ.
- 12 ಆಗ ನನ್ನನ್ನು ಕರೆಯುವಿರಿ; ಹೋಗಿ ನನಗೆ ಪ್ರಾರ್ಥನೆ ಮಾಡುವಿರಿ; ನಿಮಗೆ ಕಿವಿಗೊಡುವೆನು.
- 13 ನನ್ನನ್ನು ಹುಡುಕುವಿರಿ; ಪೂರ್ಣ ಹೃದಯದಿಂದ ನನ್ನನ್ನು ಹುಡುಕುವಾಗ ನನ್ನನ್ನು ಕಂಡುಕೊಳ್ಳುವಿರಿ.
- 14 ನಿಮಗೆ ಕಂಡುಕೊಳ್ಳಲ್ಪಡುವೆನೆಂದು ಕರ್ತನು ಅನ್ನುತ್ತಾನೆ; ನಿಮ್ಮ ಸೆರೆಯನ್ನು ತಿರುಗಿಸಿ ನಾನು ನಿಮ್ಮನ್ನು ಓಡಿಸಿ ಬಿಟ್ಟ ಎಲ್ಲಾ ಜನಾಂಗಗಳಿಂದಲೂ ಎಲ್ಲಾ ಸ್ಥಳಗಳಿಂದಲೂ ನಿಮ್ಮನ್ನು ಕೂಡಿಸುವೆನೆಂದು ಕರ್ತನು ಅನ್ನುತ್ತಾನೆ; ನಾನು ಯಾವ ಸ್ಥಳದಿಂದ ನಿಮ್ಮನ್ನು ಸೆರೆಯಾಗಿ ಕಳುಹಿಸಿ ದೆನೋ ಆ ಸ್ಥಳಕ್ಕೆ ನಿಮ್ಮನ್ನು ತಿರುಗಿ ಬರಮಾಡುವೆನು.
- 15 ಆದರೆ ಕರ್ತನು ನಮಗೆ ಬಾಬೆಲಿನಲ್ಲಿ ಪ್ರವಾದಿ ಗಳನ್ನು ಎಬ್ಬಿಸಿದ್ದಾನೆಂದು ನೀವು ಹೇಳಿದ್ದರಿಂದ
- 16 ದಾವೀದನ ಸಿಂಹಾಸನದಲ್ಲಿ ಕೂತುಕೊಳ್ಳುವ ಅರಸ ನನ್ನು ಕುರಿತು, ನಿಮ್ಮ ಸಂಗಡ ಸೆರೆಗೆ ಹೊರಡದೆ ಈ ಪಟ್ಟಣದಲ್ಲಿ ವಾಸವಾಗಿರುವ ನಿಮ್ಮ ಸಹೋದರರಾದ ಜನರೆಲ್ಲರನ್ನೂ ಕುರಿತು, ಕರ್ತನು ಹೀಗೆ ಹೇಳುತ್ತಾನೆ--
- 17 ಸೈನ್ಯಗಳ ಕರ್ತನು ಹೇಳುವದೇನಂದರೆ-- ಇಗೋ, ನಾನು ಅವರಲ್ಲಿ ಕತ್ತಿಯನ್ನೂ ಕ್ಷಾಮವನ್ನೂ ಜಾಡ್ಯವನ್ನೂ ಕಳುಹಿಸಿ, ಅವರನ್ನು ಕೆಟ್ಟವರನ್ನಾಗಿ ಮಾಡಿ ರುವದರಿಂದ, ತಿನ್ನಕೂಡದ ಅಸಹ್ಯವಾದ ಅಂಜೂರ ಗಳ ಹಾಗೆ ಮಾಡುವೆನು.
- 18 ಕತ್ತಿಯಿಂದಲೂ ಕ್ಷಾಮ ದಿಂದಲೂ ಜಾಡ್ಯದಿಂದಲೂ ಅವರನ್ನು ಹಿಂಸಿಸಿ ನಾನು ಅವರನ್ನು ಓಡಿಸಿಬಿಟ್ಟ ಎಲ್ಲಾ ಜನಾಂಗಗಳಲ್ಲಿ ಶಾಪಕ್ಕೂ ವಿಸ್ಮಯಕ್ಕೂ ಸಿಳ್ಳಿಡುವಿಕೆಗೂ ನಿಂದೆಗೂ ಗುರಿಯಾಗುವ ಹಾಗೆ ಒಪ್ಪಿಸಿಬಿಡುವೆನು.
- 19 ಅವರು ನನ್ನ ವಾಕ್ಯಗಳನ್ನು ಕೇಳಲಿಲ್ಲ ಎಂದು ಕರ್ತನು ಅನ್ನುತ್ತಾನೆ; ನಾನು ಅವರಿಗೆ ನನ್ನ ಸೇವಕರಾದ ಪ್ರವಾದಿಗಳನ್ನು ಬೆಳಗಿನಲ್ಲಿಯೇ ಕಳುಹಿಸಿದೆನು; ಆದರೆ ನೀವು ಕೇಳಲಿಲ್ಲವೆಂದು ಕರ್ತನು ಅನ್ನುತ್ತಾನೆ.
- 20 ಆದದ ರಿಂದ ನಾನು ಯೆರೂಸಲೇಮಿ ನಿಂದ ಬಾಬೆಲಿಗೆ ಕಳುಹಿಸಿದ ಸೆರೆಯವರೆಲ್ಲರೇ,
- 21 ಕರ್ತನ ವಾಕ್ಯವನ್ನು ಕೇಳಿರಿ--ನನ್ನ ಹೆಸರಿನಲ್ಲಿ ನಿಮಗೆ ಸುಳ್ಳನ್ನು ಪ್ರವಾದಿಸುವ ಕೊಲಾಯನ ಮಗನಾದ ಅಹಾಬ ಮಾಸೇಯನ ಮಗನಾದ ಚಿದ್ಕೀಯನ ವಿಷಯವೂ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಅವರನ್ನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿ ಒಪ್ಪಿಸುತ್ತೇನೆ; ಅವನು ಅವರನ್ನು ನಿಮ್ಮ ಕಣ್ಣುಗಳ ಮುಂದೆ ಕೊಂದು ಹಾಕುವನು.
- 22 ಬಾಬೆಲಿನಲ್ಲಿರುವ ಯೆಹೂದದ ಸೆರೆಯವರೆಲ್ಲರೂ ಅವರಿಂದ ಶಾಪವನ್ನು ತಕ್ಕೊಂಡು--ಬಾಬೆಲಿನ ಅರಸನು ಬೆಂಕಿಯಲ್ಲಿ ಸುಟ್ಟುಬಿಟ್ಟ ಚಿದ್ಕೀಯನ ಹಾಗೆಯೂ ಅಹಾಬನ ಹಾಗೆಯೂ ಕರ್ತನು ನಿನಗೆ ಮಾಡಲಿ ಎಂದು ಹೇಳುವರು
- 23 ಅವರು ತಮ್ಮ ನೆರೆಯವರ ಹೆಂಡತಿಯರ ಸಂಗಡ ವ್ಯಭಿಚಾರ ಮಾಡಿ ನನ್ನ ಹೆಸರಿನಲ್ಲಿ ಸುಳ್ಳಾಗಿ ನಾನು ಅವರಿಗೆ ಆಜ್ಞಾಪಿಸದೆ ಇದ್ದ ಮಾತುಗಳನ್ನಾಡಿ ಇಸ್ರಾಯೇಲಿನಲ್ಲಿ ನೀಚತನವನ್ನು ನಡಿಸಿದರು; ನಾನೇ ಅದನ್ನು ತಿಳಿದು ಸಾಕ್ಷಿಯಾಗಿದ್ದೇನೆಂದು ಕರ್ತನು ಅನ್ನುತ್ತಾನೆ.
- 24 ನೆಹೆಲಾಮ್ಯನಾದ ಶೆಮಾಯನಿಗೆ ನೀನು ಹೀಗೆ ಹೇಳು--
- 25 ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನೀನು ನಿನ್ನ ಹೆಸರಿನಲ್ಲಿ ಯೆರೂಸಲೇಮಿನವರೆಲ್ಲರಿಗೂ ಯಾಜಕನಾದ ಮಾಸೇ ಯನ ಮಗನಾಗಿರುವ ಚೆಫನ್ಯನಿಗೂ ಯಾಜಕರೆಲ್ಲರಿಗೂ ಪತ್ರಗಳನ್ನು ಕಳುಹಿಸಿದಿಯಲ್ಲಾ?
- 26 ಹುಚ್ಚನಾದ ತನ್ನನ್ನು ಪ್ರವಾದಿಯಾಗಿ ಮಾಡಿಕೊಳ್ಳುವಂಥ ಪ್ರತಿ ಮನುಷ್ಯ ನಿಗೆ ಕರ್ತನ ಆಲಯದಲ್ಲಿ ಅಧಿಕಾರಿಗಳು ಇರುವ ಹಾಗೆಯೂ ನೀನು ಅಂಥವರನ್ನು ಕೊಳದಲ್ಲಿಯೂ ಸೆರೆಯಲ್ಲಿಯೂ ಇಡುವ ಹಾಗೆಯೂ ಕರ್ತನು ಯಾಜಕ ನಾದ ಯೆಹೋಯಾದನಿಗೆ ಬದಲಾಗಿ ನಿನ್ನನ್ನು ಯಾಜಕ ನನ್ನಾಗಿ ಇಟ್ಟಿದ್ದಾನೆ.
- 27 ಹೀಗಿರಲಾಗಿ ನಿಮಗೆ ತನ್ನನ್ನು ಪ್ರವಾದಿಯಾಗಿ ಮಾಡಿಕೊಳ್ಳುವ ಅನಾತೋತಿನ ವನಾದ ಯೆರೆವಿಾಯನನ್ನು ನೀನು ಯಾಕೆ ಗದರಿಸ ಲಿಲ್ಲ?
- 28 ಅವನು--ಸೆರೆಯು ಬಹಳ ದೀರ್ಘವಾಗು ವದು; ಮನೆಗಳನ್ನು ಕಟ್ಟಿವಾಸಮಾಡಿರಿ; ತೋಟಗಳನ್ನು ನೆಟ್ಟು, ಅವುಗಳ ಫಲವನ್ನು ತಿನ್ನಿರಿ, ಎಂದು ನಮಗೆ ಬಾಬೆಲಿಗೆ ಹೇಳಿ ಕಳುಹಿಸಿದ್ದಾನೆ.
- 29 ಆಗ ಯಾಜಕ ನಾದ ಚೆಫನ್ಯನು ಈ ಪತ್ರವನ್ನು ಪ್ರವಾದಿಯಾದ ಯೆರೆವಿಾಯನ ಮುಂದೆ ಓದಿ ಹೇಳಿದನು.
- 30 ಆಗ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇ ನಂದರೆ--
- 31 ನೀನು ಸೆರೆಯವರೆಲ್ಲರಿಗೆ ಹೇಳಿ ಕಳುಹಿಸ ಬೇಕಾದದ್ದೇನಂದರೆ--ಕರ್ತನು ನೆಹೆಲಾಮ್ಯನಾದ ಶೆಮಾಯನ ವಿಷಯ ಹೀಗೆ ಹೇಳುತ್ತಾನೆ--ನಾನು ಅವನನ್ನು ಕಳುಹಿಸದೆ ಇರುವಾಗ ನಿಮಗೆ ಪ್ರವಾದಿಸಿ ನಿಮ್ಮನ್ನು ಸುಳ್ಳಿನಲ್ಲಿ ನಂಬಿಕೆ ಹುಟ್ಟಿಸಿದ ಕಾರಣ
- 32 ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನೆಹೆಲಾಮ್ಯನಾದ ಶೆಮಾಯನನ್ನೂ ಅವನ ಸಂತಾನ ವನ್ನೂ ದಂಡಿಸುತ್ತೇನೆ; ಈ ಜನರೊಳಗೆ ವಾಸಿಸುವದಕ್ಕೆ ಅವನಿಗೆ ಒಬ್ಬನೂ ಇರುವದಿಲ್ಲ; ನಾನು ನನ್ನ ಜನರಿಗೆ ಮಾಡುವ ಒಳ್ಳೇದನ್ನು ಅವನು ನೋಡುವದಿಲ್ಲವೆಂದು ಕರ್ತನು ಅನ್ನುತ್ತಾನೆ; ಅವನು ಕರ್ತನಿಗೆ ವಿರೋಧವಾಗಿ ತಿರುಗಿಬಿದ್ದಿದ್ದಾನೆ.
Jeremiah 29
- Details
- Parent Category: Old Testament
- Category: Jeremiah
ಯೆರೆಮಿಯ ಅಧ್ಯಾಯ 29