- 1 ಆದದರಿಂದ ಯೋಬನೇ, ನನ್ನ ಮಾತುಗಳನ್ನು ಕೇಳು; ನನ್ನ ಎಲ್ಲಾ ನುಡಿಗಳಿಗೆ ಕಿವಿಗೊಡು ಎಂದು ಕೇಳಿಕೊಳ್ಳುತ್ತೇನೆ.
- 2 ಇಗೋ, ಈಗ ನನ್ನ ಬಾಯನ್ನು ತೆರೆದಿದ್ದೇನೆ. ನನ್ನ ನಾಲಿಗೆ ನನ್ನ ಬಾಯಲ್ಲಿ ಮಾತನಾಡುತ್ತದೆ.
- 3 ನನ್ನ ಮಾತುಗಳು ನನ್ನ ಹೃದಯದ ಯಥಾರ್ಥತೆಯಿಂದ ಇರುವವು ಮತ್ತು ನನ್ನ ತುಟಿಗಳು ವಿವೇಕವನ್ನು ಸ್ಪಷ್ಟವಾಗಿ ಉಚ್ಚರಿಸುತ್ತವೆ.
- 4 ದೇವರ ಆತ್ಮನು ನನ್ನನ್ನು ಉಂಟುಮಾಡಿದನು; ಸರ್ವಶಕ್ತನ ಶ್ವಾಸವು ನನಗೆ ಜೀವವನ್ನು ಕೊಟ್ಟಿತು.
- 5 ನೀನು ನನಗೆ ಉತ್ತರ ಕೊಡುವದಕ್ಕೆ ಸಾಧ್ಯವಾದರೆ ನಿನ್ನ ಮಾತುಗಳನ್ನು ಸಿದ್ಧಮಾಡಿಕೊಂಡು ನನ್ನ ಮುಂದೆ ನಿಂತುಕೋ.
- 6 ಇಗೋ, ನಾನು ದೇವರ ಮುಂದೆ ನಿನ್ನ ಹಾಗೆಯೇ ಇದ್ದೇನೆ; ಮಣ್ಣಿನಿಂದ ನಾನು ಸಹ ರೂಪಿಸಲ್ಪಟ್ಟಿದ್ದೇನೆ.
- 7 ಇಗೋ, ನನ್ನ ಭೀತಿಯು ನಿನ್ನನ್ನು ಹೆದರಿಸಲಾರದು; ಇಲ್ಲವೆ ನನ್ನ ಕೈ ನಿನ್ನ ಮೇಲೆ ಭಾರವಾಗದು.
- 8 ನಿಶ್ಚಯವಾಗಿ ನೀನು ನನ್ನ ಕಿವಿಗಳಲ್ಲಿ ಹೇಳಿದ್ದೀ ಮತ್ತು ನಾನು ನಿನ್ನ ಮಾತುಗಳ ಶಬ್ದವನ್ನು ಕೇಳಿದ್ದೇನೆ.
- 9 ಏನಂದರೆ--ನಾನು ದ್ರೋಹವಿಲ್ಲದವನಾಗಿ ಶುದ್ಧ ನಾಗಿದ್ದೇನೆ; ನಾನು ಯಥಾರ್ಥನಾಗಿದ್ದೇನೆ; ಇಲ್ಲವೆ ನನ್ನಲ್ಲಿ ಅಪರಾಧವಿಲ್ಲ.
- 10 ಇಗೋ, ಆತನು ನನಗೆ ವಿರೋಧವಾಗಿ ಅವಕಾಶಗಳನ್ನು ಕಂಡುಕೊಳ್ಳುತ್ತಾನೆ; ಆತನು ತನಗೆ ಶತ್ರುವೆಂದು ನನ್ನನ್ನು ಎಣಿಸುತ್ತಾನೆ.
- 11 ಆತನು ನನ್ನ ಕಾಲುಗಳನ್ನು ಕೊಳಕ್ಕೆ ಸೇರಿಸಿದ್ದಾನೆ; ನನ್ನ ಹಾದಿಗಳನ್ನೆಲ್ಲಾ ಗುರುತಿಸುತ್ತಾನೆ.
- 12 ಇಗೋ, ಈ ವಿಷಯವಾಗಿ ನೀನು ನೀತಿವಂತನಲ್ಲ; ನಾನು ನಿನಗೆ ಉತ್ತರ ಕೊಡುತ್ತೇನೆ; ಏನಂದರೆ ದೇವರು ಮನುಷ್ಯನಿಗಿಂತ ದೊಡ್ಡವನಾಗಿದ್ದಾನೆ.
- 13 ನೀನು ಆತನ ಸಂಗಡ ಯಾಕೆ ವಾದಿಸಿದಿ? ಆತನು ನಿನ್ನ ಯಾವ ವಿಷಯದಲ್ಲಿಯೂ ಉತ್ತರ ಕೊಡುವದಿಲ್ಲ.
- 14 ಒಂದು ಸಾರಿ ಹೌದು, ಎರಡು ಸಾರಿ ದೇವರು ಮಾತನಾಡುತ್ತಾನೆ; ಆದರೂ ಮನುಷ್ಯನು ಅದನ್ನು ಗ್ರಹಿಸಿಕೊಳ್ಳುವದಿಲ್ಲ.
- 15 ಸ್ವಪ್ನದಲ್ಲಿ ರಾತ್ರಿಯ ದರ್ಶನ ದಲ್ಲಿ; ಗಾಢ ನಿದ್ರೆಯು ಮನುಷ್ಯರ ಮೇಲೆ ಬೀಳುವಾಗ ಮಂಚದ ಮೇಲಿನ ತೂಕಡಿಕೆಗಳಲ್ಲಿ
- 16 ಆತನು ಮನುಷ್ಯರ ಕಿವಿಗಳನ್ನು ತೆರೆದು ಶಿಕ್ಷಣದ ಮಾತು ಗಳನ್ನು ಅವರಿಗೆ ಮುದ್ರೆಹಾಕುತ್ತಾನೆ.
- 17 ಮನುಷ್ಯ ನನ್ನು ಅವನ ಉದ್ದೇಶದಿಂದ ತೊಲಗಿಸುವದಕ್ಕೂ ಮನುಷ್ಯನ ಗರ್ವವನ್ನು ಅಡಗಿಸುವದಕ್ಕೂ ಹಾಗೆ ಮಾಡುತ್ತಾನೆ.
- 18 ಅವನ ಪ್ರಾಣವನ್ನು ಕುಣಿಯಿಂದ ಲೂ ಅವನ ಜೀವವನ್ನು ಕತ್ತಿಯಿಂದ ನಾಶವಾಗದ ಹಾಗೆಯೂ ಕಾಪಾಡುತ್ತಾನೆ.
- 19 ಅವನು ತನ್ನ ಹಾಸಿಗೆಯಲ್ಲಿ ನೋವಿನಿಂದ ಶಿಕ್ಷಿಸ ಲ್ಪಡುತ್ತಾನೆ; ಅವನ ಎಲುಬುಗಳಿಗೆಲ್ಲಾ ಕಠಿಣವಾದ ನೋವು ಉಂಟು.
- 20 ಅವನ ಜೀವಕ್ಕೆ ರೊಟ್ಟಿಯೂ ಅವನ ಪ್ರಾಣಕ್ಕೆ ಸವಿ ಊಟವೂ ಅಸಹ್ಯವಾಗಿವೆ.
- 21 ಅವನ ಶರೀರವು ಕಾಣದ ಹಾಗೆ ಸವೆಯುತ್ತದೆ; ಕಾಣದಿದ್ದ ಅವನ ಎಲುಬುಗಳು ಬೈಲಾಗುತ್ತವೆ.
- 22 ಹೌದು, ಅವನ ಆತ್ಮವು ಸಮಾಧಿಗೂ ಅವನ ಪ್ರಾಣವು ನಾಶಮಾಡುವವರ ಸವಿಾಪಕ್ಕೂ ಎಳೆಯಲ್ಪ ಡುತ್ತದೆ.
- 23 ಸಹಸ್ರ ಜನರಲ್ಲಿ ಒಬ್ಬನಾದ ಮಧ್ಯಸ್ಥ ನಾಗಿರುವ ದೂತನು ಮನುಷ್ಯನಿಗೆ ಅವನ ಯಥಾರ್ಥ ತೆಯನ್ನು ತಿಳಿಸುವದಕ್ಕೆ ಅವನ ಬಳಿಯಲ್ಲಿದ್ದರೆ,
- 24 ಆಗ ಆತನು ಅವನಿಗೆ ಕೃಪಾಳುವಾಗಿದ್ದು ಕುಣಿಗೆ ಇಳಿಯು ವದರಿಂದ ಅವನನ್ನು ಬಿಡಿಸುತ್ತಾನೆ; ನಾನು ವಿಮೋ ಚನೆಯ ಕ್ರಯವನ್ನು ಕಂಡುಕೊಂಡೆನು.
- 25 ಆಗ ಅವನ ಶರೀರವು ಮಗುವಿನ ಶರೀರಕ್ಕಿಂತ ಮೃದುವಾಗಿರು ವದು; ಅವನು ತನ್ನ ಯೌವನ ದಿವಸಗಳಿಗೆ ತಿರುಗಿ ಕೊಳ್ಳುವನು.
- 26 ಅವನು ದೇವರಿಗೆ ಬಿನ್ನಹ ಮಾಡು ವನು; ಆತನು ಅವನಿಗೆ ಕೃಪಾಳುವಾಗಿರುವನು. ಅವನು ಆತನ ಮುಖವನ್ನು ಸಂತೋಷದಿಂದ ನೋಡುವನು; ಆತನು ಮನುಷ್ಯನಿಗೆ ತನ್ನ ನೀತಿಯನ್ನು ಅನುಗ್ರಹಿ ಸುವನು.
- 27 ಆತನು ಮನುಷ್ಯರನ್ನು ನೋಡಿ--ಯಾವನಾದರೂ--ನಾನು ಪಾಪಮಾಡಿ; ನ್ಯಾಯವನ್ನು ವಕ್ರಮಾಡಿದ್ದೇನೆ, ಆದರೆ ನನಗೆ ಅದರಿಂದ ಲಾಭವಾಗಲಿಲ್ಲ ಎಂದು ಹೇಳಿದರೆ;
- 28 ಆತನು ಅವನ ಪ್ರಾಣವು ಕುಣಿಗೆ ಹೋಗದಂತೆ ಕಾಪಾಡುವನು. ಅವನ ಪ್ರಾಣವು ಬೆಳಕನ್ನು ನೋಡುವದು.
- 29 ಇಗೋ, ಇವೆಲ್ಲವುಗಳನ್ನು ಅನೇಕ ಸಾರಿ ಮನು ಷ್ಯನಿಗೆ ಮಾಡುತ್ತಾನೆ.
- 30 ಅವನ ಪ್ರಾಣವನ್ನು ಕುಣಿಯಿಂದ ಹಿಂತಿರುಗಿ ತಂದು ಜೀವದ ಬೆಳಕಿನಿಂದ ಅವನನ್ನು ಬೆಳಗುವ ಹಾಗೆ ಮಾಡುವನು.
- 31 ಓ ಯೋಬನೇ, ಚೆನ್ನಾಗಿ ಗುರುತಿಸು; ನನ್ನ ಮಾತಿಗೆ ಕಿವಿಗೊಡು. ಮೌನವಾಗಿರು, ನಾನು ಮಾತನಾಡು ತ್ತೇನೆ.
- 32 ನಿನಗೆ ಹೇಳುವದಕ್ಕೆ ಏನಾದರೂ ಇದ್ದರೆ ನನಗೆ ಉತ್ತರ ಕೊಡು; ಮಾತನಾಡು, ನಿನ್ನನ್ನು ನೀತಿವಂತನೆಂದು ನಿರ್ಣಯಿಸುವದಕ್ಕೆ ಇಚ್ಚಿಸುತ್ತೇನೆ.
- 33 ಇಲ್ಲದಿದ್ದರೆ ನಾನು ಹೇಳುವದನ್ನು ಕೇಳು. ಮೌನ ವಾಗಿರು, ನಾನು ನಿನಗೆ ಜ್ಞಾನವನ್ನು ಕಲಿಸುತ್ತೇನೆ.
Job 33
- Details
- Parent Category: Old Testament
- Category: Job
ಯೋಬನು ಅಧ್ಯಾಯ 33