- 1 ತೇಮಾನ್ಯನಾದ ಎಲೀಫಜನು ಉತ್ತರಕೊಟ್ಟು ಹೇಳಿದ್ದೇನಂದರೆ--
- 2 ಮನುಷ್ಯನು ದೇವರಿಗೆ ಪ್ರಯೋಜನಕರವಾಗಿರುವನೋ? ಬುದ್ಧಿ ವಂತನು ಪ್ರಯೋಜನಕರವಾಗಿರುವದು ತನಗೆ ಸರಿಯೋ?
- 3 ನೀನು ನೀತಿವಂತನಾಗಿದ್ದರೆ ಸರ್ವಶಕ್ತನು ಮೆಚ್ಚಬೇಕೋ? ನೀನು ನಿನ್ನ ಮಾರ್ಗಗಳನ್ನು ಸಂಪೂರ್ಣ ಮಾಡಿಕೊಂಡರೆ ಆತನಿಗೆ ಲಾಭ ಉಂಟೋ?
- 4 ನಿನ್ನ ಭಯದ ನಿಮಿತ್ತ ನಿನ್ನನ್ನು ಗದರಿಸಿ ನಿನ್ನ ಸಂಗಡ ನ್ಯಾಯಕ್ಕೆ ಬರುವನೋ?
- 5 ನಿನ್ನ ಕೆಟ್ಟ ತನವು ಬಹಳವಲ್ಲವೋ? ನಿನ್ನ ಅಕ್ರಮಗಳಿಗೆ ಅಂತ್ಯ ವಿಲ್ಲವಷ್ಟೇ.
- 6 ಸುಮ್ಮನೆ ನಿನ್ನ ಸಹೋದರನಿಂದ ಈಡು ತೆಗೆದು ಕೊಂಡಿ; ಬೆತ್ತಲೆಯಾಗಿರುವವರ ವಸ್ತ್ರಗಳನ್ನು ನೀನು ಸುಲುಕೊಂಡಿ.
- 7 ದಣಿದವನಿಗೆ ನೀರನ್ನು ಕುಡಿಯ ಕೊಡಲಿಲ್ಲ; ಹಸಿದವನಿಂದ ರೊಟ್ಟಿಯನ್ನು ಹಿಂದೆ ಗೆದಿದ್ದಿ.
- 8 ಬಲಿಷ್ಠನಿಗಾದರೋ ದೇಶವು ಅವನದೇ; ಗೌರವದ ಮನುಷ್ಯನು ಅದರಲ್ಲಿ ವಾಸಿಸಿದನು.
- 9 ವಿಧವೆಯರನ್ನು ಬರಿದಾಗಿ ಕಳುಹಿಸಿದಿ; ದಿಕ್ಕಿಲ್ಲದ ವರ ತೋಳುಗಳನ್ನು ಜಜ್ಜಿದಿ.
- 10 ಆದದರಿಂದ ನಿನ್ನ ಸುತ್ತಲೂ ಉರುಲುಗಳು ಉಂಟು; ಭಯವು ನಿನ್ನನ್ನು ಫಕ್ಕನೆ ತಲ್ಲಣಪಡಿಸುತ್ತದೆ.
- 11 ಇಲ್ಲವೆ ನೀನು ನೋಡದ ಹಾಗೆ ಕತ್ತಲುಂಟು; ಜಲ ಪ್ರವಾಹವು ನಿನ್ನನ್ನು ಮುಚ್ಚುತ್ತದೆ.
- 12 ದೇವರು ಆಕಾಶದ ಎತ್ತರದಲ್ಲಿದ್ದಾನಲ್ಲವೋ? ನಕ್ಷತ್ರಗಳ ಎತ್ತರ ನೋಡು, ಅವು ಎಷ್ಟು ಉನ್ನತ!
- 13 ಆದರೆ ನೀನು ಹೇಳುತ್ತೀ--ದೇವರು ಏನು ಬಲ್ಲನು? ಆತನು ಕಾರ್ಗತ್ತಲಿಂದ ನ್ಯಾಯತೀರಿಸುವನೋ?
- 14 ಮಂದವಾದ ಮೇಘಗಳು ಆತನ ಮರೆ; ಆತನು ನೋಡುವದಿಲ್ಲ; ಆತನು ಆಕಾಶ ಮಂಡಲದ ಮೇಲೆ ನಡೆಯುತ್ತಾನೆ.
- 15 ದುಷ್ಟ ಜನರು ನಡೆದ ಪೂರ್ವಕಾಲದ ದಾರಿ ಯನ್ನು ನೋಡಿಕೊಂಡಿಯೋ?
- 16 ಅವರು ಆ ಕಾಲ ದಲ್ಲಿ ಕಡಿಯಲ್ಪಟ್ಟರು; ಅವರ ಅಸ್ತಿವಾರವು ಪ್ರವಾಹ ದಲ್ಲಿ ಕೊರೆದು ಹೋಯಿತು.
- 17 ನಮ್ಮನ್ನು ಬಿಟ್ಟು ಹೋಗು ಎಂದೂ ಸರ್ವಶಕ್ತನು ನಮಗೆ ಏನು ಮಾಡುವನೆಂದೂ ದೇವರಿಗೆ ಹೇಳಿದವರು ಅವರೇ.
- 18 ಆದರೆ ಆತನು ಅವರ ಮನೆಗಳನ್ನು ಒಳ್ಳೇದರಿಂದ ತುಂಬಿದ್ದಾನೆ; ಆದರೂ ದುಷ್ಟರ ಆಲೋಚನೆಯು ನನಗೆ ದೂರವಾಗಿದೆ.
- 19 ನೀತಿವಂತರು ನೋಡಿ ಸಂತೋಷಪಡುವರು. ನಿರಪರಾಧಿಯು ಅವರಿಗೆ ಗೇಲಿ ಮಾಡುವನು.
- 20 ನಿಶ್ಚಯವಾಗಿ ನಮ್ಮ ಆಸ್ತಿಯು ತೆಗೆ ಯಲ್ಪಡಲಿಲ್ಲ; ಅವರಲ್ಲಿ ಉಳಿದವರನ್ನು ಬೆಂಕಿ ದಹಿಸಿಬಿಡುತ್ತದೆ.
- 21 ಆತನಿಗೆ ಪರಿಚಿತನಾಗಿ ಸಮಾಧಾನದಿಂದಿರು; ಇದರಿಂದ ನಿನಗೆ ಮೇಲು ಬರುವದು.
- 22 ಆತನ ಬಾಯಿಂದ ನ್ಯಾಯಪ್ರಮಾಣವನ್ನು ತಕ್ಕೋ; ಆತನ ಮಾತುಗಳನ್ನು ನಿನ್ನ ಹೃದಯದಲ್ಲಿ ಇಟ್ಟುಕೋ.
- 23 ಸರ್ವಶಕ್ತನ ಕಡೆಗೆ ನೀನು ತಿರುಗಿ ಕೊಂಡರೆ ಕಟ್ಟಲ್ಪಡುವಿ; ನಿನ್ನ ಗುಡಾರಗಳಿಂದ ದುಷ್ಟತ್ವವನ್ನು ದೂರ ಮಾಡುವಿ.
- 24 ಧೂಳಿನಂತೆ ಬಂಗಾರವನ್ನು, ಹಳ್ಳಗಳ ಕಲ್ಲುಗಳಂತೆ ಓಫಿರ್ ಬಂಗಾರವನ್ನು ತೆಗೆದು ಹಾಕುವಿ.
- 25 ಆಗ ಸರ್ವಶಕ್ತನು ನಿನಗೆ ರಕ್ಷಣೆಯೂ ಸಮೃದ್ಧಿಯಾದ ಬೆಳ್ಳಿಯೂ ಆಗಿರುವನು.
- 26 ಆಗ ಸರ್ವಶಕ್ತನಲ್ಲಿ ನೀನು ಆನಂದಗೊಂಡು ನಿನ್ನ ಮುಖ ವನ್ನು ದೇವರ ಕಡೆಗೆ ಎತ್ತುವಿ.
- 27 ನೀನು ಆತನಿಗೆ ವಿಜ್ಞಾಪನೆ ಮಾಡಲು ನಿನ್ನನ್ನು ಕೇಳುವನು; ನಿನ್ನ ಪ್ರಮಾಣಗಳನ್ನು ಸಲ್ಲಿಸುವಿ.
- 28 ನೀನು ಏನಾದರೂ ನಿರ್ಣಯಿಸಿದರೆ ಅದು ನಿನಗೆ ಸ್ಥಿರವಾಗುವದು ಮತ್ತು ನಿನ್ನ ಮಾರ್ಗಗಳಲ್ಲಿ ಬೆಳಕು ಮೂಡುವದು.
- 29 ಒಬ್ಬನು ತಗ್ಗುವಲ್ಲಿ ಎತ್ತುವದುಂಟು ಅನ್ನುವಿ; ದೀನ ನನ್ನು ಆತನು ರಕ್ಷಿಸುವನು.
- 30 ಒಂಟಿಯಾದ ನಿರ ಪರಾಧಿಯನ್ನು ತಪ್ಪಿಸುವನು; ನಿನ್ನ ಕೈಗಳ ಶುದ್ಧತ್ವದಿಂದ ಅವನು ತಪ್ಪಿಸಿಕೊಳ್ಳುವನು.
Job 22
- Details
- Parent Category: Old Testament
- Category: Job
ಯೋಬನು ಅಧ್ಯಾಯ 22