- 1 ಇದಲ್ಲದೆ ಯೆರೆವಿಾಯನು ಇನ್ನೂ ಸೆರೆಮನೆಯ ಅಂಗಳದಲ್ಲಿ ಮುಚ್ಚಲ್ಪಟ್ಟಿರು ವಾಗ ಕರ್ತನ ವಾಕ್ಯವು ಎರಡನೇ ಸಾರಿ ಉಂಟಾಯಿತು.
- 2 ಹೇಗಂದರೆ--ಅದನ್ನು ಮಾಡುವ ಕರ್ತನೂ ಅದನ್ನು ಸ್ಥಾಪಿಸುವದಕ್ಕಾಗಿ ಅದನ್ನು ರೂಪಿಸಿದ ಕರ್ತನೂ ಕರ್ತನೆಂಬ ಹೆಸರುಳ್ಳಾತನೂ ಹೇಳುವದೇನಂದರೆ-
- 3 ನನ್ನನ್ನು ಕರೆ, ಆಗ ನಿನಗೆ ಉತ್ತರ ಕೊಡುವೆನು; ನಿನಗೆ ತಿಳಿಯದ ದೊಡ್ಡ ಮಹತ್ತಾದವುಗಳನ್ನು ನಿನಗೆ ತಿಳಿಸುವೆನು.
- 4 ದಿಬ್ಬಗಳಿಂದಲೂ ಕತ್ತಿಯಿಂದಲೂ ಕೆಡವಿ ಹಾಕಲ್ಪಟ್ಟ ಈ ಪಟ್ಟಣದ ಮನೆಗಳ ವಿಷಯವೂ ಯೆಹೂದದ ಅರಸರ ಮನೆಗಳ ವಿಷಯವೂ ಇಸ್ರಾ ಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--
- 5 ಅವರು ಕಸ್ದೀಯರ ಸಂಗಡ ಯುದ್ಧಮಾಡುವದಕ್ಕೂ ನಾನು ನನ್ನ ಕೋಪದಲ್ಲಿಯೂ ನನ್ನ ಉರಿಯಲ್ಲಿಯೂ ಕೊಂದುಹಾಕಿದ ಮನುಷ್ಯರ ಹೆಣಗಳಿಂದ ಅವುಗಳನ್ನು ತುಂಬಿಸುವದಕ್ಕೂ ಬರುತ್ತಾರೆ; ನಾನು ಈ ಪಟ್ಟಣಕ್ಕೆ ವಿರೋಧವಾಗಿ ಅದರ ಸಮಸ್ತ ಕೆಟ್ಟತನದ ನಿಮಿತ್ತ ನನ್ನ ಮುಖವನ್ನು ಮರೆಮಾಡಿದ್ದೇನೆ.
- 6 ಇಗೋ, ನಾನು ಅದಕ್ಕೆ ಕ್ಷೇಮವನ್ನೂ ಸ್ವಸ್ಥತೆಯನ್ನೂ ಹುಟ್ಟಿಸಿ ಅವರನ್ನು ಗುಣಮಾಡಿ ಸಮಾಧಾನದ ಸತ್ಯವನ್ನು ಸಮೃದ್ಧಿಯಾಗಿ ಅವರಿಗೆ ಪ್ರಕಟಮಾಡುವೆನು.
- 7 ಯೆಹೂದದ ಸೆರೆಯನ್ನೂ ಇಸ್ರಾಯೇಲಿನ ಸೆರೆಯನ್ನೂ ತಿರುಗಿಸಿ ಅವರನ್ನು ಮುಂಚಿನ ಹಾಗೆ ಕಟ್ಟುವೆನು.
- 8 ಅವರು ಯಾವದರಿಂದ ನನಗೆ ವಿರೋಧವಾಗಿ ಪಾಪಮಾಡಿದರೋ ಆ ಅಕ್ರಮ ದಿಂದೆಲ್ಲಾ ಅವರನ್ನು ಶುದ್ಧ ಮಾಡುವೆನು; ಅವರು ಎಂಥವುಗಳಿಂದ ನನಗೆ ವಿರೋಧವಾಗಿ ಪಾಪಮಾಡಿ ನನ್ನ ವಿಷಯದಲ್ಲಿ ದ್ರೋಹಿಗಳಾಗಿದ್ದರೋ ಆ ಅಕ್ರಮ ಗಳನ್ನೆಲ್ಲಾ ಮನ್ನಿಸುವೆನು.
- 9 ಅದು ನನಗೆ ಆನಂದದ ಹೆಸರೂ ನಾನು ಅವರಿಗೆ ಒಳ್ಳೇದನ್ನೆಲ್ಲಾ ಮಾಡುವದನ್ನು ಕೇಳುವ ಭೂಮಿಯಲ್ಲಿರುವ ಎಲ್ಲಾ ಜನಾಂಗಗಳ ಮುಂದೆ ಸ್ತೋತ್ರವೂ ಮಹಿಮೆಯೂ ಆಗುವದು; ನಾನು ಅದಕ್ಕೆ ಉಂಟು ಮಾಡುವ ಮೇಲಿಗಾಗಿಯೂ ಎಲ್ಲಾ ಅಭಿವೃದ್ಧಿಗಾಗಿಯೂ ಅವರು ಹೆದರಿ ನಡುಗುವರು.
- 10 ಕರ್ತನು ಹೇಳುವದೇನಂದರೆ-- ಮನುಷ್ಯರೂ ಪಶುಗಳೂ ಇಲ್ಲದೆ ಹಾಳಾಯಿತೆಂದು ನೀವು ಹೇಳುವ ಈ ಸ್ಥಳದಲ್ಲಿಯೂ ಮನುಷ್ಯರೂ ನಿವಾಸಿಗಳೂ ಪಶುಗಳೂ ಇಲ್ಲದೆ ನಾಶವಾದ ಯೆಹೂ ದದ ಪಟ್ಟಣಗಳಲ್ಲಿಯೂ ಯೆರೂಸಲೇಮಿನ ಬೀದಿ ಗಳಲ್ಲಿಯೂ
- 11 ಇನ್ನು ಮೇಲೆ ಆನಂದದ ಸ್ವರವೂ ಸಂತೋಷದ ಸ್ವರವೂ ಮದಲಿಂಗನ ಸ್ವರವೂ ಮದಲ ಗಿತ್ತಿಯ ಸ್ವರವೂ--ಸೈನ್ಯಗಳ ಕರ್ತನನ್ನು ಕೊಂಡಾಡಿರಿ; ಕರ್ತನು ಒಳ್ಳೆಯವನೇ, ಆತನ ಕೃಪೆ ನಿರಂತರವೇ ಎಂದು ಹೇಳಿ, ಸ್ತೋತ್ರದ ಬಲಿಯನ್ನು ಕರ್ತನ ಆಲ ಯಕ್ಕೆ ತರುವವರ ಸ್ವರವೂ ಕೇಳಲ್ಪಡುವದು; ನಾನು ಮುಂಚಿನ ಹಾಗೆ ದೇಶದ ಸೆರೆಯನ್ನು ತಿರುಗಿಸುತ್ತೇ ನೆಂದು ಕರ್ತನು ಹೇಳುತ್ತಾನೆ.
- 12 ಸೈನ್ಯಗಳ ಕರ್ತನು ಹೇಳುವದೇನಂದರೆ--ಮನುಷ್ಯರೂ ಪಶುಗಳೂ ಇಲ್ಲದೆ ಹಾಳಾದ ಈ ಸ್ಥಳದಲ್ಲಿಯೂ ಅದರ ಎಲ್ಲಾ ಪಟ್ಟಣಗಳಲ್ಲಿಯೂ ಇನ್ನು ಮೇಲೆ ತಮ್ಮ ಮಂದೆಗಳನ್ನು ಮಲಗಿಸುವ ಕುರುಬರ ನಿವಾಸಗಳು ಇರುವವು.
- 13 ಬೆಟ್ಟದ ಪಟ್ಟಣಗಳಲ್ಲಿಯೂ ತಗ್ಗಿನ ಪಟ್ಟಣಗಳ ಲ್ಲಿಯೂ ದಕ್ಷಿಣದ ಪಟ್ಟಣಗಳಲ್ಲಿಯೂ ಬೆನ್ಯಾವಿಾನನ ದೇಶದಲ್ಲಿಯೂ ಯೆರೂಸಲೇಮಿನ ಪ್ರದೇಶಗಳ ಲ್ಲಿಯೂ ಯೆಹೂದದ ಪಟ್ಟಣಗಳಲ್ಲಿಯೂ ಇನ್ನು ಮೇಲೆ ಕುರಿಗಳು ಎಣಿಸುವವನ ಕೈಕೆಳಗೆ ಹಾದು ಹೋಗುವವೆಂದು ಕರ್ತನು ಹೇಳುತ್ತಾನೆ.
- 14 ಇಗೋ, ದಿನಗಳು ಬರುವವೆಂದು ಕರ್ತನು ಅನ್ನುತ್ತಾನೆ; ಆಗ ನಾನು ಇಸ್ರಾಯೇಲಿನ ಮನೆಯವರ ಸಂಗಡಲೂ ಯೆಹೂದನ ಮನೆಯವರ ಸಂಗಡಲೂ ವಾಗ್ದಾನವನ್ನು ಮಾಡಿದಂತೆ ಒಳ್ಳೇ ಮಾತನ್ನು ನೆರೆವೇರಿ ಸುವೆನು.
- 15 ಆ ದಿನಗಳಲ್ಲಿಯೂ ಆ ಕಾಲದಲ್ಲಿಯೂ ನಾನು ದಾವೀದನಿಗೆ ನೀತಿಯುಳ್ಳ ಕೊಂಬೆಯನ್ನು ಚಿಗುರ ಮಾಡುವೆನು; ಆತನು ದೇಶದಲ್ಲಿ ನ್ಯಾಯವನ್ನೂ ನೀತಿಯನ್ನೂ ನಡಿಸುವನು.
- 16 ಆ ದಿನಗಳಲ್ಲಿ ಯೆಹೂದವು ರಕ್ಷಿಸಲ್ಪಡುವದು; ಯೆರೂಸಲೇಮು ಭದ್ರವಾಗಿ ವಾಸಿಸುವದು; ಆಕೆಯು (ಯೆರೂಸ ಲೇಮು) ಕರೆಯಲ್ಪಡುವ ಹೆಸರು ಇದೇ--ನಮ್ಮ ನೀತಿ ಯಾಗಿರುವ ಕರ್ತನು.
- 17 ಕರ್ತನು ಹೀಗೆ ಹೇಳು ತ್ತಾನೆ--ದಾವೀದನಿಗೆ ಇಸ್ರಾಯೇಲಿನ ಮನೆಯ ಸಿಂಹಾಸನದಲ್ಲಿ ಕೂತುಕೊಳ್ಳುವ ಮನುಷ್ಯನು ಇಲ್ಲದೆ ಹೋಗುವದಿಲ್ಲ.
- 18 ಯಾಜಕರಿಗೂ ಲೇವಿಯರಿಗೂ ನಿತ್ಯವಾಗಿ ನನ್ನ ಮುಂದೆ ದಹನಬಲಿಗಳನ್ನು ಅರ್ಪಿಸು ವದಕ್ಕೂ ಆಹಾರದ ಅರ್ಪಣೆಗಳನ್ನು ಬೆಂಕಿಯಿಂದ ಅರ್ಪಿಸುವವದಕ್ಕೂ ಬಲಿಗಳನ್ನು ಮಾಡುವದಕ್ಕೂ ಮನುಷ್ಯನು ಇಲ್ಲದೆ ಹೋಗುವದಿಲ್ಲ.
- 19 ಇದಲ್ಲದೆ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇ ನಂದರೆ--ಕರ್ತನು ಹೀಗೆ ಹೇಳುತ್ತಾನೆ--
- 20 ಹಗಲು ರಾತ್ರಿ ತಮ್ಮ ಕಾಲದಲ್ಲಿ ಆಗದ ಹಾಗೆ ಹಗಲಿನ ಸಂಗಡ ನನ್ನ ಒಡಂಬಡಿಕೆಯನ್ನೂ ರಾತ್ರಿಯ ಸಂಗಡ ನನ್ನ ಒಡಂಬಡಿಕೆಯನ್ನೂ ವಿಾರುವದಕ್ಕೆ ನಿಮ್ಮಿಂದಾದರೆ
- 21 ಆಗ ನಾನು ನನ್ನ ಸೇವಕನಾದ ದಾವೀದನ ಸಂಗಡ ಮಾಡಿದ ಒಡಂಬಡಿಕೆಯನ್ನೂ ಅವನ ಸಿಂಹಾಸನದಲ್ಲಿ ಆಳುವ ಮಗನು ಅವನಿಗಿಲ್ಲದ ಹಾಗೆ ಮತ್ತು ನನ್ನ ಸೇವಕರಾಗಿರುವ ಯಾಜಕರಾದ ಲೇವಿಯರ ಸಂಗಡ ಮಾಡಿದ ಒಡಂಬಡಿಕೆಯನ್ನೂ ವಿಾರುವದಕ್ಕೆ ಆದೀತು.
- 22 ಆಕಾಶದ ಸೈನ್ಯವನ್ನು ಹೇಗೆ ಎಣಿಸಲಿಕ್ಕಾಗದೋ ಸಮುದ್ರದ ಮರಳನ್ನು ಹೇಗೆ ಅಳಿಯಲಿಕ್ಕಾಗದೋ ಹಾಗೆಯೇ ನಾನು ನನ್ನ ಸೇವಕನಾದ ದಾವೀದನ ಸಂತಾನವನೂ ನನಗೆ ಸೇವೆ ಮಾಡುವ ಲೇವಿಯ ರನ್ನೂ ಹೆಚ್ಚಿಸುವೆನು.
- 23 ಇದಲ್ಲದೆ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇನಂದರೆ--
- 24 ಈ ಜನರು ಮಾತನಾಡುವದನ್ನು ನೀನು ನೋಡಲಿಲ್ಲವೊ? ಕರ್ತನು ಆದುಕೊಂಡ ಎರಡು ಗೋತ್ರಗಳನ್ನು ಬೇಡವೆಂದಿದ್ದಾನೆಂದು ಹೇಳಿ ನನ್ನ ಜನರನ್ನು ಇನ್ನು ಅವರ ಮುಂದೆ ಜನಾಂಗವಲ್ಲದ ಹಾಗೆ ಅಸಡ್ಡೆ ಮಾಡಿದ್ದಾರೆ.
- 25 ಕರ್ತನು ಹೀಗೆ ಹೇಳುತ್ತಾನೆ--ನನ್ನ ನಿಯಮವು ಹಗಲು ರಾತ್ರಿಯ ಸಂಗಡ ಇಲ್ಲದಿದ್ದರೆ ಭೂಮ್ಯಾಕಾಶಗಳ ಕಟ್ಟಳೆಗಳನ್ನು ನಾನು ಸ್ಥಾಪಿಸದಿ ದ್ದರೆ--
- 26 ಆಗ ಯಾಕೋಬನ ಸಂತಾನವನ್ನೂ ನನ್ನ ಸೇವಕನಾದ ದಾವೀದನನ್ನೂ ಬೇಡವೆಂದು ಬಿಟ್ಟು ಅವನ ಸಂತಾನದಿಂದ ಅಬ್ರಹಾಮ, ಇಸಾಕ, ಯಾಕೋಬ ಇವರ ಸಂತಾನದ ಮೇಲೆ ಆಳುವವರನ್ನು ತಕ್ಕೊಳ್ಳದೆ ಇದ್ದೆನು; ಆದರೆ ನಾನು ಅವರ ಸೆರೆಯಿಂದ ಬಿಡಿಸಿ ಅವರನ್ನು ಕರುಣಿಸುವೆನು.
Jeremiah 33
- Details
- Parent Category: Old Testament
- Category: Jeremiah
ಯೆರೆಮಿಯ ಅಧ್ಯಾಯ 33