- 1 ಈಗ ಕರೆ; ನಿನಗೆ ಉತ್ತರ ಕೊಡುವವನು ಇದ್ದಾನೋ? ಪರಿಶುದ್ಧರಲ್ಲಿ ಯಾರ ಕಡೆಗೆ ತಿರುಗಿಕೊಳ್ಳುವಿ?
- 2 ಮೂಢನನ್ನು ಕೋಪವು ಕೊಲ್ಲು ವದು; ಬುದ್ಧಿಹೀನನನ್ನು ರೋಷವು ಸಾಯುವಂತೆ ಮಾಡುವದು.
- 3 ಮೂಢನು ಬೇರೂರುವದನ್ನು ನಾನು ನೋಡಿದೆನು; ಸಂಗಡಲೇ ಅವನ ಸ್ಥಾನವನ್ನು ನಾನು ಶಪಿಸಿದೆನು.
- 4 ಅವನ ಮಕ್ಕಳು ಭದ್ರತೆಗೆ ದೂರವಾಗಿ ದ್ದಾರೆ; ತಪ್ಪಿಸುವವನಿಲ್ಲದೆ (ಅವರು) ಬಾಗಿಲಲ್ಲಿ ಜಜ್ಜ ಲ್ಪಡುವರು.
- 5 ಹಸಿದವನು ಅವನ ಪೈರನ್ನು ತಿನ್ನುವನು, ಮುಳ್ಳುಗಳೊಳಗಿಂದಲೂ ಅದನ್ನು ತೆಗೆದುಕೊಳ್ಳು ವನು; ಕೊಳ್ಳೆಗಾರನು ಅವರ ಆಸ್ತಿಯನ್ನು ನುಂಗಿಬಿಡು ವನು.
- 6 ಧೂಳಿನಿಂದ ಕೇಡು ಹುಟ್ಟುವದಿಲ್ಲ. ಭೂಮಿ ಯಿಂದ ಕಷ್ಟ ಮೊಳೆಯುವದಿಲ್ಲ.
- 7 ಕಿಡಿಗಳು ಹಾರುವ ಪ್ರಕಾರವೇ ಮನುಷ್ಯನು ಕಷ್ಟಕ್ಕಾಗಿ ಹುಟ್ಟುತ್ತಾನೆ.
- 8 ನಾನು ದೇವರನ್ನು ಹುಡುಕುವೆನು; ನನ್ನ ಕಾರ್ಯವನ್ನು ದೇವರ ಮೇಲೆ ಹಾಕುವೆನು.
- 9 ಆತನು ದೊಡ್ಡ ವುಗಳನ್ನು ಶೋಧಿಸಲಸಾಧ್ಯವಾಗಿ ಮಾಡುತ್ತಾನೆ; ಎಣಿಕೆ ಇಲ್ಲದ ಅದ್ಭುತಗಳನ್ನು ಮಾಡುತ್ತಾನೆ.
- 10 ಭೂಮಿಯ ಮೇಲೆ ಮಳೆಯನ್ನು ಸುರಿಸುತ್ತಾನೆ; ಹೊಲಗಳ ಮೇಲೆ ನೀರನ್ನು ಕಳುಹಿಸುತ್ತಾನೆ;
- 11 ಹೀಗೆ ತಗ್ಗಿದವರನ್ನು ಉನ್ನತದಲ್ಲಿಡುತ್ತಾನೆ. ದುಃಖವುಳ್ಳವರು ರಕ್ಷಣೆಗೆ ಎತ್ತ ಲ್ಪಡುತ್ತಾರೆ.
- 12 ಆತನು ಯುಕ್ತಿವಂತರ ಯೋಚನೆಗಳನ್ನು ಭಂಗಪಡಿಸುತ್ತಾನೆ; ಅವರ ಕೈಗಳು ಪ್ರಯತ್ನವನ್ನು ನಡಿಸುವದಿಲ್ಲ.
- 13 ಜ್ಞಾನಿಗಳನ್ನು ಅವರ ಯುಕ್ತಿಯಲ್ಲಿ ಹಿಡಿಯುತ್ತಾನೆ--ಮೂರ್ಖರ ಆಲೋಚನೆ ಉರುಳಿ ಬೀಳುವದು.
- 14 ಹಗಲಿನಲ್ಲಿ ಕತ್ತಲೆಯನ್ನು ಸಂಧಿಸು ತ್ತಾರೆ; ರಾತ್ರಿಯಲ್ಲಿ ಇದ್ದ ಹಾಗೆ ಮಧ್ಯಾಹ್ನದಲ್ಲಿ ತಡವಾಡುತ್ತಾರೆ
- 15 ಆತನು ಕತ್ತಿಯಿಂದಲೂ ಅದರ ಬಾಯಿಂದಲೂ ಬಲಿಷ್ಠನ ಕೈಯೊಳಗಿಂದಲೂ ಬಡವ ನನ್ನು ರಕ್ಷಿಸುತ್ತಾನೆ.
- 16 ಆದದರಿಂದ ದರಿದ್ರನಿಗೆ ನಿರೀಕ್ಷೆ ಯುಂಟು; ಅಪರಾಧವು ಬಾಯಿ ಮುಚ್ಚುವದು.
- 17 ಇಗೋ, ದೇವರು ಗದರಿಸುವ ಮನುಷ್ಯನು ಭಾಗ್ಯ ವಂತನು; ಸರ್ವಶಕ್ತನ ಶಿಕ್ಷೆಯನ್ನು ಅಲಕ್ಷ್ಯಮಾಡ ಬೇಡ.
- 18 ಆತನೇ ನೋಯಿಸುತ್ತಾನೆ, ಕಟ್ಟುವವನು ಆತನೇ; ಆತನು ಗಾಯ ಮಾಡುತ್ತಾನೆ; ಆತನ ಕೈಗಳು ಸ್ವಸ್ಥಮಾಡುತ್ತವೆ.
- 19 ಆರು ಇಕ್ಕಟ್ಟುಗಳಿಂದ ನಿನ್ನನ್ನು ತಪ್ಪಿಸುವನು; ಹೌದು, ಏಳರಲ್ಲಿಯೂ ಕೇಡು ನಿನ್ನನ್ನು ಮುಟ್ಟದು.
- 20 ಬರದಲ್ಲಿ ನಿನ್ನನ್ನು ಮರಣದೊಳ ಗಿಂದಲೂ ಯುದ್ಧದಲ್ಲಿ ಕತ್ತಿಯ ಬಲದಿಂದಲೂ ವಿಮೋಚಿಸುವನು.
- 21 ನಾಲಿಗೆಯೆಂಬ ಬೆತ್ತಕ್ಕೆ ಮರೆ ಯಾಗುವಿ; ಅದು ಬಂದಾಗ ನೀನು ನಾಶಕ್ಕೆ ಭಯ ಪಡುವದಿಲ್ಲ.
- 22 ನಾಶನಕ್ಕೂ ಕ್ಷಾಮಕ್ಕೂ ನಗುವಿ; ಭೂಮಿಯ ಮೃಗಗಳಿಗೂ ಭಯಪಡುವದಿಲ್ಲ.
- 23 ಹೊಲದ ಕಲ್ಲುಗಳ ಸಂಗಡ ನಿನಗೆ ಒಡಂಬಡಿಕೆ ಇರುವದು; ಹೊಲದ ಮೃಗಗಳು ನಿನ್ನೊಂದಿಗೆ ಸಮಾ ಧಾನವಾಗಿರುವವು.
- 24 ನಿನ್ನ ಗುಡಾರವು ಕ್ಷೇಮವಾಗಿದೆ ಎಂದು ತಿಳಿದುಕೊಳ್ಳುವಿ, ನೀನು ನಿನ್ನ ನಿವಾಸ ಸ್ಥಾನ ವನ್ನು ತಿಳಿದುಕೊಳ್ಳುವಿ ಪಾಪಮಾಡುವದಿಲ್ಲ.
- 25 ನಿನ್ನ ಸಂತತಿಯು ಬಹಳವಾಗಿದೆ ಎಂದೂ ನಿನ್ನ ಸಂತಾನವು ಭೂಮಿಯ ಹುಲ್ಲಿನಂತಿದೆ ಎಂದೂ ತಿಳಿದುಕೊಳ್ಳುವಿ.
- 26 ಸಿವುಡು ತನ್ನ ಕಾಲದಲ್ಲಿ ಏಳುವಂತೆ ನೀನು ಪೂರ್ಣ ಪ್ರಾಯದವನಾಗಿ ಸಮಾಧಿಗೆ ಸೇರುವಿ.
- 27 ಇಗೋ, ಇದನ್ನೇ ನಾವು ವಿಚಾರಿಸಿದೆವು; ಅದು ಇದೇ; ಇದನ್ನು ಆಲಿಸು; ನಿನ್ನ ಹಿತಕ್ಕಾಗಿ ಇದನ್ನು ತಿಳುಕೋ.
Job 05
- Details
- Parent Category: Old Testament
- Category: Job
ಯೋಬನು ಅಧ್ಯಾಯ 5