- 1 ಸ್ತ್ರೀಯಿಂದ ಹುಟ್ಟಿದ ಮನುಷ್ಯನು ಕಡಿಮೆದಿವಸದವನೂ ಕಳವಳದಿಂದ ತುಂಬಿದ ವನೂ ಆಗಿದ್ದಾನೆ.
- 2 ಅವನು ಹೂವಿನ ಹಾಗೆ ಅರಳು ತ್ತಾನೆ ಮತ್ತು ಕೊಯ್ಯಲ್ಪಡುತ್ತಾನೆ; ಅವನು ನೆರಳಿನಂತೆ ಓಡಿಹೋಗುತ್ತಾನೆ, ಹಾಗೂ ಮುಂದುವರೆಯುವ ದಿಲ್ಲ.
- 3 ಹಾಗಾದರೆ ಇಂಥವನ ಮೇಲೆ ನಿನ್ನ ಕಣ್ಣುಗಳನ್ನು ತೆರೆಯುತ್ತೀಯೋ? ನನ್ನನ್ನು ನಿನ್ನ ಸಂಗಡ ನ್ಯಾಯಕ್ಕೆ ಬರಮಾಡುತ್ತೀಯೋ?
- 4 ಅಪವಿತ್ರವಾದದ್ದರಿಂದ ಶುದ್ಧ ವಾದದ್ದನ್ನು ತರುವವನಾರು? ಒಬ್ಬನೂ ಇಲ್ಲ.
- 5 ಅವನ ದಿವಸಗಳು ನೇಮಕವಾಗಿವೆ; ಅವನ ತಿಂಗಳುಗಳ ಲೆಕ್ಕ ನಿನ್ನ ಬಳಿಯಲ್ಲಿ ಅದೆ; ಅವನು ದಾಟಲಾರದ ಹಾಗೆ ಅವನ ಮೇರೆಗಳನ್ನು ಮಾಡಿದಿ.
- 6 ಹೀಗಿರುವ ದರಿಂದ ಅವನು ಕೂಲಿಯವನ ಹಾಗೆ ತನ್ನ ದಿವಸದಲ್ಲಿ ವಿಶ್ರಾಂತಿ ಪಡೆಯುವಂತೆ ಅವನು ಪೂರೈಸುವ ವರೆಗೆ ಅವನಿಂದ ತಿರುಗು.
- 7 ಮರಕ್ಕೆ ನಿರೀಕ್ಷೆಯುಂಟು; ಅದು ಕೊಯ್ಯಲ್ಪಟ್ಟರೆ ಮತ್ತೆ ಚಿಗುರುವದು. ಚಿಗುರುವದನ್ನು ನಿಲ್ಲಿಸುವದೇ ಇಲ್ಲ.
- 8 ಅದರ ಬೇರು ಭೂಮಿಯಲ್ಲಿ ಹಳೆಯದಾದರೂ ನೆಲದಲ್ಲಿ ಅದರ ಬುಡವು ಸತ್ತರೂ
- 9 ನೀರಿನ ವಾಸನೆಯಿಂದ ಚಿಗುರಿ ಸಸಿಯ ಹಾಗೆ ಕೊಂಬೆ ಗಳನ್ನು ಬಿಡುವದು.
- 10 ಆದರೆ ಮನುಷ್ಯನು ಸತ್ತು ಕ್ಷಯಿಸಿ ಹೋಗುತ್ತಾನೆ; ಮನುಷ್ಯನು ಪ್ರಾಣ ಬಿಟ್ಟ ಬಳಿಕ ಅವನೆಲ್ಲಿರುವನು?
- 11 ಹೇಗೆ ನೀರು ಸಮುದ್ರ ದಿಂದ ಮುಗಿದು ಹೋಗುತ್ತದೋ ಪ್ರವಾಹವು ಆರಿ ಬತ್ತಿಹೋಗುತ್ತದೆ ಹಾಗೆ ಮನುಷ್ಯನು ಮಲಗುತ್ತಾನೆ,
- 12 ಏಳುವದೇ ಇಲ್ಲ; ಆಕಾಶಗಳು ಇಲ್ಲದೆ ಹೋಗುವ ವರೆಗೆ ಅವರು ಎಚ್ಚರಗೊಳ್ಳುವದಿಲ್ಲ. ನಿದ್ರೆಯಿಂದ ಎಬ್ಬಿಸಲ್ಪಡುವದೂ ಇಲ್ಲ.
- 13 ನೀನು ನನ್ನನ್ನು ಸಮಾಧಿಯಲ್ಲಿ ಮರೆಮಾಡಿ, ನಿನ್ನ ಕೋಪವು ತಿರುಗುವ ವರೆಗೂ ನನ್ನನ್ನು ಅಡಗಿಸಿ ನನಗೆ ನೇಮಕವಾದ ಸಮಯವನ್ನು ನೇಮಿಸಿ ನನ್ನನ್ನು ಜ್ಞಾಪಕಮಾಡಿಕೊಂಡರೆ ಲೇಸು.
- 14 ಮನುಷ್ಯನು ಸತ್ತರೆ ಅವನು ತಿರುಗಿ ಬದುಕುವನೋ? ನನಗೆ ನೇಮಕ ಮಾಡಿದ ಸಮಯದ ದಿನಗಳೆಲ್ಲಾ ನನಗೆ ಬದಲು ಬರುವ ವರೆಗೆ ನಾನು ಕಾದುಕೊಂಡಿರುವೆನು.
- 15 ನೀನು ಕರೆಯುವಿ, ನಾನು ನಿನಗೆ ಉತ್ತರಕೊಡುವೆನು; ನಿನ್ನ ಕೈಕೆಲಸವನ್ನು ಬಯಸುವಿ.
- 16 ಈಗ ನನ್ನ ಹೆಜ್ಜೆಗಳನ್ನು ಎಣಿಕೆ ಮಾಡುತ್ತೀ; ನೀನು ನನ್ನ ಪಾಪವನ್ನು ನೋಡಿ ಕೊಳ್ಳುತ್ತೀಯಲ್ಲವೋ?
- 17 ನನ್ನ ದ್ರೋಹವನ್ನು ಚೀಲ ದಲ್ಲಿ ಮುದ್ರಿಸಿದ್ದಿ; ನನ್ನ ಅಕ್ರಮವನ್ನು ಮುಚ್ಚಿ ಹೊಲಿ ದಿದ್ದೀ.
- 18 ಆದರೂ ಬೆಟ್ಟವು ಬಿದ್ದು ಹಾಳಾಗುವದು; ಬಂಡೆಯು ತನ್ನ ಸ್ಥಳದಿಂದ ಜರಗುವದು.
- 19 ನೀರು ಕಲ್ಲುಗಳನ್ನು ಕೊರೆಯುವದು. ಭೂಮಿಯ ಧೂಳಿನಿಂದ ಬೆಳೆದು ಬರುವವುಗಳನ್ನು ನೀನು ತೊಳೆದುಬಿಡುತ್ತೀ; ಮನುಷ್ಯನ ನಿರೀಕ್ಷೆಯನ್ನು ನಾಶಮಾಡುತ್ತೀ.
- 20 ನೀನು ಅವನಿಗೆ ನಿತ್ಯಕ್ಕೂ ಮೇಲುಗೈ ಆಗಿರುವಿ; ಅವನು ಹೊರಟು ಹೋಗುವನು; ಅವನ ಮುಖಭಾವವನ್ನು ಮಾರ್ಪಡಿಸಿ ಅವನನ್ನು ಕಳುಹಿಸಿ ಬಿಡುತ್ತೀ.
- 21 ಅವನ ಮಕ್ಕಳು ಘನತೆಗೆ ಬರುತ್ತಾರೆ; ಅದು ಅವನಿಗೆ ತಿಳಿಯುವದಿಲ್ಲ; ಅವರು ಹೀನರಾಗುತ್ತಾರೆ, ಅವನು ಗ್ರಹಿಸಿಕೊಳ್ಳುವದಿಲ್ಲ.
- 22 ಆದರೆ ಅವನ ಮೇಲಿರುವ ಮಾಂಸವು ನೋಯುವದು; ಅವನಲ್ಲಿರುವ ಅವನ ಆತ್ಮವು ದುಃಖಪಡುವದು.
Job 14
- Details
- Parent Category: Old Testament
- Category: Job
ಯೋಬನು ಅಧ್ಯಾಯ 14