- 1 ಅದಕ್ಕೆ ಯೋಬನು ಉತ್ತರಿಸಿ ಇಂತೆಂದನು
- 2 ಸತ್ಯವು ಹೀಗೆ ಇರುವದೆಂದು ಬಲ್ಲೆನು. ಆದರೆ ಮನುಷ್ಯನು ದೇವರ ಮುಂದೆ ನೀತಿವಂತ ನಾಗುವದು ಹೇಗೆ?
- 3 ಆತನ ಸಂಗಡ ವ್ಯಾಜ್ಯವಾಡಲು ಅವನು ಇಚ್ಛಿಸುವದಾದರೆ, ಆತನಿಗೆ ಸಾವಿರದಲ್ಲಿ ಒಂದಕ್ಕೂ ಅವನು ಉತ್ತರಕೊಡಲಾರನು.
- 4 ಆತನು ಹೃದಯದಲ್ಲಿ ಜ್ಞಾನಿಯೂ ಬಲದಲ್ಲಿ ಶಕ್ತನೂ ಆಗಿದ್ದಾನೆ; ಆತನಿಗೆ ವಿರೋಧವಾಗಿ ತನ್ನನ್ನು ಕಠಿಣಪಡಿಸಿಕೊಂಡು ವೃದ್ಧಿಯಾಗುವವನು ಯಾರು?
- 5 ಪರ್ವತಗಳನ್ನು ಅವು ಗಳಿಗೆ ತಿಳಿಯದ ಹಾಗೆ ನೂಕುತ್ತಾನೆ; ತನ್ನ ಸಿಟ್ಟಿನಲ್ಲಿ ಅವುಗಳನ್ನು ತಿರುಗಿಸುತ್ತಾನೆ.
- 6 ಭೂಮಿಯನ್ನು ಅದರ ಸ್ಥಳದೊಳಗಿಂದ ಕದಲಿಸುತ್ತಾನೆ; ಅದರ ಸ್ತಂಭಗಳು ನಡುಗುತ್ತವೆ.
- 7 ಉದಯಿಸದ ಹಾಗೆ ಸೂರ್ಯನಿಗೆ ಅಪ್ಪಣೆಕೊಡುತ್ತಾನೆ; ನಕ್ಷತ್ರಗಳಿಗೆ ಮುದ್ರೆಹಾಕುತ್ತಾನೆ;
- 8 ಆತನೊಬ್ಬನೇ ಆಕಾಶಗಳನ್ನು ಹರಡಿಸುತ್ತಾನೆ; ಸಮುದ್ರದ ತೆರೆಗಳ ಮೇಲೆ ನಡೆಯುತ್ತಾನೆ.
- 9 ಸಪ್ತ ತಾರೆಗಳನ್ನೂ ಮೃಗಶಿರವನ್ನೂ ವೃಷಭ ರಾಶಿಯನ್ನೂ ದಕ್ಷಿಣದ ಕೋಣೆಗಳನ್ನೂ ಮಾಡಿದಾತನು ಆತನೇ.
- 10 ಆತನು ಕಂಡುಹಿಡಿಯಲಾರದಂಥ ಮಹತ್ಕಾರ್ಯ ಗಳನ್ನೂ ಲೆಕ್ಕವಿಲ್ಲದಷ್ಟು ಅದ್ಭುತಗಳನ್ನೂ ಮಾಡುತ್ತಾನೆ.
- 11 ಇಗೋ, ಆತನು ನನ್ನ ಮುಂದೆ ಹಾದುಹೋಗು ತ್ತಾನೆ. ನನಗೆ ಆತನು ಕಾಣುವದಿಲ್ಲ. ಆತನು ದಾಟಿ ಹೋಗುತ್ತಾನೆ, ಆದರೆ ನಾನು ಆತನನ್ನು ಗ್ರಹಿಸಿ ಕೊಳ್ಳುವದಿಲ್ಲ.
- 12 ಇಗೋ, ಆತನು ತೆಗೆದುಕೊಂಡು ಹೋಗುತ್ತಾನೆ. ಆತನಿಗೆ ಅಡ್ಡಿಮಾಡುವವರು ಯಾರು? ಆತನನ್ನು--ನೀನು ಏನು ಮಾಡುತ್ತೀ ಎಂದು ಕೇಳುವ ವರಾರು?
- 13 ದೇವರು ತನ್ನ ಕೋಪವನ್ನು ಹಿಂತೆಗೆಯ ದಿದ್ದರೆ ಸೊಕ್ಕಿನ ಸಹಾಯಕರು ಆತನ ಕೆಳಗೆ ಬೊಗ್ಗಿ ಕೊಳ್ಳುತ್ತಾರೆ.
- 14 ಆತನಿಗೆ ಉತ್ತರ ಕೊಡುವದಕ್ಕೂ ಆತನೊಂದಿಗೆ ತರ್ಕಿಸುವದಕ್ಕೆ ನನ್ನ ಮಾತುಗಳನ್ನು ಆದುಕೊಳ್ಳು ವದಕ್ಕೂ ನಾನು ಎಷ್ಟು ಮಾತ್ರದವನು;
- 15 ನಾನು ನೀತಿವಂತನಾಗಿದ್ದರೂ ಉತ್ತರಕೊಡೆನು; ಆದರೆ ನನ್ನ ನ್ಯಾಯಾಧಿಪತಿಗೆ ಮೊರೆಯಿಡುವೆನು.
- 16 ನಾನು ಕರೆ ಯಲು ಆತನು ನನಗೆ ಉತ್ತರಕೊಟ್ಟರೂ ಆತನು ನನ್ನ ಶಬ್ಧಕ್ಕೆ ಕಿವಿಗೊಡುತ್ತಾನೆಂದು ನಂಬಲಾರೆನು.
- 17 ಆತನು ಬಿರುಗಾಳಿಯಿಂದ ನನ್ನನ್ನು ಚೂರು ಮಾಡು ತ್ತಾನೆ. ನನ್ನ ಗಾಯಗಳನ್ನು ಕಾರಣವಿಲ್ಲದೆ ಹೆಚ್ಚಿಸು ತ್ತಾನೆ.
- 18 ನನ್ನ ಉಸಿರು ತಕ್ಕೊಳ್ಳದಂತೆ ಮಾಡಿ ಕಹಿ ಯಾದವುಗಳಿಂದ ನನ್ನನ್ನು ತುಂಬಿಸುತ್ತಾನೆ.
- 19 ಶಕ್ತಿಯ ವಿಷಯದಲ್ಲಿ ಮಾತನಾಡಲೋ? ಇಗೋ, ಆತನು ಬಲವುಳ್ಳವನಾಗಿದ್ದಾನೆ. ನ್ಯಾಯದ ವಿಷಯವೋ ವಾದಿ ಸುವದಕ್ಕೆ ನನಗೆ ಕಾಲವನ್ನು ನಿಯಮಿಸುವವನು ಯಾರು?
- 20 ನನ್ನನ್ನು ನಾನು ನೀತಿವಂತನನ್ನಾಗಿ ಮಾಡಿ ಕೊಂಡರೆ ನನ್ನ ಸ್ವಂತ ಬಾಯಿ ನನ್ನನ್ನು ಖಂಡಿಸುತ್ತದೆ. ನಾನು ಸಂಪೂರ್ಣನಾಗಿದ್ದೇನೆಂದು ಹೇಳಿದರೆ ನಾನು ವಕ್ರನಾಗಿದ್ದೇನೆಂದು ಅದು ಸಿದ್ಧಾಂತಮಾಡುವದು.
- 21 ನಾನು ಸಂಪೂರ್ಣವಾಗಿದ್ದರೂ ನನ್ನ ಪ್ರಾಣವನ್ನು ನಾನೇ ಅರಿಯದಿರುವೆನು; ನನ್ನ ಜೀವವನ್ನು ತಿರಸ್ಕಾರ ಮಾಡುವೆನು.
- 22 ಇದೊಂದು ವಿಷಯ ಆದದರಿಂದ ನಾನು ಅದನ್ನು ಹೇಳಿದ್ದೇನೆ. ಪರಿಪೂರ್ಣರನ್ನೂ ಕೆಟ್ಟ ವರನ್ನೂ ಆತನು ನಾಶಮಾಡುತ್ತಾನೆ.
- 23 ಕೊರಡೆಯು ಫಕ್ಕನೆ ಕೊಂದರೆ, ನಿರಪರಾಧಿಗಳ ಪರೀಕ್ಷೆಗೆ ಅವನು ಗೇಲಿ ಮಾಡುತ್ತಾನೆ.
- 24 ಲೋಕವು ಕೆಟ್ಟವನ ಕೈಯಲ್ಲಿ ಕೊಡಲ್ಪಟ್ಟಿದೆ. ಅದರ ನ್ಯಾಯಾಧಿಪತಿಗಳ ಮುಖಗ ಳನ್ನು ಆತನು ಮುಚ್ಚುತ್ತಾನೆ. ಇಲ್ಲವಾದರೆ ಆತನು ಎಲ್ಲಿರುತ್ತಿದ್ದನೋ? ಯಾರಾಗಿರುತ್ತಿದ್ದನೋ?
- 25 ಆದರೆ ನನ್ನ ದಿವಸಗಳು ಅಂಚೆಯವನಿಗಿಂತಲೂ ತ್ವರೆಯಾಗಿ. ಮೇಲನ್ನು ನೋಡದೆ ಅವು ಓಡಿಹೋಗು ತ್ತವೆ.
- 26 ಹದ್ದು ಆಹಾರದ ಮೇಲೆ ಎರಗುವ ಪ್ರಕಾರವೂ ತೀವ್ರವಾದ ಹಡಗುಗಳ ಹಾಗೆಯೇ ಅವು ದಾಟಿ ಹೋಗುತ್ತವೆ.
- 27 ನನ್ನ ದೂರುಗಳನ್ನು ಮರೆತು, ನನ್ನ ಭಾರವನ್ನು ಬಿಟ್ಟು, ಆದರಣೆಹೊಂದುವೆನು ಎಂದು ಹೇಳಿಕೊಂಡರೆ
- 28 ನನ್ನ ವ್ಯಥೆಗಳಿಗೆಲ್ಲಾ ದಿಗಿಲು ಪಡು ತ್ತೇನೆ; ನೀನು ನನ್ನನ್ನು ನಿರಪರಾಧಿ ಎಂದು ಎಣಿಸು ವದಿಲ್ಲವೆಂದು ತಿಳಿದಿದ್ದೇನೆ.
- 29 ನಾನು ಕೆಟ್ಟವನಾಗಿದ್ದರೆ ಯಾಕೆ ಈ ವ್ಯರ್ಥವಾದ ಪ್ರಯಾಸ?
- 30 ನಾನು ಹಿಮದ ನೀರಿನಲ್ಲಿ ತೊಳಕೊಂಡು ನನ್ನ ಕೈಗಳನ್ನು ಶುಚಿ ಮಾಡೇ ಮಾಡಿದಾಗ್ಯೂ
- 31 ನನ್ನನ್ನು ಕುಣಿಯಲ್ಲಿ ಮುಣುಗಿಸಿ ಬಿಡುವಿ; ನನ್ನ ಸ್ವಂತ ವಸ್ತ್ರಗಳು ನನ್ನನ್ನು ಹೇಸಿಕೊಳ್ಳು ವವು.
- 32 ನಾನು ಆತನಿಗೆ ಉತ್ತರ ಕೊಡುವ ಹಾಗೆಯೂ ನಾವು ಕೂಡ ನ್ಯಾಯದಲ್ಲಿ ಸೇರುವ ಹಾಗೆಯೂ ಆತನು ನನ್ನಂಥ ಮನುಷ್ಯನಲ್ಲ.
- 33 ನಮ್ಮಿಬ್ಬರ ಮೇಲೆ ಕೈ ಇಡತಕ್ಕ ಮಧ್ಯಸ್ಥಗಾರನು ನಮ್ಮ ಮಧ್ಯದಲ್ಲಿಲ್ಲ.
- 34 ಆತನು ತನ್ನ ಕೋಲನ್ನು ನನ್ನ ಮೇಲಿನಿಂದ ತೊಲ ಗಿಸಲಿ, ಆತನ ಭೀತಿ ನನ್ನನ್ನು ಹೆದರಿಸದಿರಲಿ.
- 35 ಆಗ ಆತನಿಗೆ ಭಯಪಡದೆ ಮಾತನಾಡುವೆನು; ಆದರೆ ಭಯಕ್ಕೆ ನನ್ನಲ್ಲೇನೂ ಆಸ್ಪದವಿಲ್ಲ.
Job 09
- Details
- Parent Category: Old Testament
- Category: Job
ಯೋಬನು ಅಧ್ಯಾಯ 9