- 1 ನನ್ನ ಉಸಿರು ಕಟ್ಟಿದೆ; ನನ್ನ ದಿವಸಗಳು ಮುಗಿದಿವೆ; ಸಮಾಧಿಗಳು ನನಗೆ ಸಿದ್ಧ ವಾಗಿವೆ.
- 2 ಹಾಸ್ಯಗಾರರು ನನ್ನ ಬಳಿಯಲ್ಲಿ ಇದ್ದಾರ ಲ್ಲವೋ? ಅವರ ಕೋಪದಲ್ಲಿ ನನ್ನ ಕಣ್ಣು ಮುಂದು ವರಿಯುತ್ತದಲ್ಲಾ.
- 3 ದಯಮಾಡಿ ನನ್ನ ಸಂಗಡ ಇದ್ದು ನಿನ್ನೊಂದಿಗೆ ನನಗೆ ಹೊಣೆಯಾಗು; ನನ್ನೊಂದಿಗೆ ಕೈ ತಟ್ಟುವವರು ಯಾರು?
- 4 ಅವರ ಹೃದಯವನ್ನು ಬುದ್ಧಿಗೆ ಅಡಗಿಸಿದಿ; ಆದದರಿಂದ ನೀನು ಅವರನ್ನು ಉನ್ನತಕ್ಕೇರಿಸುವದಿಲ್ಲ.
- 5 ತನ್ನ ಸ್ನೇಹಿತರನ್ನು ಹೊಗಳಿ ಮಾತನಾಡುವವನ ಮಕ್ಕಳ ಕಣ್ಣುಗಳು ಕ್ಷೀಣವಾಗುವವು.
- 6 ನನ್ನನ್ನು ಜನರಿಗೆ ಗಾದೆಯಾಗ ಮಾಡಿದನು; ಅವರ ಮುಂದೆ ನಾನು ಬಾರಿಸುವ ವಾದ್ಯವಾದೆನು.
- 7 ನನ್ನ ಕಣ್ಣು ದುಃಖದಿಂದ ಮೊಬ್ಬಾಯಿತು; ನನ್ನ ಅಂಗಗಳೆಲ್ಲಾ ನೆರಳಿನ ಹಾಗೆ ಅವೆ.
- 8 ಇದಕ್ಕೋಸ್ಕರ ಯಥಾರ್ಥರು ಆಶ್ಚರ್ಯ ಪಡುವರು: ನಿರ್ಮಲನು ಕಪಟಿಗೆ ವಿರೋಧವಾಗಿ ತನ್ನನ್ನು ಉದ್ರೇಕಿಸಿಕೊಳ್ಳುವನು.
- 9 ಆದರೆ ನೀತಿವಂತನು ತನ್ನ ಮಾರ್ಗವನ್ನು ಹಿಡಿದುಕೊಳ್ಳುವನು. ಶುದ್ಧ ಕೈಗಳು ಳ್ಳವನು ಬರಬರುತ್ತಾ ಬಲಗೊಳ್ಳುವನು.
- 10 ಆದಾಗ್ಯೂ ನೀವೆಲ್ಲರೂ ತಿರುಗಿಕೊಂಡು ಬನ್ನಿರಿ; ನಿಮ್ಮಲ್ಲಿ ನಾನು ಜ್ಞಾನಿಯನ್ನು ಕಂಡುಕೊಳ್ಳಲಿಲ್ಲ.
- 11 ನನ್ನ ದಿವಸಗಳು ಹಾದು ಹೋದವು: ನನ್ನ ಹೃದ ಯಕ್ಕೆ ಸ್ವಂತವಾಗಿರುವ ನನ್ನ ಉದ್ದೇಶಗಳು ಭಂಗವಾ ದವು.
- 12 ಅವರು ರಾತ್ರಿಯನ್ನು ಹಗಲನ್ನಾಗಿ ಮಾಡು ತ್ತಾರೆ; ಬೆಳಕು ಕತ್ತಲೆಯ ನಿಮಿತ್ತ ಚಿಕ್ಕದಾಗಿದೆ.
- 13 ನಾನು ನಿರೀಕ್ಷಿಸಿದರೆ ಸಮಾಧಿಯೇ ನನ್ನ ಮನೆ; ಕತ್ತಲೆಯಲ್ಲಿ ನನ್ನ ಹಾಸಿಗೆಯನ್ನು ಹಾಸಿದ್ದೇನೆ.
- 14 ಕೊಳೆಯುವಿಕೆಗೆ -- ನೀನು ನನ್ನ ತಂದೆ ಎಂದೂ ಹುಳಕ್ಕೆ--ನನ್ನ ತಾಯಿಯೇ, ನನ್ನ ಅಕ್ಕನೇ ಎಂದೂ ನಾನು ಹೇಳಿದೆನು.
- 15 ಹಾಗಾದರೆ ಈಗ ನನ್ನ ನಿರೀಕ್ಷೆ ಎಲ್ಲಿ? ನನ್ನ ನಿರೀಕ್ಷೆಯನ್ನು ಯಾರು ನೋಡುವರು?
- 16 ನಮ್ಮ ಸಂಗಡ ಧೂಳಿನಲ್ಲಿ ವಿಶ್ರಾಂತಿಯಲ್ಲಿರುವಾಗ ಅವರು ಪಾತಾಳದ ಅಗುಳಿಗಳಿಗೆ ಇಳಿದು ಹೋಗುವರು.
Job 17
- Details
- Parent Category: Old Testament
- Category: Job
ಯೋಬನು ಅಧ್ಯಾಯ 17