- 1 ಚಿದ್ಕೀಯನು ಆಳುವದಕ್ಕೆ ಆರಂಭಿಸಿದಾಗ ಇಪ್ಪತ್ತೊಂದು ವರುಷದವನಾಗಿದ್ದನು; ಅವನು ಹನ್ನೊಂದು ವರುಷ ಯೆರೂಸಲೇಮಿನಲ್ಲಿ ಆಳಿದನು; ಅವನ ತಾಯಿಯ ಹೆಸರು ಲಿಬ್ನದವನಾದ ಯೆರೆವಿಾಯನ ಮಗಳಾದ ಹಮೂಟಲ್.
- 2 ಅವನು ಯೆಹೋಯಾಕೀಮನು ಮಾಡಿದ್ದೆಲ್ಲಾದರ ಪ್ರಕಾರ ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು.
- 3 ಕರ್ತನು ಯೆಹೂದದ ಮೇಲೆಯೂ ಯೆರೂಸಲೇಮಿನ ಮೇಲೆಯೂ ಅವರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಡುವ ವರೆಗೆ ಮಾಡಿದ ಕೋಪದಿಂದ ಚಿದ್ಕೀಯನು ಬಾಬೆಲಿನ ಅರಸನಿಗೆ ವಿರೋಧವಾಗಿ ತಿರುಗಿಬಿದ್ದನು.
- 4 ಅವನ ಆಳಿಕೆಯ ಒಂಭತ್ತನೇ ವರುಷದಲ್ಲಿ, ಹತ್ತನೇ ತಿಂಗಳಿನ ಹತ್ತನೇ ದಿವಸದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ತಾನು ತನ್ನ ಸಮಸ್ತ ಸೈನ್ಯದ ಸಂಗಡ ಯೆರೂಸಲೇಮಿಗೆ ವಿರೋಧವಾಗಿ ಬಂದು ಅದಕ್ಕೆ ವಿರೋಧವಾಗಿ ದಂಡಿಳಿದು ಅದಕ್ಕೆ ವಿರೋಧವಾಗಿ ಸುತ್ತಲೂ ಕೋಟೆಗಳನ್ನು ಕಟ್ಟಿದನು.
- 5 ಈ ಪ್ರಕಾರ ಅರಸನಾದ ಚಿದ್ಕೀಯನ ಹನ್ನೊಂದನೇ ವರುಷದ ವರೆಗೆ ಪಟ್ಟಣಕ್ಕೆ ಮುತ್ತಿಗೆ ಹಾಕಿದನು.
- 6 ನಾಲ್ಕನೇ ತಿಂಗಳಲ್ಲಿ, ತಿಂಗಳಿನ ಒಂಭತ್ತನೇ ದಿವಸದಲ್ಲಿ ದೇಶಸ್ಥರಿ ಗೋಸ್ಕರ ರೊಟ್ಟಿ ಇಲ್ಲದೆ ಪಟ್ಟಣದಲ್ಲಿ ಕ್ಷಾಮವು ಕಠಿಣವಾಗಿತ್ತು.
- 7 ಆಗ ಪಟ್ಟಣವು ವಿಭಾಗವಾಯಿತು; ಯುದ್ಧಸ್ಥರೆಲ್ಲರು ಓಡಿಹೋಗಿ, ಅರಸನ ತೋಟದ ಬಳಿಯಲ್ಲಿದ್ದ ಎರಡು ಗೋಡೆಗಳ ಮಧ್ಯದ ಬಾಗಲಿನ ಮಾರ್ಗವಾಗಿ ರಾತ್ರಿಯಲ್ಲಿ ಪಟ್ಟಣವನ್ನು ಬಿಟ್ಟು ಹೊರಟು, ಬೈಲು ಸೀಮೆಯ ಮಾರ್ಗವಾಗಿ ಹೋದರು. ಆದರೆ ಕಸ್ದೀಯರು ಪಟ್ಟಣದ ಸುತ್ತಲೂ ಇದ್ದರು.
- 8 ಆಗ ಕಸ್ದೀಯರ ದಂಡು ಅರಸನನ್ನು ಹಿಂದಟ್ಟಿ ಚಿದ್ಕೀಯನನ್ನು ಯೆರಿಕೋವಿನ ಬೈಲಿನಲ್ಲಿ ಹಿಡಿದರು. ಅವನ ದಂಡೆಲ್ಲಾ ಅವನನ್ನು ಬಿಟ್ಟು ಚದರಿಹೋಯಿತು.
- 9 ಆಗ ಅವರು ಅರಸನನ್ನು ಹಿಡಿದು, ಬಾಬೆಲಿನ ಅರಸನ ಬಳಿಗೆ ಹಮಾತ್ ದೇಶದಲ್ಲಿರುವ ರಿಬ್ಲಕ್ಕೆ ತಕ್ಕೊಂಡು ಹೋದರು; ಅಲ್ಲಿ ಅವನು ಅವನ ವಿಷಯ ನ್ಯಾಯತೀರ್ಪು ಮಾಡಿದನು.
- 10 ಬಾಬೇಲಿನ ಅರಸನು ಚಿದ್ಕೀಯನ ಮಕ್ಕಳನ್ನು ಅವನ ಕಣ್ಣುಗಳ ಮುಂದೆ ಕೊಂದು ಹಾಕಿಸಿದನು. ಯೆಹೂದದ ಪ್ರಧಾನರೆಲ್ಲ ರನ್ನೂ ಸಹ ರಿಬ್ಲದಲ್ಲಿ ಕೊಂದು ಹಾಕಿಸಿದನು.
- 11 ಇದಲ್ಲದೆ ಬಾಬೆಲಿನ ಅಸನು ಚಿದ್ಕೀಯನ ಕಣ್ಣುಗಳನ್ನು ಕಿತ್ತುಹಾಕಿಸಿ, ಅವನನ್ನು ಹಿತ್ತಾಳೆಯ ಸಂಕೋಲೆಗಳಿಂದ ಕಟ್ಟಿಸಿ, ಬಾಬೆಲಿಗೆ ಒಯ್ದು ಅವನು ಸಾಯುವ ದಿನದ ವರೆಗೆ ಸೆರೆಮನೆಯಲ್ಲಿ ಇಟ್ಟನು.
- 12 ಬಾಬೆಲಿನ ಅರಸನಾದ ನೆಬೂಕದೇಚ್ಚರನ ಹತ್ತೊಂಭತ್ತನೇ ವರುಷದ, ಐದನೇ ತಿಂಗಳಿನ, ಹತ್ತನೇ ದಿವಸದಲ್ಲಿ, ಬಾಬೆಲಿನ ಅರಸನ ಸೇವಕನೂ ಕಾವಲಿನ ಅಧಿಪತಿಯೂ ಆಗಿದ್ದ ನೆಬೂಜರದಾನನು ಯೆರೂ ಸಲೇಮಿಗೆ ಬಂದು,
- 13 ಕರ್ತನ ಆಲಯವನ್ನೂ ಅರಸನ ಮನೆಯನ್ನೂ ಯೆರೂಸಲೇಮಿನ ಎಲ್ಲಾ ಮನೆಗಳನ್ನೂ ದೊಡ್ಡವರ ಎಲ್ಲಾ ಮನೆಗಳನ್ನೂ ಬೆಂಕಿಯಿಂದ ಸುಟ್ಟು ಬಿಟ್ಟನು;
- 14 ಸುತ್ತಲಿರುವ ಯೆರೂಸಲೇಮಿನ ಗೋಡೆ ಗಳನ್ನೆಲ್ಲಾ ಕಾವಲಿನವರ ಅಧಿಪತಿಯ ಸಂಗಡ ಇದ್ದ ಕಸ್ದೀಯರ ದಂಡೆಲ್ಲಾ ಕೆಡವಿ ಹಾಕಿತು.
- 15 ಕಾವಲಿನ ಅಧಿಪತಿಯಾದ ನೆಬೂಜರದಾನನು ಜನರಲ್ಲಿ ಬಡವ ರಾದ ಕೆಲವರನ್ನೂ ಪಟ್ಟಣದಲ್ಲಿ ಉಳಿದ ಜನರನ್ನೂ ಬಾಬೆಲಿನ ಅರಸನ ಕಡೆಗೆ ಬಿದ್ದವರನ್ನೂ ಸಮೂಹದಲ್ಲಿ ಮಿಕ್ಕಾದವರನ್ನೂ ಸೆರೆಯಾಗಿ ಒಯ್ದನು.
- 16 ಆದರೆ ಕಾವಲಿನವರ ಅಧಿಪತಿಯಾದ ನೆಬೂಜರದಾನನು ದೇಶದ ಬಡವರಲ್ಲಿ ಕೆಲವರನ್ನು ದ್ರಾಕ್ಷೇತೋಟ ಕಾಯು ವವರಾಗಿಯೂ ಬೇಸಾಯ ಮಾಡುವವರಾಗಿಯೂ ಬಿಟ್ಟನು.
- 17 ಇದಲ್ಲದೆ ಕರ್ತನ ಆಲಯದಲ್ಲಿದ್ದ ಹಿತ್ತಾಳೆಯ ಸ್ತಂಭಗಳನ್ನೂ ಗದ್ದಿಗೆಗಳನ್ನೂ ಕರ್ತನ ಆಲಯದಲ್ಲಿದ್ದ ಹಿತ್ತಾಳೆಯ ಸಮುದ್ರವನ್ನೂ ಕಸ್ದೀಯರು ಒಡೆದು ಅವುಗಳ ಹಿತ್ತಾಳೆಯನ್ನೆಲ್ಲಾ ಬಾಬೆಲಿಗೆ ತಕ್ಕೊಂಡು ಹೋದರು.
- 18 ಗುಡಾಣಗಳನ್ನೂ ಸಲಿಕೆಗಳನ್ನೂ ಕತ್ತರಿಗಳನ್ನೂ ತಂಬಿಗೆಗಳನ್ನೂ ಸೌಟುಗಳನ್ನೂ ಸೇವೆಗೆ ಸಂಬಂಧವಾದ ಎಲ್ಲಾ ಹಿತ್ತಾಳೆಯ ಪಾತ್ರೆಗಳನ್ನೂ ತಕ್ಕೊಂಡರು.
- 19 ಇದಲ್ಲದೆ ಬೋಗುಣಿಗಳನ್ನೂ ಅಗ್ನಿಪಾತ್ರೆಗಳನ್ನೂ ಬಟ್ಟಲುಗ ಳನ್ನೂ ಗುಡಾಣಗಳನ್ನೂ ದೀಪಸ್ತಂಭಗಳನ್ನೂ ಸೌಟುಗ ಳನ್ನೂ ಬಟ್ಟಲುಗಳನ್ನೂ ಬಂಗಾರದ್ದಾದರೆ, ಅದರ ಬಂಗಾರವನ್ನೂ ಬೆಳ್ಳಿಯದ್ದಾದರೆ, ಅದರ ಬೆಳ್ಳಿಯನ್ನೂ ಕಾವಲಿನ ಅಧಿಪತಿಯು ತಕ್ಕೊಂಡನು.
- 20 ಅರಸನಾದ ಸೊಲೊಮೋನನು ಕರ್ತನ ಆಲಯದಲ್ಲಿ ಮಾಡಿಸಿದ ಎರಡು ಸ್ತಂಭಗಳನ್ನೂ ಒಂದು ಸಮುದ್ರವನ್ನೂ ಗದ್ದಿಗೆಗಳ ಕೆಳಗಿದ್ದ ಹನ್ನೆರಡು ಹಿತ್ತಾಳೆಯ ಎತ್ತುಗಳನ್ನೂ ತಕ್ಕೊಂಡನು; ಈ ಎಲ್ಲಾ ಪಾತ್ರೆಗಳಿಗೆ ಲೆಕ್ಕವಿಲ್ಲದಷ್ಟು ಹಿತ್ತಾಳೆ ತೂಕವಾಗಿತ್ತು.
- 21 ಸ್ತಂಭಗಳ ವಿಷಯ, ಒಂದು ಸ್ತಂಭದ ಉದ್ದವು ಹದಿನೆಂಟು ಮೊಳವಾಗಿತ್ತು, ಹನ್ನೆರಡು ಮೊಳದ ಸರಿಗೆ ಅದನ್ನು ಸುತ್ತಿಕೊಂಡಿತು; ಅದರ ದಪ್ಪ ನಾಲ್ಕು ಬೆರಳು; ಅದು ಟೊಳ್ಳಾಗಿತ್ತು.
- 22 ಅದರ ಮೇಲೆ ಹಿತ್ತಾಳೆಯ ಕುಂಭ ಇತ್ತು; ಒಂದು ಕುಂಭದ ಎತ್ತರವು ಐದು ಮೊಳವಾಗಿತ್ತು. ಮತ್ತು ಕುಂಭಗಳ ಮೇಲೆ ಸುತ್ತಲಾಗಿ ಜಾಲರು ಕೆಲಸವೂ ದಾಳಿಂಬರಗಳೂ ಇದ್ದವು; ಎಲ್ಲಾ ಹಿತ್ತಾಳೆಯೇ; ಎರಡನೇ ಸ್ತಂಭವೂ ದಾಳಿಂಬರಗಳೂ ಅದರಂತೆಯೇ ಇದ್ದವು;
- 23 ಒಂದು ಕಡೆಗೆ ತೊಂಭತ್ತಾರು ದಾಳಿಂಬರಗಳೂ ಇದ್ದವು; ಜಾಲರು ಕೆಲಸದ ಮೇಲೆ ಸುತ್ತಲಾಗಿದ್ದ ದಾಳಿಂಬರಗಳೆಲ್ಲಾ ನೂರು.
- 24 ಕಾವಲಿನ ಅಧಿಪತಿಯು ಪ್ರಧಾನ ಯಾಜಕನಾದ ಸೆರಾಯನನ್ನೂ ಎರಡನೇ ಯಾಜಕನಾದ ಚೆಫನ್ಯನನ್ನೂ ಮೂವರು ದ್ವಾರಪಾಲಕರನ್ನೂ ತಕ್ಕೊಂಡನು.
- 25 ಯುದ್ಧಸ್ಥರ ಮೇಲೆ ನೇಮಿಸಲ್ಪಟ್ಟಿದ್ದ ಒಬ್ಬ ಮನೇವಾರ್ತೆಯವನನ್ನೂ ಅರಸನ ಸನ್ನಿಧಾನದಲ್ಲಿ ನಿಂತವರೊಳಗೆ ಪಟ್ಟಣದಲ್ಲಿ ಸಿಕ್ಕಿದ ಏಳು ಮನುಷ್ಯರನ್ನೂ ದೇಶಸ್ಥರನ್ನೂ ದಂಡಿನವರ ಲೆಕ್ಕದಲ್ಲಿ ಸೇರಿಸಿದ ಸೈನ್ಯಾಧಿಪತಿಯ ಲೇಖಕನನ್ನೂ ಪಟ್ಟಣದ ಮಧ್ಯದಲ್ಲಿ ಸಿಕ್ಕಿದ ದೇಶಸ್ಥರಲ್ಲಿ ಅರುವತ್ತು ಮನುಷ್ಯರನ್ನೂ ಪಟ್ಟಣದೊಳಗಿಂದ ತಕ್ಕೊಂಡನು.
- 26 ಇವರನ್ನು ಕಾವಲಿನ ಅಧಿಪತಿಯಾದ ನೆಬೂಜರ ದಾನನು ತಕ್ಕೊಂಡು ಬಾಬೆಲಿನ ಅರಸನ ಬಳಿಗೆ ರಿಬ್ಲಕ್ಕೆ ಒಯ್ದನು.
- 27 ಆಗ ಬಾಬೆಲಿನ ಅರಸನು ಅವರನ್ನು ಹೊಡಿಸಿ, ಹಮಾತ್ ದೇಶದ ರಿಬ್ಲದಲ್ಲಿ ಕೊಂದು ಹಾಕಿಸಿದನು. ಈ ಪ್ರಕಾರ ಯೆಹೂದನು ತನ್ನ ದೇಶದಿಂದ ಸೆರೆಯಾಗಿ ಒಯ್ಯಲ್ಪಟ್ಟನು.
- 28 ನೆಬೂಕ ದ್ನೆಚ್ಚರನು ಸೆರೆಯಾಗಿ ಒಯ್ದ ಜನರು ಇವರೇ--ಏಳನೇ ವರುಷದಲ್ಲಿ ಮೂರು ಸಾವಿರದ ಇಪ್ಪತ್ತು ಮೂರು ಯೆಹೂದ್ಯರು.
- 29 ನೆಬೂಕದ್ನೆಚ್ಚರನ ಹದಿನೆಂಟನೇ ವರುಷದಲ್ಲಿ ಅವನು ಯೆರೂಸಲೇಮಿನಿಂದ ಎಂಟು ನೂರ ಮೂವತ್ತೆರಡು ಜನರನ್ನು ಒಯ್ದನು.
- 30 ನೆಬೂ ಕದ್ನೆಚ್ಚರನ ಇಪ್ಪತ್ತು ಮೂರನೇ ವರುಷದಲ್ಲಿ ಕಾವಲಿನ ಅಧಿಪತಿಯಾದ ನೆಬೂಜರದಾನನು ಏಳುನೂರು ನಾಲ್ವತ್ತೈದು ಮಂದಿ ಯೆಹೂದ್ಯರನ್ನು ಒಯ್ದನು. ಜನರೆಲ್ಲರು ನಾಲ್ಕು ಸಾವಿರದ ಆರುನೂರು.
- 31 ಯೆಹೂದದ ಅರಸನಾದ ಯೆಹೋಯಾಖೀನನ ಸೆರೆಯ ಮೂವತ್ತೇಳನೇ ವರುಷದಲ್ಲಿ, ಹನ್ನೆರಡನೇ ತಿಂಗಳಿನ ಇಪ್ಪತ್ತೈದನೇ ದಿವಸದಲ್ಲಿ ಆದದ್ದೇನಂ ದರೆ--ಬಾಬೆಲಿನ ಅರಸನಾದ ಎವೀಲ್ಮೆರೋದಕನು ತನ್ನ ಆಳಿಕೆಯ ಮೊದಲನೇ ವರುಷದಲ್ಲಿ ಯೆಹೂದದ ಅರಸನಾದ ಯೆಹೋಯಾಖೀನನ ತಲೆಯನ್ನು ಎತ್ತಿ ಅವನನ್ನು ಸೆರೆಮನೆಯೊಳಗಿಂದ ಹೊರಗೆ ತರಿಸಿ ಅವನ ಸಂಗಡ ಕರುಣೆಯಿಂದ ಮಾತನಾಡಿ
- 32 ಅವನ ಸಿಂಹಾ ಸನವನ್ನು ತನ್ನ ಸಂಗಡ ಬಾಬೆಲಿನಲ್ಲಿದ್ದ ಅರಸರ ಸಿಂಹಾಸನಗಳ ಮೇಲೆ ಇರಿಸಿ ಅವನ ಸೆರೆಮನೆಯ ವಸ್ತ್ರಗಳನ್ನು ಬದಲಾಯಿಸಿದನು.
- 33 ಆಗ ಅವನು ಬದುಕಿದ ದಿನಗಳೆಲ್ಲಾ ಯಾವಾಗಲೂ ಅವನ ಮುಂದೆ ಊಟಮಾಡುತ್ತಿದ್ದನು.
- 34 ಅವನ ಆಹಾರದ ವಿಷಯ ವೇನಂದರೆ--ಅವನು ಬದುಕಿದ ದಿನಗಳೆಲ್ಲಾ ಅವನು ಸಾಯುವ ದಿನದವರೆಗೆ ದಿನದಿನಕ್ಕೆ ತಕ್ಕ ಆಹಾರವು ಯಾವಾಗಲೂ ಬಾಬೆಲಿನ ಅರಸನ ಕಡೆಯಿಂದ ಕೊಡಲ್ಪಡುತ್ತಿತ್ತು.
Jeremiah 52
- Details
- Parent Category: Old Testament
- Category: Jeremiah
ಯೆರೆಮಿಯ ಅಧ್ಯಾಯ 52