- 1 ಅದಕ್ಕೆ ಯೋಬನು ಹೀಗೆ ಉತ್ತರಕೊಟ್ಟನು--
- 2 ನಿಸ್ಸಂದೇಹವಾಗಿ ನೀವೇ ಆ ಜನರು; ನಿಮ್ಮ ಸಂಗಡಲೇ ಜ್ಞಾನವು ಸಾಯುವದು.
- 3 ನಿಮ್ಮ ಹಾಗೆಯೇ ನನಗೂ ಸಹ ತಿಳುವಳಿಕೆ ಉಂಟು; ನಾನು ನಿಮಗಿಂತ ಕಡಿಮೆ ಇಲ್ಲ. ಹೌದು, ಇಂಥಾ ಮಾತುಗಳನ್ನು ತಿಳಿಯದಿರುವವನು ಯಾರು?
- 4 ನಾನು ನೆರೆಯವನಿಗೆ ನಗೆಯಾದವನು; ದೇವರಿಗೆ ಕೂಗು ತ್ತೇನೆ. ಆತನು ಉತ್ತರ ಕೊಡುತ್ತಾನೆ; ನೀತಿವಂತ ಮನು ಷ್ಯನನ್ನು ಗೇಲಿಮಾಡಿ ನಗುವರು.
- 5 ತನ್ನ ಕಾಲುಗ ಳಿಂದ ಜಾರುವದಕ್ಕೆ ಸಿದ್ಧನಾಗಿರುವವನು, ನೆಮ್ಮದಿಯಾ ಗಿರುವವನ ಯೋಚನೆಯಲ್ಲಿ ತಿರಸ್ಕಾರದ ದೀವಟಿ ಗೆಯಾಗಿದ್ದಾನೆ.
- 6 ಕಳ್ಳರ ಗುಡಾರಗಳು ವೃದ್ಧಿಯಾ ಗುತ್ತವೆ; ದೇವರಿಗೆ ಕೋಪ ಎಬ್ಬಿಸುವವರಿಗೆ ಅಭಯ ಉಂಟು. ದೇವರು ಅವರ ಕೈಯಲ್ಲಿ ಸಮೃದ್ಧಿಯನ್ನು ಬರ ಮಾಡುತ್ತಾನೆ.
- 7 ಆದರೂ ಪಶುಗಳನ್ನು ಕೇಳು. ಅವು ನಿನಗೆ ಬೋಧಿ ಸುವವು; ಆಕಾಶದ ಪಕ್ಷಿಗಳನ್ನು ಕೇಳು, ಅವು ನಿನಗೆ ತಿಳಿಸುವವು.
- 8 ಅಥವಾ ಭೂಮಿಯ ಸಂಗಡ ಮಾತ ನಾಡು; ಅದು ನಿನಗೆ ಬೋಧಿಸುವದು; ಸಮುದ್ರದ ವಿಾನುಗಳು ನಿನಗೆ ವಿವರಿಸುವವು.
- 9 ಕರ್ತನ ಕೈ ಇದನ್ನು ಮಾಡಿತೆಂದು ಇವೆಲ್ಲವುಗಳಲ್ಲಿ ತಿಳಿಯದಿರು ವದು ಯಾವದು?
- 10 ಆತನ ಕೈಯಲ್ಲಿ ಎಲ್ಲಾ ಜೀವಿ ಗಳ ಪ್ರಾಣವು ಎಲ್ಲಾ ಮನುಷ್ಯರ ಶ್ವಾಸವೂ ಇವೆ.
- 11 ಕಿವಿಯು ನುಡಿಗಳನ್ನು ಶೋಧಿಸುವದಿಲ್ಲವೇ? ಬಾಯಿಯು ಆಹಾರವನ್ನು ರುಚಿನೋಡುವದಿಲ್ಲವೇ?
- 12 ಮುದುಕರಲ್ಲಿ ಜ್ಞಾನವೂ ದಿನಗಳುದ್ದಕ್ಕೂ ಗ್ರಹಿ ಕೆಯೂ ಇವೆ.
- 13 ಜ್ಞಾನವೂ ಪರಾಕ್ರಮವೂ ಆತನಲ್ಲಿವೆ; ಆಲೋ ಚನೆಯೂ ಗ್ರಹಿಕೆಯೂ ಆತನವೇ.
- 14 ಇಗೋ, ಆತನು ಕೆಡವುತ್ತಾನೆ; ಅದು ತಿರುಗಿ ಕಟ್ಟಲ್ಪಡುವದಿಲ್ಲ. ಆತನು ಮನುಷ್ಯನಿಂದ ಮುಚ್ಚಿಬಿಡುತ್ತಾನೆ; ಅದು ತೆರೆ ಯಲ್ಪಡುವದಿಲ್ಲ.
- 15 ಇಗೋ, ಆತನು ಜಲಗಳನ್ನು ಬಿಗಿ ಹಿಡಿಯುತ್ತಾನೆ; ಅವು ಬತ್ತಿಹೋಗುತ್ತವೆ; ಆತನು ಅವುಗಳನ್ನು ಹೊರಗೆ ಕಳುಹಿಸಿದಾಗ ಅವು ಭೂಮಿ ಯನ್ನು ಬುಡಮೇಲು ಮಾಡುತ್ತವೆ.
- 16 ಬಲವೂ ಸುಜ್ಞಾ ನವೂ ಆತನಲ್ಲಿವೆ; ಮೋಸಹೋಗುವವನೂ ಮೋಸ ಗೊಳಿಸುವವನೂ ಆತನವರೇ.
- 17 ಆತನು ಸಲಹೆಗಾರ ರನ್ನು ಕೇಡಿಗೆ ನಡಿಸುತ್ತಾನೆ; ನ್ಯಾಯಾಧಿಪತಿಗಳನ್ನು ಮೂರ್ಖರನ್ನಾಗಿ ಮಾಡುತ್ತಾನೆ.
- 18 ಆತನು ಅರಸರ ಬಂಧನಗಳನ್ನು ಬಿಡಿಸಿ ಅವರ ನಡುಗಳಿಗೆ ನಡುಕಟ್ಟನ್ನು ಕಟ್ಟುತ್ತಾನೆ.
- 19 ಆತನು ಪ್ರಧಾನರನ್ನು ಕೇಡಿಗೆ ನಡಿಸು ತ್ತಾನೆ; ಬಲಿಷ್ಠರನ್ನು ಕೆಡವಿಬಿಡುತ್ತಾನೆ.
- 20 ನಂಬಿಕೆಯು ಳ್ಳವರ ಮಾತನ್ನು ತೆಗೆದುಹಾಕುತ್ತಾನೆ; ವೃದ್ಧರ ವಿವೇಕ ವನ್ನು ಇಲ್ಲದಾಗಿ ಮಾಡುತ್ತಾನೆ.
- 21 ಅಧಿಪತಿಗಳ ಮೇಲೆ ತಿರಸ್ಕಾರವನ್ನು ಹೊಯ್ಯುತ್ತಾನೆ; ಬಲಿಷ್ಠರ ಬಲವನ್ನು ಕುಂದಿಸುತ್ತಾನೆ.
- 22 ಕತ್ತಲೆಯೊಳಗಿನಿಂದ ಅಗಾಧವಾದ ವಿಷಯಗಳನ್ನು ಪ್ರಕಟಪಡಿಸುತ್ತಾನೆ; ಮರಣದ ನೆರ ಳನ್ನು ಬೆಳಕಿಗೆ ತರುತ್ತಾನೆ.
- 23 ಆತನು ಜನಾಂಗಗಳನ್ನು ಹೆಚ್ಚಿಸಿ ಅವುಗಳನ್ನು ನಾಶಮಾಡುತ್ತಾನೆ. ಜನಾಂಗ ಗಳನ್ನು ವಿಸ್ತಾರಮಾಡಿ ತಿರುಗಿ ಅವುಗಳನ್ನು ಹತ್ತಿಕ್ಕುತ್ತಾನೆ.
- 24 ಆತನು ಭೂಮಿಯ ಮುಖ್ಯಸ್ಥರ ವಿವೇಕವನ್ನು ತೆಗೆದು ಬಿಡುತ್ತಾನೆ. ಮಾರ್ಗವಿಲ್ಲದ ಕಾಡಿನಲ್ಲಿ ಅವರನ್ನು ಅಲೆಯ ಮಾಡುತ್ತಾನೆ.
- 25 ಅವರು ಬೆಳಕು ಇಲ್ಲದೆ ಕತ್ತಲೆಯಲ್ಲಿ ತಡವಾಡುತ್ತಾರೆ; ಆತನು ಅವರನ್ನು ಅಮಲೇರಿದವನ ಹಾಗೆ ಓಲಾಡುವಂತೆ ಮಾಡುತ್ತಾನೆ.
Job 12
- Details
- Parent Category: Old Testament
- Category: Job
ಯೋಬನು ಅಧ್ಯಾಯ 12